ಸಂಭ್ರಮಾಚರಣೆ ವೇಳೆ ಹೃದಯಾಘಾತ: ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್ ಸದಸ್ಯ ಸಾವು – Kannada News | Thouseef Giraganvi, Kolhar Member, Dies from Heart Attack at Cricket Final Celebration
ವಿಜಯಪುರ, ಮೇ.13: ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯದ ಸಂಭ್ರಮದ ನಡುವೆಯೇ ಕರಾಳ ಘಟನೆಯೊಂದು ಸಂಭವಿಸಿದೆ. ಗೆಲುವಿನ ಉತ್ತುಂಗದಲ್ಲಿದ್ದಾಗ ಪಟ್ಟಣ ಪಂಚಾಯತ್ ಸದಸ್ಯರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೊಲ್ಹಾರ ಪಟ್ಟಣ ಪಂಚಾಯತ್‌ನ 16ನೇ ವಾರ್ಡ್ ಸದಸ್ಯರಾದ ತೌಸೀಪ್ ಗಿರಗಾಂವಿ ಅವರು ಮೃತಪಟ್ಟ ದುರ್ದೈವಿ. ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಕೆಪಿಎಲ್ (KPL) ಮಾದರಿಯ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯವನ್ನು ತೌಸೀಪ್ ವೀಕ್ಷಿಸುತ್ತಿದ್ದರು. ಆಟದ ಅಂತ್ಯದಲ್ಲಿ ತಮ್ಮ ನೆಚ್ಚಿನ ತಂಡ ಜಯಗಳಿಸುತ್ತಿದ್ದಂತೆ ಮೈದಾನಕ್ಕಿಳಿದು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರಿಗೆ…