IPL 2026: ‘ನಿರಾಶೆಯಾಗಿದೆ’.. ಕೈತಪ್ಪಿದ ಫೈನಲ್ ಆತಿಥ್ಯ; ಹೇಳಿಕೆ ಬಿಡುಗಡೆ ಮಾಡಿದ ಕೆಎಸ್ಸಿಎ – Kannada News | BCCI Shifts IPL 2026 Playoffs/Final from Bengaluru; KSCA Expresses Disappointment
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಐಪಿಎಲ್ 2026 (IPL 2026) ರ ಪ್ಲೇಆಫ್ ಹಾಗೂ ಫೈನಲ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಬಿಸಿಸಿಐ (BCCI) ಕೂಡ ಐಪಿಎಲ್ ಆರಂಭಕ್ಕೂ ಮುನ್ನವೇ ಬೆಂಗಳೂರಿನಲ್ಲಿ ಐಪಿಎಲ್ ಫೈನಲ್ ನಡೆಸಲು ನಿರ್ಧರಿಸಿತ್ತು. ಇತ್ತ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಕೂಡ ಐಪಿಎಲ್ ಫೈನಲ್ಗೆ ಸಕಲ ತಯಾರಿ ಮಾಡಿಕೊಂಡಿತ್ತು. ಆದರೆ ಲೀಗ್ ಪಂದ್ಯಗಳು ಮುಗಿಯುವುದಕ್ಕೂ ಮುನ್ನ ಪ್ಲೇಆಫ್ ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಿರುವ ಬಿಸಿಸಿಐ, ಪ್ಲೇಆಫ್ ಹಾಗೂ ಫೈನಲ್ ಪಂದ್ಯವನ್ನು ಬೇರೆಡೆಗೆ ಸ್ಥಳಾಂತರಿಸಿದೆ….