ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ್ ಪ್ರಮಾಣ: ಸತತ ಎರಡು ಅವಧಿಗೆ ಕಾಂಗ್ರೆಸೇತರ ಮೊದಲ ಸಿಎಂ ಎಂಬ ಹೆಗ್ಗಳಿಕೆ – Kannada News | Himanta biswa sarma sworn in as assam cm for second term
ಗುವಾಹಟಿ, ಮೇ 12: ಬಿಜೆಪಿ ನಾಯಕ ಹಿಮಂತ್ ಬಿಸ್ವಾ ಶರ್ಮಾ ಅವರು ಅಸ್ಸಾಂ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗುವಾಹಟಿಯ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಅಸ್ಸಾಂ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಸಿಎಂ ಹಿಮಂತ್ ಜೊತೆ ಸಚಿವರಾಗಿ ನಾಲ್ವರು ಶಾಸಕರು ಕೂಡ ಇದೇ ವೇಳೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ದಾಖಲೆ ಬರೆದ ಹಿಮಂತ್ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ 126 ಸ್ಥಾನಗಳ ಪೈಕಿ 82 ಸ್ಥಾನಗಳನ್ನು ಗೆದ್ದು ಬಿಜೆಪಿ ಭರ್ಜರಿ…