ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್: ಯುವತಿ ಮೇಲೆ ವಿಕೃತಿ ಮೆರೆದ ಗ್ಯಾಂಗ್
ರಾಮನಗರ, ಡಿಸೆಂಬರ್ 18: 19 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಆತ್ಯಾಚಾರ ಆರೋಪ ಹಿನ್ನೆಲೆ ಬೆಂಗಳೂರಿನ ಮಾಗಡಿ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಕಾಸ್, ಪ್ರಶಾಂತ್ ಹಾಗೂ ಚೇತನ್ ಬಂಧಿತ ಆರೋಪಿಗಳು. ಬೆಂಗಳೂರಿನ ಕಾಲೇಜುವೊಂದರಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಪ್ರೀತಿಯ ನೆಪದಲ್ಲಿ ವಿಕಾಸ್ ಪರಿಚಯ ಮಾಡಿಕೊಂಡಿದ್ದ. ಆನಂತರ ವಿದ್ಯಾರ್ಥಿನಿಯ ಜೊತೆ ಲೈಂಗಿಕ ಸಂಪರ್ಕ ನಡೆಸಿದ್ದು, ಅದನ್ನು ವಿಡಿಯೋ ಮಾಡಿಕೊಂಡು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದ. ಮೂರು ತಿಂಗಳ ಹಿಂದೆ ವಿಡಿಯೋ ಮಾಡಿಕೊಂಡಿದ್ದ ಈತ, ನಾನು ಕರೆದಾಗಲೆಲ್ಲ ಬರಬೇಕು ಎಂದು…