ಉಡುಪಿ ಜಿಲ್ಲೆಯಲ್ಲಿ ಮನೆ ಕಳ್ಳತನ ತಡೆಗೆ ಪೊಲೀಸ್ ಇಲಾಖೆ ಮಾಸ್ಟರ್ ಪ್ಲಾನ್: ಹೊಸ ಯೋಜನೆ ಜಾರಿ – Kannada News | Udupi Police Launch New Locked House Beat System to Deter Burglaries
ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಉಡುಪಿ, ಮೇ 11: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮನೆ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉಡುಪಿ (Udupi) ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ‘ಲಾಕ್ಡ್ ಹೌಸ್ ಬಿಟ್ ಸಿಸ್ಟಮ್’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ. ಸಾರ್ವಜನಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರಂಭಿಸಿರುವ ಈ ಯೋಜನೆ ಇದೀಗ ಜಿಲ್ಲೆಯಾದ್ಯಂತ ಗಮನ ಸೆಳೆಯುತ್ತಿದೆ. ಮುಖ್ಯಾಂಶಗಳು ಉಡುಪಿಯಲ್ಲಿ ಮನೆ ಕಳ್ಳತನ ತಡೆಗೆ ಹೊಸ ಸಿಸ್ಟಮ್…