ರಸ್ತೆ ಅಪಘಾತದಲ್ಲಿ ತೆಲುಗು ನಟ ಭರತ್ ಕಾಂತ್ ನಿಧನ; ಚಿತ್ರರಂಗದ ಕಂಬನಿ – Kannada News | Telugu actor Bharath Kanth dies in Car Accident in Hyderabad Outer Ring Road
ತೆಲುಗು ಚಿತ್ರರಂಗದ ಉದಯೋನ್ಮುಖ ನಟ ಭರತ್ ಕಾಂತ್ (31) ಅವರು ಹೈದರಾಬಾದ್‌ನ ಹೊರವರ್ತುಲ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Car Accident) ನಿಧನರಾಗಿದ್ದಾರೆ. ಭರತ್ ಅವರೊಂದಿಗೆ ಪ್ರಯಾಣಿಸುತ್ತಿದ್ದ ಸಾಯಿ ತ್ರಿಲೋಕ್ ಎಂಬುವವರು ಕೂಡ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅದಿಬಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಎಕ್ಸಿಟ್ ನಂ. 12ರ ಬಳಿ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಭರತ್ ಕಾಂತ್ (Bharath Kanth), ಸಾಯಿ ತ್ರಿಲೋಕ್ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಟ್ರಕ್‌ಗೆ ಹಿಂಬದಿಯಿಂದ…