Category Archives: Blog

Your blog category

ಸುವೇಂದು ಅಧಿಕಾರಿ ಪಿಎ ಕೊಲೆ ಪ್ರಕರಣ: ಶಂಕಿತರ ಪತ್ತೆಗೆ ನೆರವಾದ ‘UPI’ ಪೇಮೆಂಟ್ – Kannada News | Suvendu Adhikari’s PA murder case, UPI payment led police to nab 3 suspects

ಚಂದ್ರನಾಥ್ ರಥ್ ಮತ್ತು ಸುವೇಂದು ಅಧಿಕಾರಿ ಚಿತ್ರImage Credit source: ANI

ಕೋಲ್ಕತಾ, ಮೇ 11: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಸುವೇಂದು ಅಧಿಕಾರಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಕಳೆದ ಬುಧವಾರ (ಮೇ 6) ರಾತ್ರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ (Chandranath Rath) ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ವಿಶಾಲ್ ಶ್ರೀವಾಸ್ತವ, ರಾಜ್ ಸಿಂಗ್ ಮತ್ತು ಮಯಂಕ್ ಮಿಶ್ರಾ ಎನ್ನುವ ಶಂಕಿತರನ್ನು ಬಂಧಿಸಿದ್ದಾರೆ. ಈ ಹೈ ಪ್ರೊಫೈಲ್ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT), ಆರೋಪಿಗಳು ಬಳಸಿದ ವಾಹನವನ್ನು ಪತ್ತೆಹಚ್ಚಲು ಮುಂದಾದಾಗ ಮಹತ್ವದ ಸುಳಿವು ಲಭ್ಯವಾಗಿದೆ.

ಕೋಲ್ಕತ್ತಾದ ಮಧ್ಯಾಮಗ್ರಾಮ್ ಸಮೀಪದ ಜೆಸೋರ್ ರಸ್ತೆಯಲ್ಲಿ ಚಂದ್ರನಾಥ್ ಅವರು ತಮ್ಮ ಮನೆಗೆ ಹಿಂತಿರುಗುತ್ತಿದ್ದಾಗ ಈ ದಾಳಿ ನಡೆದಿತ್ತು. ಕೊಲೆಗಡುಕರು ಬಳಸಿದ್ದ ಸಿಲ್ವರ್ ಬಣ್ಣದ ನಿಸ್ಸಾನ್ ಮೈಕ್ರಾ (Nissan Micra) ಕಾರು ಕೋಲ್ಕತ್ತಾ ಸಮೀಪದ ಬಾಲಿ ಟೋಲ್ ಪ್ಲಾಜಾವನ್ನು ಹಾದುಹೋಗಿತ್ತು. ಅಲ್ಲಿ ಕಾರಿನಲ್ಲಿದ್ದವರು ಯುಪಿಐ (UPI) ಮೂಲಕ ಟೋಲ್ ಹಣ ಪಾವತಿಸಿದ್ದರು. ಈ ಡಿಜಿಟಲ್ ಹಣ ವರ್ಗಾವಣೆಯ ದಾಖಲೆಗಳನ್ನು ಪರಿಶೀಲಿಸಿದ ಪೊಲೀಸರಿಗೆ, ಆ ಹಣ ಯಾರ ಖಾತೆಯಿಂದ ಹೋಗಿದೆ ಎಂಬ ಮಾಹಿತಿ ಸಿಕ್ಕಿದೆ. ಯುಪಿಐ ಪಾವತಿಯ ಸಮಯ ಮತ್ತು ಟೋಲ್ ಗೇಟ್‌ನ ಸಿಸಿಟಿವಿ ದೃಶ್ಯಗಳನ್ನು ಹೋಲಿಕೆ ಮಾಡಿದಾಗ ಆರೋಪಿಗಳ ಚಲನವಲನ ಸ್ಪಷ್ಟವಾಗಿದೆ.

ಇದನ್ನೂ ಓದಿ: ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ

ಯುಪಿ ಮತ್ತು ಬಿಹಾರ ಕನೆಕ್ಷನ್

ಕಾರಿನ ನಂಬರ್ ಪ್ಲೇಟ್ ಆಧರಿಸಿ ತನಿಖೆ ನಡೆಸಿದಾಗ, ಅದು ಸಿಲಿಗುರಿಯ ವ್ಯಕ್ತಿಯೊಬ್ಬರ ಹೆಸರಿನಲ್ಲಿರುವುದು ತಿಳಿದುಬಂದಿದೆ. ಆ ವ್ಯಕ್ತಿ ಕಾರನ್ನು ಮಾರಾಟಕ್ಕಿಟ್ಟಾಗ ಉತ್ತರ ಪ್ರದೇಶದ (UP) ಕೆಲವು ವ್ಯಕ್ತಿಗಳು ಸಂಪರ್ಕಿಸಿದ್ದರು. ಸದ್ಯ ಪೊಲೀಸರ ತಂಡಗಳು ಯುಪಿ ಮತ್ತು ಬಿಹಾರಕ್ಕೆ ಧಾವಿಸಿದ್ದು, ಈ ಕೊಲೆಯನ್ನು ವೃತ್ತಿಪರ ಶೂಟರ್‌ಗಳ ಮೂಲಕ ಮಾಡಿಸಲಾಗಿದೆ ಎಂದು ಶಂಕಿಸಲಾಗಿದೆ.

ಚಂದ್ರನಾಥ್ ಕೊಲೆ ನಡೆದ ರೀತಿ

ಚಂದ್ರನಾಥ್ ರಥ್ ಅವರು ತಮ್ಮ ಸ್ಕಾರ್ಪಿಯೋ ವಾಹನದಲ್ಲಿ ಸಂಚರಿಸುತ್ತಿದ್ದಾಗ, ಮೈಕ್ರಾ ಕಾರಿನ ಮೂಲಕ ಅವರ ದಾರಿ ತಡೆಯಲಾಗಿತ್ತು. ನಂತರ ನಾಲ್ಕು ಮೋಟಾರ್ ಸೈಕಲ್‌ಗಳಲ್ಲಿ ಬಂದ ಎಂಟು ಮಂದಿ ಸಶಸ್ತ್ರಧಾರಿಗಳು ಅತಿ ಸಮೀಪದಿಂದ ಎಂಟು ಸುತ್ತು ಗುಂಡು ಹಾರಿಸಿದ್ದರು. ಚಂದ್ರನಾಥ್ ಅವರ ಎದೆ ಮತ್ತು ತಲೆಗೆ ಗುಂಡು ತಗುಲಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟ್ಟಿದ್ದರು.

ಇದನ್ನೂ ಓದಿ: ಜಾಗತಿಕ ತೈಲ ಸಂಕಷ್ಟದ ನಡುವೆ ಇಂಧನ ಬಳಕೆ ಕಡಿತಕ್ಕೆ ಮೋದಿ ಕರೆ: ಚಿನ್ನ ಖರೀದಿ ತಪ್ಪಿಸುವಂತೆಯೂ ಮನವಿ

ಈ ಕೊಲೆಯನ್ನು ಬಿಜೆಪಿಯು “ರಾಜಕೀಯ ಪ್ರೇರಿತ ಸಂಚು” ಎಂದು ಕರೆದಿದ್ದು, ತೃಣಮೂಲ ಕಾಂಗ್ರೆಸ್ (TMC) ಮೇಲೆ ಆರೋಪ ಮಾಡಿದೆ. ಆದರೆ ಟಿಎಂಸಿ ಈ ಆರೋಪವನ್ನು ತಳ್ಳಿಹಾಕಿದ್ದು, ನ್ಯಾಯಾಲಯದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ಒತ್ತಾಯಿಸಿದೆ.

ಸದ್ಯ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಶೀಘ್ರದಲ್ಲೇ ಪ್ರಮುಖ ಆರೋಪಿಗಳನ್ನು ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ಜಮಖಂಡಿ ಜೈಲಿನಲ್ಲಿ ಕೈದಿಗಳ ಗಲಾಟೆ: ಜಗಳ ಬಿಡಿಸಲು ಹೋದ ಜೈಲರ್ ಕೈ ಫ್ರ್ಯಾಕ್ಚರ್; ರೌಡಿ ಗ್ಯಾಂಗ್‌ನಿಂದ ಹಲ್ಲೆ! – Kannada News | Jamkhandi Jail Incident: Inmates Assault Jailer V.D. Kumbar, Causes Fracture

ಜಮಖಂಡಿ ಜೈಲಿನಲ್ಲಿ ಕೈದಿಗಳ ಗಲಾಟೆ

ಜಮಖಂಡಿ, ಮೇ.11: ಜೈಲಿನಲ್ಲಿ ನಡೆಯುತ್ತಿದ್ದ ಕೈದಿಗಳ ನಡುವಿನ ಗದ್ದಲವನ್ನು ನಿಯಂತ್ರಿಸಲು ಹೋದ ಜೈಲರ್ ಮೇಲೆ ಕೈದಿಗಳೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಜಮಖಂಡಿ ಹೊರವಲಯದ ಕಾರಾಗೃಹದಲ್ಲಿ ನಡೆದಿದೆ. ಹಲ್ಲೆಯಿಂದಾಗಿ ಜೈಲರ್ ವಿ.ಡಿ. ಕುಂಬಾರ ಅವರ ಎಡಗೈ ಮೂಳೆ ಮುರಿತವಾಗಿದ್ದು (Fracture), ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣದಲ್ಲಿ ಮಹಾಲಿಂಗಪುರ ಪೊಲೀಸರಿಂದ ಬಂಧಿತರಾಗಿದ್ದ ಜಾಕೀರ್ ಹುಸೇನ್ ಮಕಾಂದಾರ್ ಮತ್ತು ಗ್ಯಾಂಗ್ ಜಮಖಂಡಿ ಜೈಲಿನಲ್ಲಿದ್ದರು. ನಿನ್ನೆ ಸಂಜೆ ಇದೇ ಗ್ಯಾಂಗ್‌ನ ಸದಸ್ಯರ ನಡುವೆ ಜೈಲಿನಲ್ಲಿ ಗಲಾಟೆ ಆರಂಭವಾಗಿತ್ತು. ಪರಿಸ್ಥಿತಿಯನ್ನು ನಿಯಂತ್ರಿಸಲು ಮತ್ತು ಜಗಳ ಬಿಡಿಸಲು ಜೈಲರ್ ವಿ.ಡಿ. ಕುಂಬಾರ ಅವರು ಮಧ್ಯಪ್ರವೇಶಿಸಿದ್ದರು. ಈ ವೇಳೆ ಕೆರಳಿದ ಕೈದಿಗಳು ಜೈಲರ್ ಮೇಲೆಯೇ ಎರಗಿ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: ವೈದ್ಯರ ಎಡವಟ್ಟು ಬಾಣಂತಿ ಸಾವು ಆರೋಪ; ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ!

ಹಲ್ಲೆ ನಡೆಸಿದ ಆರೋಪಿಗಳನ್ನು ಜಾಕೀರ್ ಹುಸೇನ್ ಮಕಾಂದಾರ್‌, ಫಯಾಜ್ ಮಕಾಂದಾರ್, ಅಶೋಕ ನಾಯ್ಕೊಡಿ, ಅರ್ಫಾತ್ ತಾಳಿಕೋಟಿ ಎಂದು ಗುರುತಿಸಲಾಗಿದೆ. ಜೈಲರ್ ಅವರ ಮೇಲೆ ಗುಂಪು ದಾಳಿ ನಡೆಸಿದ ಕೈದಿಗಳು ಅವರನ್ನು ಮನಬಂದಂತೆ ಥಳಿಸಿದ್ದಾರೆ. ಸದ್ಯ ಗಾಯಾಳು ಜೈಲರ್ ಜಮಖಂಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ರಾಜ್ಯದ ಸುದದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ವಿಶೇಷ ದಿನದ ಸೀರೆಗೆ ‘ಪ್ರೀತಿ’ಯ ಕ್ಯಾಪ್ಶನ್ ಕೊಟ್ಟ ತ್ರಿಷಾ ಕೃಷ್ಣನ್ – Kannada News | Trisha Post her Saree Photos And Says Love Is Louder

ತಿಳಿ ಬಣ್ಣದ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿದ್ದ ತ್ರಿಷಾ, ಸಮಾರಂಭದ ಪ್ರಮುಖ ಆಕರ್ಷಣೆಯಾಗಿದ್ದರು. ಇದೀಗ ಅದೇ ಸುಂದರ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಅವರು, ‘The love is always louder’ (ಪ್ರೀತಿಯ ಧ್ವನಿ ಯಾವಾಗಲೂ ದೊಡ್ಡದಾಗಿರುತ್ತದೆ) ಎಂಬ ಕ್ಯಾಪ್ಶನ್ ನೀಡಿದ್ದಾರೆ.

Source link

Gold Rates: ಚಿನ್ನದ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 11th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 11: ವಾರದ ಹಿಂದೆ ಎರಡು ದಿನದಲ್ಲಿ 300 ರೂಗಳಿಗೂ ಹೆಚ್ಚಿನ ಪ್ರಮಾಣದಷ್ಟು ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಕಳೆದ ನಾಲ್ಕೈದು ದಿನಗಳಿಂದ ಇಳಿಮುಖ ಹಾದಿಯಲ್ಲಿದೆ. ವಾರಾಂತ್ಯದಲ್ಲಿ 30 ರೂನಷ್ಟು ಕಡಿಮೆಗೊಂಡಿದ್ದ ಬಂಗಾರದ ದರ ಇವತ್ತು ಸೋಮವಾರ 20 ರೂ ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಇಳಿಕೆಯಾದರೆ, ಇನ್ನೂ ಕೆಲವೆಡೆ ಸ್ವಲ್ಪ ಹೆಚ್ಚಳ ಆಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ವಾರಾಂತ್ಯದಲ್ಲಿ ಇದು ಐದು ರೂ ಹೆಚ್ಚಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,52,130 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,39,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಮೇ 11ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,213 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,945 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,410 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,213 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 13,945 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 13,945 ರೂ
  • ಚೆನ್ನೈ: 14,100 ರೂ
  • ಮುಂಬೈ: 13,945 ರೂ
  • ದೆಹಲಿ: 13,960 ರೂ
  • ಕೋಲ್ಕತಾ: 13,945 ರೂ
  • ಕೇರಳ: 13,945 ರೂ
  • ಅಹ್ಮದಾಬಾದ್: 13,950 ರೂ
  • ಜೈಪುರ್: 13,960 ರೂ
  • ಲಕ್ನೋ: 13,960 ರೂ
  • ಭುವನೇಶ್ವರ್: 13,945 ರೂ

ಇದನ್ನೂ ಓದಿ: ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

  • ಮಲೇಷ್ಯಾ: 567 ರಿಂಗಿಟ್ (13,735 ರುಪಾಯಿ)
  • ದುಬೈ: 526.25 ಡಿರಾಮ್ (13,637 ರುಪಾಯಿ)
  • ಅಮೆರಿಕ: 147.50 ಡಾಲರ್ (14,038 ರುಪಾಯಿ)
  • ಸಿಂಗಾಪುರ: 185.20 ಸಿಂಗಾಪುರ್ ಡಾಲರ್ (13,883 ರುಪಾಯಿ)
  • ಕತಾರ್: 523 ಕತಾರಿ ರಿಯಾಲ್ (13,654 ರೂ)
  • ಸೌದಿ ಅರೇಬಿಯಾ: 535 ಸೌದಿ ರಿಯಾಲ್ (13,572 ರುಪಾಯಿ)
  • ಓಮನ್: 55.80 ಒಮಾನಿ ರಿಯಾಲ್ (13,793 ರುಪಾಯಿ)
  • ಕುವೇತ್: 43.28 ಕುವೇತಿ ದಿನಾರ್ (13,449 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)

  • ಬೆಂಗಳೂರು: 275 ರೂ
  • ಚೆನ್ನೈ: 285 ರೂ
  • ಮುಂಬೈ: 275 ರೂ
  • ದೆಹಲಿ: 275 ರೂ
  • ಕೋಲ್ಕತಾ: 275 ರೂ
  • ಕೇರಳ: 285 ರೂ
  • ಅಹ್ಮದಾಬಾದ್: 275 ರೂ
  • ಜೈಪುರ್: 275 ರೂ
  • ಲಕ್ನೋ: 275 ರೂ
  • ಭುವನೇಶ್ವರ್: 285 ರೂ
  • ಪುಣೆ: 275

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Source link

ವೈದ್ಯರ ಎಡವಟ್ಟು ಬಾಣಂತಿ ಸಾವು ಆರೋಪ; ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ! – Kannada News | Chintamani Hospital Tragedy: Woman Dies Post Sterilization, Medical Negligence Alleged

ಚಿಕ್ಕಬಳ್ಳಾಪುರ ಮೇ.11: ವೈದ್ಯರು ಮಾಡುವ ಎಡವಟ್ಟು ಒಂದೆರಡಲ್ಲ, ಇವರು ಮಾಡುವ ಸಮಸ್ಯೆಗಳಿಗೆ ಸಾಮಾನ್ಯ ಜನ ಬಲಿಯಾಗುತ್ತಿದ್ದಾರೆ. ಇಂತಹದೇ ಅದೆಷ್ಟೋ ಪ್ರಕರಣಗಳು ಈಗ ಬೆಳಕಿದೆ ಬಂದಿದೆ. ಇದೀಗ ಚಿಕ್ಕಬಳ್ಳಾರಪುರದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ಆಸ್ಪತ್ರೆಯ ಮುಂದೆ ಮೃತದೇಹವನ್ನಿಟ್ಟು ಧರಣಿ ನಡೆಸುತ್ತಿದ್ದಾರೆ.

ಬಟ್ಲಹಳ್ಳಿ ಗ್ರಾಮದ ನಿವಾಸಿ ನರ್ಮದಾ ಜಿ.ಎನ್ (24) ಮೃತಪಟ್ಟ ದುರ್ದೈವಿ. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದು, ಕುಟುಂಬ ನಿಯಂತ್ರಣಕ್ಕಾಗಿ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಸ್ತ್ರೀರೋಗ ತಜ್ಞೆ ಡಾ. ವಾಣಿ ರೆಡ್ಡಿ ಅವರು ಆಕಸ್ಮಿಕವಾಗಿ ಸಣ್ಣ ಕರಳನ್ನು ಕತ್ತರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ದೇಹದಲ್ಲಿ ಸೋಂಕು (Infection) ಹರಡಿ ಚಿಕಿತ್ಸೆ ಫಲಿಸದೆ ನರ್ಮದಾ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ವಿಜಯ್, ಯಾವಾಗ ಬೆಂಗಳೂರಿಗೆ ಬರ್ತೀರಾ?: ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!

ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ನೇರ ಕಾರಣ. ಶಸ್ತ್ರಚಿಕಿತ್ಸೆಯ ವೇಳೆ ಕರಳು ಕತ್ತರಿಸಿರುವುದನ್ನು ಮರೆಮಾಚಲಾಗಿತ್ತು. ಈಗ ನರ್ಮದಾ ಸಾವಿಗೆ ಕಾರಣರಾದ ಡಾ. ವಾಣಿ ರೆಡ್ಡಿ ಮತ್ತು ಡಾ. ನಾರಾಯಣಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಾರೆ. ಟಿವಿ9 ಗೆ ಪ್ರತಿಕ್ರಿಯಿಸಿರುವ ಡಾ. ವಾಣಿ ರೆಡ್ಡಿ, “ನರ್ಮದಾ ಅವರ ಸಣ್ಣ ಕರಳು ಅಂಟಿಕೊಂಡಿತ್ತು, ಅದನ್ನು ಬಿಡಿಸುವಾಗ ಸ್ವಲ್ಪ ಹಾನಿಯಾಗಿತ್ತು (Damage). ಹಿರಿಯ ವೈದ್ಯ ಡಾ. ನಾರಾಯಣಸ್ವಾಮಿ ಮೂಲಕ ಕೂಡಲೇ ಚಿಕಿತ್ಸೆ ಕೊಡಿಸಲಾಗಿತ್ತು. ಮೂರು ದಿನದ ಹಿಂದೆ ಅವರು ಗುಣಮುಖರಾಗಿ ಮನೆಗೆ ಹೋಗಿದ್ದರು. ಮನೆಯಲ್ಲಿ ಏನಾಯಿತೋ ಗೊತ್ತಿಲ್ಲ, ಸಾವಿಗೆ ನಿಖರ ಕಾರಣ ತಿಳಿಯಬೇಕಿದೆ” ಎಂದು ಹೇಳಿದ್ದಾರೆ. ಸದ್ಯ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮೃತ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಆಗ್ರಹ ಕೇಳಿಬಂದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IPL 2026: ಗೆಲುವಿನ ಬೆನ್ನಲ್ಲೇ RCB ಕೋಚ್​ಗೆ ಭಾರಿ ದಂಡ! – Kannada News | RCB Coach Andy Flower Fined 15% Match Fee in IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದ ವೇಳೆ ಅಸಭ್ಯ ಪದಗಳನ್ನು ಬಳಸಿದ ಕಾರಣಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರಿಗೆ ಪಂದ್ಯದ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ ನಡುವೆ ಆರ್​ಸಿಬಿ ಕೋಚ್ ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದಕ್ಕೆ ಮುಖ್ಯ ಕಾರಣ ಮೂರನೇ ಅಂಪೈರ್ ನೀಡಿದ ತೀರ್ಪು.

ಈ ಪಂದ್ಯದ 17ನೇ 2ನೇ ಎಸೆತವನ್ನು ಕೃನಾಲ್ ಪಾಂಡ್ಯ ಸಿಕ್ಸರ್​ನತ್ತ ಬಾರಿಸಿದ್ದರು. ಆದರೆ ಚೆಂಡು ಬೌಂಡರಿ ಲೈನ್ ದಾಟುವ ಮುನ್ನ ನಮನ್ ಧೀರ್ ಹಿಡಿದಿದ್ದರು. ಅಲ್ಲದೆ ಅದನ್ನು ರಿಲೇ ಕ್ಯಾಚ್​ಗಾಗಿ ತಿಲಕ್ ವರ್ಮಾರತ್ತ ಎಸೆದಿದ್ದರು. ಆದರೆ ಈ ಕ್ಯಾಚ್ ಅನ್ನು ತಿಲಕ್ ವರ್ಮಾ ಹಿಡಿದಿರಲಿಲ್ಲ.

ಅಷ್ಟೇ ಅಲ್ಲದೆ ಕಾಲು ಬೌಂಡರಿ ಲೈನ್​ಗೆ ತಾಗಿದೆ ಎಂದು ನಮನ್ ಧೀರ್ ಜೊತೆ ಹೇಳುತ್ತಿರುವುದನ್ನು ಗಮನಿಸಿದ ಕೃನಾಲ್ ಪಾಂಡ್ಯ ಸಿಕ್ಸ್ ಆಗಿದೆ ಎಂದು ರನ್ ಓಡಿರಲಿಲ್ಲ. ಆದರೆ ಮೂರನೇ ಅಂಪೈರ್ ಪರಿಶೀಲನೆ ವೇಳೆ ನಮನ್ ಧೀರ್ ಕಾಲು ಬೌಂಡರಿ ಗೆರೆಗೆ ತಾಗಿರಲಿಲ್ಲ.

ಇದನ್ನೂ ಓದಿ: ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು ‘ಎಡವಟ್ಟು’

ಹೀಗಾಗಿ ಮೂರನೇ ಅಂಪೈರ್ ಸಿಕ್ಸ್ ನೀಡಿರಲಿಲ್ಲ. ಇತ್ತ ರನ್ ಓಡದ ಕಾರಣ ಡಾಟ್ ಬಾಲ್ ಆಯಿತು. ಆದರೆ ಅಂಪೈರ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದ ಆರ್​ಸಿಬಿ ಕೋಚ್ ಆ್ಯಂಡಿ ಫ್ಲವರ್ ಡಗೌಟ್ ಬಳಿ ನಾಲ್ಕನೇ ಅಂಪೈರ್ ಜೊತೆ ತೀವ್ರ ವಾಗ್ವಾದಕ್ಕಿಳಿದರು.

ಶಿಕ್ಷೆಗೆ ಕಾರಣವೇನು?

ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸುವಾಗ ಆ್ಯಂಡಿ ಫ್ಲವರ್  ಅವರು ಬಳಸಿದ ಕೆಲವು ‘ಅಸಭ್ಯ ಪದಗಳು’ ಮೈದಾನದ ಮೈಕ್ರೋಫೋನ್‌ನಲ್ಲಿ ಸೆರೆಯಾಗಿದ್ದವು. ಇದು ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.3 ರ (ಪಂದ್ಯದ ಅವಧಿಯಲ್ಲಿ ಅಸಭ್ಯ ಭಾಷೆಯ ಬಳಕೆ) ಅಡಿಯಲ್ಲಿ ‘ಲೆವೆಲ್ 1’ ಅಪರಾಧವೆಂದು ಪರಿಗಣಿಸಲಾಗಿದೆ.

ಅದರಂತೆ  ಮ್ಯಾಚ್ ರೆಫರಿ ಅಮಿತ್ ಶರ್ಮಾ ಅವರು ವಿಧಿಸಿದ ಈ ದಂಡವನ್ನು ಫ್ಲವರ್ ಒಪ್ಪಿಕೊಂಡಿದ್ದಾರೆ. ಅದರಂತೆ ಇದೀಗ ಆ್ಯಂಡಿ ಫ್ಲವರ್​ಗೆ ಪಂದ್ಯದ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ.

Source link

ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ – Kannada News | WFH, cut on gold, petrol, fertilizer, edible oil usage, know how Modi’s tasklist helps Indian economy

ನವದೆಹಲಿ, ಮೇ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ನಿರ್ದಿಷ್ಟವಾಗಿ ಒಂದಷ್ಟು ಕಾರ್ಯಗಳ ಪಟ್ಟಿ ಮಾಡಿ, ಅದನ್ನು ಮಾಡಲು ಯತ್ನಿಸಬೇಕೆಂದು ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ. ಕೋವಿಡ್ ಕಾಲದಲ್ಲಿ ತುರ್ತಾಗಿ ಜಾರಿಯಾದ ವರ್ಕ್ ಫ್ರಂ ಹೋಮ್ ಅನ್ನು ಮಾಡಬೇಕೆಂಬ ಕರೆಯೂ ಅದರಲ್ಲಿ ಒಳಗೊಂಡಿದೆ. ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದೂ ಮೋದಿ ಅವರು ಕರೆ ಕೊಟ್ಟಿದ್ದಾರೆ. ಮೋದಿ ಅವರ ಈ ಕರೆಗಳು ಮುಂಬರುವ ದೊಡ್ಡ ವಿದ್ಯಮಾನದ ಮುನ್ಸೂಚನೆ ಇರಬಹುದೇ ಎಂದು ಹಲವರು ಶಂಕಿಸಿದ್ದಾರೆ. ವಾಸ್ತವದಲ್ಲಿ ಪ್ರಧಾನಿಗಳು ಯಾಕೆ ಈ ಕರೆ ನೀಡಿದರು? ಕೋವಿಡ್​ನಂತಹ ವಿಪತ್ತು ಕಾದಿದೆಯಾ?

ನರೇಂದ್ರ ಮೋದಿ ದೇಶದ ಜನತೆಗೆ ನೀಡಿದ ಸಂದೇಶಗಳಿವು…

  1. ವರ್ಕ್ ಫ್ರಂ ಹೋಮ್​ಗೆ ಆದ್ಯತೆ ನೀಡಿ.
  2. ಸ್ವಂತ ವಾಹನ ಬದಲು ಸಾರ್ವಜನಿಕ ಸಾರಿಗೆ, ಮೆಟ್ರೋಗಳನ್ನು ಬಳಸಿ.
  3. ಕಾರ್ ಬೇಕೆಂದರೆ ಕಾರ್​ಪೂಲ್​ಗೆ ಪ್ರಯತ್ನಿಸಿ. ಎಲೆಕ್ಟ್ರಿಕ್ ವಾಹನಗಳನ್ನು ಬಳಸಿ.
  4. ಕೃಷಿಕರು ರಾಸಾಯನಿಕ ರಸಗೊಬ್ಬರ ಬಳಕೆಯನ್ನು ಶೇ. 50ರಷ್ಟು ಕಡಿಮೆ ಮಾಡಿ. ಸಾವಯವ ಕೃಷಿ ವಿಧಾನ ಅನುಸರಿಸಿ
  5. ಕೃಷಿಯಲ್ಲಿ ಡೀಸಲ್ ಪಂಪ್ ಬದಲು ಸೋಲಾರ್ ಪಂಪ್​ಗಳನ್ನು ಬಳಸಿ
  6. ಒಂದು ವರ್ಷ ಮದುವೆ ಸಮಾರಂಭಗಳಿಗೆ ಚಿನ್ನ ಖರೀದಿಸಬೇಡಿ
  7. ಒಂದು ವರ್ಷ ಜನರು ವಿದೇಶಕ್ಕೆ ಪ್ರಯಾಣಿಸುವುದನ್ನು ಮುಂದೂಡಿಕೆ ಮಾಡಿ
  8. ಅಡುಗೆ ಎಣ್ಣೆ ಬಳಕೆ ಮಿತಿಗೊಳಿಸಿ
  9. ವಿದೇಶೀ ಉತ್ಪನ್ನಗಳ ಬದಲು ಸ್ವದೇಶೀ ಪದಾರ್ಥಗಳನ್ನು ಬಳಸಿ.

ಇದನ್ನೂ ಓದಿ: ಜಾಗತಿಕ ತೈಲ ಸಂಕಷ್ಟದ ನಡುವೆ ಇಂಧನ ಬಳಕೆ ಕಡಿತಕ್ಕೆ ಮೋದಿ ಕರೆ: ಚಿನ್ನ ಖರೀದಿ ತಪ್ಪಿಸುವಂತೆಯೂ ಮನವಿ

ನರೇಂದ್ರ ಮೋದಿ ಅವರ ಈ ಕರೆಗೆ ಏನು ಕಾರಣ?

ನರೇಂದ್ರ ಮೋದಿ ಅವರು ದೇಶದ ವಿದೇಶೀ ವಿನಿಮಯ ಮೀಸಲು ನಿಧಿಯನ್ನು ಉಳಿಸುವ ಉದ್ದೇಶದಿಂದ ಈ ಮೇಲಿನ ಕರೆಗಳನ್ನು ನೀಡಿದ್ದಾರೆ. ಮೇಲೆ ಅವರು ನೀಡಿರುವ ಸಲಹೆಗಳನ್ನು ಗಮನಿಸಿದರೆ ಅವೆಲ್ಲವೂ ಕೂಡ ಆಮದು ಪದಾರ್ಥಗಳಿಗೆ ಸಂಬಂಧಿಸಿದ್ದೇ ಆಗಿವೆ. ಪೆಟ್ರೋಲಿಯಂ ಉತ್ಪನ್ನಗಳು, ಚಿನ್ನ, ಅಡುಗೆ ಎಣ್ಣೆ, ವಿದೇಶೀ ಬ್ರ್ಯಾಂಡ್ ವಸ್ತುಗಳು ಇವೆಲ್ಲವನ್ನೂ ಆಮದು ಮಾಡಿಕೊಳ್ಳುತ್ತಿದ್ದೇವೆ. ಇದರಿಂದ ದೇಶದ ಕರೆಂಟ್ ಅಕೌಂಟ್ ಡೆಫಿಸಿಟ್ ಗಣನೀಯವಾಗಿ ಹೆಚ್ಚುತ್ತಿದೆ.

ಆಮದು ವೆಚ್ಚದಲ್ಲಿ ಚಿನ್ನದ ಪಾಲು ಶೇ. 9

ಚೀನಾ ಬಿಟ್ಟರೆ ಅತಿಹೆಚ್ಚು ಚಿನ್ನವನ್ನು ಆಮದು ಮಾಡಿಕೊಳ್ಳುವ ದೇಶವೆಂದರೆ ಭಾರತವೇ. ಪ್ರತೀ ವರ್ಷ 700-800 ಟನ್ ಚಿನ್ನವನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ. 2025-26ರ ವರ್ಷದಲ್ಲಿ ಭಾರತದಿಂದ 72 ಬಿಲಿಯನ್ ಡಾಲರ್​ನಷ್ಟು ಚಿನ್ನದ ಆಮದು ಮಾಡಲಾಗಿದೆ. ಭಾರತದ ಒಟ್ಟು ಆಮದು ವೆಚ್ಚದಲ್ಲಿ ಚಿನ್ನದ ಪಾಲೇ ಶೇ. 9ರಷ್ಟಿದೆ.

ಇನ್ನು, ಭಾರತ 2025-26ರಲ್ಲಿ 134.7 ಬಿಲಿಯನ್ ಡಾಲರ್ ಮೊತ್ತದಷ್ಟು ಕಚ್ಚಾ ತೈಲವನ್ನು ಆಮದು ಮಾಡಿಕೊಂಡಿದೆ. ರಸಗೊಬ್ಬರ ಹಾಗೂ ಅಡುಗೆ ಎಣ್ಣೆಗಳೂ ಸಾಕಷ್ಟು ಆಮದಾಗುತ್ತವೆ. 2025-26ರಲ್ಲಿ ಭಾರತದ ಒಟ್ಟು ಆಮದು ವೆಚ್ಚ 775 ಬಿಲಿಯನ್ ಡಾಲರ್ ಇದೆ. ಮೋದಿ ತಿಳಿಸಿದ ಈ ಮೇಲಿನ ನಾಲ್ಕು ಪದಾರ್ಥಗಳ ಆಮದುಗಳೇ 240.7 ಬಿಲಿಯನ್ ಡಾಲರ್ ಇದೆ. ಭಾರತದ ಶೇ. 31.1ರಷ್ಟು ಆಮದು ವೆಚ್ಚ ಈ ನಾಲ್ಕು ವಸ್ತುಗಳಿಂದ ಆಗುತ್ತಿದೆ.

ಇದನ್ನೂ ಓದಿ: ಕಾಂಗ್ರೆಸ್ ಒಂದು ಊಸರವಳ್ಳಿ; ಸ್ಟಾನ್​ಫೋರ್ಡ್ ಯೂನಿವರ್ಸಿಟಿಯಲ್ಲಿ ಕೈ ಪಕ್ಷವನ್ನು ಕುಟುಕಿದ ಅಣ್ಣಾಮಲೈ

2025-26ರಲ್ಲಿ ನಾಲ್ಕು ಪ್ರಮುಖ ಆಮದು ಪದಾರ್ಥಗಳು

  • ಕಚ್ಚಾ ತೈಲ: 134.7 ಬಿಲಿಯನ್ ಡಾಲರ್
  • ಚಿನ್ನ: 72 ಬಿಲಿಯನ್ ಡಾಲರ್
  • ಅಡುಗೆ ಎಣ್ಣೆ: 19.5 ಬಿಲಿಯನ್ ಡಾಲರ್
  • ರಸಗೊಬ್ಬರ: 14.5 ಬಿಲಿಯನ್ ಡಾಲರ್

ನರೇಂದ್ರ ಮೋದಿ ಅವರು ನೀಡಿರುವ ಕರೆಯನ್ನು ಅರ್ಧದಷ್ಟಾದರೂ ಪಾಲನೆ ಆದರೆ ಭಾರತದ ಆಮದು ವೆಚ್ಚ ಶೇ. 20ರಷ್ಟು ಕಡಿಮೆ ಆಗಬಹುದು. ಟ್ರೇಡ್ ಡೆಫಿಸಿಟ್ ಕೂಡ ಗಣನೀಯವಾಗಿ ತಗ್ಗಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On – 11:49 am, Mon, 11 May 26

Source link

ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ತನಿಖೆಗೆ ಇಳಿದ ಎನ್ಐಎ, ರಾ ಮತ್ತು ಎನ್‌ಎಸ್‌ಜಿ! – Kannada News | NIA, Raw and NSG Join Probe into Explosives Found on PM Modi’s Route in Bengaluru

ಮೋದಿ ಮಾರ್ಗದಲ್ಲಿ ಜಿಲೆಟಿನ್ ಪತ್ತೆ ಪ್ರಕರಣ: ತನಿಖೆಗೆ ಇಳಿದ ಎನ್ಐಎ, ರಾ ಮತ್ತು ಎನ್‌ಎಸ್‌ಜಿ!

ಬೆಂಗಳೂರು, ಮೇ 11: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು (Gilatine) ಪತ್ತೆಯಾದ ಪ್ರಕರಣವನ್ನು ಕೇಂದ್ರ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ದೇಶದ ಪ್ರಭಾವಿ ತನಿಖಾ ಸಂಸ್ಥೆಗಳಾದ ಎನ್ಐಎ (NIA), ರಾ (RAW) ಮತ್ತು ಕೇಂದ್ರ ಗುಪ್ತಚರ ಇಲಾಖೆ (IB) ಅಧಿಕಾರಿಗಳು ಈಗ ತನಿಖಾ ಕಣಕ್ಕೆ ಇಳಿದಿದ್ದಾರೆ.

ಮುಖ್ಯಾಂಶಗಳು

  •  ಜಿಲೆಟಿನ್ ಪತ್ತೆ ಪ್ರಕರಣದ ತನಿಖೆಗೆ ಎನ್ಐಎ ಮತ್ತು ರಾ ಅಧಿಕಾರಿಗಳ ಎಂಟ್ರಿ.
  •  ಬಾಕ್ಸ್ ಉದ್ದೇಶಪೂರ್ವಕವಾಗಿ ಇಟ್ಟಿರುವ ಶಂಕೆ; ಎನ್‌ಎಸ್‌ಜಿಯಿಂದ ಭದ್ರತಾ ಲೋಪದ ಮಾಹಿತಿ ಸಂಗ್ರಹ.
  •  ಸ್ಥಳದಲ್ಲಿ ಸಿಸಿಟಿವಿ ಇಲ್ಲದಿದ್ದರೂ ಪ್ರವೇಶ ದ್ವಾರಗಳ ದೃಶ್ಯಾವಳಿಗಳ ತೀವ್ರ ತಪಾಸಣೆ ಪ್ರಗತಿಯಲ್ಲಿದೆ.

ಸ್ಥಳ ಪರಿಶೀಲನೆ ಮತ್ತು ಮಾಹಿತಿ ಸಂಗ್ರಹ

ರಾಷ್ಟ್ರೀಯ ತನಿಖಾ ದಳದ (NIA) ಡಿವೈಎಸ್‌ಪಿ ನೇತೃತ್ವದ ತಂಡವು ಸ್ಫೋಟಕ ಪತ್ತೆಯಾದ ವಡೇರಹಳ್ಳಿ ಗೇಟ್ ಸಮೀಪದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶ್ರೀನಿವಾಸ್ ಗೌಡ ಅವರಿಂದ ಎನ್ಐಎ ಅಧಿಕಾರಿಗಳು ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನಿಯವರ ಭದ್ರತೆಯ ಜವಾಬ್ದಾರಿ ಹೊರುವ ಎನ್‌ಎಸ್‌ಜಿ (NSG) ಪಡೆಯ ಮುಖ್ಯಸ್ಥರು ಕೂಡ ರಾಜ್ಯ ಪೊಲೀಸ್ ಇಲಾಖೆಯಿಂದ ತನಿಖಾ ಪ್ರಗತಿಯ ವರದಿಯನ್ನು ತರಿಸಿಕೊಂಡಿದ್ದಾರೆ.

ಉದ್ದೇಶಪೂರ್ವಕ ಕೃತ್ಯದ ಶಂಕೆ

ರಾಮನಗರ ಡಿವೈಎಸ್‌ಪಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಾಥಮಿಕ ತನಿಖೆಯಲ್ಲಿ ಕೆಲವು ಆಘಾತಕಾರಿ ಅಂಶಗಳು ಹೊರಬಂದಿವೆ. ಜಿಲೆಟಿನ್ ಕಡ್ಡಿಗಳಿದ್ದ ಬಾಕ್ಸ್‌ಗಳನ್ನು ಯಾರೋ ಉದ್ದೇಶಪೂರ್ವಕವಾಗಿಯೇ ಅಲ್ಲಿ ಇಟ್ಟಿದ್ದಾರೆ ಎಂಬುದು ತನಿಖೆ ವೇಳೆ ದೃಢಪಟ್ಟಿದೆ. ಆದರೆ, ಸ್ಫೋಟಕಗಳನ್ನು ಯಾವ ನಿಖರ ಸಮಯದಲ್ಲಿ ತಂದು ಇರಿಸಲಾಗಿತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಸ್ಫೋಟಕ ಪತ್ತೆಯಾದ ಜಾಗದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಇಲ್ಲದಿರುವುದು ತನಿಖಾ ತಂಡಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಇದನ್ನೂ ಓದಿ ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲೇ ಜಿಲೆಟಿನ್ ಪತ್ತೆ: ಸ್ಫೋಟಕ ತುಂಬಿದ ಬಾಕ್ಸ್​ಗೆ ಟೇಪ್ ಸುತ್ತಿ ಬಿಸಾಡಿದ್ದ ಆರೋಪಿ!

ಸಿಸಿಟಿವಿ ಮತ್ತು ಗಡಿ ತಪಾಸಣೆ

ಘಟನಾ ಸ್ಥಳದಲ್ಲಿ ಕ್ಯಾಮೆರಾ ಇಲ್ಲದಿದ್ದರೂ, ಆ ರಸ್ತೆಯ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಜಾಲಾಡುತ್ತಿದ್ದಾರೆ. ಕಗ್ಗಲಿಪುರ ಠಾಣೆ ಪೊಲೀಸರು ಮತ್ತು ಎನ್ಐಎ ತಂಡ ಜಂಟಿಯಾಗಿ ಅನುಮಾನಾಸ್ಪದ ವ್ಯಕ್ತಿಗಳ ಚಲನವಲನದ ಮೇಲೆ ನಿಗಾ ಇಟ್ಟಿವೆ. ಅಂತರರಾಜ್ಯ ಅಥವಾ ಅಂತರಜಿಲ್ಲಾ ನಂಟು ಈ ಕೃತ್ಯದ ಹಿಂದೆ ಇದೆಯೇ ಎಂಬ ನಿಟ್ಟಿನಲ್ಲಿ ‘ರಾ’ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ಅತ್ಯಂತ ಬಿಗಿ ಭದ್ರತೆಯ ನಡುವೆಯೂ ಇಂತಹ ಭದ್ರತಾ ಲೋಪ ಸಂಭವಿಸಿರುವುದು ಕೇಂದ್ರ ಮತ್ತು ರಾಜ್ಯದ ಭದ್ರತಾ ಏಜೆನ್ಸಿಗಳಲ್ಲಿ ಆತಂಕ ಮೂಡಿಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ರಾಜಮೌಳಿ ನೀರಿನ ಸಮಸ್ಯೆಗೆ ಸಿಕ್ಕಿತು ಪರಿಹಾರ; ಶೂಟ್​​ನಲ್ಲಿ ಪ್ರಿಯಾಂಕಾ ಭಾಗಿ – Kannada News | SS Rajamouli’s Varanasi: Priyanka Chopra Joins Mahesh Babu Film, Production Updates

ನಿರ್ದೇಶಕ ಎಸ್.ಎಸ್. ರಾಜಮೌಳಿ ಮತ್ತು ನಟ ಮಹೇಶ್ ಬಾಬು ಮೊದಲ ಬಾರಿಗೆ ಒಂದಾಗುತ್ತಿರುವ ಸಿನಿಮಾ ‘ವಾರಣಾಸಿ’ ಈಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಇದೊಂದು ಅಡ್ವೆಂಚರ್ ಆಕ್ಷನ್ ಥ್ರಿಲ್ಲರ್ ಆಗಿದ್ದು, ವಿಶ್ವದ ವಿವಿಧ ದೇಶಗಳಲ್ಲಿ ಚಿತ್ರೀಕರಣಗೊಳ್ಳುತ್ತಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದೀಗ ಚಿತ್ರಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಚೋಪ್ರಾ ಮಹತ್ವದ ಅಪ್‌ಡೇಟ್ ಒಂದನ್ನು ನೀಡಿದ್ದಾರೆ.

ರಾಜಮೌಳಿ ಅವರ ಈ ಸಿನಿಮಾಗೆ ನೀರಿನ ಶಾರ್ಟೇಜ್ ಉಂಟಾಗಿದೆ ಎಂದು ವರದಿ ಆಗಿತ್ತು. ನಿರ್ದೇಶಕರು 150 ಟ್ಯಾಂಕರ್ ನೀರನ್ನು ಕೇಳಿದ್ದರು. ಆದರೆ, ಬೇಸಿಗೆ ಆಗಿರುವುದರಿಂದ ಅಷ್ಟೊಂದು ನೀರನ್ನು ಕೊಡಲು ಸಾಧ್ಯವಿಲ್ಲ ಎಂದು ಹೈದರಾಬಾದ್ ಜಲ ಮಂಡಳಿ ಹೇಳಿತ್ತು. ಈಗ ಇದಕ್ಕೆ ರಾಜಮೌಳಿ ಬೇರೆಯ ಅರೇಂಜ್​​ಮೆಂಟ್ಸ್​ ಮಾಡಿದ್ದಾರೆ ಎಂಬುದು ತಿಳಿಯುತ್ತಿದೆ. ಏಕೆಂದರೆ, ಪ್ರಿಯಾಂಕಾ ಚೋಪ್ರಾ ಅವರು ಸಿನಿಮಾದ ಶೂಟ್​​​ನಲ್ಲಿ ಭಾಗವಹಿಸುತ್ತಿದ್ದಾರೆ.

ಇತ್ತೀಚೆಗೆ ಪ್ರಿಯಾಂಕಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿರುವ ಪ್ರಿಯಾಂಕಾ ಚೋಪ್ರಾ, ‘ವಾರಣಾಸಿ, ಹಿಯರ್ ವಿ ಗೋ’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಅವರು ಸಿನಿಮಾದ ಹೊಸ ಶೆಡ್ಯೂಲ್‌ನಲ್ಲಿ ಭಾಗವಹಿಸುತ್ತಿರುವುದನ್ನು ಖಚಿತಪಡಿಸಿದ್ದಾರೆ. ಈ ಹಿಂದೆ ಹೈದರಾಬಾದ್‌ನಲ್ಲಿ ನಡೆಯಬೇಕಿದ್ದ ಚಿತ್ರೀಕರಣವು ನೀರಿನ ಅಭಾವದ ಕಾರಣದಿಂದಾಗಿ ಸ್ಥಗಿತಗೊಂಡಿತ್ತು ಎಂದು ವರದಿಯಾಗಿತ್ತು. ಇದೀಗ ಅಡೆತಡೆಗಳನ್ನು ನಿವಾರಿಸಿಕೊಂಡು ಚಿತ್ರತಂಡ ಶೂಟ್​​ನಲ್ಲಿ ಬ್ಯುಸಿ ಆಗಿದೆ.

ಈ ಬಿಗ್ ಬಜೆಟ್ ಸಿನಿಮಾದಲ್ಲಿ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅವರ ಪಾತ್ರದ ಪೋಸ್ಟರ್ ರಿಲೀಸ್ ಆಗಿ ಟ್ರೋಲ್ ಆಗಿತ್ತು. ಇವರ ಜೊತೆಗೆ ಬಹುಭಾಷಾ ನಟರಾದ ಆರ್. ಮಾಧವನ್ ಮತ್ತು ಪ್ರಕಾಶ್ ರಾಜ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವುದು ಚಿತ್ರದ ತೂಕವನ್ನು ಹೆಚ್ಚಿಸಿದೆ. ಕೆ.ಎಲ್. ನಾರಾಯಣ ಮತ್ತು ಎಸ್.ಎಸ್. ಕಾರ್ತಿಕೇಯ ಅವರು ಈ ಅದ್ದೂರಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ. ಕೀರವಾಣಿ ಅವರು ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.ರಾಜಮೌಳಿ ಸಿನಿಮಾಗಳಿಗೆ ಇವರ ಸಂಗೀತ ಇರೋದು ಸಾಮಾನ್ಯ ಆಗಿದೆ. ಇನ್ನು ರಾಜಮೌಳಿ ಅವರ ತಂದೆ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದು, ಈ ಸಿನಿಮಾ ಭಾರತೀಯ ಚಿತ್ರರಂಗದ ಮಟ್ಟಿಗೆ ಮತ್ತೊಂದು ‘ಬಾಹುಬಲಿ’ ಅಥವಾ ‘ಆರ್.ಆರ್.ಆರ್’ ಮಾದರಿಯ ಸಂಚಲನ ಸೃಷ್ಟಿಸುವುದು ಗ್ಯಾರಂಟಿ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ವಾರಣಾಸಿ’ ಶೂಟಿಂಗ್​​ಗೆ 150 ಟ್ಯಾಂಕರ್ ನೀರು ಕೇಳಿದ ರಾಜಮೌಳಿ; ಶಾಕ್ ಕೊಟ್ಟ ಅಧಿಕಾರಿಗಳು

ಚಿತ್ರತಂಡದ ಯೋಜನೆಯಂತೆ ‘ವಾರಣಾಸಿ’ ಸಿನಿಮಾ 2027ರ ಏಪ್ರಿಲ್ 7ರಂದು ವಿಶ್ವಾದ್ಯಂತ ತೆರೆಕಾಣಲಿದೆ. ಮಹೇಶ್ ಬಾಬು ಅವರ ಹೊಸ ಲುಕ್ ಮತ್ತು ರಾಜಮೌಳಿ ಅವರ ಮೇಕಿಂಗ್ ಶೈಲಿಯನ್ನು ನೋಡಲು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ.

https://tv9kannada.com/entertainment

Source link

ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು ‘ಎಡವಟ್ಟು’

ಕ್ರಿಕೆಟ್ ಅಂಗಳದಲ್ಲಿ ಕ್ಷಣಕ್ಷಣಕ್ಕೂ ರೋಚಕತೆ! ಒಂದೆಡೆ ಅದ್ಭುತ ಫೀಲ್ಡಿಂಗ್ ಸಾಹಸ, ಇನ್ನೊಂದೆಡೆ ಸಹ ಆಟಗಾರರ ನಡುವೆಯೇ ಕಿತ್ತಾಟ. ಮುಂಬೈ ಇಂಡಿಯನ್ಸ್ ಮತ್ತು ಆರ್‌ಸಿಬಿ ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಅಭಿಮಾನಿಗಳು ಕಂಡಿದ್ದು ಬರೀ ಕ್ರಿಕೆಟ್ ಮಾತ್ರವಲ್ಲ, ಮೈದಾನದಲ್ಲಿ ಮಿಂಚಿನಂತೆ ಸಂಭವಿಸಿದ ನಾಟಕೀಯ ಬೆಳವಣಿಗೆಗಳು!

ನಮನ್ ಧೀರ್ ಮತ್ತು ತಿಲಕ್ ವರ್ಮಾ ನಡುವಿನ ಆ ಒಂದು ‘ತಪ್ಪು ಗ್ರಹಿಕೆ’ ಇಡೀ ಪಂದ್ಯದ ಗತಿಯನ್ನೇ ಬದಲಿಸಿತು ಎಂದರೆ ತಪ್ಪಾಗಲಾರದು. ಅಷ್ಟಕ್ಕೂ ಬೌಂಡರಿ ಲೈನ್ ಬಳಿ ನಡೆದ ಆ ಹೈ-ಡ್ರಾಮಾ ಏನು? ಇಲ್ಲಿ ಯಾರದ್ದು ತಪ್ಪು? ಇಲ್ಲಿದೆ ಸಂಪೂರ್ಣ ಮಾಹಿತಿ…

ಪಂದ್ಯದ 18ನೇ ಓವರ್‌ನಲ್ಲಿ ಆರ್‌ಸಿಬಿ ಬ್ಯಾಟರ್ ಕೃನಾಲ್ ಪಾಂಡ್ಯ ಹೊಡೆದ ಚೆಂಡನ್ನು ಬೌಂಡರಿ ಗೆರೆಯ ಬಳಿ ನಮನ್ ಧೀರ್ ಅದ್ಭುತವಾಗಿ ಹಿಡಿದರು. ಆದರೆ ಚೆಂಡು ಹಿಡಿದ ಬೆನ್ನಲ್ಲೇ ನಿಯಂತ್ರಣ ಕಳೆದುಕೊಂಡ  ನಮನ್​ ಧೀರ್ ಇನ್ನೇನು ಬೌಂಡರಿ ದಾಟಬೇಕು ಅನ್ನುವಷ್ಟರಲ್ಲಿ, ಚೆಂಡನ್ನು ಹತ್ತಿರವೇ ಇದ್ದ ತಿಲಕ್ ವರ್ಮಾ ಕಡೆಗೆ ಎಸೆದರು.

ಆದರೆ, ನಮನ್ ಅವರ ಕಾಲು ಬೌಂಡರಿ ಲೈನ್ ಮುಟ್ಟಿದೆ ಎಂದು ಭಾವಿಸಿದ ತಿಲಕ್ ವರ್ಮಾ, ಚೆಂಡನ್ನು ಹಿಡಿಯಲು ಪ್ರಯತ್ನಿಸಲೇ ಇಲ್ಲ! ಈ ತಪ್ಪು ಗ್ರಹಿಕೆಯು ಮುಂಬೈ ಇಂಡಿಯನ್ಸ್ ಪಾಲಿಗೆ ಮುಳುವಾಯ್ತು. ಏಕೆಂದರೆ  ರಿಪ್ಲೇನಲ್ಲಿ ನಮನ್ ಧೀರ್ ಕಾಲು ಬೌಂಡರಿ ಗೆರೆಗೆ ತಾಗಿಲ್ಲ ಎಂಬುದು ಸ್ಪಷ್ಟವಾಯಿತು. ತಿಲಕ್ ವರ್ಮಾ ಅವರ ನಿರ್ಲಕ್ಷ್ಯದಿಂದಾಗಿ ಒಂದು ಸುಲಭದ ವಿಕೆಟ್ ಕೈತಪ್ಪಿತು.

ಇದರಿಂದ ಕೋಪಗೊಂಡ ನಮನ್ ಧೀರ್ ಮೈದಾನದಲ್ಲೇ ತಿಲಕ್ ಮೇಲೆ ವಾಕ್ಸಮರ ನಡೆಸಿದರು. ಇಬ್ಬರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಆ ಬಳಿಕ ನಮನ್​ ಧೀರ್​ಗೆ ಹಸ್ತಲಾಘವ ನೀಡಿ ತಿಲಕ್ ವರ್ಮಾ ಗೊಂದಲವನ್ನು ಬಗೆಹರಿಸಿಕೊಂಡರು.

ಆದರೆ ಈ ಒಂದು ಕ್ಯಾಚ್ ತಪ್ಪಿದ್ದು ಮುಂಬೈ ಇಂಡಿಯನ್ಸ್ ಪಾಲಿಗೆ ದುಬಾರಿಯಾಯಿತು. ಏಕೆಂದರೆ ಮರು ಎಸೆತದಲ್ಲೇ ಕೃನಾಲ್ ಪಾಂಡ್ಯ ಸಿಕ್ಸರ್ ಸಿಡಿಸಿದ್ದರು. ಇದಾಗ್ಯೂ ಅದೇ ಓವರ್​ನ ಕೊನೆಯ ಎಸೆತದಲ್ಲಿ ತಿಲಕ್ ವರ್ಮಾ ಗಾಳಿಯಲ್ಲಿ ಹಾರಿ ಅದ್ಭುತವಾದ ‘ಜಗ್ಲಿಂಗ್ ಕ್ಯಾಚ್’ ಹಿಡಿದರು.

ಅಷ್ಟರಲ್ಲಾಗಲೇ ಪಂದ್ಯವು ಆರ್​ಸಿಬಿ ಕಡೆಗೆ ವಾಲಿತ್ತು. ಅಂತಿಮವಾಗಿ ಕೊನೆಯ ಓವರ್​ನಲ್ಲಿ 15 ರನ್ ಬಾರಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

 

 

Source link