Headlines

ವಿಜಯ್ ಸಿಎಂ ಆಗುವುದು ಖಚಿತ; ಕೊನೆಗೂ ಟಿವಿಕೆಗೆ ವಿಸಿಕೆ, ಮುಸ್ಲಿಂ ಲೀಗ್ ಬೆಂಬಲ – Kannada News | Tamil Nadu government formation Vijay set to become CM as VCK and IUML extends support to TVK

ಚೆನ್ನೈ, ಮೇ 9: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಸರ್ಕಸ್ ಬಗೆಹರಿದಂತಾಗಿದೆ. ಸರ್ಕಾರ ರಚಿಸಲು ಟಿವಿಕೆಗೆ ವಿಸಿಕೆ ನಾಯಕ ತಿರುಮಾವಲವನ್ ಬೆಂಬಲ ಪತ್ರವನ್ನು ನೀಡಿದ್ದಾರೆ. ಹಾಗೇ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಕೂಡ ಬೇಷರತ್ತಾದ ಬೆಂಬಲ ನೀಡಲಿದೆ. ಬೆಳಗ್ಗೆಯಿಂದ ಟಿವಿಕೆ ಮತ್ತು ವಿಸಿಕೆ ನಾಯಕರು ಪ್ರತ್ಯೇಕವಾಗಿ ತಮ್ಮ ಶಾಸಕರ ಜೊತೆ ಸಭೆ ನಡೆಸಿದ್ದರು. ವಿಸಿಕೆ ಟಿವಿಕೆಗೆ ಬೆಂಬಲ ನೀಡಿರುವುದರಿಂದಾಗಿ ವಿಜಯ್ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ. ಇಂದು ಸಂಜೆ 6 ಗಂಟೆಗೆ ಪತ್ರಿಕಾ ಹೇಳಿಕೆ ಪ್ರಕಟಿಸಲಾಗುವುದು. ಈಗಾಗಲೇ ಟಿವಿಕೆ ಕಾರ್ಯಕರ್ತರು…

Read More

ಜೈಲಿನೊಳಗೊಂದು ಲವ್ ಸ್ಟೋರಿ! ಕೊಲೆ ಅಪರಾಧಿಯನ್ನು ಮದುವೆಯಾದ ಜೈಲು ಅಧಿಕಾರಿ – Kannada News | Madhya Pradesh jail officer falls in love with former murder convict in prison marries amid family opposition

ನವದೆಹಲಿ, ಮೇ 9: ಆತ ಕೊಲೆ ಮಾಡಿದ್ದ ಜೈಲು ಸೇರಿದ್ದ ಅಪರಾಧಿ. ಆಕೆ ಆ ಜೈಲಿನ ಅಧಿಕಾರಿ. ಅವರಿಬ್ಬರ ನಡುವೆ ಪ್ರೀತಿ ಮೊಳಕೆಯೊಡೆದಿತ್ತು ಎಂದರೆ ನೀವು ನಂಬಲು ಸಾಧ್ಯವೇ? ಆ ಅಪರಾಧಿಯ ಶಿಕ್ಷೆಯ ಅವಧಿ ಮುಗಿದ ಬಳಿಕ ಆಕೆ ಆತನನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದಾರೆ. ಅದಕ್ಕೆ ಆಕೆಯ ಮನೆಯವರು ಸುತಾರಾಂ ಒಪ್ಪಲಿಲ್ಲ. ಆದರೂ ಹಠ ಮಾಡಿ ಆತನನ್ನೇ ಮದುವೆಯಾಗಿದ್ದಾರೆ. ಆಕೆ ಮುಸ್ಲಿಂ ಮಹಿಳೆಯಾಗಿದ್ದರೆ ಆತ ಹಿಂದೂ. ಇದೀಗ ಆಕೆ ಹಿಂದೂ ಸಂಪ್ರದಾಯದಂತೆ ಅದ್ದೂರಿಯಾಗಿಯೇ ಆತನನ್ನು ಮದುವೆಯಾಗಿದ್ದಾರೆ. ಸತ್ನಾ…

Read More

NMPA Recruitment 2026: ಮಂಗಳೂರು ಬಂದರಿನಲ್ಲಿ ಉದ್ಯೋಗಾವಕಾಶ; 2 ಲಕ್ಷ ರೂ. ಮಾಸಿಕ ವೇತನದ ಹುದ್ದೆಗೆ ಅರ್ಜಿ ಆಹ್ವಾನ! – Kannada News | NMPA Recruitment 2026: 12 Manager Posts at New Mangaluru Port Authority – Apply Now!

ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ ನೇಮಕಾತಿImage Credit source: Ai generated ಮಂಗಳೂರಿನಲ್ಲಿ ಕೇಂದ್ರ ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶವೊಂದು ಒದಗಿ ಬಂದಿದೆ. ಕೇಂದ್ರ ಸರ್ಕಾರದ ಬಂದರು, ಹಡಗು ಮತ್ತು ಜಲಮಾರ್ಗ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ನ್ಯೂ ಮಂಗಳೂರು ಪೋರ್ಟ್ ಅಥಾರಿಟಿ (NMPA) ಇದೀಗ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 12 ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕರ್ನಾಟಕದ ಬಂದರು ನಗರದಲ್ಲಿ ಕೇಂದ್ರ ಸರ್ಕಾರದ ಅಡಿಯಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ…

Read More

ಬಿಎಸ್​​ವೈ ಅಭಿಮಾನೋತ್ಸವ: ಯಡಿಯೂರಪ್ಪ ಬರ್ತಿದ್ದಂತೆ ಕಾರ್ಯಕರ್ತರಿಂದ ಜೈಕಾರ; ಹೇಗಿದೆ ನೋಡಿ ರಾಜಾಹುಲಿ ಎಂಟ್ರಿ – Kannada News | Chitradurga BSY Abhimanotsava: Watch How Yediyurappa Made a Grand Entry to the Stage

ಚಿತ್ರದುರ್ಗ, ಮೇ 09: 50 ವರ್ಷಗಳ ರಾಜಕೀಯ ಜೀವನ ಪೂರ್ಣವಾಗಿದ್ದರಿಂದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸಂಭ್ರಮದಲ್ಲಿದ್ದಾರೆ. ಇಂದು ಚಿತ್ರದುರ್ಗದಲ್ಲಿ ಬಿಎಸ್. ಯಡಿಯೂರಪ್ಪ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ವೇದಿಕೆಗೆ ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಅವರ ಪರ ಘೋಷಣೆ ಕೂಗಿದರು. ಇನ್ನು ಇದೇ ವೇಳೆ ಯಡಿಯೂರಪ್ಪಗೆ ಸಂಸದ ಗೋವಿಂದ ಕಾರಜೋಳ ಶಾಲು ಹೊದಿಸಿ ಸ್ವಾಗತಿಸಿದರು. ಇತ್ತ ರಾಜಾಹುಲಿ ಕೂಡ ನೆರೆದಿದ್ದ ಜನರಿಗೆ ಕೈ ಮುಗಿಯುತ್ತಾ ಎಂಟ್ರಿ ಕೊಟ್ಟರು. ಕೇಂದ್ರ ಸಚಿವ ಅಮಿತ್ ಶಾ ಭಾಗಿಯಾಗಿದ್ದು, ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ…

Read More

IPL 2026: ತನ್ನ 2ನೇ ತವರು ಮೈದಾನದಲ್ಲಿ ಚೊಚ್ಚಲ ಪಂದ್ಯವನ್ನಾಡಲಿದೆ ಆರ್​ಸಿಬಿ; ಎದುರಾಳಿ ಯಾರು? – Kannada News | IPL 2026: RCB vs MI Match 54 Preview – Revenge Battle in Raipur! Live Stream Details

ಐಪಿಎಲ್ 2026 (IPL 2026) ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ನಡುವಿನ ಸೇಡಿನ ಸಮರಕ್ಕೆ ವೇದಿಕೆ ಸಜ್ಜಾಗಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಎರಡೂ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಬಲಪಡಿಸಿಕೊಳ್ಳಲು ಪ್ರಯತ್ನಿಸಲಿವೆ. ಈ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅತ್ಯುತ್ತಮ ಫಾರ್ಮ್‌ನಲ್ಲಿತ್ತು. ಆದರೆ ಕಳೆದೆರಡು ಪಂದ್ಯಗಳಲ್ಲಿ ತಂಡ ಲಯ ಕಳೆದುಕೊಂಡಿದೆ. ಹೀಗಾಗಿ ಮುಂಬೈ ವಿರುದ್ಧ ಸತತ ಎರಡನೇ ಪಂದ್ಯವನ್ನು ಗೆದ್ದು ಮತ್ತೆ ಗೆಲುವಿನ…

Read More

ಬಜೆಟ್ 1400 ಕೋಟಿ, ಗಳಿಸಿದ್ದು 6 ಕೋಟಿ, ಐತಿಹಾಸಿಕ ನಷ್ಟ ಕಂಡ ಸಿನಿಮಾ – Kannada News | 1400 crore budget movie Desert Warrior collects only 6 crore at box office

ಸಿನಿಮಾಗಳು (Cinema) ನಷ್ಟ ಅನುಭವಿಸುವುದು ಸಾಮಾನ್ಯ. ನಿರ್ಮಾಣವಾದ ಸಿನಿಮಾಗಳಲ್ಲಿ 50% ಸಿನಿಮಾಗಳು ಬಂಡವಾಳದ ಅರ್ಧದಷ್ಟು ಸಹ ಗಳಿಕೆ ಮಾಡುವುದಿಲ್ಲ. ಆದರೆ ದೊಡ್ಡ ಬಜೆಟ್​​ನ ಸಿನಿಮಾಗಳು ಸೋಲುವುದು ತುಸು ವಿರಳ. ಹಾಗೆ ಸೋಲುವ ಸಿನಿಮಾಗಳು ಸಹ ಕನಿಷ್ಟ 50 ರಿಂದ 70% ಹಣವನ್ನಾದರೂ ಗಳಿಕೆ ಮಾಡುತ್ತವೆ. ಆದರೆ ಇಲ್ಲೊಂದು ಸಿನಿಮಾಕ್ಕೆ ಬರೋಬ್ಬರಿ 1400 ಕೋಟಿ ಬಜೆಟ್ ಹೂಡಿಕೆ ಮಾಡಲಾಗಿತ್ತು. ಆದರೆ ಬಾಕ್ಸ್ ಆಫೀಸ್​​ನಲ್ಲಿ ಗಳಿಕೆ ಮಾಡಿದ್ದು ಕೇವಲ 6 ಕೋಟಿ ರೂಪಾಯಿ! ಸೌದಿ ಅರೇಬಿಯಾದ ಅತ್ಯಂತ ದುಬಾರಿ ಐತಿಹಾಸಿಕ…

Read More

ಲಾರಿಗೆ ಕಾರು ಡಿಕ್ಕಿ: ಜವರಾಯನ ಅಟ್ಟಹಾಸಕ್ಕೆ ಕುಣಿಗಲ್​​ ಬಳಿ ದಾರಿಯಲ್ಲೇ ಪ್ರಾಣಬಿಟ್ಟ ನಾಲ್ವರು

ತುಮಕೂರು, ಮೇ 09: ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಲ್ಟೋ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ. ಗೊಬ್ಬರ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಆಲ್ಟೋ ಕಾರು ಛಿದ್ರ ಛಿದ್ರವಾಗಿದ್ದು, ಕಾರು ಚಾಲಕ ಸೇರಿದಂತೆ ಮಂಡ್ಯ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಕುಮಾರಸ್ವಾಮಿ, ಗಾಯತ್ರಿ ಸೇರಿದಂತೆ ನಾಲ್ವರು ದುರ್ಮರಣ ಹೊಂದಿದ್ದು, ಘಟನಾ ಸ್ಥಳಕ್ಕೆ ಕುಣಿಗಲ್ ಠಾಣೆ ಪೊಲೀಸರ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ….

Read More

CIL Recruitment 2026: ಕೋಲ್ ಇಂಡಿಯಾ ಲಿಮಿಟೆಡ್​​ನಲ್ಲಿ 276 ಹುದ್ದೆಗಳಿಗೆ ನೇಮಕಾತಿ; ತರಬೇತಿ ಅವಧಿಯಲ್ಲೇ ತಿಂಗಳಿಗೆ 60,000 ರೂ. ವೇತನ – Kannada News | CIL Management Trainee Recruitment 2026: 276 Posts, No Exam via GATE 2025

ಕೋಲ್ ಇಂಡಿಯಾ ಲಿಮಿಟೆಡ್Image Credit source: Ai generated ಕೋಲ್ಕತ್ತಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಭಾರತ ಸರ್ಕಾರದ ಸಾರ್ವಜನಿಕ ವಲಯದ ಉದ್ದಿಮೆಯಾದ ಕೋಲ್ ಇಂಡಿಯಾ ಲಿಮಿಟೆಡ್ (CIL), ಗಣಿ ಇಲಾಖೆಯಲ್ಲಿ ಖಾಲಿ ಇರುವ ಮ್ಯಾನೇಜ್ಮೆಂಟ್ ಟ್ರೈನಿ (Management Trainee) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಪ್ರಕ್ರಿಯೆಯ ಮೂಲಕ ಒಟ್ಟು 276 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ವಿಶೇಷವೆಂದರೆ ಈ ಹುದ್ದೆಗಳಿಗೆ ಯಾವುದೇ ಪ್ರತ್ಯೇಕ ಲಿಖಿತ ಪರೀಕ್ಷೆ ಇರುವುದಿಲ್ಲ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಮ್ಯಾನೇಜ್ಮೆಂಟ್…

Read More

ಮಲ್ಟಿ ಟ್ರ್ಯಾಕಿಂಗ್ ರೈಲ್ವೆ ಯೋಜನೆಗೆ ಕೇಂದ್ರ ಒಪ್ಪಿಗೆ: ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಬಂಪರ್ ಕೊಡುಗೆ – Kannada News | Modi Cabinet Approves 3 Multi Tracking Railway Projects Covering 6 States Including Karnataka

ಬೆಂಗಳೂರು, ಮೇ 09: ಕರ್ನಾಟಕ ಸೇರಿದಂತೆ ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ 19 ಜಿಲ್ಲೆಗಳನ್ನು ಒಳಗೊಂಡ ಮೂರು ಮಲ್ಟಿ ಟ್ರ್ಯಾಕಿಂಗ್ ರೈಲ್ವೆ ಯೋಜನೆಗೆ ಕೇಂದ್ರ ಸಚಿವ ಸಂಪುಟ (Cabinet) ಅನುಮೋದನೆ ನೀಡಿದೆ. ಆ ಮೂಲಕ ಪ್ರಸ್ತುತವಿರುವ ಭಾರತೀಯ ರೈಲ್ವೆ (Indian Railways) ಜಾಲಕ್ಕೆ ಸುಮಾರು 901 ಕಿ.ಮೀ ಸೇರ್ಪಡೆಗೊಳ್ಳಲಿದೆ. ಯೋಜನೆಯ ಒಟ್ಟು ಅಂದಾಜು ವೆಚ್ಚ 23,437 ಕೋಟಿ ರೂ.ಗಳಾಗಿದ್ದು, 2030-31ನೇ ಸಾಲಿನ ವೇಳೆಗೆ ಪೂರ್ಣಗೊಳ್ಳುವ ಗುರಿ ಹೊಂದಲಾಗಿದೆ. ಮುಖ್ಯಾಂಶಗಳು ಮಲ್ಟಿ ಟ್ರ್ಯಾಕಿಂಗ್…

Read More

ಹೈದರಾಬಾದ್​​ಗೆ ನಾಳೆ ಪ್ರಧಾನಿ ಮೋದಿ ಭೇಟಿ; 9,400 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ – Kannada News | PM Narendra Modi To Visit Telangana Tomorrow to Launch Rs 9400 crore infrastructure projects

ಹೈದರಾಬಾದ್, ಮೇ 9: ನಾಳೆ ತೆಲಂಗಾಣ ರಾಜ್ಯದ ಮೂಲಸೌಕರ್ಯದ ಅಭಿವೃದ್ಧಿಯಲ್ಲಿ ಮತ್ತೊಂದು ಪ್ರಮುಖ ಮೈಲಿಗಲ್ಲು ಅನಾವರಣಗೊಳ್ಳಲಿದೆ. ರಾಜ್ಯದ ಅಭಿವೃದ್ಧಿಯನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ನಾಳೆ (ಭಾನುವಾರ) ಹೈದರಾಬಾದ್​​ನಲ್ಲಿ 9,400 ಕೋಟಿ ರೂ. ಮೌಲ್ಯದ ಹಲವಾರು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮವು ಭಾನುವಾರ ಮಧ್ಯಾಹ್ನ 2.30ಕ್ಕೆ ಗಚಿಬೌಲಿಯ HIC ಕೇಂದ್ರದಲ್ಲಿ ನಡೆಯಲಿದೆ. ಪ್ರಧಾನಿ ಮೋದಿ ಉದ್ಘಾಟಿಸಲಿರುವ ಪ್ರಮುಖ ಯೋಜನೆಗಳು: ರಸ್ತೆ ವಿಸ್ತರಣೆ (ರೂ. 3,180 ಕೋಟಿ): ಹೈದರಾಬಾದ್-ಪಣಜಿ ಆರ್ಥಿಕ…

Read More