ನಾಳೆಯೇ ಪರಿಷತ್ ಚುನಾವಣೆ: 5ನೇ ಅಭ್ಯರ್ಥಿ ಗೆಲುವಿಗೆ ‘ಕೈ’ ತಂತ್ರ, ಏಕೈಕ ಕ್ಯಾಂಡಿಡೇಟ್ ವಿಜಯಕ್ಕೆ ಜೆಡಿಎಸ್ ಕಸರತ್ತು – Kannada News | Karnataka MLC Elections: Cross Voting Fears Drive Resort Politics as Congress and JDS Fight for Crucial Seats
ಪರಿಷತ್ ಸಮರ: ಜೋರಾದ ಸಂಖ್ಯಾ ಬಲದ ಅಂತಿಮ ಲೆಕ್ಕಾಚಾರ Image Credit source: PTI ಬೆಂಗಳೂರು, ಜೂನ್ 17: ನಾಳೆ (ಜೂನ್ 18) ವಿಧಾನಪರಿಷತ್ ಚುನಾವಣೆ ನಡೆಯಲಿರುವ ಹಿನ್ನೆಲೆ ರಾಜ್ಯದ ಮೂರೂ ಪ್ರಮುಖ ಪಕ್ಷಗಳಲ್ಲಿಯೂ ಆತಂಕ ಹೆಚ್ಚಿದೆ. ಅದರಲ್ಲೂ ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ಈ ಎಲೆಕ್ಷನ್ ಪ್ರತಿಷ್ಠೆಯ ಪ್ರಶ್ನೆಯಾಗಿ ಮಾರ್ಪಟ್ಟಿದೆ. ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಎಂಟು ಅಭ್ಯರ್ಥಿಗಳು ಕಣದಲ್ಲಿದ್ದು, ಗೆಲುವಿಗಾಗಿ ಭಾರೀ ಲೆಕ್ಕಾಚಾರ ಶುರುವಾಗಿದೆ. ಕಾಂಗ್ರೆಸ್‌ನಿಂದ ಐವರು, ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಮೂವರು ಅಭ್ಯರ್ಥಿಗಳು ಅಖಾಡದಲ್ಲಿದ್ದು, ಕಾಂಗ್ರೆಸ್‌ನ…