ನನ್ನ ಮಕ್ಕಳು ಸಹ ಸ್ಪರ್ಧಿಸಲ್ಲ: ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ – Kannada News | BJP MLC H Vishwanath retires from electoral politics
ಮೈಸೂರು, (ಮೇ,7): ಕರ್ನಾಟಕದ ಹಿರಿಯ ರಾಜಕಾರಣಿ, ರಾಜಕೀಯ ವಲಯದಲ್ಲಿ ಹಳ್ಳಿಹಕ್ಕಿ ಎಂದೇ ಗುರುತಿಸಿಕೊಂಡಿರುವ ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ (H Vishwanath) ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ವಿಶ್ವನಾಥ್ ಅವರು ಸಕ್ರೀಯ ರಾಜಕಾರಣದಲ್ಲಿ ಇರುತ್ತಾರೆ. ಆದ್ರೆ,ಇನ್ಮುಂದೆ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧೆ ಮಾಡುವುದಿಲ್ಲ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬರುವ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಚುನಾವಣೆಗೆ ಸ್ಪರ್ಧಿಸಿದಾಗ ಜನರೇ ಹಣ ನೀಡಿ ಆಶೀರ್ವದಿಸಿದ್ದರು ಈಗ ಹಣ ನೀಡಿ ಚುನಾವಣೆ…