ನಾನು ಹೇಳಿದ್ದು ಹಂಗಲ್ಲ, ಹಿಂಗೆ: ಎಸ್. ಬದರಿನಾಥ್ ಸ್ಪಷ್ಟನೆ! – Kannada News | S badrinath clarification about krunal pandya commentary
IPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ನಡುವಿನ ಪಂದ್ಯದ ವೇಳೆ ತಮಿಳು ಕಾಮೆಂಟರಿಯಲ್ಲಿ ಮಾಜಿ ಕ್ರಿಕೆಟಿಗ ಎಸ್. ಬದರಿನಾಥ್ ಅವರು ಕೃನಾಲ್ ಪಾಂಡ್ಯ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ವಿವಾದ ತಾರಕ್ಕೇರುತ್ತಿದ್ದಂತೆ ಬದರಿನಾಥ್ ಅವರು ತಮ್ಮ ಮಾತಿನ ಹಿಂದಿನ ಅಸಲಿ ಉದ್ದೇಶವನ್ನು ವಿವರಿಸುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ವಿವಾದದ ಹಿನ್ನೆಲೆ: ರಾಯ್‌ಪುರದಲ್ಲಿ ನಡೆದ ಪಂದ್ಯದಲ್ಲಿ ಕೃನಾಲ್ ಪಾಂಡ್ಯ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾಗ …