Category Archives: Blog

Your blog category

‘ಪ್ರತಿದಿನ ನನ್ನನ್ನೇ ಆಯ್ಕೆ ಮಾಡಿದ್ದಕ್ಕೆ ಧನ್ಯವಾದ’; ಯಶ್​ಗೆ ರಾಧಿಕಾ ವ್ಯಾಲೆಂಟೈನ್ಸ್​ ಡೇ ವಿಶ್

ರಾಧಿಕಾ ಪಂಡಿತ್ ಅವರು ಯಶ್ (Yash) ಬಗ್ಗೆ ಸಾಕಷ್ಟು ಪ್ರೀತಿ ಹೊಂದಿದ್ದಾರೆ. ಇವರನ್ನು ಮಾದರಿ ಕಪಲ್ ಎಂದರೂ ತಪ್ಪಾಗಲಾರದು. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರೋ ಈ ಜೋಡಿ ವಿವಿಧ ರೀತಿಯ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ವ್ಯಾಲೆಂಟೈನ್ಸ್ ಡೇ ಪ್ರಯುಕ್ತ ರಾಧಿಕಾ ಪಂಡಿತ್ ಅವರು ಯಶ್​ಗೆ ವಿಶ್ ಮಾಡಿದ್ದಾರೆ. ಈ ಪೋಸ್ಟ್ ಗಮನ ಸೆಳೆಯೋ ರೀತಿಯಲ್ಲಿ ಇದೆ.

ರಾಧಿಕಾ ಪಂಡಿತ್ ಹಾಗೂ ಯಶ್ ಅವರ ಪರಿಚಯ ಆಗಿದ್ದು ಧಾರಾವಾಹಿಯಲ್ಲಿ. ಅಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದರು. ಆ ಬಳಿಕ ಇಬ್ಬರೂ ಒಟ್ಟಾಗಿ ಸಿನಿಮಾ ಮಾಡಿದರು. ತೆರೆಮೇಲೆ ಜೋಡಿ ಆಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ಈಗ ತೆರೆಯ ಹಿಂದೆಯೂ ಕಪಲ್ ಆಗಿದ್ದಾರೆ. ಇವರ ಪ್ರೀತಿಯ ನೌಕೆ ಯಾವುದೇ ಅಡಚಣೆ ಇಲ್ಲದೆ ಸಾಗುತ್ತಿದೆ. ಯಶ್ ಅವರ ಕುರಿತು ರಾಧಿಕಾ ಪಂಡಿತ್ ಹಂಚಿಕೊಂಡಿರೋ ಪೋಸ್ಟ್ ಈಗ ಗಮನ ಸೆಳೆಯುತ್ತಿದೆ.

‘ನನ್ನ ಅಭದ್ರತೆಯನ್ನು ತೆಗೆದು ಹಾಕಿದವನು ನೀನು. ನಿನ್ನ ಕಣ್ಣುಗಳಲ್ಲಿ ದಣಿವು, ಬೇರೆ ಯಾರೂ ಗಮನಿಸದ ತ್ಯಾಗ, ದೂರು ನೀಡದೆ ನೀನು ಹೊತ್ತುಕೊಂಡ ದೀರ್ಘ ಭಾರ ನನಗೆ ಕಾಣುತ್ತಿದೆ. ಅದು ನಮಗಾಗಿ ಎಂದು ನನಗೆ ತಿಳಿದಿದೆ. ನನ್ನನ್ನು ದಿನವೂ ಆಯ್ಕೆ ಮಾಡಿದ್ದಕ್ಕೆ ನಿನಗೆ ಧನ್ಯವಾದ, ಹ್ಯಾಪಿ ವ್ಯಾಲೆಂಟೈನ್ಸ್ ಡೇ’ ಎಂದು ರಾಧಿಕಾ ಪಂಡಿತ್ ವಿಶ್ ಮಾಡಿದ್ದಾರೆ.

ಇದನ್ನೂ ಓದಿ: ಯಶ್ ಡಬಲ್ ಧಮಾಕ; ‘ಟಾಕ್ಸಿಕ್’ ರಿಲೀಸ್ ಆದ ಒಂದೇ ವಾರಕ್ಕೆ ಇದೆ ಮತ್ತೊಂದು ಸರ್​​ಪ್ರೈಸ್

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಹಿಟ್ ಆಗಲಿ ಎಂಬುದು ಅಭಿಮಾನಿಗಳ ಕೋರಿಕೆ. ಆ ಬಳಿಕ ‘ರಾಮಾಯಣ’ ಸಿನಿಮಾ ಕೂಡ ರಿಲೀಸ್ ಆಗಲಿದೆ. ಅವರ ಸಿನಿಮಾ ವೃತ್ತಿಜೀವನಕ್ಕೆ ರಾಧಿಕಾ ಬೆಂಬಲವಾಗಿ ನಿಂತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ನಿವೃತ್ತ ಅಧಿಕಾರಿಗೆ ಬಡ್ತಿ? ಕಾಂಗ್ರೆಸ್ ಸರ್ಕಾರದ ಮಹಾ ಎಡವಟ್ಟು ಎಂದು ಆರ್.ಅಶೋಕ್ ಕಿಡಿ! – Kannada News | R. Ashok Slams Karnataka Govt’s KAS Promotion Blunder; Demands CM Siddaramaiah Resignation

ನಿವೃತ್ತ ಅಧಿಕಾರಿ ಗೆ ಬಡ್ತಿ? ಕಾಂಗ್ರೆಸ್ ಸರ್ಕಾರದ ಮಹಾ ಎಡವಟ್ಟು ಎಂದು ಆರ್.ಅಶೋಕ್ ಕಿಡಿ!

ಬೆಂಗಳೂರು, ಫೆಬ್ರವರಿ 14: ರಾಜ್ಯ ಸರ್ಕಾರವು ಇತ್ತೀಚೆಗೆ 20 ಕೆಎಎಸ್ ಅಧಿಕಾರಿಗಳಿಗೆ ಬಡ್ತಿ ನೀಡಿರುವ ವಿಚಾರ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬಡ್ತಿ ಪಟ್ಟಿಯಲ್ಲಿ ಸ್ವಯಂ ನಿವೃತ್ತಿ ಪಡೆದಿರುವ ಹೆಚ್.ಎಲ್. ನಾಗರಾಜ್ ಅವರ ಹೆಸರೂ ಸೇರಿರುವುದು ಗಂಭೀರ ಆಡಳಿತಾತ್ಮಕ ಎಡವಟ್ಟೆಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ (R. Ashoka) ಆರೋಪಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ನಿಮ್ಮ ಕಾಂಗ್ರೆಸ್ ಸರ್ಕಾರದ ಅದಕ್ಷತೆ, ಅಸಮರ್ಥತೆ ಈಗ ಯಾವ ಮಟ್ಟಕ್ಕೆ ತಲುಪಿದೆ ಗೊತ್ತಾ? ಎಂದು ಟೀಕಿಸಿದ್ದಾರೆ.

ಹೆಚ್.ಎಲ್. ನಾಗರಾಜ್ ಅವರು ಸೇವೆಯಿಂದ ನಿವೃತ್ತರಾಗಿ ನಂತರ ಸಂನ್ಯಾಸ ಸ್ವೀಕರಿಸಿ ನಿಶ್ಚಲಾನಂದನಾಥ ಸ್ವಾಮೀಜಿ ಎಂದು ಆಧ್ಯಾತ್ಮಿಕ ಜೀವನ ನಡೆಸುತ್ತಿರುವುದು ತಿಳಿದಿದ್ದರೂ, ಅವರ ಹೆಸರನ್ನು ಸೇವೆಯಲ್ಲಿರುವ ಅಧಿಕಾರಿಗಳ ಪಟ್ಟಿಯಲ್ಲಿ ಸೇರಿಸಿ ಪದೋನ್ನತಿ ನೀಡಲಾಗಿದೆ ಎಂದು ಅಶೋಕ್ ಟ್ವೀಟ್ ಮೂಲಕ ಟೀಕಿಸಿದ್ದಾರೆ.

ಆರ್.ಅಶೋಕ್ ಎಕ್ಸ್ ಪೋಸ್ಟ್ ಇಲ್ಲಿದೆ

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತ ಸಾಮರ್ಥ್ಯವೇ ಪ್ರಶ್ನಾರ್ಥಕವಾಗಿದೆ ಎಂದು ಅವರು ಕಿಡಿಕಾರಿದ್ದಾರೆ. ಫೈಲುಗಳಿಗೆ ಸಹಿ ಮಾಡುವ ಮುನ್ನ ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆಯೇ ಎಂಬ ಅನುಮಾನ ವ್ಯಕ್ತಪಡಿಸಿರುವ ಅಶೋಕ್, ಸೇವೆಯಲ್ಲಿ ಇರುವವರು ಯಾರು, ನಿವೃತ್ತರಾದವರು ಯಾರು ಎಂಬ ಮೂಲಭೂತ ಮಾಹಿತಿಯೂ ಸರ್ಕಾರಕ್ಕೆ ತಿಳಿದಿಲ್ಲದಿರುವುದು ದುರಂತವೆಂದಿದ್ದಾರೆ.

ಇದು ಕೇವಲ ಒಂದು ಆಕಸ್ಮಿಕ ತಪ್ಪಲ್ಲ, ಆಡಳಿತ ವ್ಯವಸ್ಥೆಯ ಕುಸಿತದ ಸೂಚನೆ ಎಂದು ಅಶೋಕ್ ಆರೋಪಿಸಿದ್ದಾರೆ. ಮುಂದೆಯೂ ಇಂತಹ ಗಂಭೀರ ಎಡವಟ್ಟುಗಳು ನಡೆಯುವ ಸಾಧ್ಯತೆ ಇದೆ ಎಂದು ಎಚ್ಚರಿಸಿರುವ ಅಶೋಕ್, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 2:59 pm, Sat, 14 February 26

Source link

Vasthu Tips: ಸಾಲ,ಹಣದ ಸಮಸ್ಯೆ ಅಂತ ಕೊರಗಬೇಡಿ; ನಿಮ್ಮ ಪರ್ಸ್​​ನಲ್ಲಿ ಈ ಚಿಕ್ಕ ಬದಲಾವಣೆ ಮಾಡಿ – Kannada News | Vastu Tips for Wallet Prosperity: Attract Wealth and Avoid Financial Loss

ಹಣ ನಮ್ಮ ಜೀವನದಲ್ಲಿ ಭದ್ರತೆ ಮತ್ತು ಸಮೃದ್ಧಿಯ ಸಂಕೇತ. ಆದರೆ ಕೆಲವೊಮ್ಮೆ ನಾವು ತಿಳಿಯದೇ ಮಾಡುವ ಸಣ್ಣ ತಪ್ಪುಗಳೇ ಆರ್ಥಿಕ ಸ್ಥಿತಿಗೆ ಅಡ್ಡಿಯಾಗುತ್ತವೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಅವುಗಳಲ್ಲಿ ಪ್ರಮುಖವಾದದ್ದು ಹರಿದ ಅಥವಾ ಕೊಳಕಾದ ಪರ್ಸ್ ಬಳಸುವುದು. ಪರ್ಸ್ ಕೇವಲ ಹಣ ಇಡುವ ವಸ್ತುವಲ್ಲ, ಅದು ನಮ್ಮ ಆರ್ಥಿಕ ಶಕ್ತಿಯನ್ನು ಪ್ರತಿನಿಧಿಸುತ್ತದೆ ಎಂಬ ನಂಬಿಕೆಯಿದೆ. ಆದ್ದರಿಂದ ಪರ್ಸ್ ಸ್ವಚ್ಛ, ಸರಿಯಾಗಿರುವುದು ಮತ್ತು ವ್ಯವಸ್ಥಿತವಾಗಿರುವುದು ಮುಖ್ಯವೆಂದು ವಾಸ್ತು ಸೂಚಿಸುತ್ತದೆ.

ಹೆಚ್ಚಿನವರು ತಮ್ಮ ಪರ್ಸ್‌ನಲ್ಲಿ ಹಳೆಯ ಬಿಲ್‌ಗಳು, ಅನಗತ್ಯ ರಶೀದಿಗಳು, ಹರಿದ ನೋಟುಗಳು ಹಾಗೂ ಬಳಸದೇ ಇರುವ ಚೀಟಿಗಳನ್ನು ಸಂಗ್ರಹಿಸಿಕೊಂಡಿರುತ್ತಾರೆ. ವಾಸ್ತು ಪ್ರಕಾರ, ಇಂತಹ ಅವ್ಯವಸ್ಥೆ ಆರ್ಥಿಕ ಪ್ರವಾಹವನ್ನು ತಡೆಯುತ್ತದೆ ಎಂದು ನಂಬಲಾಗಿದೆ. ವಿಶೇಷವಾಗಿ ಹರಿದ ಪರ್ಸ್ ಬಳಸುವುದು ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು . ಹೀಗಾಗಿ ಪರ್ಸ್ ಸ್ವಲ್ಪ ಹರಿದಿದ್ದರೂ ಅದನ್ನು ತಕ್ಷಣ ಬದಲಾಯಿಸುವುದು ಉತ್ತಮ. ಸ್ವಚ್ಛತೆ ಮತ್ತು ಸರಳತೆ ಆರ್ಥಿಕ ಶ್ರೇಯಸ್ಸಿಗೆ ದಾರಿ ಮಾಡಿಕೊಡುತ್ತವೆ.

ಪರ್ಸ್‌ನ ಬಣ್ಣವೂ ಆರ್ಥಿಕ ಸ್ಥಿತಿಗೆ ಪ್ರಭಾವ ಬೀರುತ್ತದೆ ಎಂಬ ನಂಬಿಕೆಯಿದೆ. ತುಂಬಾ ಗಾಢವಾದ ಕಪ್ಪು ಅಥವಾ ನೀಲಿ ಬಣ್ಣಗಳು ಕೆಲವೊಮ್ಮೆ ಹಣದ ಅಡೆತಡೆಗಳನ್ನು ಸೂಚಿಸುತ್ತವೆ ಎಂದು ಹೇಳಲಾಗುತ್ತದೆ. ಅದರ ಬದಲಾಗಿ ಹಸಿರು, ಕಂದು ಅಥವಾ ಕ್ರೀಮ್ ಬಣ್ಣದ ಪರ್ಸ್ ಸಮತೋಲನ ಮತ್ತು ಸ್ಥಿರತೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇವುಗಳು ಆರ್ಥಿಕ ಶಕ್ತಿ ಹೆಚ್ಚಿಸಲು ಸಹಕಾರಿ ಎಂದು ನಂಬಲಾಗಿದೆ.

ಇದನ್ನೂ ಓದಿ: ಈ ರಾಶಿಯವರು ತಪ್ಪಿಯೂ ಬೆಳ್ಳಿ ಧರಿಸಬೇಡಿ, ಆರ್ಥಿಕ ನಷ್ಟಕ್ಕೆ ಕಾರಣವಾಗಬಹುದು!

ಕೆಲವರು ತಮ್ಮ ಪರ್ಸ್‌ನಲ್ಲಿ ಲಕ್ಷ್ಮೀ ದೇವಿ ಅಥವಾ ಕುಬೇರರ ಚಿತ್ರಗಳನ್ನು ಇಟ್ಟುಕೊಳ್ಳುತ್ತಾರೆ. ಆದರೆ ವಾಸ್ತು ಪ್ರಕಾರ ದೇವರ ಚಿತ್ರಗಳನ್ನು ಪರ್ಸ್‌ನಲ್ಲಿ ಇಡುವುದು ಶ್ರೇಯಸ್ಕರವಲ್ಲ ಎಂದು ಹೇಳಲಾಗುತ್ತದೆ. ಬದಲಾಗಿ, ಶುಭ ಸಂಕೇತವಾದ ಸೂರ್ಯ ಯಂತ್ರವನ್ನು ಕೆಂಪು ಕಾಗದದಲ್ಲಿ ಇಟ್ಟುಕೊಳ್ಳಬಹುದು ಎಂಬ ಸಲಹೆ ನೀಡಲಾಗುತ್ತದೆ. ಇದು ಧನಪ್ರವಾಹವನ್ನು ಬಲಪಡಿಸುತ್ತದೆ ಎಂದು ನಂಬಲಾಗಿದೆ.

ಇದಲ್ಲದೆ, ನವಿಲು ಗರಿ ಪರ್ಸ್‌ನಲ್ಲಿ ಇಟ್ಟುಕೊಳ್ಳುವುದು ಶುಭಕರವೆಂದು ವಾಸ್ತು ಮತ್ತು ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ. ಇದು ನಕಾರಾತ್ಮಕ ಶಕ್ತಿಯನ್ನು ದೂರ ಮಾಡುತ್ತದೆ ಮತ್ತು ಆರ್ಥಿಕ ಲಾಭದ ಅವಕಾಶಗಳನ್ನು ಹೆಚ್ಚಿಸುತ್ತದೆ ಎನ್ನಲಾಗುತ್ತದೆ. ಹಳದಿ ಬಟ್ಟೆಯಲ್ಲಿ ಸ್ವಲ್ಪ ಅಕ್ಕಿ ಕಾಳುಗಳು ಮತ್ತು ಅರಿಶಿನವನ್ನು ಕಟ್ಟಿಕೊಂಡು ಪರ್ಸ್‌ನಲ್ಲಿ ಇಡುವುದೂ ಸಮೃದ್ಧಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ.

ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಮೆಟ್ರೋ ಕಾಂಕ್ರೀಟ್ ಸ್ಲ್ಯಾಬ್: ಅವಶೇಷದ ಅಡಿ ಸಿಲುಕಿ ಒದ್ದಾಡಿದ ಮಹಿಳೆ – Kannada News | Tragic Mumbai Metro Accident: Mulund West Slab Collapse Traps Drivers, Injures Several

ಮಹಾರಾಷ್ಟ್ರ, ಫೆ.14: ಮುಂಬೈನಲ್ಲಿ ಇಂದು (ಶನಿವಾರ) ಭೀಕರ ಅವಘಡವೊಂದು ಸಂಭವಿಸಿದೆ. ಮುಲುಂಡ್ ವೆಸ್ಟ್‌ನ ಎಲ್‌ಬಿಎಸ್ ಮಾರ್ಗದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಲೈನ್ 4 (Mumbai Metro Line 4) ರ ಪಿಲ್ಲರ್‌ನ ಬೃಹತ್ ಕಾಂಕ್ರೀಟ್ ಸ್ಲ್ಯಾಬ್ ಹಠಾತ್ತನೆ ಕೆಳಗೆ ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದಿದೆ. ಜಾನ್ಸನ್ ಆಂಡ್ ಜಾನ್ಸನ್ ಕಚೇರಿಯ ಸಮೀಪವಿರುವ ಓಬೆರಾಯ್ ಪ್ರೆಮಿಸಸ್ ಬಳಿ ಈ ಘಟನೆ ನಡೆದಿದೆ. ಮೆಟ್ರೋ ಕಾಮಗಾರಿ ನಡೆಯುತ್ತಿದ್ದ ವೇಳೆ ಭಾರೀ ಗಾತ್ರದ ಸ್ಲ್ಯಾಬ್ ರಸ್ತೆಗೆ ಬಿದ್ದಿದೆ. ಈ ವೇಳೆ ಕೆಳಗೆ ಸಂಚರಿಸುತ್ತಿದ್ದ ಆಟೋ ರಿಕ್ಷಾ ಮತ್ತು ಕಾರುಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಆಟೋ ಚಾಲಕ ಮತ್ತು ಓರ್ವ ಮಹಿಳೆ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ಸ್ಥಳೀಯರು ಮತ್ತು ರಕ್ಷಣಾ ಸಿಬ್ಬಂದಿ ಅವರನ್ನು ಹರಸಾಹಸ ಪಟ್ಟು ಹೊರತೆಗೆದಿದ್ದಾರೆ. ಈ ಘಟನೆಯಲ್ಲಿ ಸುಮಾರು 3 ರಿಂದ 4 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಪಾಕಿಸ್ತಾನ್ ವಿರುದ್ಧ ಅಭಿಷೇಕ್ ಶರ್ಮಾ ಕಣಕ್ಕಿಳಿತಾರಾ? ಇಲ್ವಾ?

Source link

ಸರ್ಕಾರಿ ಶಾಲಾ ಕಟ್ಟಡ ದುರಸ್ತಿ: ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ – Kannada News | Students Forced into construction Work? Viral Video from Government School Triggers Outrage in Nalkundi, Nagamangala

ಮಂಡ್ಯ, ಫೆಬ್ರವರಿ 14: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ನಲಕುಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳನ್ನು ಕಟ್ಟಡ ಕಾಮಗಾರಿಗೆ ಬಳಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಶಾಲಾ ಕಟ್ಟಡ ನಿರ್ಮಾಣ ಕಾರ್ಯಕ್ಕಾಗಿ ವಿದ್ಯಾರ್ಥಿಗಳನ್ನು ಕೂಲಿ ಆಳುಗಳಂತೆ ಗಾರೆ ಕೆಲಸ ಮಾಡಲು ಶಿಕ್ಷಕರು ಒತ್ತಾಯಿಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ವಿಡಿಯೋದಲ್ಲಿ ಮಕ್ಕಳು ಸಿಮೆಂಟ್, ಮರಳು ಸಾಗಿಸುವ ಕೆಲಸಗಳನ್ನು ಮಾಡುತ್ತಿರುವುದು ಕಂಡುಬಂದಿದೆ.

ಈ ಘಟನೆ ಕುರಿತು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರ ಈ ವರ್ತನೆಯನ್ನು ತೀವ್ರವಾಗಿ ಖಂಡಿಸಿರುವ ಅವರು, ಮಕ್ಕಳನ್ನು ಇಂತಹ ಕಠಿಣ ಕೆಲಸಗಳಿಗೆ ಬಳಸಿಕೊಳ್ಳುವುದು ಕಾನೂನುಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳಿಂದ ಯಾವುದೇ ರೀತಿಯ ಕೆಲಸಗಳನ್ನು ಮಾಡಿಸಬಾರದು ಎಂದು ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಶಿಕ್ಷಕರು ನಿಯಮಗಳನ್ನು ಉಲ್ಲಂಘಿಸಿಸಿದ್ದಾರೆ. ಕಾಮಗಾರಿಗೆ ಸರ್ಕಾರದಿಂದ ಸಾಕಷ್ಟು ಹಣ ಬಿಡುಗಡೆಯಾಗಿರುತ್ತದೆ, ಹಾಗಿದ್ದರೂ ಮಕ್ಕಳನ್ನು ದುಡಿಸಿಕೊಳ್ಳುವ ಅಗತ್ಯವೇನಿತ್ತು ಎಂದು ಸ್ಥಳೀಯರು ಶಿಕ್ಷಕರನ್ನು ಪ್ರಶ್ನಿಸಿದ್ದಾರೆ. ವಿಡಿಯೋದಲ್ಲಿ ಹೆಣ್ಣುಮಗುವೊಂದು ಸಿಮೆಂಟ್ ಸಾಗಿಸುತ್ತಿರುವುದು ಕೂಡ ಕಾಣಿಸಿದ್ದು, ಈ ವಿಚಾರ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಕೇಂದ್ರ ಸರ್ಕಾರ ನೀಡಿದ 1,323 ಕೋಟಿ 96 ಲಕ್ಷ ರೂ. ಹಣವನ್ನು ಕಾಂಗ್ರೆಸ್​​​ ಸರ್ಕಾರ ದುರ್ಬಳಕೆ ಮಾಡಿದೆ: ಬಿ.ವೈ. ವಿಜಯೇಂದ್ರ ಆರೋಪ – Kannada News | Karnataka Govt Under Fire: Vijayendra Alleges Central Fund Misuse, Demands CM’s Answer

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಸಿಎಂ ಸಿದ್ದರಾಮಯ್ಯImage Credit source: Tv9 kannada

ಬೆಂಗಳೂರು, ಫೆ.14: ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ಬೇರೆ ಇಲಾಖೆಗಳಿಗೆ ವರ್ಗಾಯಿಸುವ ಮೂಲಕ ಹಣ ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ( BY Vijayendra) ಗಂಭೀರವಾಗಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣದ ವಿಚಾರದಲ್ಲಿ ಭಾರಿ ಅವ್ಯವಹಾರ ನಡೆದಿದೆ ಎಂದು ದಾಖಲೆ ಸಹಿತ ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರ ವಿಶೇಷ ಅನುದಾನವನ್ನು ಯಾವ ಉದ್ದೇಶಕ್ಕೆ ನೀಡಿರುತ್ತದೆಯೋ ಅದಕ್ಕಷ್ಟೇ ಬಳಸಬೇಕು. ಅದನ್ನು ಬೇರೆ ಇಲಾಖೆಗಳಿಗೆ ವರ್ಗಾಯಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಆದರೆ ಸುಮಾರು 1,323 ಕೋಟಿ 96 ಲಕ್ಷ ರೂಪಾಯಿ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಹಣ ಸದ್ಬಳಕೆ ಮಾಡದಿದ್ದರೂ ‘ಯುಟಿಲೈಜೇಶನ್ ಸರ್ಟಿಫಿಕೇಟ್’ (ಬಳಕೆ ಪ್ರಮಾಣ ಪತ್ರ) ಕಳುಹಿಸಿ ವಂಚಿಸಲಾಗಿದೆ,” ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಕೃಷ್ಣಭಾಗ್ಯ ಜಲನಿಗಮ ಕೂಡ ನಕಲಿ ಪ್ರಮಾಣ ಪತ್ರ ನೀಡುವ ಮೂಲಕ ಹಗರಣದಲ್ಲಿ ಭಾಗಿಯಾಗಿದೆ. ಈ ಬಗ್ಗೆ ಸರ್ಕಾರ ಕೂಡಲೇ ಪತ್ರಗಳನ್ನು ಬಹಿರಂಗಪಡಿಸಬೇಕು, ವಾಲ್ಮೀಕಿ ನಿಗಮದ ಹಣ ನೂರಾರು ಕೋಟಿ ರೂಪಾಯಿ ತೆಲಂಗಾಣಕ್ಕೆ ವರ್ಗಾವಣೆಯಾಗಿದೆ. ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿಗಳ ಅನುಮತಿ ಇಲ್ಲದೆ ಇಷ್ಟೊಂದು ದೊಡ್ಡ ಮೊತ್ತದ ಹಣ ವರ್ಗಾವಣೆ ಆಗಲು ಸಾಧ್ಯವೇ ಇಲ್ಲ. ಸಿಎಂ ಇದನ್ನು ಬೆಳಗಾವಿ ಅಧಿವೇಶನದಿಂದಲೂ ಸ್ಪಷ್ಟಪಡಿಸದೆ ತಪ್ಪಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರಕ್ಕೆ ಸಾವಿರ ದಿನದ ಸಡಗರ: ಕುರ್ಚಿ ಕದನ ಮತ್ತಷ್ಟು ಜೋರಾಗುವ ಸುಳಿವು

ಗೃಹಲಕ್ಷ್ಮಿ ಯೋಜನೆಗೆ ಮೀಸಲಿಟ್ಟಿದ್ದ ಸುಮಾರು 5,000 ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿದೆ. ಇದು ಯಾವ ಇಲಾಖೆಗೆ ಹೋಗಿದೆ? ಇಲ್ಲಿ ಭ್ರಷ್ಟಾಚಾರ ನಡೆದಿದೆಯೇ? ಇದಕ್ಕೆ ಸಿಎಂ ಉತ್ತರ ನೀಡಲೇಬೇಕು ವಿಜಯೇಂದ್ರ ಆಗ್ರಹಿಸಿದ್ದಾರೆ.

ವರದಿ: ಅನಿಲ್​​​​​​ ಮೆಟ್ರೋ 

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 1:25 pm, Sat, 14 February 26

Source link

ಮಹಾರಾಷ್ಟ್ರದ ನಾಂದೇಡ್​ ಮತ್ತು ಬೀದರ್ ನಡುವಿನ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ಕಾರಣ ಬಯಲು! – Kannada News | Nanded Bidar Railway Project Delay: Karnataka Govt’s Approval Stalls Progress

ಮಹಾರಾಷ್ಟ್ರದ ನಾಂದೇಡ್​ ಮತ್ತು ಬೀದರ ನಡುವಿನ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ಕಾರಣ ಬಯಲು!

ಬೆಂಗಳೂರು, ಫೆಬ್ರವರಿ 14: ಮಹಾರಾಷ್ಟ್ರದ ನಾಂದೇಡ್​ ಮತ್ತು ಕರ್ನಾಟಕದ ಬೀದರ ನಡುವೆ ಹೊಸ ರೈಲು ಮಾರ್ಗ ಯೋಜನೆಯು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ (B Y Vijayendra) ಅವರಿಗೆ ಉತ್ತರಿಸಿ ಪತ್ರ ಬರೆದಿರುವ ಅಶೋಕ್ ಚವಾಣ್, ವಿಳಂಬಕ್ಕೆ ಕಾರಣವೇನೆಂದು ವಿವರಿಸಿದ್ದಾರೆ.

ಚವಾಣ್ ಪತ್ರದಲ್ಲೇನಿದೆ?

ನಾಂದೇಡ್​–ಬೀದರ ನಡುವಿನ ಹೊಸ ರೈಲು ಮಾರ್ಗ ಯೋಜನೆಗೆ ಕರ್ನಾಟಕ ಸರ್ಕಾರದ ಅನುಮೋದನೆ ಇನ್ನೂ ಲಭಿಸದ ಹಿನ್ನೆಲೆಯಲ್ಲಿ ಯೋಜನೆ ಜಾರಿಗೆ ತಡವಾಗುತ್ತಿದೆ ಎಂದು ಪತ್ರದಲ್ಲಿ ವಿವರಿಸಿರುವ ಚವಾಣ್, ಸುಮಾರು 155 ಕಿಲೋಮೀಟರ್ ಉದ್ದದ ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಸುಮಾರು 100 ಕಿಲೋಮೀಟರ್ ಭಾಗ ಮಹಾರಾಷ್ಟ್ರ ರಾಜ್ಯ ವ್ಯಾಪ್ತಿಗೆ ಒಳಪಡುತ್ತದೆ. ಯೋಜನೆ ಪೂರ್ಣಗೊಂಡಲ್ಲಿ ನಾಂದೇಡ್​ ಮತ್ತು ಬೆಂಗಳೂರು ನಡುವಿನ ಪ್ರಯಾಣದ ದೂರ ಕಡಿಮೆಯಾಗುವ ಸಾಧ್ಯತೆ ಇದ್ದು, ಎರಡೂ ರಾಜ್ಯಗಳ ಸಾಮಾಜಿಕ, ಧಾರ್ಮಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ಸಿಗಲಿದೆ ಎಂದು ನಿರೀಕ್ಷಣೆ ಇದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಈ ಯೋಜನೆಯನ್ನು 50:50 ವೆಚ್ಚ ಹಂಚಿಕೆ ಆಧಾರದಲ್ಲಿ ಜಾರಿಗೆ ತರಲು ತೀರ್ಮಾನಿಸಿದೆ. ಮಹಾರಾಷ್ಟ್ರ ಸರ್ಕಾರವು ತನ್ನ ಪಾಲಿನ ವೆಚ್ಚಕ್ಕೆ ಈಗಾಗಲೇ ಸಚಿವ ಸಂಪುಟದ ಅನುಮೋದನೆ ನೀಡಿ ಯೋಜನೆಗೆ ಬದ್ಧತೆ ವ್ಯಕ್ತಪಡಿಸಿದೆ. ಆದರೆ, ಕರ್ನಾಟಕ ಸರ್ಕಾರದಿಂದ ಇನ್ನೂ ಅಧಿಕೃತ ಒಪ್ಪಿಗೆ ಹಾಗೂ ಹಣಕಾಸಿನ ಭರವಸೆ ಸಿಕ್ಕಿಲ್ಲ ಎಂದು ಚವಾಣ್ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

ಈ ರೈಲು ಮಾರ್ಗ ಕಾರ್ಯರೂಪಕ್ಕೆ ಬಂದರೆ ನಾಂದೇಡ್​‌ನ ಶ್ರೀ ಹಜೂರ್ ಸಾಹಿಬ್ ಹಾಗೂ ಬೀದರ‌ನ ನಾನಕ್ ಝೀರಾ ಸಾಹಿಬ್ ಯಾತ್ರಾಕ್ಷೇತ್ರಗಳು ನೇರ ಸಂಪರ್ಕ ಪಡೆಯಲಿವೆ. ಇದರಿಂದ ಯಾತ್ರಿಗಳಿಗೆ ಅನುಕೂಲವಾಗುವುದರ ಜೊತೆಗೆ ಪ್ರವಾಸೋದ್ಯಮ, ವ್ಯಾಪಾರ ಹಾಗೂ ಉದ್ಯೋಗಾವಕಾಶಗಳ ವೃದ್ಧಿಗೂ ಸಹಕಾರಿ ಆಗಲಿದೆ ಎಂದು ಅಶೋಕ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On – 1:39 pm, Sat, 14 February 26

Source link

ದಾಂಡಿಗರ ಆರ್ಭಟ: ವಿಶ್ವ ದಾಖಲೆಯ ಮೊತ್ತ ಪೇರಿಸಿದ ಐರ್ಲೆಂಡ್ – Kannada News | Ireland Batters Creates New World Record in T20 World Cup 2026

ಟಿ20 ವಿಶ್ವಕಪ್​ನ 22ನೇ ಪಂದ್ಯದಲ್ಲಿ ಐರ್ಲೆಂಡ್ ತಂಡವು ಬರೋಬ್ಬರಿ 235 ರನ್​ ಕಲೆಹಾಕಿದೆ. ಈ ಬೃಹತ್ ಮೊತ್ತದೊಂದಿಗೆ ಐರಿಷ್ ಪಡೆ ವಿಶೇಷ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಂದರೆ ಚೊಚ್ಚಲ ಟಿ20 ವಿಶ್ವಕಪ್​ ಬಳಿಕ ಯಾವುದೇ ತಂಡ 230+ ಸ್ಕೋರ್​ಗಳಿಸಿರಲಿಲ್ಲ. ಇದೀಗ ಒಮಾನ್ ವಿರುದ್ಧ ಐರ್ಲೆಂಡ್ ದಾಂಡಿಗರು ಆರ್ಭಟಿಸುವ ಮೂಲಕ ಹೊಸ ವಿಶ್ವ ದಾಖಲೆ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೊಲಂಬೊದ ಎಸ್​ಎಸ್​ಸಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಒಮಾನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು ಉತ್ತಮ ಆರಂಭವೇನು ಪಡೆದಿರಲಿಲ್ಲ. ಆರಂಭಿಕರಾದ ಟಿಮ್ ಟೆಕ್ಟರ್ (5), ರೋಸ್ ಅಡೈರ್ (14) ಬೇಗನೆ ವಿಕೆಟ್ ಒಪ್ಪಿಸಿದ್ದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹ್ಯಾರಿ ಟೆಕ್ಟರ್ ಕೂಡ 14 ರನ್​ಗಳಿಸಿ ಔಟಾಗಿದ್ದರು.

ಆದರೆ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ಲೋರ್ಕನ್ ಟಕರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಅಬ್ಬರ ಶುರು ಮಾಡಿದ ಟಕರ್ ಒಮಾನ್ ಬೌಲರ್​ಗಳನ್ನು ಮನಸೋ ಇಚ್ಛೆ ದಂಡಿಸಿದರು. ಪರಿಣಾಮ ಟಕರ್ ಬ್ಯಾಟ್​ನಿಂದ 51 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ 94 ರನ್ ಮೂಡಿಬಂತು.

ಇನ್ನು ಆರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಗ್ಯಾರೆತ್ ಡೆಲಾನಿ 30 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 56 ರನ್ ಚಚ್ಚಿದರು. ಹಾಗೆಯೇ ಜಾರ್ಜ್​ ಡಾಕ್ರೆಲ್ 9 ಎಸೆತಗಳಲ್ಲಿ 5 ಸಿಕ್ಸರ್​ನೊಂದಿಗೆ 35 ರನ್ ಸಿಡಿಸಿದರು. ಈ ಸಿಡಿಲಬರಬ್ಬದ ಬ್ಯಾಟಿಂಗ್​ನೊಂದಿಗೆ ಐರ್ಲೆಂಡ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 235 ರನ್ ಕಲೆಹಾಕಿತು.

ಐರ್ಲೆಂಡ್ ವಿಶ್ವ ದಾಖಲೆ:

235 ರನ್​ಗಳೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಗರಿಷ್ಠ ಸ್ಕೋರ್​ ಗಳಿಸಿದ ಅಸೋಸಿಯೇಟ್ ನೇಷನ್ ತಂಡ ಎಂಬ ವಿಶ್ವ ದಾಖಲೆ ಐರ್ಲೆಂಡ್ ಪಾಲಾಯಿತು.

ಅಷ್ಟೇ ಅಲ್ಲದೆ ಟಿ20 ವಿಶ್ವಕಪ್ ಇತಿಹಾಸದಲ್ಲಿ ಗರಿಷ್ಠ ಸ್ಕೋರ್ ಕಲೆಹಾಕಿದ ವಿಶ್ವದ 2ನೇ ತಂಡ ಎಂಬ ಹೆಗ್ಗಳಿಕೆಯನ್ನು ಕೂಡ ಐರ್ಲೆಂಡ್ ತನ್ನದಾಗಿಸಿಕೊಂಡಿದೆ.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಶ್ರೀಲಂಕಾ. ಲಂಕಾ ಪಡೆ 2007 ರ ಟಿ20 ವಿಶ್ವಕಪ್​ನಲ್ಲಿ 260 ರನ್ ಪೇರಿಸಿ ಈ ದಾಖಲೆ ನಿರ್ಮಿಸಿದ್ದಾರೆ.

ಇದನ್ನೂ ಓದಿ: ಹೀಗಾದಲ್ಲಿ ಟಿ20 ವಿಶ್ವಕಪ್​ನಿಂದ ಆಸ್ಟ್ರೇಲಿಯಾ ಔಟ್..!

ಇದೀಗ ಐರ್ಲೆಂಡ್ ತಂಡವು 235 ರನ್​ ಕಲೆಹಾಕುವ ಮೂಲಕ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಟಿ20 ವಿಶ್ವಕಪ್ ಇತಿಹಾಸದಲ್ಲೇ 230+ ರನ್ ಕಲೆಹಾಕಿದ ವಿಶ್ವದ 2ನೇ ತಂಡವೆಂಬ ಹೆಗ್ಗಳಿಕೆಯನ್ನು ಐರ್ಲೆಂಡ್ ತಮ್ಮದಾಗಿಸಿಕೊಂಡಿದ್ದಾರೆ.

Source link

ಯಶ್ ಡಬಲ್ ಧಮಾಕ; ‘ಟಾಕ್ಸಿಕ್’ ರಿಲೀಸ್ ಆದ ಒಂದೇ ವಾರಕ್ಕೆ ಇದೆ ಮತ್ತೊಂದು ಸರ್​​ಪ್ರೈಸ್

ಸದ್ಯ ಎಲ್ಲೆಲ್ಲೂ ‘ಟಾಕ್ಸಿಕ್’ ಸಿನಿಮಾ (Toxic Movie) ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಸಿನಿಮಾದಲ್ಲಿ ಯಶ್ ಅವರು ರಾಯ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಫ್ಯಾನ್ಸ್ ಕಾದು ಕೂತಿದ್ದಾರೆ. ಈ ಚಿತ್ರ ರಿಲೀಸ್ ಆಗೋದು ಮಾರ್ಚ್ 19ರಂದು. ಇದಾದ ಒಂದೇ ವಾರಕ್ಕೆ ಅಂದರೆ ಸರಿಯಾಗಿ ಮಾರ್ಚ್ 26ಕ್ಕೆ ಒಂದು ದೊಡ್ಡ ಸರ್​ಪ್ರೈಸ್ ಕಾದಿದೆ. ಈ ವಿಷಯ ಕೇಳಿ ಯಶ್ ಅಭಿಮಾನಿಗಳು ಸಖತ್ ಖುಷಿಪಟ್ಟಿದ್ದಾರೆ.

ಯಶ್ ಅವರು ‘ಟಾಕ್ಸಿಕ್’ ಚಿತ್ರದಲ್ಲಿ ಮಾತ್ರವಲ್ಲ, ‘ರಾಮಾಯಣ’ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಈ ಸಿನಿಮಾದ ಪೋಸ್ಟರ್ ಒಂದು ಕಳೆದ ವರ್ಷ ಅನಾವರಣಗೊಂಡಿತ್ತು. ಆದರೆ, ಎಲ್ಲಾ ಪೋಸ್ಟರ್​​ಗಳು ಗ್ರಾಫಿಕ್ಸ್ ಮಾದರಿಯಲ್ಲಿ ಇದ್ದವು. ಆದರೆ, ಈಗ ಈ ಪಾತ್ರಗಳನ್ನು ಎಲ್ಲರಿಗೂ ಅಧಿಕೃತವಾಗಿ ಪರಿಚಯಿಸೋ ಸಮಯ ಬಂದಿದೆ. ಇದಕ್ಕೆ ಮಾರ್ಚ್ 26ನೇ ತಾರಿಕನ್ನು ನಿಗದಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಮಾರ್ಚ್ 26ಕ್ಕೆ ರಾಮ ನವಮಿ ಆಚರಿಸಲಾಗುತ್ತಿದೆ. ರಾಮಾಯಣ ಸಿನಿಮಾದ ಪಾತ್ರಗಳನ್ನು ಪರಿಚಯಿಸಲು ಇದಕ್ಕಿಂತ ಉತ್ತಮ ಸಮಯ ಬೇಡ ಎಂಬುದು ನಿರ್ಮಾಪಕ ನಮಿತ್ ಮಲ್ಹೋತ್ರ ಅವರ ಆಲೋಚನೆ. ಈ ಕಾರಣದಿಂದಲೇ ಅವರು ಮಾರ್ಚ್ 26ರಂದು ಎಲ್ಲಾ ಪಾತ್ರಗಳನ್ನು ನೇರವಾಗಿ ಪರಿಚಯಿಸಲು ನಿರ್ಧರಿಸಿದ್ದಾರೆ. ಮುಂಬೈನ ಗೇಟ್​ ವೇ ಆಫ್ ಇಂಡಿಯಾದಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿದೆ. ಸದ್ಯ ಈವೆಂಟ್​ನ ಗುಪ್ತವಾಗಿ, ‘ಮದರ್ ಆಫ್ ಆಲ್ ಈವೆಂಟ್ಸ್’ ಎಂದು ಕರೆಯಲಾಗಿದೆಯಂತೆ.

ದೊಡ್ಡದಾದ ಈವೆಂಟ್ ಆಯೋಜನೆ ಮಾಡಲು ನಮಿತ್ ಮಲ್ಹೋತ್ರಾ ನಿರ್ಧರಿಸಿದ್ದಾರೆ. ರಾಜಕೀಯ, ಸಿನಿಮಾ ಹಾಗೂ ಕ್ರೀಡಾ ಕ್ಷೇತ್ರದಿಂದ ಜನರನ್ನು ಆಮಂತ್ರಿಸಲಾಗುತ್ತಿದೆ. ಇಷ್ಟೇ ಅಲ್ಲ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇದರಲ್ಲಿ ಭಾಗಿ ಆಗುವ ಎಲ್ಲಾ ಸಾಧ್ಯತೆ ಇದೆ ಎಂದು ಮೂಲಗಳು ಖಚಿತಪಡಿಸಿವೆ.

ಇದು ಪಕ್ಕಾ ಬಾಲಿವುಡ್ ಈವೆಂಟ್. ಹೀಗಾಗಿ, ಈ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯ ವಿಐಪಿಗಳನ್ನು ನಿರೀಕ್ಷಿಸಬಹುದಾಗಿದೆ. ಇನ್ನು, ರಾಮನ ಪಾತ್ರ ಮಾಡುತ್ತಿರುವ ರಣಬೀರ್ ಅವರು ವೈಯಕ್ತಿಕವಾಗಿ ಅನೇಕ ಸೆಲೆಬ್ರಿಟಿಗಳಿಗೆ ಆಹ್ವಾನ ಕೊಟ್ಟಿದ್ದಾರೆ ಎಂದು ವರದಿ ಆಗಿದೆ. ಯಶ್ ಕೂಡ ಈವೆಂಟ್​ನ ಭಾಗವಾಗಲಿದ್ದು, ಫ್ಯಾನ್ಸ್​​​ಗೆ ಒಂದೇ ವಾರದಲ್ಲಿ ಡಬಲ್ ಧಮಾಕ ಸಿಗಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಅಬ್ಬಬ್ಬಾ, ಯಶ್ ಬುದ್ಧಿವಂತಿಕೆ ಮೆಚ್ಚಲೇಬೇಕು; ಈ ಡೀಲ್​​​ನಿಂದ ‘ಟಾಕ್ಸಿಕ್​​’ಗೆ ದೊಡ್ಡ ಲಾಭ

ನಿತೇಶ್ ತಿವಾರಿ ಅವರು ‘ರಾಮಾಯಣ’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಸಾಯಿ ಪಲ್ಲವಿ ಸೀತೆ ಪಾತ್ರ, ಯಶ್ ರಾವಣನ ಪಾತ್ರ, ಸನ್ನಿ ಡಿಯೋಲ್ ಹನುಮಂತನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನೂ ಅನೇಕ ಕಲಾವಿದರು ಸಿನಿಮಾದ ಭಾಗ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link