ಮಹಿಳಾ ಟಿ20 ವಿಶ್ವಕಪ್ನಲ್ಲಿ ಭಾರತಕ್ಕೆ 2ನೇ ಪಂದ್ಯ; ಎದುರಾಳಿ ಯಾರು? ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs Netherlands Women’s T20 WC: Match Preview, Squads and Live Stream Details
2026 ರ ಮಹಿಳಾ ಟಿ20 ವಿಶ್ವಕಪ್ನ (Women’s T20 World Cup 2026) 10ನೇ ಪಂದ್ಯದಲ್ಲಿ ಭಾರತ ಹಾಗೂ ನೆದರ್ಲ್ಯಾಂಡ್ಸ್ (India vs Netherlands) ಮಹಿಳಾ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಲೀಗ್ನಲ್ಲಿ ಎರಡು ತಂಡಗಳಿಗೆ ಇದು ಎರಡನೇ ಪಂದ್ಯವಾಗಿದೆ. ಭಾರತ ತಂಡ ತನ್ನ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಆರಂಭಿಸಿತ್ತು. ಹೀಗಾಗಿ ಹರ್ಮನ್ಪ್ರೀತ್ ಪಡೆ ಭಾರತ ತನ್ನ ಗೆಲುವಿನ ಓಟವನ್ನು ಮುಂದುವರಿಸಲು ಎದುರು ನೋಡುತ್ತಿದೆ. ಏತನ್ಮಧ್ಯೆ, ಬಾಂಗ್ಲಾದೇಶ ವಿರುದ್ಧದ ಸೋಲಿನಿಂದ ಹೊರಬಂದಿರುವ…