ಬೆಂಗಳೂರು: ನಾಗರಬಾವಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ, ಉಸಿರುಗಟ್ಟಿ ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ – Kannada News | Bengaluru Fire News: One Dead, Four Injured in Nagarbhavi Hotel Fire Accident Due to Suffocation
ನಾಗರಬಾವಿ ಹೋಟೆಲ್‌ನಲ್ಲಿ ಬೆಂಕಿImage Credit source: tv9 ಬೆಂಗಳೂರು, ಮೇ 9: ಬೆಂಗಳೂರಿನ ನಾಗರಬಾವಿಯ ಹೋಟೆಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಹೋಟೆಲ್‌ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಈ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ನಾಗರಬಾವಿಯ ಹೋಟೆಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಾಗ ಒಟ್ಟು ಐವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಐವರನ್ನು…