ಬಿಎಂಆರ್ಸಿಎಲ್ನಿಂದ ಮಹತ್ವದ ಮಾಹಿತಿ: ಎಂದಿನಂತೆ ನಾಳೆಯೂ ಮೆಟ್ರೋ ಒಡಾಟ; ಇಲ್ಲ ಯಾವುದೇ ಬದಲಾವಣೆ – Kannada News | BMRCL Withdraws Disruption: Namma Metro Services Normal on May 10th in Bengaluru
ಬೆಂಗಳೂರು, ಮೇ 09: ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನಮ್ಮ ಮೆಟ್ರೋ ರೈಲುಗಳ ಸಂಚಾರದಲ್ಲಿ ಮೇ 10ರ ಭಾನುವಾರ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಪ್ರಕಟಣೆ ಮೂಲಕ ತಿಳಿಸಿತ್ತು. ಆದರೆ ನಗರದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಹಾಗೂ ಸಾರ್ವಜನಿಕರ ಸುಗಮ ಮತ್ತು ಅನುಕೂಲಕರ ಸಂಚಾರವನ್ನು ಗಮನದಲ್ಲಿಟ್ಟುಕೊಂಡು ಭಾನುವಾರ ಬೆಳಿಗ್ಗೆ 5 ಗಂಟೆಯಿಂದಲೇ ಎಲ್ಲ ಮಾರ್ಗಗಳಲ್ಲಿ ಸಾಮಾನ್ಯ ದಿನದಂತೆ ಮೆಟ್ರೋ ರೈಲುಗಳು ಸಂಚಾರ ನಡೆಸಲಿವೆ…