ಹೊಸಕೋಟೆ ಪೊಲೀಸರ ಭರ್ಜರಿ ಬೇಟೆ: 50 ಬೈಕ್ ಸಮೇತ ಇಬ್ಬರು ಅಂತರರಾಜ್ಯ ಕಳ್ಳರ ಬಂಧನ – Kannada News | Hoskote Police Bust Interstate Bike Theft Racket: 2 Arrested, 50 Bikes Worth Rs 55 Lakh Recovered
ಹೊಸಕೋಟೆ, ಮೇ 6: ಸಾರ್ವಜನಿಕರ ದ್ವಿಚಕ್ರ ವಾಹನಗಳನ್ನು ಕದ್ದು ಪರಾರಿಯಾಗುತ್ತಿದ್ದ ಇಬ್ಬರು ಅಂತರರಾಜ್ಯ ಬೈಕ್ ಕಳ್ಳರನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನರಸಿಂಹಮೂರ್ತಿ ಮತ್ತು ಪ್ರಸಾದ್ ಎಂದು ಗುರುತಿಸಲಾಗಿದ್ದು, ಅವರಿಂದ ಬರೋಬ್ಬರಿ 55 ಲಕ್ಷ ರೂಪಾಯಿ ಮೌಲ್ಯದ 50 ವಿವಿಧ ಕಂಪನಿಯ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಖದೀಮರು ತಮ್ಮ ಮೋಜು ಮಸ್ತಿಗಾಗಿ ಬೈಕ್‌ಗಳನ್ನು ಕದ್ದು ಆಂಧ್ರದ ಗಡಿ ಭಾಗಗಳಲ್ಲಿ ಕೇವಲ ಐದರಿಂದ ಹತ್ತು ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಿ ಮಜಾ ಮಾಡುತ್ತಿದ್ದರು. ಹೊಸಕೋಟೆಯಲ್ಲಿ ಪಾನಿಪುರಿ ವ್ಯಾಪಾರಿಯೊಬ್ಬರ ಬೈಕ್…