ನಾಳೆಯ ಹವಾಮಾನ: ಮೈಸೂರು ಸೇರಿ 9 ಜಿಲ್ಲೆಗಳಲ್ಲಿ ಮಳೆ, ಉತ್ತರದಲ್ಲಿ ಬಿಸಿಲಿಗೆ ಸುಡಲಿದೆ ಇಳೆ – Kannada News | Karnataka Weather Update: Rain Likely in 9 Districts; Heat Wave Continues in Parts of North Karnataka
ಬೆಂಗಳೂರು, ಮೇ 09: ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ನಾಳೆಯೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡು ಭಾಗದ ತಲಾ 2 ಜಿಲ್ಲೆಗಳು ಸೇರಿದಂತೆ, ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ವರುಣನ ಆಗಮನದ ನಿರೀಕ್ಷೆ ಇದೆ. ಅದನ್ನು ಹೊರತುಪಡಿಸಿ ಉಳಿದಂತೆ ಬಹುತೇಕ ಜಿಲ್ಲೆಗಳಲ್ಲಿ ಒಳಹವೆ ಮುಂದುವರಿಯಲಿದೆ. ಉತ್ತರ ಕರ್ನಾಟಕದ ಹಲವೆಡೆ ತೀವ್ರ ಬಿಸಿಲಿನ ವಾತಾವರಣ ಇರಲಿದ್ದರೆ, ಬೆಂಗಳೂರು ನಗರದಲ್ಲಿ ಮಳೆಯ ಸಿಂಚನದ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಎಲ್ಲೆಲ್ಲಿ ಮಳೆ?…