Category Archives: Blog

Your blog category

ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ – Kannada News | Prakash Raj reveled about what did Chinnayya said to him

ಧರ್ಮಸ್ಥಳ ಪ್ರಕರಣದಲ್ಲಿ ನಟ ಪ್ರಕಾಶ್ ರೈ (Prakash Raj) ಹೆಸರು ಕೇಳಿ ಬಂದಿದೆ. ಚಿನ್ನಯ್ಯ ಹೈಕೋರ್ಟ್​​ಗೆ ಹಾಕಿರುವ ಅರ್ಜಿಯಲ್ಲಿ ನಟ ಪ್ರಕಾಶ್ ರೈ ಹೆಸರನ್ನೂ ಹೇಳಿದ್ದಾರೆ. ಗಿರೀಶ್ ಮಟ್ಟೆಣ್ಣವರ್ ಹೇಳಿಕೊಟ್ಟಂತೆ ಹೇಳಿದರೆ ನಾನೇ ಬಂದು ನಿನ್ನನ್ನು ತಬ್ಬಿಕೊಳ್ಳುವೆ ಎಂದು ಪ್ರಕಾಶ್ ರೈ ಹೇಳಿದ್ದರು ಎಂದು ಚಿನ್ನಯ್ಯ ಹೇಳಿದ್ದು, ಇದೀಗ ನಟ ಪ್ರಕಾಶ್ ರೈ, ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಪ್ರಕಾಶ್ ರೈ, ತಮ್ಮ ಹಾಗೂ ಚಿನ್ನಯ್ಯನ ನಡುವೆ ತಮಿಳು ಭಾಷೆಯಲ್ಲಿ ನಡೆದಿದ್ದ ಸಂಭಾಷಣೆಯನ್ನು ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Source link

ಟಾಸ್ ಗೆದ್ದ ಅಫ್ಘಾನಿಸ್ತಾನ್: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 3 ಬದಲಾವಣೆ – Kannada News | India vs Afghanistan, 2nd ODI: Toss Update and Playing XI

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 2ನೇ ಏಕದಿನ ಪಂದ್ಯ ಶುರುವಾಗಿದೆ. ಲಕ್ನೋನ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ್ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಲಿದೆ.

ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಮೂರು ಬದಲಾವಣೆ ಮಾಡಿಕೊಂಡಿದೆ. ಕಳೆದ ಮ್ಯಾಚ್​ನಲ್ಲಿ ಕಣಕ್ಕಿಳಿದಿದ್ದ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಈ ಪಂದ್ಯದಿಂದ ಕೈ ಬಿಡಲಾಗಿದ್ದು, ಅವರ ಬದಲಿಗೆ ಯಶಸ್ವಿ ಜೈಸ್ವಾಲ್​ಗೆ ಸ್ಥಾನ ಕಲ್ಪಿಸಲಾಗಿದೆ.

ಹಾಗೆಯೇ ಪ್ರಸಿದ್ಧ್ ಕೃಷ್ಣ ಬದಲಿಗೆ ಪ್ರಿನ್ಸ್ ಯಾದವ್​ ಆಡುವ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಹರ್ಷ್ ದುಬೆ ಅವರ ಸ್ಥಾನದಲ್ಲಿ ಕುಲ್ದೀಪ್ ಯಾದವ್ ಕಣಕ್ಕಿಳಿದಿದ್ದಾರೆ.

ಭಾರತ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ಶುಭ್​ಮನ್ ಗಿಲ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಗುರ್ನೂರ್ ಬ್ರಾರ್, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್.

ಅಫ್ಘಾನಿಸ್ತಾನ್ ಪ್ಲೇಯಿಂಗ್ XI: ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್), ಇಬ್ರಾಹಿಂ ಝದ್ರಾನ್, ಸೇದಿಕುಲ್ಲಾ ಅಟಲ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ (ನಾಯಕ), ದರ್ವಿಶ್ ರಸೂಲಿ, ರಶೀದ್ ಖಾನ್, ನಂಗೆಯಾಲಿಯಾ ಖರೋಟಿ, ಅಲ್ಲಾ ಗಝನ್ಫರ್, ಮೊಹಮ್ಮದ್ ಸಲೀಮ್ ಸಫಿ, ಬಿಲಾಲ್ ಸಮಿ.

3 ಮ್ಯಾಚ್​ಗಳ ಸರಣಿ:

ಮೂರು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿತ್ತು. ಧರ್ಮಶಾಲಾದಲ್ಲಿ ನಡೆದ ಮೊದಲ ಪಂದ್ಯವು ಮಳೆಯ ಕಾರಣ 25 ಓವರ್​ಗಳಿಗೆ ಸೀಮಿತವಾಗಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡವು 24.2 ಓವರ್​ಗಳಲ್ಲಿ 194 ರನ್​ಗಳಿಸಿ ಆಲೌಟ್ ಆಗಿತ್ತು.

ಈ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ 22.5 ಓವರ್​ಗಳಲ್ಲಿ 195 ರನ್​ಗಳಿಸಿ 7 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಮ್ಯಾಚ್​ಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯಲ್ಲಿದೆ.

ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ದಾಖಲಿಸಿದರೆ ಸರಣಿ ವಶಪಡಿಸಿಕೊಳ್ಳಬಹುದು. ಹೀಗಾಗಿಯೇ 2ನೇ ಏಕದಿನ ಪಂದ್ಯವು ಅಫ್ಘಾನಿಸ್ತಾನ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಟ್ಟಿದೆ.

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ) , ಕೆಎಲ್ ರಾಹುಲ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ , ಯಶಸ್ವಿ ಜೈಸ್ವಾಲ್ , ಇಶಾನ್ ಕಿಶನ್ , ಶ್ರೇಯಸ್ ಅಯ್ಯರ್ , ವಾಷಿಂಗ್ಟನ್ ಸುಂದರ್ , ನಿತೀಶ್ ಕುಮಾರ್ ರೆಡ್ಡಿ , ಹರ್ಷ್ ದುಬೆ , ಕುಲ್ದೀಪ್ ಯಾದವ್ , ಅರ್ಷದೀಪ್ ಸಿಂಗ್ , ಗುರ್ನೂರ್ ಬ್ರಾರ್ , ಪ್ರಸಿದ್ಧ್ ಕೃಷ್ಣ , ಪ್ರಿನ್ಸ್ ಯಾದವ್.

ಇದನ್ನೂ ಓದಿ: ಅದು ಫುಟ್‌ಬಾಲ್‌ಗೆ ಸಂಬಂಧಿಸಿದ್ದಲ್ಲ: ಕಣ್ಣೀರಿಟ್ಟ ಲಿಯೋನೆಲ್ ಮೆಸ್ಸಿ!

ಅಫ್ಘಾನಿಸ್ತಾನ್ ಏಕದಿನ ತಂಡ: ರಹಮಾನುಲ್ಲಾ ಗುರ್ಬಾಝ್, ಇಬ್ರಾಹಿಂ ಝದ್ರಾನ್, ಸೇದಿಕುಲ್ಲಾ ಅಟಲ್, ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮತ್ ಶಾ, ಇಕ್ರಮ್ ಅಲಿಖಿಲ್ (ವಿಕೆಟ್ ಕೀಪರ್), ಅಝ್ಮತ್​ ಒಮರ್​ಝಾಹಿ, ಮೊಹಮ್ಮದ್ ನಬಿ, ರಶೀದ್ ಖಾನ್, ನಂಗೆಯಾಲಿಯಾ ಖರೋಟಿ, ಅಲ್ಲಾ ಗಝನ್​ಫರ್, ಬಿಲಾಲ್ ಸಮಿ, ದರ್ವೀಶ್ ರಸೂಲಿ, ಫರೀದ್ ಮಲಿಕ್, ಝಿಯಾ ಉರ್ ರೆಹಮಾನ್ ಶರೀಫಿ.

Source link

ಮತದಾರರ ಪಟ್ಟಿ ಪರಿಷ್ಕರಣೆ: ಜವಾಬ್ದಾರಿಯಿಂದ ಮುಕ್ತಿ ಕೋರಿ ಇಂದು ಬೆಂಗಳೂರಿನಲ್ಲಿ BLOಗಳ ಬೃಹತ್ ಪ್ರತಿಭಟನೆ! – Kannada News | Bengaluru BLOs Protest Against SIR Voter Verification Work Pressure

ಬೆಂಗಳೂರಿನಲ್ಲಿ BLOಗಳ ಬೃಹತ್ ಪ್ರತಿಭಟನೆ!Image Credit source: newsonair

ಬೆಂಗಳೂರು, ಜೂನ್ 17: ಶನಿವಾರದಿಂದ(ಜೂನ್ 20) ಕರ್ನಾಟಕದಾದ್ಯಂತ ಭಾರತೀಯ ಚುನಾವಣಾ ಆಯೋಗದ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮುಂದಿನ ಹಂತ ಅಧಿಕೃತವಾಗಿ ಆರಂಭವಾಗಲಿದೆ. ಇದರ ಬೆನ್ನಲ್ಲೇ ಅತಿಯಾದ ಕೆಲಸದ ಒತ್ತಡದ ವಿರುದ್ಧ ಬೂತ್ ಮಟ್ಟದ ಅಧಿಕಾರಿಗಳು (BLOs) ಬಂಡಾಯವೆದ್ದಿದ್ದಾರೆ. ತಮಗೆ ವಹಿಸಿರುವ ಈ ಚುನಾವಣಾ ಜವಾಬ್ದಾರಿಗಳಿಂದ ಮುಕ್ತಿ ನೀಡುವಂತೆ ಆಗ್ರಹಿಸಿ ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಮುಖ್ಯ ಚುನಾವಣಾಧಿಕಾರಿಗಳ (CEO) ಕಚೇರಿ ಮುಂದೆ ಸುಮಾರು 500 ರಿಂದ 1,000 ಬಿಎಲ್‌ಒಗಳು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.

ಮುಖ್ಯಾಂಶಗಳು

  • ಜೂನ್ 20 ರಿಂದ ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಲಿದೆ.
  • ಅತಿಯಾದ ಕೆಲಸದ ಒತ್ತಡ ವಿರೋಧಿಸಿ ಬಿಎಲ್‌ಒಗಳು ಇಂದು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
  • ಹೊಸ ನಿಯಮಗಳಿಂದ ಅರ್ಹ ಮತದಾರರ ಹೆಸರುಗಳು ಕೈಬಿಡುವ ಆತಂಕ ಎದುರಾಗಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನೀಡಲಾಗಿರುವ ಅವಾಸ್ತವಿಕ ಗಡುವುಗಳು, ವಿಪರೀತ ಕೆಲಸದ ಹೊರೆ ಮತ್ತು ಹಿರಿಯ ಅಧಿಕಾರಿಗಳಿಂದ ಬರುತ್ತಿರುವ ತೀವ್ರ ಒತ್ತಡದ ವಿರುದ್ಧ ಬಿಎಲ್‌ಒ ಸಿಬ್ಬಂದಿ ಜಂಟಿಯಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ.

ಅಧಿಕಾರಿಗಳ ಅಳಲು

ಜೂನ್ 20 ರಿಂದ ಕರ್ನಾಟಕದಾದ್ಯಂತ ಈ ಮತದಾರರ ಪರಿಷ್ಕರಣೆಯ ಪೂರ್ವಭಾವಿ ಸಿದ್ಧತೆಗಳು ಆರಂಭವಾಗಲಿದ್ದು, ಜೂನ್ 30 ರಿಂದ ಮನೆ ಮನೆ ಸಮೀಕ್ಷೆ ತೀವ್ರಗೊಳ್ಳಲಿದೆ. ರಾಜ್ಯದ ಸಾವಿರಾರು ಬಿಎಲ್‌ಒಗಳು ಇದರಲ್ಲಿ ಭಾಗಿಯಾಗಬೇಕಿದೆ. ಆದರೆ ಯಾವುದೇ ತಳಮಟ್ಟದ ಸಿದ್ಧತೆ ಇಲ್ಲದೆ ಹೇರಲಾಗಿರುವ ಈ ಯೋಜನೆಯಿಂದಾಗಿ ಕ್ಷೇತ್ರ ಅಧಿಕಾರಿಗಳು ಹೈರಾಣಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ‘ಎದ್ದೇಳು ಕರ್ನಾಟಕ’ ಸಂಘಟನೆಯ ಟ್ರಸ್ಟಿ ತಾರಾ ರಾವ್ , ಚುನಾವಣಾ ಆಯೋಗದ ಪ್ರಸ್ತುತ ಎಸ್‌ಐಆರ್ (SIR) ಜವಾಬ್ದಾರಿಯಿಂದ ತಮಗೆ ಮುಕ್ತಿ ಬೇಕೆಂದು ಹಲವು ಅಧಿಕಾರಿಗಳು ಆಗ್ರಹಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ನೂರಾರು ಅಧಿಕಾರಿಗಳು ಇಂದು ಸಿಇಒ ಕಚೇರಿ ಮುಂದೆ ಜಮಾಯಿಸಲಿದ್ದಾರೆ ಎಂದು ಖಚಿತಪಡಿಸಿದ್ದಾರೆ.

ಅರ್ಹ ಮತದಾರರ ಹೆಸರು ಕೈಬಿಡುವ ಆತಂಕ

‘ಎದ್ದೇಳು ಕರ್ನಾಟಕ’ ಸೇರಿದಂತೆ ಹಲವು ನಾಗರಿಕ ಸಂಘಟನೆಗಳು ಈ ಅವೈಜ್ಞಾನಿಕ ಪರಿಷ್ಕರಣಾ ಪ್ರಕ್ರಿಯೆಯ ವಿರುದ್ಧ ತೀವ್ರ ಕಳವಳ ವ್ಯಕ್ತಪಡಿಸಿವೆ. ಆತುರಾತುರವಾಗಿ ಜಾರಿಗೊಳಿಸುತ್ತಿರುವ ಈ ನಿಯಮಗಳಿಂದಾಗಿ ರಾಜ್ಯದ ಲಕ್ಷಾಂತರ ಜನ್ಮಸಿದ್ಧ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗುವ ಅಪಾಯವಿದೆ ಎಂದು ಸಂಘಟನೆಗಳು ಎಚ್ಚರಿಸಿವೆ.

ವಿಶೇಷವಾಗಿ ಸಮಾಜದ ಹಿಂದುಳಿದ ವರ್ಗಗಳಾದ ವಲಸೆ ಕಾರ್ಮಿಕರು, ದಲಿತರು ಮತ್ತು ಆದಿವಾಸಿಗಳು ಹಾಗೂ ಶೇ 50 ಕ್ಕಿಂತಲೂ ಹೆಚ್ಚು ಮಹಿಳಾ ಮತದಾರರ ಹೆಸರುಗಳು ತಾಂತ್ರಿಕ ಕಾರಣಗಳಿಂದ ಪಟ್ಟಿಯಿಂದ ಡಿಲೀಟ್ ಆಗುವ ಸಾಧ್ಯತೆ ಹೆಚ್ಚಿದೆ ಎಂದು ತಜ್ಞರು ಆಪಾದಿಸಿದ್ದಾರೆ. ನೆಲದ ಮೇಲಿನ ವಾಸ್ತವ ಪರಿಸ್ಥಿತಿಯನ್ನು ಅರಿಯದೆ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿರುವ ಚುನಾವಣಾ ಆಯೋಗದ ವಿರುದ್ಧ ಇಂದಿನ ಪ್ರತಿಭಟನೆಯಲ್ಲಿ ಬಿಎಲ್‌ಒಗಳು ಧ್ವನಿ ಎತ್ತಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಬೇಗನೆ ಔಟಾದರೂ, 117 ರನ್​ ಪೂರೈಸಿದ ವೈಭವ್ ಸೂರ್ಯವಂಶಿ..! – Kannada News | Vaibhav Sooryavanshi Out For 38 Runs Against Afghanistan A

ಶ್ರೀಲಂಕಾದ ರಂಗಿರಿ ದಂಬುಲ್ಲಾ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲೂ ಭಾರತ ‘ಎ’ ತಂಡದ ಯುವ ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ ನಿರಾಸೆ ಮೂಡಿಸಿದ್ದಾರೆ. ಈ ಪಂದ್ಯದಲ್ಲೂ ಓಪನರ್ ಆಗಿ ಕಣಕ್ಕಿಳಿದ ವೈಭವ್ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನಿಡಿದ್ದರು. ಅದರಂತೆ ಕೇವಲ 27 ಎಸೆತಗಳಲ್ಲಿ 38 ರನ್ ಬಾರಿಸಿದ್ದರು. ಆದರೆ 28ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಔಟಾಗಿದ್ದಾರೆ.

ಔಟ್ ಆಗಿದ್ದು ಹೇಗೆ?

ಇನ್ನಿಂಗ್ಸ್‌ನ 8ನೇ ಓವರ್‌ನಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸುತ್ತಿದ್ದ ವೈಭವ್ ಸೂರ್ಯವಂಶಿ, ಬೌಲರ್ ಫರಿದೂನ್ ಎಸೆದ ಶಾರ್ಟ್ ಪಿಚ್ ಚೆಂಡನ್ನು ಪುಲ್ ಶಾಟ್ ಆಡಲು ಪ್ರಯತ್ನಿಸಿದರು. ಆದರೆ, ಚೆಂಡು ಬ್ಯಾಟ್‌ನ ಮೇಲ್ಭಾಗದ ತುದಿಗೆ ತಗುಲಿ ಗಾಳಿಯಲ್ಲಿ ಚಿಮ್ಮಿತು. ಪಾಯಿಂಟ್ ಭಾಗದಲ್ಲಿ ನಿಂತಿದ್ದ ಅಫ್ಘಾನಿಸ್ತಾನ್ ಫೀಲ್ಡರ್ ಖಾಲಿದ್ ತನಿವಾಲ್ ಸುಲಭವಾಗಿ ಕ್ಯಾಚ್ ಹಿಡಿದರು. ಇದರೊಂದಿಗೆ ವೈಭವ್ ಸೂರ್ಯವಂಶಿ ಇನಿಂಗ್ಸ್ ಅಂತ್ಯಗೊಂಡಿತು.

ಆರಂಭದಲ್ಲೇ ಜೀವದಾನ:

ಟೀಮ್ ಇಂಡಿಯಾ ಇನ್ನಿಂಗ್ಸ್‌ನ ಆರಂಭದಲ್ಲೇ ಕಟ್ ಶಾಟ್ ಹೊಡೆಯಲು ಹೋಗಿ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ವೈಭವ್ ಸೂರ್ಯವಂಶಿ ಕ್ಯಾಚ್ ನೀಡಿದ್ದರು. ಆನ್-ಫೀಲ್ಡ್ ಅಂಪೈರ್ ಔಟ್ ಎಂದು ತೀರ್ಪು ನೀಡಿದ್ದರೂ, ಥರ್ಡ್ ಅಂಪೈರ್ ಮರುಪರಿಶೀಲಿಸಿದಾಗ ಫೀಲ್ಡರ್ ಚೆಂಡನ್ನು ನೆಲಕ್ಕೆ ಮುಟ್ಟಿಸಿರುವುದು ಕಂಡು ಬಂತು. ಇದರಿಂದಾಗಿ ವೈಭವ್​ಗೆ ಆರಂಭದಲ್ಲೇ  ಜೀವದಾನ ಸಿಕ್ಕಿತ್ತು. ಝೀರೋ ರನ್​ಗೆ ಸಿಕ್ಕ ಈ ಜೀವದಾನದ ಸದುಪಯೋಗ ಪಡೆದು 38 ರನ್ ಬಾರಿಸಿದರೂ, ಚೊಚ್ಚಲ ಅರ್ಧಶತಕ ಬಾರಿಸುವಲ್ಲಿ ವೈಭವ್ ವಿಫಲರಾಗಿದ್ದಾರೆ.

117 ರನ್ ಪೂರೈಸಿದ ವೈಭವ್:

ವೈಭವ್ ಸೂರ್ಯವಂಶಿ ಅವರು ಸರಣಿಯ ನಾಲ್ಕು ಪಂದ್ಯಗಳ ಮೂಲಕ ಒಟ್ಟು 117 ರನ್ ಕಲೆಹಾಕಿದ್ದಾರೆ.

  • ಮೊದಲ ಪಂದ್ಯ (vs ಶ್ರೀಲಂಕಾ ‘ಎ’ ): 14 ರನ್ (12 ಎಸೆತಗಳು, 3 ಫೋರ್)
  • ಎರಡನೇ ಪಂದ್ಯ (vs ಅಫ್ಘಾನಿಸ್ತಾನ್ ‘ಎ’): 44 ರನ್ (22 ಎಸೆತಗಳು, 9 ಫೋರ್)
  • ಮೂರನೇ ಪಂದ್ಯ (vs ಶ್ರೀಲಂಕಾ ‘ಎ’): 21 ರನ್ (14 ಎಸೆತಗಳು, 1 ಸಿಕ್ಸ್, 3 ಫೋರ್)
  • ನಾಲ್ಕನೇ ಪಂದ್ಯ (vs ಅಫ್ಘಾನಿಸ್ತಾನ್ ‘ಎ’): 38 ರನ್​ (27 ಎಸೆತಗಳು, 2 ಸಿಕ್ಸ್, 4 ಫೋರ್)

ಈ ನಾಲ್ಕು ಇನಿಂಗ್ಸ್​ಗಳ ಮೂಲಕ ವೈಭವ್ ಸೂರ್ಯವಂಶಿ ತಮ್ಮ ಕೆರಿಯರ್​ನ ಮೊದಲ ತಿಕ್ರೋನ ಸರಣಿಯಲ್ಲಿ ನೂರು ರನ್​ಗಳ ಗಡಿದಾಟಿದ್ದಾರೆ.

ಟೀಮ್ ಇಂಡಿಯಾ ಸ್ಕೋರ್:

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ 15 ಓವರ್​ಗಳ ಮುಕ್ತಾಯದ ವೇಳೆಗೆ ವೈಭವ್ ಸೂರ್ಯವಂಶಿ (38) ಹಾಗೂ ಪ್ರಿಯಾಂಶ್ ಆರ್ಯಾ (58) ವಿಕೆಟ್ ಕಳೆದುಕೊಂಡು 115 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ತಿಲಕ್ ವರ್ಮಾ ಹಾಗೂ ರುತುರಾಜ್ ಗಾಯಕ್ವಾಡ್ ಬ್ಯಾಟಿಂಗ್ ಮುಂದುವರೆಸಿದ್ದಾರೆ.

ಭಾರತ ಎ ಪ್ಲೇಯಿಂಗ್ 11: ಪ್ರಿಯಾಂಶ್ ಆರ್ಯ , ವೈಭವ್ ಸೂರ್ಯವಂಶಿ , ರುತುರಾಜ್ ಗಾಯಕ್ವಾಡ್ , ತಿಲಕ್ ವರ್ಮಾ (ನಾಯಕ) , ಕುಮಾರ್ ಕುಶಾಗ್ರ (ವಿಕೆಟ್ ಕೀಪರ್) , ನಿಶಾಂತ್ ಸಿಂಧು , ಸೂರ್ಯಾಂಶ್ ಶೆಡ್ಗೆ , ವಿಪ್ರಾಜ್ ನಿಗಮ್ , ಅನ್ಕೂಲ್ ರಾಯ್ , ಅನ್ಶುಲ್ ಕಂಬೋಜ್ , ಯಶ್ ಠಾಕೂರ್.

ಇದನ್ನೂ ಓದಿ: ಗೋಲು ಬಾರಿಸಿ ಕ್ಷಮೆಯಾಚಿಸಿದ ಯಾಸಿನ್ ಅಯಾರಿ..!

ಅಫ್ಘಾನಿಸ್ತಾನ್ ಎ ಪ್ಲೇಯಿಂಗ್ 11: ಇಮ್ರಾನ್ ಮೀರ್ (ನಾಯಕ) , ಹಸನ್ ಐಸಾಖಿಲ್ , ಖಾಲಿದ್ ತನಿವಾಲ್ , ಫೈಸಲ್ ಶಿನೋಜಾಡಾ , ಬಹೀರ್ ಶಾ , ಫರ್ಮಾನುಲ್ಲಾ ಸಫಿ , ಶಮ್ಸ್ ಉರ್ ರೆಹಮಾನ್ , ಮೊಹಮ್ಮದ್ ಇಶಾಕ್ (ವಿಕೆಟ್ ಕೀಪರ್) , ಝಹೀರ್ ಖಾನ್ , ಅಬ್ದುಲ್ಲಾ ಅಹ್ಮದ್‌ಝಾಹಿ , ಫರಿದೂನ್ ದಾವೂದ್‌.

Source link

ಶಿವಣ್ಣನ ಎನರ್ಜಿಗೆ ತಮಿಳು ಸಿನಿಮಾ ತಂಡ ಫಿದಾ, ವಿಡಿಯೋ ನೋಡಿ – Kannada News | Shiva Rajkumar bring energy to Tamil movie set watch video

ಶಿವರಾಜ್ ಕುಮಾರ್ (Shiva Rajkumar) ಅವರ ವಯಸ್ಸಿಗೂ ಅವರ ಎನರ್ಜಿಗೂ ಸಂಬಂಧವೇ ಇಲ್ಲ. ಎಲ್ಲೇ ಹೋದರೂ ಶಿವಣ್ಣ ತಮ್ಮ ಎನರ್ಜಿಯಿಂದ ಆ ಸ್ಥಳದ ವಾತಾವರಣವನ್ನೇ ಬದಲಾಯಿಸಿಬಿಡುತ್ತಾರೆ. ಶಿವರಾಜ್ ಕುಮಾರ್ ಅವರು ಕನ್ನಡ ಮಾತ್ರವಲ್ಲದೆ ಕೆಲ ಪರ ಭಾಷೆ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರು ರಾಮ್ ಚರಣ್ ಜೊತೆ ನಟಿಸಿದ ‘ಪೆದ್ದಿ’ ಸಿನಿಮಾ ರಿಲೀಸ್ ಆಗಿ ಹಿಟ್ ಆಗಿದೆ. ಇದೀಗ ಅವರು ಹೊಸದೊಂದು ತಮಿಳು ಸಿನಿಮಾನಲ್ಲಿ ನಟಿಸುತ್ತಿದ್ದು, ಅಲ್ಲಿಯೂ ಸಹ ಶಿವಣ್ಣ ತಮ್ಮ ಎನರ್ಜಿಯಿಂದ ಇಡೀ ಸೆಟ್​​ಗೆ ಹೊಸ ಕಳೆ ತಂದಿದ್ದಾರೆ.

ಶಿವರಾಜ್ ಕುಮಾರ್ ಅವರು ಇನ್ನೂ ಹೆಸರಿಡದ ಹೊಸ ತಮಿಳು ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಡ್ರಾಮಾ ಕಂಪೆನಿ ಹೆಸರಿನ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿರುವ ಮೊದಲ ಸಿನಿಮಾ ಇದಾಗಿದ್ದು, ಸಿನಿಮಾ ತಂಡ ಇತ್ತೀಚೆಗಷ್ಟೆ ಶಿವಣ್ಣನವರ ವಿಡಿಯೋ ಒಂದನ್ನು ಬಿಡುಗಡೆ ಮಾಡಿದೆ. ವಿಡಿಯೋನಲ್ಲಿ ಶಿವಣ್ಣ ತಮ್ಮ ಎಂದಿನ ಜೋಶ್​​ನಲ್ಲಿ ಸೆಟ್​​ನಲ್ಲಿ ನಗುತ್ತಾ, ಎಲ್ಲರನ್ನೂ ನಗಿಸುತ್ತಾ, ಕಾಲೆಳೆಯುತ್ತಾ, ಯುವಕರಿಗೆ ಪಾಠ ಮಾಡುತ್ತಾ ಕಂಡು ಬಂದಿದ್ದಾರೆ. ಶಿವರಾಜ್ ಕುಮಾರ್ ಅವರು ಸೆಟ್​​ನಲ್ಲಿ ತಮಿಳಿಗರೊಬ್ಬರಿಗೆ ಕನ್ನಡದ ‘ಜೊತೆಯಲಿ, ಜೊತೆಯಲಿ’ ಹಾಡು ಸಹ ಹೇಳಿಕೊಟ್ಟಿದ್ದಾರೆ.

ವಿಡಿಯೋ ನೋಡಿದರೆ ಶಿವರಾಜ್ ಕುಮಾರ್ ಅವರು ಮಧ್ಯಮ ವರ್ಗದ ವ್ಯಕ್ತಿಯೊಬ್ಬನ ಪಾತ್ರದಲ್ಲಿ ನಟಿಸಿದಂತಿದೆ. ಹೀರೋ ತಂದೆಯ ಪಾತ್ರ ಇರಬಹುದೆಂಬ ಅನುಮಾನವೂ ಮೂಡುತ್ತಿದೆ. ಆದರೆ ಶಿವಣ್ಣನ ಪಾತ್ರ ಪವರ್​​ಫುಲ್ ಆಗಿಯೂ ಇರಬಹುದೆಂಬ ಸುಳಿವು ವಿಡಿಯೋನಲ್ಲಿದೆ. ವಿಡಿಯೋನಲ್ಲಿ ತೋರಿಸಿರುವಂತೆ, ಸೆಟ್​​ನಲ್ಲಿಯೇ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರ ವಿವಾಹ ವಾರ್ಷಿಕೋತ್ಸವದ ಸೆಲೆಬ್ರೇಷನ್ ಸಹ ನಡೆದಿದೆ. ಬನಿಯನ್ನು-ಪಂಚೆ ತೊಟ್ಟುಕೊಂಡು ಶಿವಣ್ಣ ಕೇಕ್ ಕತ್ತರಿಸಿದ್ದಾರೆ.

ವಿಡಿಯೋ ಅನ್ನು 65 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ಕಮೆಂಟ್ ಸೆಕ್ಷನ್​​ನಲ್ಲಿ ಶಿವರಾಜ್ ಕುಮಾರ್ ಅವರ ಸರಳತೆಯನ್ನು, ಸೆಟ್​​ನಲ್ಲಿ ಅವರು ಬೆರೆಯುವ ರೀತಿ, ಅವರ ಎನರ್ಜಿ, ಜೋಶ್​ ಅನ್ನು ನೆಟ್ಟಿಗರು ಕೊಂಡಾಡಿದ್ದಾರೆ. ಶಿವರಾಜ್ ಕುಮಾರ್ ಅವರು ಎಲ್ಲಿಯೇ ಹೋದರು ಸೆಟ್​​ಗೆ ಒಂದು ಎನರ್ಜಿ ತಂದುಕೊಡುತ್ತಾರೆ. ಶಿವರಾಜ್ ಕುಮಾರ್ ಅವರಿಗೆ ಈಗ 63 ವರ್ಷ ವಯಸ್ಸು. ಆದರೆ ಈಗಲೂ ನವ ಯುವಕನಂತೆ ಹಾಡುತ್ತಾ, ಕುಣಿಯುತ್ತಾ ಇರುತ್ತಾರೆ.

ಶಿವರಾಜ್ ಕುಮಾರ್ ಅವರು ಪ್ರಸ್ತುತ ಕನ್ನಡದ ‘666 ಆಪರೇಷನ್ ಡ್ರೀಮ್ ಪ್ರಾಜೆಕ್ಟ್’ ಸಿನಿಮಾನಲ್ಲಿ ನಟಿಸುತ್ತಿದ್ದಾ. ಜೊತೆಗೆ ‘ಎ ಫಾರ್ ಆನಂದ್’ ಹೆಸರಿನ ಹೊಸ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಬೇಲ್’ ಹೆಸರಿನ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ತಮಿಳಿನ ‘ಜೈಲರ್ 2’ ಸಿನಿಮಾನಲ್ಲಿಯೂ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಅದು ಫುಟ್‌ಬಾಲ್‌ಗೆ ಸಂಬಂಧಿಸಿದ್ದಲ್ಲ: ಕಣ್ಣೀರಿಟ್ಟ ಲಿಯೋನೆಲ್ ಮೆಸ್ಸಿ! – Kannada News | Lionel Messi was caught by broadcast visuals wiping tears

ಫಿಫಾ ವಿಶ್ವಕಪ್​ನ 19ನೇ ಪಂದ್ಯದಲ್ಲಿ ಹ್ಯಾಟ್ರಿಕ್ ಗೋಲು ಬಾರಿಸಿ ಇತಿಹಾಸ ನಿರ್ಮಿಸಿದ ಲಿಯೋನೆಲ್ ಮೆಸ್ಸಿ (Lionel Messi) ಮೈದಾನದಲ್ಲೇ ಕಣ್ಣೀರೀಟಿದ್ದಾರೆ. ಅಲ್ಜೀರಿಯಾ ವಿರುದ್ಧದ ಈ ಪಂದ್ಯದಲ್ಲಿ ಅರ್ಜೆಂಟೀನಾ ತಂಡವನ್ನು ಮುನ್ನಡೆಸಿದ ಮೆಸ್ಸಿ 17ನೇ ನಿಮಿಷದಲ್ಲಿ ಮೊದಲ ಗೋಲು ದಾಖಲಿಸಿದ್ದರು.

ಈ ಗೋಲಿನ ಬೆನ್ನಲ್ಲೇ ಎಂದಿನ ಶೈಲಿಯಲ್ಲಿ ಸಂಭ್ರಮಾಚರಣೆ ಮುಗಿಸುತ್ತಿದ್ದಂತೆ, ವೈಯಕ್ತಿಕ ಭಾವನೆಗಳನ್ನು ತಡೆಯಲಾರದೆ ಭಾವುಕರಾದರು. ಈ ವೇಳೆ ಅವರು ತಮ್ಮ ಜೆರ್ಸಿಯಿಂದ ಕಣ್ಣೀರು ಒರೆಸಿಕೊಳ್ಳುತ್ತಿರುವ ದೃಶ್ಯಗಳು ಟಿವಿ ಲೈವ್ ಬ್ರಾಡ್‌ಕಾಸ್ಟ್‌ನ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದವು.

ಮ್ಯಾಚ್ ಬಳಿಕ ಈ ಬಗ್ಗೆ ಸ್ಪಷ್ಟನೆ ನೀಡಿದ ಲಿಯೋನೆಲ್ ಮೆಸ್ಸಿ, “ಹೌದು, ಮೊದಲ ಗೋಲು ಗಳಿಸಿದ ನಂತರ ನಾನು ಅತ್ತಿರುವುದು ನಿಜ. ಆದರೆ ಅದು ಫುಟ್‌ಬಾಲ್‌ಗೆ ಸಂಬಂಧಿಸದ ವಿಷಯ ” ಎಂದಿದ್ದಾರೆ.

“ನಾನು ಕಳೆದ ಕೆಲವು ದಿನಗಳಿಂದ ತೀವ್ರ ವೈಯಕ್ತಿಕ ಕಠಿಣ ದಿನಗಳನ್ನು ಎದುರಿಸುತ್ತಿದ್ದೇನೆ. ನನ್ನ ಇಡೀ ತಂಡ ಮತ್ತು ಸಹ ಆಟಗಾರರು ಈ ಕಷ್ಟದ ಸಮಯದಲ್ಲಿ ನನ್ನ ಬೆನ್ನಿಗೆ ನಿಂತಿದ್ದಾರೆ. ಅವರು ನನಗೆ ನಿರಂತರವಾಗಿ ಧೈರ್ಯ ತುಂಬಿದ್ದಾರೆ. ಅವರೆಲ್ಲರಿಗೂ ನಾನು ಸದಾ ಕೃತಜ್ಞನಾಗಿರುತ್ತೇನೆ” ಎಂದು ಮೆಸ್ಸಿ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.

ಇದಾಗ್ಯೂ ಮೆಸ್ಸಿ ಕಣ್ಣೀರಿನ ಹಿಂದಿರುವ ಕಾರಣಗಳನ್ನು ಬಹಿರಂಗಪಡಿಸಿಲ್ಲ. ಅಲ್ಲದೆ ಅದು ಫುಟ್​ಬಾಲ್​ಗೆ ಸಂಬಂಧಿಸದ ವಿಷಯ ಆಗದೇ ಇರುವುದರಿಂದ, ಆ ವಿಚಾರವನ್ನು ಹಂಚಿಕೊಳ್ಳಲು ಇಚ್ಛಿಸುತ್ತಿಲ್ಲ ಎಂದು ಮೆಸ್ಸಿ ತಿಳಿಸಿದ್ದಾರೆ.

ಮೈದಾನದಲ್ಲಿ ದಾಖಲೆಗಳ ಸುರಿಮಳೆ:

ವೈಯಕ್ತಿಕ ಜೀವನದಲ್ಲಿ ಸಂಕಷ್ಟವನ್ನು ಎದುರಿಸುತ್ತಿದ್ದರೂ, ಮೈದಾನದಲ್ಲಿ ಮೆಸ್ಸಿ ಅವರ ಆಟಕ್ಕೆ ಯಾವುದೇ ಅಡ್ಡಿಯಾಗಲಿಲ್ಲ. ಇದಕ್ಕೆ ಸಾಕ್ಷಿ ಮೊದಲ ಪಂದ್ಯದಲ್ಲೇ ಮೂಡಿಬಂದ ದಾಖಲೆಗಳು.

  • ಮೊದಲ ವಿಶ್ವಕಪ್ ಹ್ಯಾಟ್ರಿಕ್: ಮೆಸ್ಸಿ ಪಂದ್ಯದ 17, 60 ಮತ್ತು 76ನೇ ನಿಮಿಷಗಳಲ್ಲಿ ಗೋಲು ಗಳಿಸುವ ಮೂಲಕ ತಮ್ಮ ಸುದೀರ್ಘ ವೃತ್ತಿಜೀವನದ ಮೊದಲ ವಿಶ್ವಕಪ್ ಹ್ಯಾಟ್ರಿಕ್ ಸಾಧನೆ ಮಾಡಿದರು.
  • ಸರ್ವಕಾಲಿಕ ದಾಖಲೆ: ಈ 3 ಗೋಲುಗಳೊಂದಿಗೆ ಮೆಸ್ಸಿ ತಮ್ಮ ಒಟ್ಟಾರೆ ವಿಶ್ವಕಪ್ ಗೋಲುಗಳ ಸಂಖ್ಯೆಯನ್ನು 16ಕ್ಕೇರಿಸಿದರು. ಈ ಮೂಲಕ ಜರ್ಮನಿಯ ಮಿರೋಸ್ಲಾವ್ ಕ್ಲೋಸ್ ಅವರ ಸರ್ವಕಾಲಿಕ ಗರಿಷ್ಠ ಗೋಲುಗಳ ದಾಖಲೆಯನ್ನು ಸಮಗಟ್ಟಿದ್ದಾರೆ.
  • ವಯಸ್ಸಿನ ದಾಖಲೆ: 38ನೇ ವಯಸ್ಸಿನಲ್ಲಿ ಹ್ಯಾಟ್ರಿಕ್ ಸಾಧನೆ ಮಾಡುವ ಮೂಲಕ ವಿಶ್ವಕಪ್ ಇತಿಹಾಸದಲ್ಲೇ ಈ ಸಾಧನೆ ಮಾಡಿದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
  • 6ನೇ ವಿಶ್ವಕಪ್: ಅಲ್ಜೀರಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಸತತ 6 ಫಿಫಾ ವಿಶ್ವಕಪ್ ಆವೃತ್ತಿಗಳಲ್ಲಿ ಆಡಿದ ವಿಶ್ವದ ಮೊದಲ ಫುಟ್‌ಬಾಲ್ ಆಟಗಾರ ಎಂಬ ದಾಖಲೆ ಬರೆದರು.

ಇದನ್ನೂ ಓದಿ: ಬಿಬಿಎಲ್​ನಲ್ಲಿ ‘ಪತ್ಯೇಕ’ವಾಗಿಯೇ ಕಣಕ್ಕಿಳಿಯಲಿವೆ ‘ಮೆಲ್ಬೋರ್ನ್’ ತಂಡಗಳು..!

ಒಟ್ಟಾರೆಯಾಗಿ, ವೈಯಕ್ತಿಕ ನೋವಿನ ನಡುವೆಯೂ ದೇಶಕ್ಕಾಗಿ ಮೈದಾನದಲ್ಲಿ ಸರ್ವಸ್ವವನ್ನೂ ಧಾರೆ ಎರೆದ ಲಿಯೋನೆಲ್ ಮೆಸ್ಸಿ, ಕೇವಲ ಒಬ್ಬ ಶ್ರೇಷ್ಠ ಆಟಗಾರ ಮಾತ್ರವಲ್ಲ, ಅಪ್ರತಿಮ ನಾಯಕ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

Source link

ಚಿತ್ರದುರ್ಗ: ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು – Kannada News | 4 Year Old Boy Vaishnav Dies From Chest Burning Sensation in Chitradurga

ಚಿತ್ರದುರ್ಗ, ಜೂನ್ 17: ಜಿಲ್ಲೆಯ ಹಿರಿಯೂರು ಪಟ್ಟಣದಲ್ಲಿ ನಡೆದ ದುರ್ಘಟನೆಯೊಂದರಲ್ಲಿ ನಾಲ್ಕು ವರ್ಷದ ಬಾಲಕ ವೈಷ್ಣವ್ ಎದೆ ಉರಿ ಕಾಣಿಸಿಕೊಂಡು ಸಾವನ್ನಪ್ಪಿದ್ದಾನೆ. ವೈಷ್ಣವ್ ತನ್ನ ಪೋಷಕರಿಗೆ ಎದೆ ಭಾಗದಲ್ಲಿ ಉರಿ ಕಾಣಿಸಿಕೊಳ್ಳುತ್ತಿದೆ ಎಂದು ಹೇಳಿಕೊಂಡಿದ್ದನು. ಆರಂಭದಲ್ಲಿ ಪೋಷಕರು ಇದನ್ನು ಗ್ಯಾಸ್ಟ್ರಿಕ್ ಸಮಸ್ಯೆ ಎಂದು ಭಾವಿಸಿ, ಮನೆಮದ್ದುಗಳನ್ನು ನೀಡಿದ್ದರು. ಆದರೆ, ವೈಷ್ಣವ್ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ.

ಮಗುವಿನ ಸ್ಥಿತಿ ಗಂಭೀರವಾಗುತ್ತಿದ್ದಂತೆ, ಆತಂಕಗೊಂಡ ಪೋಷಕರು ವೈಷ್ಣವ್‌ನನ್ನು ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದರು. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ವೈಷ್ಣವ್ ಕೊನೆಯುಸಿರೆಳೆದಿದ್ದಾನೆ. ಹೆತ್ತವರ ಕಣ್ಮುಂದೆಯೇ ಪುಟ್ಟ ಬಾಲಕ ಸಾವನ್ನಪ್ಪಿರುವುದು ಕುಟುಂಬದಲ್ಲಿ ತೀವ್ರ ದುಃಖವನ್ನುಂಟು ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

UGC NET Admit Card 2026: ಯುಜಿಸಿ ನೆಟ್ ಪರೀಕ್ಷೆಯ ಹಾಲ್ ಟಿಕೆಟ್‌ ಬಿಡುಗಡೆ; ಡೌನ್‌ಲೋಡ್ ಮಾಡುವುದು ಹೇಗೆ? – Kannada News | NTA UGC NET Admit Card June 2026: Get Your Hall Ticket and Check Exam Dates

ಯುಜಿಸಿ ನೆಟ್ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಜೂನ್ 2026 ರ ಯುಜಿಸಿ ನೆಟ್ (UGC NET) ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಪ್ರವೇಶ ಪತ್ರಗಳನ್ನು (Admit Cards) ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈಗ ತಮ್ಮ ಹಾಲ್ ಟಿಕೆಟ್‌ಗಳನ್ನು ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬಹುದು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಜೂನ್ 22, 23, 24, 25, 29 ಮತ್ತು 30 ರಂದು ನಡೆಯಲಿರುವ ಪರೀಕ್ಷೆಗಳಿಗೆ ಈ ಪ್ರವೇಶ ಪತ್ರಗಳನ್ನು ಪ್ರಕಟಿಸಿದೆ. ದೇಶಾದ್ಯಂತ ವಿವಿಧ ಕೇಂದ್ರಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮೋಡ್‌ನಲ್ಲಿ ಈ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಪರೀಕ್ಷಾ ವೇಳಾಪಟ್ಟಿ ಮತ್ತು ಶಿಫ್ಟ್‌ಗಳ ವಿವರ:

ಯುಜಿಸಿ ನೆಟ್ ಜೂನ್ 2026 ಪರೀಕ್ಷೆಯು ಜೂನ್ 22 ರಿಂದ ಜೂನ್ 30 ರವರೆಗೆ ದೇಶಾದ್ಯಂತ ಗೊತ್ತುಪಡಿಸಿದ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪ್ರತಿದಿನ ಎರಡು ಶಿಫ್ಟ್‌ಗಳಲ್ಲಿ ಪರೀಕ್ಷೆ ಇರಲಿದೆ:

  • ಮೊದಲ ಶಿಫ್ಟ್: ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 12:00 ರವರೆಗೆ
  • ಎರಡನೇ ಶಿಫ್ಟ್: ಮಧ್ಯಾಹ್ನ 3:00 ರಿಂದ ಸಂಜೆ 6:00 ರವರೆಗೆ

ಇದನ್ನೂ ಓದಿ: ನೀಟ್ ಮರುಪರೀಕ್ಷೆ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್: ಈ ವರ್ಷ ಮೆಡಿಕಲ್, ಡೆಂಟಲ್ ಕೋರ್ಸ್ ಶುಲ್ಕ ಹೆಚ್ಚಳವಿಲ್ಲ

ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ?

ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ (Application Number) ಮತ್ತು ಇತರ ಅಗತ್ಯ ವಿವರಗಳನ್ನು ಬಳಸಿ ಲಾಗಿನ್ ಆಗುವ ಮೂಲಕ ಪ್ರವೇಶ ಪತ್ರವನ್ನು ಪಡೆಯಬಹುದು. ಅದಕ್ಕಾಗಿ ಈ ಕೆಳಗಿನ ಹಂತಗಳನ್ನು ಅನುಸರಿಸಿ:

  • ಮೊದಲು ಅಧಿಕೃತ ವೆಬ್‌ಸೈಟ್ ugcnet.nta.nic.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಕಾಣಿಸುವ ‘UGC NET Admit Card 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ಅರ್ಜಿ ಸಂಖ್ಯೆ ಮತ್ತು ಇತರ ಲಾಗಿನ್ ವಿವರಗಳನ್ನು ನಮೂದಿಸಿ ‘Submit’ ಮಾಡಿ.
  • ಈಗ ನಿಮ್ಮ ಪ್ರವೇಶ ಕಾರ್ಡ್ ಪರದೆಯ ಮೇಲೆ ಕಾಣಿಸುತ್ತದೆ. ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಗಮನಿಸಿ:

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿದ ನಂತರ ಅದರಲ್ಲಿರುವ ಹೆಸರು, ಫೋಟೋ, ಪರೀಕ್ಷಾ ದಿನಾಂಕ, ಪರೀಕ್ಷಾ ಸಮಯ ಮತ್ತು ಪರೀಕ್ಷಾ ಕೇಂದ್ರದ ವಿವರಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಲು ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಪ್ರವೇಶ ಪತ್ರದ ಮುದ್ರಿತ ಪ್ರತಿ (Printout) ಮತ್ತು ಅದರೊಂದಿಗೆ ಒಂದು ಮಾನ್ಯವಾದ ಫೋಟೋ ಗುರುತಿನ ಚೀಟಿಯನ್ನು (Valid Photo ID) ಕೊಂಡೊಯ್ಯುವುದು ಕಡ್ಡಾಯವಾಗಿದೆ. ತಪ್ಪಿದಲ್ಲಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಇರುವುದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

‘ದಿ ಒಡೆಸ್ಸಿ’ ಪ್ರೀಮಿಯರ್ ಶೋಗಾಗಿ ಭಾರತಕ್ಕೆ ಬರ್ತಾರೆ ಕ್ರಿಸ್ಟೋಫರ್ ನೋಲನ್ – Kannada News | Christopher Nolan in Mumbai for ‘The Odyssey’ Premiere! India Gears for IMAX Spectacle

ಹಾಲಿವುಡ್ ಚಿತ್ರರಂಗದ ಖ್ಯಾತ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರಿಗೆ (Christopher Nolan) ಭಾರತದಲ್ಲೂ ಭಾರಿ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಪ್ರತಿ ಸಿನಿಮಾಗಳಿಗೂ ಇಲ್ಲಿ ಅದ್ಭುತ ರೆಸ್ಪಾನ್ಸ್ ಸಿಗುತ್ತವೆ ಹಾಗೂ ಗಲ್ಲಾಪೆಟ್ಟಿಗೆಯಲ್ಲೂ ಒಳ್ಳೆಯ ಕಲೆಕ್ಷನ್ ಮಾಡುತ್ತವೆ. ಇದೀಗ ಭಾರತದ ಅಭಿಮಾನಿಗಳನ್ನು ಮತ್ತಷ್ಟು ಖುಷಿಪಡಿಸಲು ನೋಲನ್ ಅವರು ಇದೇ ಮೊದಲ ಬಾರಿಗೆ ತಮ್ಮ ಸಿನಿಮಾವೊಂದರ ಪ್ರಚಾರಕ್ಕಾಗಿ ಮುಂಬೈಗೆ ಲಗ್ಗೆ ಇಡುತ್ತಿದ್ದಾರೆ.

‘ದಿ ಒಡಿಸ್ಸಿ’ ಸಿನಿಮಾನ ಕ್ರಿಸ್ಟೋಫರ್ ನೋಲನ್ ನಿರ್ದೇಶನ ಮಾಡಿದ್ದಾರೆ. ಜುಲೈ 17ರಂದು ತೆರೆಗೆ ಬರುತ್ತಿರುವ ಈ ಚಿತ್ರಕ್ಕೆ ವಿಶ್ವ ಮಟ್ಟದಲ್ಲಿ ಪ್ರಚಾರ ಮಾಡಲಾಗುತ್ತಿದೆ. ಅದರ ಭಾಗವಾಗಿ ತಂಡ ಮುಂಬೈಗೆ ಬರುತ್ತಿದೆ. ಯೂನಿವರ್ಸಲ್ ಪಿಕ್ಚರ್ಸ್ ಇಂಟರ್‌ನ್ಯಾಷನಲ್ ಸಂಸ್ಥೆಯ ಅಧಿಕೃತ ಪ್ರಕಟಣೆಯ ಪ್ರಕಾರ, ಜುಲೈ ತಿಂಗಳಿನಲ್ಲಿ ಮುಂಬೈನಲ್ಲಿ ‘ದಿ ಒಡಿಸ್ಸಿ’ ಚಿತ್ರದ ಭವ್ಯ ಪ್ರೀಮಿಯರ್ ಶೋ ಆಯೋಜಿಸಲಾಗಿದೆ.

ಈ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕ್ರಿಸ್ಟೋಫರ್ ನೋಲನ್ ಖುಷಿಯಿಂದ ಒಪ್ಪಿಕೊಂಡಿದ್ದಾರೆ. ನೋಲನ್ ಜೊತೆಗೆ ಹಾಲಿವುಡ್‌ನ ಖ್ಯಾತ ನಟರಾದ ಮ್ಯಾಟ್ ಡಮನ್, ಟಾಮ್ ಹಾಲೆಂಡ್ ಮತ್ತು ಆಸ್ಕರ್ ಪ್ರಶಸ್ತಿ ವಿಜೇತ ನಿರ್ಮಾಪಕಿ ಎಮ್ಮಾ ಥಾಮಸ್ ಕೂಡ ಮುಂಬೈಗೆ ಆಗಮಿಸುತ್ತಿದ್ದಾರೆ. ಮುಂಬೈನ ಫೀನಿಕ್ಸ್ ಪಲ್ಲಾಡಿಯಮ್‌ನಲ್ಲಿರುವ ಪಿವಿಆರ್ ಐಕಾನ್ ಐಮ್ಯಾಕ್ಸ್ ಥಿಯೇಟರ್‌ನಲ್ಲಿ ಸಿನಿಮಾ ಪ್ರದರ್ಶನ ಕಾಣಲಿದೆ. ಲಂಡನ್, ಪ್ಯಾರಿಸ್ ಮತ್ತು ನ್ಯೂಯಾರ್ಕ್‌ನಂತಹ ವಿಶ್ವದ ಪ್ರಮುಖ ನಗರಗಳ ಸಾಲಿನಲ್ಲಿ ಈಗ ಮುಂಬೈ ಕೂಡ ಸೇರ್ಪಡೆಯಾಗಿದ್ದು, ಈ ಈವೆಂಟ್ ಭಾರತದ ಸಿನಿಮಾ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಾಲಿವುಡ್ ಕಾರ್ಯಕ್ರಮವಾಗಿ ಮೂಡಿಬರಲಿದೆ.

ಚಿತ್ರರಂಗದಲ್ಲಿ ಹೊಸ ಇತಿಹಾಸ ಸೃಷ್ಟಿಸಲಿರುವ ‘ದಿ ಒಡಿಸ್ಸಿ’

ನೋಲನ್ ಅವರ ಈ ಹಿಂದಿನ ‘ಓಪನ್ ಹೈಮರ್’ ಸಿನಿಮಾ ಬರೋಬ್ಬರಿ 7 ಆಸ್ಕರ್ ಪ್ರಶಸ್ತಿಗಳನ್ನು ಬಾಚಿಕೊಂಡು ಜಾಗತಿಕವಾಗಿ ಸಖತ್ ಸೌಂಡ್ ಮಾಡಿತ್ತು. ಅದರ ಬೆನ್ನಲ್ಲೇ ಬರುತ್ತಿರುವ ‘ದಿ ಒಡಿಸ್ಸಿ’ ಮೇಲೆ ಭಾರಿ ನಿರೀಕ್ಷೆಗಳಿವೆ. ಹೋಮರ್ ಅವರ ಪ್ರಸಿದ್ಧ ಇತಿಹಾಸ ಪ್ರಸಿದ್ಧ ಮಹಾಕಾವ್ಯವನ್ನು ಆಧರಿಸಿ ಈ ಸಿನಿಮಾವನ್ನು ಸಿದ್ಧಪಡಿಸಲಾಗಿದೆ. ಟ್ರಾಯ್ ನಗರದ ಪತನದ ನಂತರ ‘ಒಡಿಸ್ಸಿಯಸ್’ ಎಂಬ ನಾಯಕ ಹತ್ತು ವರ್ಷಗಳ ಕಾಲ ನಡೆಸುವ ಅಪಾಯಕಾರಿ ಸಾಹಸದ ಪ್ರಯಾಣದ ಕಥೆ ಇದರಲ್ಲಿದೆ.

ತಾಂತ್ರಿಕವಾಗಿಯೂ ಈ ಸಿನಿಮಾ ಹೊಸ ಮೈಲಿಗಲ್ಲು ಸೃಷ್ಟಿಸುತ್ತಿದೆ. ಸಂಪೂರ್ಣವಾಗಿ ಐಮ್ಯಾಕ್ಸ್ ಕ್ಯಾಮೆರಾಗಳಲ್ಲೇ ಚಿತ್ರೀಕರಣಗೊಂಡ ವಿಶ್ವದ ಮೊದಲ ಸಿನಿಮಾ ಎಂಬ ಹೆಗ್ಗಳಿಕೆಗೆ ಇದು ಪಾತ್ರವಾಗಿದೆ. ಇನ್ನು ಚಿತ್ರದಲ್ಲಿ ಮ್ಯಾಟ್ ಡಮನ್, ಟಾಮ್ ಹಾಲೆಂಡ್ ಜೊತೆಗೆ ಅನ್ ಹ್ಯಾಥ್‌ವೇ, ರಾಬರ್ಟ್ ಪ್ಯಾಟಿನ್ಸನ್, ಜೆಂಡಾಯಾ ಮತ್ತು ಚಾರ್ಲಿಜ್ ಥೆರಾನ್ ಅವರಂತಹ ಸ್ಟಾರ್ ಕಲಾವಿದರು ನಟಿಸಿದ್ದಾರೆ.

ಇದನ್ನೂ ಓದಿ:  ಭಾರತದಲ್ಲಿ ಕ್ರಿಸ್ಟೋಫರ್ ನೋಲನ್ ಹೊಸ ಸಿನಿಮಾದ ಟಿಕೆಟ್ ಬೆಲೆ 3 ಸಾವಿರ ರೂಪಾಯಿಗೂ ಅಧಿಕ

ಭಾರತದಾದ್ಯಂತ ಈ ಚಿತ್ರದ ಐಮ್ಯಾಕ್ಸ್ ಸ್ಕ್ರೀನಿಂಗ್‌ಗಳ ಅಡ್ವಾನ್ಸ್ ಬುಕಿಂಗ್ ಈಗಾಗಲೇ ಆರಂಭವಾಗಿದ್ದು, ನೋಲನ್ ಅವರ ಹೊಸ ದೃಶ್ಯ ವೈಭವವನ್ನು ಕಣ್ತುಂಬಿಕೊಳ್ಳಲು ಭಾರತೀಯ ಚಿತ್ರಪ್ರೇಮಿಗಳು ಕಾತರರಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

ಟೆಲಿಗ್ರಾಮ್ ತಾತ್ಕಾಲಿಕ ನಿಷೇಧ: ಕೇಂದ್ರದ ನಿರ್ಧಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸಂಸ್ಥೆ – Kannada News | Telegram Challenges India’s NEET UG Re Exam Ban in Delhi High Court Today

ನವದೆಹಲಿ, ಜೂನ್ 17: ಭಾರತದಲ್ಲಿ ಜೂನ್ 21ರಂದು ನಡೆಯಲಿರುವ ನೀಟ್ ಯುಜಿ (NEET-UG 2026) ಮರು ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಮ್ ಆ್ಯಪ್ ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸಕರಕಾರದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ದೆಹಲಿ ಹೈಕೋರ್ಟ್​ ಮೆಟ್ಟಿಲೇರಿದೆ. ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿ ತೇಜಸ್ ಕರಿಯಾ ನೇತೃತ್ವದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ನ್ಯಾಯಾಲಯವು ಇಂದು ನಂತರದ ಅವಧಿಯಲ್ಲಿ ಪ್ರಕರಣದ ತುರ್ತು ವಿಚಾರಣೆ ನಡೆಸಲು ಒಪ್ಪಿಕೊಂಡಿದೆ.

ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ತನಿಖೆಯನ್ನು ಕೇಂದ್ರ ತನಿಖಾ ದಳ (CBI) ನಡೆಸುತ್ತಿದೆ. ಈ ಹಿಂದೆ ಪರೀಕ್ಷೆ ನಡೆಯುವ ಮುನ್ನ ಪ್ರಶ್ನೆಪತ್ರಿಕೆಗಳನ್ನು ಪಿಡಿಎಫ್ (PDF) ರೂಪದಲ್ಲಿ ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಚಾನೆಲ್‌ಗಳ ಮೂಲಕ ಹಂಚಿಕೊಳ್ಳಲಾಗಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ಮುಂಬರುವ ಜೂನ್ 21ರ ಮರು ಪರೀಕ್ಷೆಯಲ್ಲೂ ಇಂತಹ ಯಾವುದೇ ಭದ್ರತಾ ಲೋಪಗಳು ಆಗಬಾರದು ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಮ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಸರ್ಕಾರದ ಈ ದಿಢೀರ್ ಕ್ರಮದ ವಿರುದ್ಧ ಟೆಲಿಗ್ರಾಮ್ ಈಗ ನ್ಯಾಯಾಲಯದಿಂದ ಪರಿಹಾರ ಕೋರಿದೆ.

ಇನ್ನೊಂದೆಡೆ, ಪರೀಕ್ಷೆ ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಕೇಂದ್ರ ಸರ್ಕಾರದ ನಿರ್ಧಾರವನ್ನು ಸಂಪೂರ್ಣವಾಗಿ ಸ್ವಾಗತಿಸಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) 2020 ರ ಸೆಕ್ಷನ್ 69A ಅಡಿಯಲ್ಲಿ ದೇಶದ ಹಿತದೃಷ್ಟಿಯಿಂದ ಅತ್ಯಂತ ಅಲ್ಪಾವಧಿಗೆ ಮಾತ್ರ ಈ ನಿರ್ಬಂಧ ಹೇರಲಾಗಿದೆ ಎಂದು ಎನ್‌ಟಿಎ ಸ್ಪಷ್ಟಪಡಿಸಿದೆ. ಲಕ್ಷಾಂತರ ಪ್ರಾಮಾಣಿಕ ವಿದ್ಯರ್ಥಿಗಳಿಗೆ ನ್ಯಾಯ ಒದಗಿಸಲು ಮತ್ತು ಪರೀಕ್ಷೆಯ ಪಾರದರ್ಶಕತೆ ಕಾಪಾಡಲು ಈ ಕ್ರಮ ಅನಿವಾರ್ಯವಾಗಿತ್ತು ಎಂದು ಸಂಸ್ಥೆ ಹೇಳಿದೆ.

ಮತ್ತಷ್ಟು ಓದಿ: Telegram Ban: ಭಾರತದಲ್ಲಿ ಟೆಲಿಗ್ರಾಮ್​ಗೆ ತಾತ್ಕಾಲಿಕ ನಿಷೇಧ: ನೀಟ್ ಮರು ಪರೀಕ್ಷೆಗೂ ಮುನ್ನ ಕೇಂದ್ರದ ಕ್ರಮ

ಇತ್ತೀಚಿನ ವಾರಗಳಲ್ಲಿ ಟೆಲಿಗ್ರಾಮ್‌ನಲ್ಲಿ ಪರೀಕ್ಷಾ ಅಕ್ರಮಗಳಿಗೆ ಸಂಬಂಧಿಸಿದ ಹಲವು ಸಂಘಟಿತ ಚಾನೆಲ್‌ಗಳು ಸಕ್ರಿಯವಾಗಿದ್ದವು ಎಂದು ಎನ್‌ಟಿಎ ಮತ್ತು ಶಿಕ್ಷಣ ಸಚಿವಾಲಯ ನ್ಯಾಯಾಲಯಕ್ಕೆ ಮಾಹಿತಿ ನೀಡಿವೆ. ಈ ವಂಚಕರ ಜಾಲಗಳು ತಮ್ಮ ಚಾನೆಲ್‌ಗಳಿಗೆ ಪೇಪರ್ ಲೀಕ್ಡ್ ನೀಟ್, ರೀ-ನೀಟ್ 2026, ಖಾಸಗಿ ಮಾಫಿಯಾ ಹಾಗೂ ರೀ ನೀಟ್ ಮಾಫಿಯಾ ಎಂಬ ಹೆಸರುಗಳನ್ನು ಇಟ್ಟುಕೊಂಡು ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುತ್ತಿದ್ದವು.

ಮರು ಪರೀಕ್ಷೆಯ ಸಮಯದಲ್ಲಿ ಇಂತಹ ಚಾನೆಲ್‌ಗಳು ಸುಳ್ಳು ವದಂತಿಗಳನ್ನು ಹರಡುವುದನ್ನು ಮತ್ತು ಪರೀಕ್ಷಾ ವ್ಯವಸ್ಥೆಗೆ ಧಕ್ಕೆ ತರುವುದನ್ನು ತಡೆಯಲು ಈ ತಾತ್ಕಾಲಿಕ ನಿಷೇಧ ಅತ್ಯಂತ ಅಗತ್ಯವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ 21ರ ನೀಟ್ ಮರು ಪರೀಕ್ಷೆಯಲ್ಲಿ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಜೂನ್ 22ರವರೆಗೆ ಟೆಲಿಗ್ರಾಮ್ ಆಪ್ ಅನ್ನು ಬ್ಯಾನ್ ಮಾಡಿದೆ. ಈ ಬ್ಯಾನ್ ತೆರವುಗೊಳಿಸುವಂತೆ ಕೋರಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ಇಂದು ಈ ಬಗ್ಗೆ ವಿಚಾರಣೆ ನಡೆಸಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On – 12:25 pm, Wed, 17 June 26

Source link