‘ಲವ್ ಮಾಕ್ಟೇಲ್ 3’ ಚಿತ್ರ ಒಟಿಟಿಯಲ್ಲಿ ಗಮನ ಸೆಳೆಯುವಾಗಲೇ ಕೊನೆಯುಸಿರೆಳೆದ ದಿಲೀಪ್ ರಾಜ್ – Kannada News | Dileep Raj Last Movie Is Love Mocktail 3 He acted as Lawyer
ಕನ್ನಡ ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ನಟ ದಿಲೀಪ್ ರಾಜ್ ಅವರು ನಿಧನ ಹೊಂದಿದ್ದಾರೆ. ಅವರಿಗೆ ಹೃದಯಾಘಾತವಾಯಿತು ಮತ್ತು ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ. ಈಗ ಅವರ ಶವವನ್ನು ಮನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಅಕಾಲಿಕ ನಿಧನವು ಅಭಿಮಾನಿಗಳಿಗೆ ಮತ್ತು ಚಿತ್ರೋದ್ಯಮಕ್ಕೆ ಆಘಾತ ತಂದಿದೆ. ಸುಮಾರು ಎರಡು ದಶಕಗಳ ಕಾಲ ನಟನೆಯಲ್ಲಿ ತೊಡಗಿದ್ದ ಅವರು, ತಮ್ಮ ವೃತ್ತಿಜೀವನದ ಕೊನೆಯ ಹಂತದವರೆಗೂ ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದರು ಎಂಬುದನ್ನು ಇಲ್ಲಿ ನೆನೆಯಲೇ…