ಮದುವೆ ಮಂಟಪಕ್ಕೇ ನುಗ್ಗಿ ಬಂಗಾರ, ಬೆಳ್ಳಿ ಕದ್ದ ಕಳ್ಳ: ಎಸ್ಕೇಪ್ ಆಗುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ – Kannada News | Hospet Kalyana Mantapa Theft: Gold and Silver Stolen, Thief Caught on CCTV
ವಿಜಯನಗರ/ದೇವನಹಳ್ಳಿ, ಮೇ 06: ಮದುವೆ ಮಂಟಪಕ್ಕೇ ನುಗ್ಗಿ ಕಳ್ಳನೋರ್ವ ವಧುವಿಗೆ ಹಾಕಬೇಕಿದ್ದ ಬಂಗಾರ ಮತ್ತು ಬೆಳ್ಳಿಯ ಆಭರಣಗಳಿದ್ದ ಬ್ಯಾಗ್ ಕಳ್ಳತನ ನಡೆಸಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಸಿದ್ಧಿಪ್ರಿಯ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಬ್ಯಾಗ್ ಸಮೇತ ಕಳ್ಳ ಎಸ್ಕೇಪ್ ಆಗಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೇ 4ರಂದು ಮಧ್ಯಾಹ್ನ ಸುಮಾರು 12 ಗಂಟೆಗೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 40 ಗ್ರಾಂನ ಚಿನ್ನದ ಸರ, ಅರ್ಧ ಕೆ.ಜಿ. ಬೆಳ್ಳಿ, 10 ಸಾವಿರ ನಗದು…