ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆ – Kannada News | Saketh Sreenivasaiah from Karnataka Missing in California, Indian Consulate Launches Search Operation
ಸಾಕೇತ್ ಶ್ರೀನಿವಾಸಯ್ಯImage Credit source: LinkedIn/Saketh Sreenivasaiah ನವದೆಹಲಿ, ಫೆಬ್ರವರಿ 14: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಕರ್ನಾಟಕ (Karnataka)ಮೂಲದ ವಿದ್ಯಾರ್ಥಿ ಕಾಣೆಯಾಗಿರುವ ಬಗ್ಗೆ ವರದಿಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. 22 ವರ್ಷದ ಸಾಕೇತ್ ಶ್ರೀನಿವಾಸಯ್ಯ ಕಾಣೆಯಾಗಿದ್ದು, ಅವರನ್ನು ಪತ್ತೆಹಚ್ಚಲು ಸ್ಥಳೀಯ ಪೊಲೀಸರು ಮತ್ತು ಭಾರತೀಯ ದೂತಾವಾಸ ಕಚೇರಿ ತುರ್ತು ಕ್ರಮ ಕೈಗೊಂಡಿವೆ. ಮಾಸ್ಟರ್ಸ್ ವಿದ್ಯಾರ್ಥಿಯಾಗಿರುವ ಸಾಕೇತ್ ಶ್ರೀನಿವಾಸಯ್ಯ (Saketh Sreenivasaiah) ಅಮೆರಿಕದ ಯೂನಿವರ್ಸಿಟಿ ಆಫ್ ಕ್ಯಾಲಿಫೋರ್ನಿಯಾ, ಬರ್ಕ್ಲೇ (University of California, Berkeley) ಯಲ್ಲಿ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಅವರು…