ಅವಮಾನಕರ ಸೋಲಿನ ಆಘಾತದಲ್ಲಿರುವ ಪ್ಯಾಟ್ ಕಮ್ಮಿನ್ಸ್‌ಗೆ ಮತ್ತೊಂದು ಶಾಕ್ ನೀಡಿದ ಬಿಸಿಸಿಐ – Kannada News | IPL 2026 Pat Cummins Fined ₹12 Lakh for SRH Slow Over Rate vs gt
ಗುಜರಾತ್ ಟೈಟಾನ್ಸ್ (GT) ವಿರುದ್ಧ ಎರಡಂಕಿ ಮೊತ್ತಕ್ಕೆ ಅಂದರೆ ಕೇವಲ 86 ರನ್ಗಳಿಗೆ ಆಲೌಟ್ ಆಗಿ ಹೀನಾಯ ಸೋಲಿನ ಅವಮಾನಕ್ಕೊಳಗಾಗಿರುವ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್‌ಗೆ (pat cummins) ಇದೀಗ ಬಿಸಿಸಿಐ (BCCI) ಕೂಡ ಬಿಗ್ ಶಾಕ್ ನೀಡಿದೆ. ಗುಜರಾತ್ ವಿರುದ್ಧದ ಪಂದ್ಯದಲ್ಲಿ ನಿಗಧಿತ ಸಮಯಕ್ಕೆ ಓವರ್ ಮುಗಿಸದ ಸನ್ರೈಸಸ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್‌ಗೆ ಪಂದ್ಯ ಶುಲ್ಕವನ್ನು ದಂಡವಾಗಿ ವಿಧಿಸಲಾಗಿದೆ. ಅಂದರೆ ಕಮ್ಮಿನ್ಸ್ 12 ಲಕ್ಷ ರೂ ದಂಡ ಕಟ್ಟಬೇಕಾಗಿದೆ. ಆದಾಗ್ಯೂ,…