ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: ತನಿಖೆ ಬಗ್ಗೆ ಕೇಂದ್ರ ವಲಯ ಡಿಐಜಿ ಮಾಹಿತಿ – Kannada News | Gelatin Sticks Found Near PM Modi’s Route; Central Range DGP Reveals Probe Details
ಬೆಂಗಳೂರು, ಮೇ 10: ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ಬೆಂಗಳೂರಲ್ಲಿ ಭಾರೀ ಭದ್ರತಾ ಲೋಪದ ಶಂಕೆ ವ್ಯಕ್ತವಾಗಿದೆ. ಮೋದಿ ಅವರ ಕಾರ್ಯಕ್ರಮಕ್ಕೂ ಸುಮಾರು ಒಂದೂವರೆ ಗಂಟೆಗೂ ಮೊದಲು, ಕಗ್ಗಲೀಪುರದ ತಾತಗುಣಿ ಬಳಿಯ ಆರ್ಟ್ ಆಫ್ ಲಿವಿಂಗ್ ಆಶ್ರಮದ ಹೊರಗೆ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ನೈಸ್ ರಸ್ತೆ ಜಂಕ್ಷನ್‌ನಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ, ರಸ್ತೆಯಿಂದ 20-25 ಅಡಿ ದೂರದಲ್ಲಿರುವ ಕಾಂಪೌಂಡ್ ಬಳಿ ಅನುಮಾನಾಸ್ಪದ ಪ್ಯಾಕೆಟ್ ಒಂದನ್ನು ಕರ್ತವ್ಯ ನಿರತ ಕಾನ್‌ಸ್ಟೆಬಲ್ ಗಮನಿಸಿದ್ದಾರೆ. ಪರಿಶೀಲಿಸಿದಾಗ ಅದರಲ್ಲಿ…