ಕರ್ನಾಟಕ ಹವಾಮಾನ ವರದಿ: ಕರಾವಳಿಯಲ್ಲಿ ಮತ್ತೊಮ್ಮೆ ಹೀಟ್ವೇವ್ ಆತಂಕ! ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – Kannada News | Karnataka Rain Update: Heatwave Alert in Coastal region, Thunderstorm in South
ಕರಾವಳಿಯಲ್ಲಿ ಮತ್ತೊಮ್ಮೆ ಹೀಟ್ವೇವ್ ಆತಂಕ! ಬೆಂಗಳೂರು, ಮೇ 13: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ (Weather) ಇಲಾಖೆ ತಿಳಿಸಿದೆ. ಇಷ್ಟು ದಿನ ತಂಪಾಗಿದ್ದ ಕರಾವಳಿಯಲ್ಲಿ ಈಗ ಮತ್ತೊಮ್ಮೆ ಹೀಟ್ವೇವ್ ಆತಂಕ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವೆಡೆ ಇಂದು ಸಾಧಾರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಎಚ್ಚರಿಕೆ ವಹಿಸುವಂತೆ ರಾಜ್ಯ ವಿಪತತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಮುಖ್ಯಾಂಶಗಳು ಮುಂದಿನ…