ಒಂದೇ ವರ್ಷದಲ್ಲಿ 40 ಬಾಲಕಾರ್ಮಿಕರ ಪತ್ತೆ ಮಾಡಿದ ಮಂಡ್ಯ ಜಿಲ್ಲಾಡಳಿತ: 14 ಎಫ್ಐಆರ್ – Kannada News | Mandya Cracks Down on Child Labor: 40 Rescued, 14 FIRs in One Year
ಮಂಡ್ಯ, ಮೇ 06: ಸರ್ಕಾರದ ಸಾಕಷ್ಟು ಕಠಿಮ ನಿಯಮಗಳ ನಡುವೆಯೂ ಕಳೆದ ಒಂದು ವರ್ಷದಲ್ಲಿ ಮಂಡ್ಯ ಜಿಲ್ಲೆಯಲ್ಲಿ 40 ಬಾಲಕಾರ್ಮಿಕರನ್ನು ಗುರುತಿಸಲಾಗಿದ್ದು, ಈ ಸಂಬಂಧ 14 ಎಫ್‌ಐಆರ್‌ಗಳು ದಾಖಲಾಗಿವೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಜಿಲ್ಲಾಧಿಕಾರಿ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಗ್ಯಾರೇಜ್, ಹೋಟೆಲ್ ಹಾಗೂ ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತಿರುವುದನ್ನು ಗುರುತಿಸಿ, ಮಾಲೀಕರ ವಿರುದ್ಧ ಕಠಿಣ…