ಬೆಂಗಳೂರಲ್ಲಿ ಅತಿ ಉದ್ದದ ಮೆಟ್ರೋ ಓಪನ್ ಮಾಡಲು BMRCL ಸಿದ್ದತೆ: ಟ್ರಾಫಿಕ್ ಸಮಸ್ಯೆಗೆ ಸಿಗಲಿದೆ ಮುಕ್ತಿ – Kannada News | Bengaluru’s Longest Metro Line Planned: BMRCL Proposes 73 km Route to Connect IT Hubs, Traffic Relief
ಬೆಂಗಳೂರು, ಮೇ 08: ನಗರದಲ್ಲಿ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಮುಂದಾಗಿರುವ ಬಿಎಂಆರ್ಸಿಎಲ್ (BMRCL), ಕಾಳೇನ ಅಗ್ರಹಾರದಿಂದ ನಾಗವಾರದವರೆಗಿನ ‘ಪಿಂಕ್ ಲೈನ್’ ಮೆಟ್ರೋ (Pink Line Metro) ಮಾರ್ಗವನ್ನು ಲೋಕಾರ್ಪಣೆಗೊಳಿಸಲು ಸಜ್ಜಾಗಿದೆ. ಈ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಜೂನ್ ತಿಂಗಳಿನಲ್ಲಿ ಆರು ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲು ಯೋಜಿಸಲಾಗಿದೆ. ಇದರ ಬೆನ್ನಲ್ಲೇ, ಈ ಮಾರ್ಗವನ್ನು ಮತ್ತಷ್ಟು ವಿಸ್ತರಿಸುವ ಮೂಲಕ ನಗರದ ಅತಿ ಉದ್ದದ ಮೆಟ್ರೋ ಕಾರಿಡಾರ್ ನಿರ್ಮಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಮುಖ್ಯಾಂಶಗಳು…