Karnataka Weather: ನಾಲ್ಕು ಜಿಲ್ಲೆಗಳಲ್ಲಿ ನಾಳೆ ಚಳಿ ಅಬ್ಬರ, ಹೇಗಿರಲಿದೆ ಕರಾವಳಿ ವಾತಾವರಣ? – Kannada News | Tomorrow Weather: Severe cold wave expected in Four Districts
ಬೆಂಗಳೂರು, ಡಿಸೆಂಬರ್ 18: ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ನಾಳೆಯೂ ಚಳಿ ಹೆಚ್ಚಿರುವ ಸಾಧ್ಯತೆ ಇದೆ. ಆ ಪೈಕಿ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿಯಲ್ಲಿ ಹೆಚ್ಚಿನ ಪ್ರಮಾಣದ ಶೀತಗಾಳಿ ಇರಲಿದೆ. ಉಳಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಅಥವಾ ಸಾಧಾರಣ ಚಳಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಮಂಡ್ಯ ಮತ್ತು ಹಾಸನದಲ್ಲಿ ನಾಳೆ ಒಣ ಹಾಗೂ ಚಳಿಯ ವಾತಾವರಣ…