ಜಾತಿ ವ್ಯವಸ್ಥೆ ನಿರ್ಮೂಲನೆಗೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕೊಟ್ಟ ಐಡಿಯಾ ಏನು ನೋಡಿ! – Kannada News | See what idea RSS chief Mohan Bhagwat has given in Mysuru to eradicate the caste system!
ಮೈಸೂರು, ಮೇ 9: ಭಾರತದ ಸರ್ವತೋಮುಖ ಪ್ರಗತಿಗೆ ಸಾಮಾಜಿಕ ಸಾಮರಸ್ಯ ಮತ್ತು ಭಾವನಾತ್ಮಕ ಏಕೀಕರಣ ಅತ್ಯಗತ್ಯ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ. ನಗರದ ಜೆಎಸ್‌ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವ ಉಪನ್ಯಾಸ ಮಾಲಿಕೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ಸಾಮರಸ್ಯವೇ ಪ್ರೇರಕ ಶಕ್ತಿ’ ಎಂಬ ವಿಷಯದ ಕುರಿತು ಅವರು ಗುರುವಾರ ವಿಶೇಷ ಉಪನ್ಯಾಸ ನೀಡಿದರು. ಸಮಾಜವು ಜಾತಿ ಮತ್ತು ಧರ್ಮದ ಸಂಕುಚಿತ ಮನೋಭಾವದಿಂದ ಹೊರಬರಬೇಕು ಎಂದು ಅವರು…