Category Archives: Blog

Your blog category

TV9 Kannada News Live: ವಚನಾನಂದ ಶ್ರೀಗೆ ಜಾಮೀನು ಮಂಜೂರು; ಕಾಂಗ್ರೆಸ್​​ ಕೇರಳದಲ್ಲಿ ಗದ್ದುಗೆ, ತಮಿಳುನಾಡಿನಲ್ಲಿ ವಿಜಯ್ ಜೊತೆ ಮೈತ್ರಿ! – Kannada News | TV9 Kannada News Live: Dog Bite Epidemic, Swamiji Bail and Key Political Shifts

ಬೆಂಗಳೂರು, ಮೇ.6; ದೇಶದ ರಾಜಕಾರಣದಲ್ಲಿ ದೊಡ್ಡಮಟ್ಟದ ಬದಲಾವಣೆಗಳು ಕಂಡು ಬಂದಿದೆ. ಪಂಚ ರಾಜ್ಯಗಳ ಚುನಾವಣೆಯ ನಂತರ ರಾಜಕೀಯದಲ್ಲಿ ಭಾರೀ ಸಂಚಲ ಮೂಡಿಸಿದೆ. ಇನ್ನು ಬೆಂಗಳೂರಿನಲ್ಲಿ ಇಂದು ಮಳೆಯಾಗುವ ಸಾಧ್ಯ ಇದೆ ಎಂದು ಹೇಳಲಾಗಿದೆ. ಮಠದ ಹಾಸ್ಟೆಲ್ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಯವರಿಗೆ ದಾವಣಗೆರೆ ವಿಶೇಷ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಿಲಿಕಾನ್ ಸಿಟಿ ಸೇರಿದಂತೆ ಕರ್ನಾಟಕದಾದ್ಯಂತ ಬೇಸಿಗೆಯ ತಾಪಮಾನ ಏರುತ್ತಿದ್ದಂತೆ ನಾಯಿಗಳ ವರ್ತನೆಯಲ್ಲಿ ಆಕ್ರಮಣಶೀಲತೆ ಕಂಡುಬರುತ್ತಿದೆ. ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಬರೋಬ್ಬರಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಡಿತದ ಪ್ರಕರಣಗಳು ವರದಿಯಾಗಿದೆ. ಇದರೆಲ್ಲದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ವಚನಾನಂದ ಶ್ರೀಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು:

ಮಠದ ಹಾಸ್ಟೆಲ್ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಯವರಿಗೆ ದಾವಣಗೆರೆ ವಿಶೇಷ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಹಾಸ್ಟೆಲ್‌ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಮಠದಲ್ಲಿದ್ದ ಮೂವರು ಮಕ್ಕಳು ಮಕ್ಕಳ ಕಲ್ಯಾಣ ಸಮಿತಿ (CWC) ಮುಂದೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಚನಾನಂದ ಶ್ರೀಗಳು ಹಾಗೂ ಅವರ ಬೆಂಬಲಿಗರ ವಿರುದ್ಧ ದೌರ್ಜನ್ಯದ ಆರೋಪ ಕೇಳಿಬಂದಿತ್ತು. ಬಂಧನದ ಭೀತಿಯಲ್ಲಿದ್ದ ಶ್ರೀಗಳು ಏಪ್ರಿಲ್ 21ರಂದು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ ನ್ಯಾಯಾಲಯವು ಶ್ರೀಗಳಿಗೆ ಹಲವು ಕಠಿಣ ಷರತ್ತುಗಳನ್ನು ವಿಧಿಸಿದೆ. ಪ್ರಕರಣದ ಸಾಕ್ಷಿಗಳಿಗೆ ಯಾವುದೇ ರೀತಿಯ ಬೆದರಿಕೆ ಹಾಕಬಾರದು. ನ್ಯಾಯಾಲಯದ ಪೂರ್ವ ಅನುಮತಿ ಇಲ್ಲದೆ ವ್ಯಾಪ್ತಿಯನ್ನು ಬಿಟ್ಟು ಹೋಗಬಾರದು.

ತಮಿಳುನಾಡಿನಲ್ಲಿ ಹೊಸ ಮೈತ್ರಿ: ದಶಕದ ಬಳಿಕ ಕೇರಳಂನಲ್ಲಿ ‘ಕೈ’ ಪರ್ವ

ದಕ್ಷಿಣ ಭಾರತದ ಎರಡು ಪ್ರಮುಖ ರಾಜ್ಯಗಳಾದ ತಮಿಳುನಾಡು ಮತ್ತು ಕೇರಳದಲ್ಲಿ ರಾಜಕೀಯ ಸಮೀಕರಣಗಳು ಸಂಪೂರ್ಣವಾಗಿ ಬದಲಾಗಿವೆ. ತಮಿಳುನಾಡಿನಲ್ಲಿ ನಟ ವಿಜಯ್ ಅವರ ಚೊಚ್ಚಲ ಚುನಾವಣಾ ಯಶಸ್ಸು ಮತ್ತು ಕೇರಳದಲ್ಲಿ ಕಾಂಗ್ರೆಸ್‌ನ ಐತಿಹಾಸಿಕ ಪುನರಾಗಮನ ಈ ಬಾರಿಯ ವಿಶೇಷ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಭರ್ಜರಿ ಜಯ ಗಳಿಸಿದ್ದರೂ, ಬಹುಮತಕ್ಕೆ ಕೆಲವು ಸ್ಥಾನಗಳ ಕೊರತೆಯಿತ್ತು. ಇದೀಗ ಕಾಂಗ್ರೆಸ್ ತನ್ನ 5 ಸ್ಥಾನಗಳ ಬೆಂಬಲವನ್ನು ಘೋಷಿಸಿದ್ದು, ವಿಜಯ್ ಸರ್ಕಾರ ರಚನೆಗೆ ಹಾದಿ ಸುಗಮವಾಗಿದೆ. ಪ್ರತಿಯಾಗಿ ಕಾಂಗ್ರೆಸ್ 2 ಸಚಿವ ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ. ಕೇರಳದಲ್ಲಿ ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿದ್ದ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ (LDF) ಪತನಗೊಂಡಿದೆ. ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿದೆ. ಪಿಣರಾಯಿ ವಿಜಯನ್ ಸರ್ಕಾರದ ವಿರುದ್ಧವಿದ್ದ ಆಡಳಿತ ವಿರೋಧಿ ಅಲೆ, ನಿರುದ್ಯೋಗ ಮತ್ತು ಆರ್ಥಿಕ ಬಿಕ್ಕಟ್ಟುಗಳು ಎಲ್‌ಡಿಎಫ್ ಸೋಲಿಗೆ ಪ್ರಮುಖ ಕಾರಣಗಳಾಗಿವೆ.

ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮಿತಿಮೀರಿದ ಬೀದಿ ನಾಯಿ ಹಾವಳಿ: ಕೇವಲ 4 ತಿಂಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಜನರಿಗೆ ನಾಯಿ ಕಡಿತ, 25 ಸಾವು

ರಾಜ್ಯದಲ್ಲಿ ಮಿತಿಮೀರಿದ ಬೀದಿ ನಾಯಿ ಹಾವಳಿ

ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯಾದ್ಯಂತ ಬೇಸಿಗೆಯ ಬಿಸಿಲಿಗೆ ನಾಯಿಗಳ ವರ್ತನೆಯಲ್ಲಿ ತೀವ್ರ ಆಕ್ರಮಣಶೀಲತೆ ಕಂಡುಬರುತ್ತಿದೆ. ಕಳೆದ ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಡಿತದ ಪ್ರಕರಣಗಳು ವರದಿಯಾಗಿದ್ದು, 25 ಜನರು ರೇಬೀಸ್ ಸೇರಿದಂತೆ ವಿವಿಧ ಕಾರಣಗಳಿಂದ ಸಾವನ್ನಪ್ಪಿದ್ದಾರೆ. ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯು ‘ಹೈ ಅಲರ್ಟ್’ ಘೋಷಿಸಿದೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ರೇಬೀಸ್ ವಿರೋಧಿ ಲಸಿಕೆ (ARV) ಮತ್ತು ಇಮ್ಯುನೊಗ್ಲೋಬ್ಯುಲಿನ್ ಲಸಿಕೆಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಇರಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:32 am, Wed, 6 May 26

Source link

ಇಸ್ರೋ ಕ್ಯಾಂಪಸ್ ಮೇಲೆ ಹಾರಾಡಿತು ಡ್ರೋನ್: ಭದ್ರತೆಗೆ ಭಾರೀ ಆತಂಕ – Kannada News | Security Breach at ISRO ISITE Campus: Drone Spotted in No Drone Zone, FIR Filed in Bengaluru

ಸಾಂದರ್ಭಿಕ ಚಿತ್ರ (AI)Image Credit source: MediaForge AI

ಬೆಂಗಳೂರು, ಮೇ 6: ದೇಶದ ಅತ್ಯಂತ ಸಂವೇದನಾಶೀಲ ಪ್ರದೇಶಗಳಲ್ಲಿ ಒಂದಾದ ಬೆಂಗಳೂರಿನ (Bengaluru) ಇಸ್ರೋ ಐಸೈಟ್ (ISRO ISITE) ಕ್ಯಾಂಪಸ್ ಬಳಿ ಡ್ರೋನ್ ಹಾರಾಟ ನಡೆಸಿರುವುದು ಈಗ ಭದ್ರತಾ ವಲಯದಲ್ಲಿ ಆತಂಕ ಮೂಡಿಸಿದೆ. ನಿಷೇಧಿತ ‘ನೋ ಡ್ರೋನ್ ಝೋನ್’ನಲ್ಲಿ ಅಪರಿಚಿತರು ಡ್ರೋನ್ ಹಾರಾಟ ನಡೆಸಿದ್ದು, ಈ ಸಂಬಂಧ ಎಚ್‌ಎಎಲ್ (HAL) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಖ್ಯಾಂಶಗಳು

  • ಮೇ 2ರಂದು ಬೆಳಿಗ್ಗೆ ಇಸ್ರೋ ಐಸೈಟ್ ಕ್ಯಾಂಪಸ್ ಮೇಲೆ ಸುಮಾರು 12 ಸೆಕೆಂಡ್‌ಗಳ ಕಾಲ ಹಾರಾಡಿದ ಡ್ರೋನ್.
  • ಅನುಮತಿ ಇಲ್ಲದೆ ಸುಮಾರು 80 ರಿಂದ 100 ಅಡಿ ಎತ್ತರದಲ್ಲಿ ಡ್ರೋನ್ ಹಾರಾಟ ನಡೆಸಿರುವುದು ಪತ್ತೆ.
  • ಆಂತರಿಕ ಭದ್ರತೆಯ ದೃಷ್ಟಿಯಿಂದ ಇಸ್ರೋ ಅಧಿಕಾರಿಗಳಿಂದ ಪೊಲೀಸರಿಗೆ ದೂರು ಸಲ್ಲಿಕೆ.

ಇಸ್ರೋ ಐಸೈಟ್ ಕ್ಯಾಂಪಸ್ ಬಳಿ ನಡೆದಿದ್ದೇನು?

ಸಿಐಎಸ್‌ಎಫ್ (CISF) ಯುನಿಟ್‌ನ ಸಬ್ ಇನ್ಸ್‌ಪೆಕ್ಟರ್ ಅವರು ನೀಡಿರುವ ದೂರಿನ ಪ್ರಕಾರ, ಮೇ 2, 2026ರಂದು ಬೆಳಿಗ್ಗೆ ಸುಮಾರು 8:16 ಗಂಟೆಗೆ ಬೆಂಗಳೂರಿನ ಇಸ್ರೋ ಐಸೈಟ್ ಕ್ಯಾಂಪಸ್ ಮೇಲ್ಭಾಗದಲ್ಲಿ ಈ ಡ್ರೋನ್ ಹಾರಾಟ ಕಂಡುಬಂದಿದೆ. ‘ನೋ ಡ್ರೋನ್ ಝೋನ್’ ಎಂದು ಗುರುತಿಸಲ್ಪಟ್ಟಿರುವ ಈ ಪ್ರದೇಶದಲ್ಲಿ ಸುಮಾರು 80 ರಿಂದ 100 ಅಡಿ ಎತ್ತರದಲ್ಲಿ ಡ್ರೋನ್ ಹಾರಾಟ ನಡೆಸಿದೆ. ಸುಮಾರು 10 ರಿಂದ 12 ಸೆಕೆಂಡುಗಳ ಕಾಲ ಹಾರಾಟ ನಡೆಸಿದ ಡ್ರೋನ್, ತದನಂತರ ಕಣ್ಮರೆಯಾಗಿದೆ.

ಭದ್ರತೆಗೆ ಭಾರೀ ಆತಂಕ

ಇಸ್ರೋ ಐಸೈಟ್ ಕ್ಯಾಂಪಸ್ ಅತ್ಯಂತ ಸಂವೇದನಾಶೀಲ ಪ್ರದೇಶವಾಗಿದ್ದು, ಇಲ್ಲಿ ಯಾವುದೇ ಅನುಮತಿ ಇಲ್ಲದೆ ವೈಮಾನಿಕ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಇಂತಹ ಪ್ರದೇಶದಲ್ಲಿ ಡ್ರೋನ್ ಹಾರಾಟ ನಡೆಸಿರುವುದು ಭದ್ರತೆ ಮತ್ತು ಸುರಕ್ಷತೆಗೆ ಗಂಭೀರ ಅಪಾಯವನ್ನು ಉಂಟುಮಾಡುತ್ತದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಭಾರತೀಯ ಅಂತರಿಕ್ಷ ನಿಲ್ದಾಣದ ರೂಪುರೇಖೆ ಅಂತಿಮಗೊಳಿಸಿದ ಇಸ್ರೋ ಮತ್ತು ಸರ್ಕಾರ

ನಿಷೇಧಿತ ಪ್ರದೇಶವೆಂದು ತಿಳಿದಿದ್ದರೂ ಸಹ ಉದ್ದೇಶಪೂರ್ವಕವಾಗಿ ಅಥವಾ ಕಾನೂನು ಉಲ್ಲಂಘಿಸಿ ಡ್ರೋನ್ ಹಾರಿಸಿದ ಅಪರಿಚಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಿಐಎಸ್‌ಎಫ್ ಅಧಿಕಾರಿಗಳು ಒತ್ತಾಯಿಸಿದ್ದಾರೆ. ಸದ್ಯ ಎಚ್‌ಎಎಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಡ್ರೋನ್ ಹಾರಿಸಿದವರ ಪತ್ತೆಗೆ ಬಲೆ ಬೀಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:33 am, Wed, 6 May 26

Source link

ರಾಹುಲ್ ಗಾಂಧಿ ಆಪ್ತನೆಂದು ಹೇಳಿಕೊಂಡು ರಾಜಕಾರಣಿಗಳಿಗೆ ಗಾಳ, ಲಕ್ಷ ಲಕ್ಷ ರೂ. ಲೂಟಿ ಮಾಡಿ ಸಿಕ್ಕಿಬಿದ್ದ – Kannada News | Rahul Gandhi Aide Impersonator Arrested in Multi State Political Scam, Dehradun Police Busts Fraud Ring

ಡೆಹ್ರಾಡೂನ್, ಮೇ 06: ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi)ಯ ಹೆಸರನ್ನು ಬಳಸಿಕೊಂಡು ಟಿಕೆಟ್ ಆಕಾಂಕ್ಷಿಗಳು ಹಾಗೂ ರಾಜಕೀಯ ನಾಯಕರಿಗೆ ವಂಚಿಸುತ್ತಿದ್ದ ಬೃಹತ್ ಅಂತಾರಾಜ್ಯ ಜಾಲವೊಂದನ್ನು ಡೆಹ್ರಾಡೂನ್ ಪೊಲೀಸರು ಪತ್ತೆಹಚ್ಚಿದ್ದಾರೆ. ಆಪರೇಷನ್ ಪ್ರಹಾರ್ ಅಡಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, ಪಂಜಾಬ್‌ನ ಅಮೃತಸರ ಮೂಲದ ಗೌರವ್ ಕುಮಾರ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಉತ್ತರಾಖಂಡದ ಕಾಂಗ್ರೆಸ್ ನಾಯಕಿ ಭಾವನಾ ಪಾಂಡೆ ಅವರು ಮೇ 3 ರಂದು ನೀಡಿದ ದೂರು ಈ ಹಗರಣದ ಮೂಲವನ್ನು ಪತ್ತೆಹಚ್ಚಲು ನೆರವಾಯಿತು. ರಾಹುಲ್ ಗಾಂಧಿಯವರ ಸಹಾಯಕ ಕಾನೀಶ್ ಸಿಂಗ್ ಎಂದು ಹೇಳಿಕೊಂಡಿದ್ದ ಗೌರವ್ ಕುಮಾರ್, ಪಕ್ಷದೊಳಗೆ ಉನ್ನತ ಹುದ್ದೆ ಕೊಡಿಸುವುದಾಗಿ ನಂಬಿಸಿ ಭಾವನಾ ಅವರಿಂದ 25 ಲಕ್ಷ ರೂಪಾಯಿ ಪಡೆದು ಫೋನ್ ಸ್ವಿಚ್ ಆಫ್ ಮಾಡಿದ್ದ. ವಿಶ್ವಾಸಾರ್ಹತೆ ಹೆಚ್ಚಿಸಲು ಟ್ರೂಕಾಲರ್‌ನಲ್ಲಿ ಕನಿಷ್ಕ್ ಸಿಂಗ್ ಎಂಬ ನಕಲಿ ಪ್ರೊಫೈಲ್ ಬಳಸುತ್ತಿದ್ದ.

ರಾಜಕೀಯ ವೆಬ್‌ಸೈಟ್‌ಗಳಿಂದ ಉತ್ತರಾಖಂಡ, ರಾಜಸ್ಥಾನ ಮತ್ತು ಬಿಹಾರದ ಪ್ರಭಾವಿ ನಾಯಕರ ಮಾಹಿತಿಯನ್ನು ಕಲೆಹಾಕುತ್ತಿದ್ದ. ಹೈಕಮಾಂಡ್‌ನೊಂದಿಗೆ ನೇರ ಸಂಪರ್ಕವಿದೆ ಎಂದು ಬಿಂಬಿಸಿಕೊಂಡು, ಚುನಾವಣಾ ಟಿಕೆಟ್ ಅಥವಾ ಉನ್ನತ ಹುದ್ದೆಗಳ ಆಸೆ ತೋರಿಸಿ ಹಣ ಪಡೆಯುತ್ತಿದ್ದ.

ಪೊಲೀಸ್ ವಿಚಾರಣೆಯ ವೇಳೆ ಆರೋಪಿಯು ತನ್ನ ವಂಚನೆಯನ್ನು ಒಪ್ಪಿಕೊಂಡಿದ್ದಾನೆ. ಜೈಪುರದಲ್ಲಿ ಇಬ್ಬರು ರಾಜಕಾರಣಿಗಳಿಗೆ ಕ್ರಮವಾಗಿ 1.90 ಕೋಟಿ ರೂ. ಮತ್ತು 12 ಲಕ್ಷ ರೂ. ವಂಚನೆ ಮಾಡಿದ್ದಾನೆ. ಪಾಟ್ನಾ ಮೂಲದ ನಾಯಕನಿಂದ 3 ಲಕ್ಷ ರೂ. ಲೂಟಿ, ಡೆಹ್ರಾಡೂನ್​ನ ಭಾವನಾ ಪಾಂಡೆ ಅವರಿಗೆ 25 ಲಕ್ಷ ರೂ. ವಂಚನೆ ಮಾಡಿದ್ದಾನೆ.

ಮತ್ತಷ್ಟು ಓದಿ: ಟಿವಿಕೆ ಮುಖ್ಯಸ್ಥ ವಿಜಯ್‌ಗೆ ರಾಹುಲ್​​ ಗಾಂಧಿ ಕರೆ: ಟಿವಿಕೆ ಜೊತೆ ಕಾಂಗ್ರೆಸ್​​​​ ಮೈತ್ರಿ?

ಡೆಹ್ರಾಡೂನ್‌ನ ಮಾಲ್‌ ಒಂದರಲ್ಲಿ ಮತ್ತೊಬ್ಬ ನಾಯಕನಿಂದ ಹಣ ಸಂಗ್ರಹಿಸಲು ಸಿದ್ಧತೆ ನಡೆಸುತ್ತಿದ್ದಾಗ ಪೊಲೀಸರು ಸಿಸಿಟಿವಿ ಮತ್ತು ಮೊಬೈಲ್ ಸಿಗ್ನಲ್ ಆಧಾರದ ಮೇಲೆ ಈತನನ್ನು ಸೆರೆಹಿಡಿದಿದ್ದಾರೆ. ಈತನೊಂದಿಗೆ ಚಜ್ಜು, ರಜತ್ ಮಾದ ಮತ್ತು ಮಣಿಂದರ್ ಸಿಂಗ್ ಎಂಬ ಸಹಚರರು ಕೂಡ ಕೆಲಸ ಮಾಡುತ್ತಿದ್ದು, ಸದ್ಯ ಅವರು ತಲೆಮರೆಸಿಕೊಂಡಿದ್ದಾರೆ.

ಪ್ರತಿಷ್ಠೆಗೆ ಹೆದರಿ ಅನೇಕರು ಈತನ ವಿರುದ್ಧ ದೂರು ನೀಡಿಲ್ಲ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಸ್ತುತ ಆರೋಪಿಯಿಂದ ಎರಡು ಫೋನ್ ಮತ್ತು ಡೇಟಾ ಡಾಂಗಲ್ ವಶಪಡಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ. ರಾಜಕೀಯ ಆಕಾಂಕ್ಷಿಗಳು ಇಂತಹ ವಂಚಕರ ಬಗ್ಗೆ ಜಾಗರೂಕರಾಗಿರಬೇಕೆಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Source link

ಮೇ 10ಕ್ಕೆ ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್​ಗೆ ಪ್ರಧಾನಿ ಮೋದಿ ಭೇಟಿ, ಹಲವು ಯೋಜನೆಗಳಿಗೆ ಚಾಲನೆ – Kannada News | PM Narendra Modi to visit Bengaluru Art of Living International Centre on May 10th Sri Sri Ravi Shankar

ಬೆಂಗಳೂರು, ಮೇ 5: ಮೇ ತಿಂಗಳಲ್ಲಿ ಆರ್ಟ್ ಆಫ್ ಲಿವಿಂಗ್ (Art Of Living) ತನ್ನ 45ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಈ ಸಂಸ್ಥೆಯ ಸಂಸ್ಥಾಪಕ ಗುರುದೇವ ಶ್ರೀ ಶ್ರೀ ರವಿಶಂಕರ್ ಅವರು ತಮ್ಮ 70ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಈ ಆಚರಣೆಗಳ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೇ 10ರಂದು ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಗುರುದೇವ ರವಿಶಂಕರ್ ಅವರೊಂದಿಗೆ ಪ್ರಧಾನಿ ಮೋದಿ ಉತ್ತಮ ಬಾಂಧವ್ಯ ಹೊಂದಿದ್ದಾರೆ.

ಪ್ರಧಾನಿ ಮೋದಿ ಅವರು ಈ ಹಿಂದೆ ವಿಶ್ವ ಸಾಂಸ್ಕೃತಿಕ ಉತ್ಸವದಂತಹ ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪ್ರಚಾರ ಮಾಡುವಲ್ಲಿ ಶ್ರೀ ಶ್ರೀ ರವಿಶಂಕರ್ ಅವರ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ಈ ಭೇಟಿ ಕೇವಲ ಶುಭಾಶಯಗಳಿಗೆ ಸೀಮಿತವಾಗಿರದೆ, ಸಮುದಾಯದ ಯೋಗಕ್ಷೇಮಕ್ಕಾಗಿ ವಿನ್ಯಾಸಗೊಳಿಸಲಾದ ಹಲವಾರು ಸೇವಾ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಗುರುದೇವ ಶ್ರೀ ಶ್ರೀ ರವಿ ಶಂಕರರೊಂದಿಗೆ ಮಹಾಶಿವರಾತ್ರಿ ಮಹೋತ್ಸವ

ಈ 45 ವರ್ಷಗಳ ಪ್ರಯಾಣದಲ್ಲಿ ಆರ್ಟ್ ಆಫ್ ಲಿವಿಂಗ್ ಯೋಗ ಮತ್ತು ಧ್ಯಾನದಲ್ಲಿ ಮಾತ್ರವಲ್ಲದೆ ನದಿ ಪುನರುಜ್ಜೀವನ, ಶೈಕ್ಷಣಿಕ ಅಭಿವೃದ್ಧಿ ಮತ್ತು ವಿಪತ್ತು ನಿರ್ವಹಣೆಯಂತಹ ಕ್ಷೇತ್ರಗಳಲ್ಲಿಯೂ ಗಮನಾರ್ಹ ಬದಲಾವಣೆಯನ್ನು ತಂದಿದೆ. 150ಕ್ಕೂ ಹೆಚ್ಚು ದೇಶಗಳಲ್ಲಿ ಹರಡಿರುವ ಈ ಸಂಸ್ಥೆಯು ಮಾನವೀಯ ಮೌಲ್ಯಗಳನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 9:47 pm, Tue, 5 May 26

Source link

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ ಸಫಾರಿಗೆ ತೆರಳಿದ್ದವರಿಗೆ ದರ್ಶನ ಕೊಟ್ಟ ಬೃಹತ್ ವ್ಯಾಘ್ರ: ಹೆಬ್ಬುಲಿ ವಿಡಿಯೋ ಇಲ್ಲಿದೆ ನೋಡಿ – Kannada News | Tiger Sighting at BRT Wildlife Sanctuary: Majestic Tiger Spotted During Safari at K.Gudi, Chamarajanagar

ಚಾಮರಾಜನಗರ, ಮೇ 6: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಹುಲಿ ಸಂರಕ್ಷಿತ ಪ್ರದೇಶವಾದ ಬಿಳಿಗಿರಿರಂಗನ ಬೆಟ್ಟದಲ್ಲಿ (BRT) ಪ್ರವಾಸಿಗರಿಗೆ ಅದೃಷ್ಟವೋ ಎಂಬಂತೆ ಬೃಹತ್ ಗಾತ್ರದ ಹೆಬ್ಬುಲಿಯೊಂದು ದರ್ಶನ ನೀಡಿದೆ. ಯಳಂದೂರು ತಾಲೂಕಿನ ಕೆ.ಗುಡಿ ಅರಣ್ಯ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ಸಫಾರಿ ವಾಹನ ತೆರಳುತ್ತಿದ್ದಾಗ, ಪೊದೆಗಳ ನಡುವಿನಿಂದ ಬಂದ ಹುಲಿ ರಸ್ತೆಯಲ್ಲೇ ಕೆಲಕಾಲ ವಿಹರಿಸಿದೆ. ಪ್ರವಾಸಿಗರು ಅತಿ ಸಮೀಪದಿಂದ ಹುಲಿಯನ್ನು ಕಂಡು ಬೆರಗಾಗಿದ್ದಾರೆ. ಸಾಮಾನ್ಯವಾಗಿ ಹುಲಿಗಳು ಮನುಷ್ಯರ ವಾಹನ ಕಂಡ ತಕ್ಷಣ ಕಾಡಿನೊಳಗೆ ಓಡಿಹೋಗುತ್ತವೆ, ಆದರೆ ಈ ಹುಲಿ ಮಾತ್ರ ಸಫಾರಿಗರಿಗೆ ದರ್ಶನ ನೀಡಿ, ಗಾಂಭೀರ್ಯದಿಂದ ಹೆಜ್ಜೆ ಹಾಕುತ್ತಾ ನಂತರ ನಿಧಾನವಾಗಿ ಕಾಡಿನೊಳಗೆ ಮಾಯವಾಗಿದೆ.

ಇತ್ತೀಚೆಗೆ ಬಿಳಿಗಿರಿರಂಗನ ಬೆಟ್ಟ ಹಾಗೂ ಮಲೆ ಮಹದೇಶ್ವರ ವನ್ಯಧಾಮಗಳಲ್ಲಿ ಹುಲಿಗಳ ಸಂಖ್ಯೆ ವೃದ್ಧಿಯಾಗಿದ್ದು, ಪ್ರವಾಸಿಗರಿಗೆ ಪದೇ ಪದೇ ಕಾಣಿಸಿಕೊಳ್ಳುತ್ತಿರುವುದು ವನ್ಯಜೀವಿ ಪ್ರಿಯರಲ್ಲಿ ಸಂತಸ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Nitish Rana Out: ಒಂದೇ ಚೆಂಡಿನಲ್ಲಿ ಎರಡು ಬಾರಿ ಔಟಾದ ನಿತೀಶ್ ರಾಣ: ಕ್ರಿಕೆಟ್‌ನಲ್ಲಿ ಅಪರೂಪದ ಘಟನೆ – Kannada News | Nitish Rana was dismissed twice in the same ball in DC vs CSK IPL 2026 Match Watch Video

ಬೆಂಗಳೂರು (ಮೇ. 06): ಇಂಡಿಯನ್ ಪ್ರೀಮಿಯರ್ ಲೀಗ್ 2026 ರ 48ನೇ ಪಂದ್ಯ ಮೇ 5 ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಚೆನ್ನೈ ತಂಡವು ದೆಹಲಿಯನ್ನು 8 ವಿಕೆಟ್‌ಗಳಿಂದ ಸೋಲಿಸಿತು. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸಿಎಸ್‌ಕೆಗೆ 156 ರನ್‌ಗಳ ಗುರಿಯನ್ನು ನೀಡಿತ್ತು, ಇದನ್ನು ರುತುರಾಜ್ ಪಡೆ 17.3 ಓವರ್‌ಗಳಲ್ಲಿ ಬೆನ್ನಟ್ಟಿತು. ಈ ಪಂದ್ಯದಲ್ಲಿ ಡೆಲ್ಲಿ ಬ್ಯಾಟರ್ ನಿತೀಶ್ ರಾಣ ಔಟಾಗಿದ್ದು ಎಲ್ಲರನ್ನೂ ಅಚ್ಚರಿ ಮೂಡಿಸಿತು. ವಿಶೇಷ ಎಂದರೆ ಐಪಿಎಲ್​ನಲ್ಲಿ ಈರೀತಿಯ ಘಟನೆ ನಡೆದಿದ್ದು ಇದೇ ಮೊದಲ ಬಾರಿ.

ನಿತೀಶ್ ರಾಣಾ ಒಂದೇ ಚೆಂಡಿನಲ್ಲಿ ಎರಡು ರೀತಿಯಲ್ಲಿ ಔಟ್ ಆಗಿದ್ದಾರೆ. ಈ ಔಟ್ ಆದ ರೀತಿ ವಿವಾದಕ್ಕೂ ಕಾರಣವಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋಗಳು ವ್ಯಾಪಕವಾಗಿ ವೈರಲ್ ಆಗುತ್ತಿದೆ. ಡೆಲ್ಲಿ ಪರ ಮೂರನೇ ಸ್ಥಾನದಲ್ಲಿ ಬ್ಯಾಟಿಂಗ್​ಗೆ ಬಂದ ನಿತೀಶ್ ರಾಣಾ, ಕೆಲವು ಉತ್ತಮ ಹೊಡೆತಗಳನ್ನು ಆಡಿದರು, ಆದರೆ ಅವರ ಇನ್ನಿಂಗ್ಸ್ ಹೆಚ್ಚು ಕಾಲ ಉಳಿಯಲಿಲ್ಲ. ಈ ಅವಧಿಯಲ್ಲಿ ಅವರು 13 ಎಸೆತಗಳಲ್ಲಿ ಕೇವಲ 15 ರನ್ ಗಳಿಸಿದರು, ಎರಡು ಬೌಂಡರಿಗಳನ್ನು ಬಾರಿಸಿದರು.

ನೂರ್ ಅಹ್ಮದ್ ಬೌಲಿಂಗ್​ನಲ್ಲಿ ನಿತೀಶ್ ರಾಣಾ ಔಟ್

ಪಂದ್ಯದ ಹತ್ತನೇ ಓವರ್ ಅನ್ನು ನೂರ್ ಅಹ್ಮದ್ ಬೌಲಿಂಗ್ ಮಾಡುತ್ತಿದ್ದರು. ಈ ಸಮಯದಲ್ಲಿ, ನಿತೀಶ್ ರಾಣಾ ಡೀಪ್ ಬ್ಯಾಕ್‌ವರ್ಡ್ ಸ್ಕ್ವೇರ್ ಕಡೆಗೆ ಬ್ಯಾಟ್ ಬೀಸಿದರು. ಅಲ್ಲಿ ನಿಂತಿದ್ದ ಕಾರ್ತಿಕ್ ಶರ್ಮಾ ಈ ಚೆಂಡನ್ನು ಕ್ಯಾಚ್ ಹಿಡಿದರು, ಮತ್ತು ಔಟ್ ಆದರು. ಆದಾಗ್ಯೂ, ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸಿದಾಗ, ಚೆಂಡು ಮತ್ತು ಬ್ಯಾಟ್ ಸಂಪರ್ಕಕ್ಕೆ ಬರುವ ಮೊದಲೇ ಸ್ಟಂಪ್‌ಗಳು ಬಿದ್ದಿದ್ದವು ಎಂದು ತಿಳಿದುಬಂದಿದೆ. ರಾಣಾ ಅವರ ಬ್ಯಾಟ್ ಸ್ಟಂಪ್‌ಗಳನ್ನು ತಗುಲಿ ಹಿಟ್ ವಿಕೆಟ್ ಆಗಿ ಔಟ್ ಆದರೊ ಅಥವಾ ಅವರ ಕಾಲು ವಿಕೆಟ್​ಗೆ ತಾಗಿದೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದಾಗ್ಯೂ, ಇದು ಯಾರ ಗಮನಕ್ಕೂ ಬರದೇ ಹೋಯಿತು.

ನಿತೀಶ್ ಔಟ್ ಆದ ಬಗ್ಗೆ ವಿವಾದ

ಬ್ಯಾಟ್ ಮತ್ತು ಚೆಂಡು ಸಂಪರ್ಕಕ್ಕೆ ಬರುವ ಮೊದಲೇ ಬೇಲ್ಸ್ ಬಿದ್ದಿದ್ದರೆ, ಅಂಪೈರ್ ಅದನ್ನು ಡೆಡ್ ಬಾಲ್ ಎಂದು ಘೋಷಿಸಬೇಕಿತ್ತು, ಆದರೆ ಅವರು ಹಾಗೆ ಮಾಡಲಿಲ್ಲ. ಇದಲ್ಲದೆ, ನಿತೀಶ್ ರಾಣಾ ಅಥವಾ ಅವರ ತಂಡವು ಯಾವುದೇ ಮೇಲ್ಮನವಿ ಸಲ್ಲಿಸದ ಕಾರಣ ಸದ್ದಿಲ್ಲದೆ ಈ ವಿಚಾರ ತಣ್ಣಗಾಯಿತು. ಆದಾಗ್ಯೂ, ನಿತೀಶ್ ಔಟಾದ ಸ್ವಲ್ಪ ಸಮಯದ ನಂತರ, ಘಟನೆಯ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಲು ಪ್ರಾರಂಭಿಸಿದವು, ನಿತೀಶ್ ರಾಣಾ ಯಾವರೀತಿ ಔಟ್ ಆದರು ಎಂಬ ಪ್ರಶ್ನೆಗಳು ಹುಟ್ಟುಕೊಂಡಿವೆ.

MI vs LSG: ಪೋಸ್ಟ್ ಮ್ಯಾಚ್​ನಲ್ಲಿ ಉಲ್ಟಾ ಹೊಡೆದ ರಿಷಭ್ ಪಂತ್: ಸೋಲಿಗೆ ಬೌಲರ್ಸ್ ಅಲ್ಲ ಬ್ಯಾಟರ್ಸ್ ಕಾರಣವಂತೆ

ಒಂದೇ ಚೆಂಡಿನಲ್ಲಿ ಎರಡು ರೀತಿಯಲ್ಲಿ ಔಟ್

ಕುತೂಹಲಕಾರಿಯಾಗಿ, ಅಧಿಕೃತವಾಗಿ ಅಲ್ಲದಿದ್ದರೂ, ನಿತೀಶ್ ರಾಣಾ ಒಂದೇ ಚೆಂಡಿನಲ್ಲಿ ಎರಡು ಬಾರಿ ಔಟಾದ ಮೊದಲ ಐಪಿಎಲ್ ಬ್ಯಾಟ್ಸ್‌ಮನ್ ಆಗಿದ್ದಾರೆ. ಮೊದಲು, ಅವರು ಹಿಟ್ ವಿಕೆಟ್ ಪಡೆದು ನಂತರ ಕ್ಯಾಚ್ ಔಟ್ ಆದರು. ಇದು ಹಿಂದೆಂದೂ ಕ್ರಿಕೆಟ್ ಲೋಕದಲ್ಲಿ ನಡೆದಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಭೀಕರ ಅಪಘಾತ: ಪ್ರಭಾಸ್ ನಟನೆಯ ‘ಫೌಜಿ’ ಚಿತ್ರತಂಡದ ಸದಸ್ಯ ಸಾವು; ಶೂಟಿಂಗ್ ಸ್ಥಗಿತ – Kannada News | Prabhas starrer Fauzi shooting halted after crew member dies in road accident

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ (Prabhas) ಅಭಿನಯದ ಬಹುನಿರೀಕ್ಷಿತ ‘ಫೌಜಿ’ ಚಿತ್ರತಂಡದಲ್ಲಿ ಭಾರಿ ದುರಂತ ಸಂಭವಿಸಿದೆ. ಚಿತ್ರೀಕರಣಕ್ಕಾಗಿ ತೆರಳುತ್ತಿದ್ದ ಚಿತ್ರತಂಡದ ವಾಹನ ಅಪಘಾತಕ್ಕೀಡಾಗಿದ್ದು, ಓರ್ವ ಸದಸ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯಿಂದಾಗಿ ಚಿತ್ರತಂಡಕ್ಕೆ ವಿಘ್ನ ಎದುರಾದಂತೆ ಆಗಿದೆ. ವ್ಯಕ್ತಿ ಮೃತಪಟ್ಟ ಕಾರಣದಿಂದ ‘ಫೌಜಿ’ (Fauzi) ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗಿದೆ.

ಹೈದರಾಬಾದ್‌ನ ಹೊರವಲಯದಲ್ಲಿರುವ ರಾಮೋಜಿ ಫಿಲ್ಮ್ ಸಿಟಿಗೆ ಚಿತ್ರೀಕರಣಕ್ಕಾಗಿ ತಂಡವು ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಅಬ್ದುಲ್ಲಾಪುರಮೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವಾಹನವು ರಸ್ತೆಯ ಸಿಮೆಂಟ್ ಡಿವೈಡರ್‌ಗಳಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಚೌಟುಪ್ಪಲ್ ಪೊಲೀಸ್ ಠಾಣಾ ವ್ಯಾಪ್ತಿಯ ತೂಪ್ರಾನ್‌ಪೇಟ್ ಸೇತುವೆಯ ಸಮೀಪ ಈ ಭೀಕರ ಅಪಘಾತ ಸಂಭವಿಸಿದೆ ಎಂದು ವರದಿ ಆಗಿದೆ.

ಈ ಘಟನೆಯಲ್ಲಿ ಚಿತ್ರತಂಡದ ಓರ್ವ ಸದಸ್ಯ ಮೃತಪಟ್ಟಿದ್ದು, ಅವರ ಗುರುತು ಇನ್ನೂ ಬಹಿರಂಗವಾಗಿಲ್ಲ. ಗಂಭೀರವಾಗಿ ಗಾಯಗೊಂಡಿರುವ ಉಳಿದ ಐವರನ್ನು ತಕ್ಷಣವೇ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಹನ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಪ್ರಾಥಮಿಕ ಕಾರಣ ಎಂದು ಶಂಕಿಸಲಾಗಿದೆ.

ಈ ದುರದೃಷ್ಟಕರ ಘಟನೆಯ ಬೆನ್ನಲ್ಲೇ ‘ಫೌಜಿ’ ಚಿತ್ರದ ನಿರ್ಮಾಪಕರು ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ. ಮೃತ ಸದಸ್ಯನ ಗೌರವಾರ್ಥವಾಗಿ ಮತ್ತು ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ತನಿಖೆಗೆ ಚಿತ್ರತಂಡವು ಪೊಲೀಸರೊಂದಿಗೆ ಸಂಪೂರ್ಣ ಸಹಕಾರ ನೀಡುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ‘ಫೌಜಿ’ ಸೆಟ್​ನಿಂದ ಪ್ರಭಾಸ್ ಫೋಟೋ ಲೀಕ್: ಅಭಿಮಾನಿಗಳಿಗೆ ಚಿತ್ರತಂಡದ ವಾರ್ನಿಂಗ್

ಹನು ರಾಘವಪುಡಿ ನಿರ್ದೇಶನದ ಈ ಚಿತ್ರವು 1940ರ ದಶಕದ ಹಿನ್ನೆಲೆಯ ಐತಿಹಾಸಿಕ ಕಥೆಯನ್ನು ಹೊಂದಿದ್ದು, ಈಗಾಗಲೇ ಶೇಕಡ 80ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ. ಈ ವರ್ಷದ ದಸರಾ ಅಥವಾ ಡಿಸೆಂಬರ್ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆ ಇದೆ. ಆದರೆ ಚಿತ್ರೀಕರಣ ಪ್ರಗತಿಯಲ್ಲಿ ಇರುವಾಗಲೇ ಈ ರೀತಿ ದುರ್ಘಟನೆ ಸಂಭವಿಸಿರುವುದು ಬೇಸರ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

IPL 2026: ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು? ಇಲ್ಲಿದೆ ಮಾಹಿತಿ – Kannada News | IPL 2026 playoff qualification scenarios of All 10 teams

IPL 2026: ಐಪಿಎಲ್ 2026ರ ಕಾದಾಟ ಈಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ! ಹತ್ತು ತಂಡಗಳ ನಡುವಿನ ಈ ಬಲಿಷ್ಠ ಪೈಪೋಟಿಯಲ್ಲಿ ಪ್ಲೇ-ಆಫ್‌ಗೆ ಲಗ್ಗೆ ಇಡುವ ನಾಲ್ಕು ಅದೃಷ್ಟವಂತ ತಂಡಗಳು ಯಾವುವು ಎಂಬ ಕುತೂಹಲ ಕ್ರಿಕೆಟ್ ಪ್ರೇಮಿಗಳಲ್ಲಿ ಮನೆಮಾಡಿದೆ. ಕೆಲ ತಂಡಗಳು ಗೆಲುವಿನ ನಾಗಾಲೋಟದೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಇನ್ನು ಕೆಲವು ತಂಡಗಳು ಪ್ರತಿ ಪಂದ್ಯವನ್ನೂ ‘ಮಾಡು ಇಲ್ಲವೇ ಮಡಿ’ ಎಂಬಂತೆ ಆಡಬೇಕಾದ ಅನಿವಾರ್ಯತೆಯಲ್ಲಿವೆ. ಅದರಂತೆ ಪ್ಲೇಆಫ್​ಗೇರಲು ಯಾವ ತಂಡ ಎಷ್ಟು ಪಂದ್ಯಗಳನ್ನು ಗೆಲ್ಲಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ… (PC: BCCI)

Source link

ಬೆಂಗಳೂರು: ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ; ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಆತಂಕದಲ್ಲಿ ಟೆಕ್ಕಿ! – Kannada News | Bengaluru Privacy Breach: Engineer’s Bath Videoed in Mahadevapura, Police Investigate.

ಬೆಂಗಳೂರು, ಮೇ.6 : ಸಿಲಿಕಾನ್ ಸಿಟಿಯ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಬಾಡಿಗೆ ಮನೆಯಲ್ಲಿ ಸ್ನಾನ ಮಾಡುತ್ತಿದ್ದ 23 ವರ್ಷದ ಯುವ ಸಾಫ್ಟ್‌ವೇರ್ ಇಂಜಿನಿಯರ್ ಅವರ ವಿಡಿಯೋವನ್ನು ಅಪರಿಚಿತ ವ್ಯಕ್ತಿಯೊಬ್ಬ ಚಿತ್ರೀಕರಿಸಿರುವ ಬಗ್ಗೆ ದೂರು ದಾಖಲಾಗಿದೆ. ಇದೀಗ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಘಟನೆ ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಯುವತಿಯು ಕಳೆದ ಒಂಬತ್ತು ತಿಂಗಳ ಹಿಂದೆ ಗರುಡಾಚಾರ್ ಪಾಳ್ಯಕ್ಕೆ ವಾಸ್ತವ್ಯ ಬದಲಾಯಿಸಿದ್ದರು. ಬುಧವಾರ ಬೆಳಿಗ್ಗೆ ಸುಮಾರು 9.30ರ ಸುಮಾರಿಗೆ ಅವರು ಸ್ನಾನ ಮಾಡುತ್ತಿದ್ದಾಗ, ಪಕ್ಕದ ಕಟ್ಟಡದಿಂದ ಯಾರೋ ಒಬ್ಬರು ಮೊಬೈಲ್ ಫೋನ್ ಮೂಲಕ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿ ಬೆಚ್ಚಿಬಿದ್ದಿದ್ದಾರೆ. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: 5 ಲಕ್ಷ ರೂ. ಹಣ ಪಡೆದು ಅಬಾರ್ಷನ್ ಮಾಡಿಸಿದ್ದಾಳೆ ಲೇಡಿ ಕಾನ್ಸ್‌ಟೇಬಲ್; ಪಿಎಸ್‌ಐ ವಿರೇಶ್‌ಗೆ ವಂಚಿಸಿ ಬೇರೆ ಯುವಕನ ಜೊತೆ ಹಸೆಮಣೆ ಏರಲು ಸಿದ್ಧ!

ಇನ್ನು ಈ ಘಟನೆಯಿಂದ ಯುವತಿಯು ತೀವ್ರ ಮಾನಸಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಡಬಹುದು ಎಂಬ ಆತಂಕ ಅವರನ್ನು ಕಾಡುತ್ತಿದೆ. ಮಹದೇವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪತ್ತೆಗಾಗಿ ತೀವ್ರ ತನಿಖೆ ಆರಂಭಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದಶಕದ ಬಳಿಕ ಕೇರಳಂನಲ್ಲಿ ‘ಕೈ’ ಪರ್ವ: ಪಿಣರಾಯಿ ವಿಜಯನ್ ಕೋಟೆ ಧ್ವಂಸ, ಪಟ್ಟಾಭಿಷೇಕಕ್ಕೆ ಕಾಂಗ್ರೆಸ್ ಸಜ್ಜು – Kannada News | Kerala Government Formation: Congress Returns to Power After 10 Years, CM Race Intensifies

ತಿರುವನಂತಪುರಂ, ಮೇ 06: ದೇವರ ನಾಡು ಕೇರಳಂನಲ್ಲಿ ರಾಜಕೀಯ ಬದಲಾವಣೆಯ ಗಾಳಿ ಬೀಸಿದೆ. ಕಳೆದ ಹತ್ತು ವರ್ಷಗಳಿಂದ ಸತತವಾಗಿ ಆಡಳಿತ ನಡೆಸುತ್ತಿದ್ದ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ (LDF) ಸರ್ಕಾರವನ್ನು ಕಿತ್ತೊಗೆಯುವಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಯಶಸ್ವಿಯಾಗಿದೆ. ಈ ಭರ್ಜರಿ ಜಯದೊಂದಿಗೆ ಕಾಂಗ್ರೆಸ್ ಒಂದು ದಶಕದ ನಂತರ ಮರಳಿ ಗದ್ದುಗೆ ಏರುತ್ತಿದೆ. ಕಳೆದ ಎರಡು ಅವಧಿಗಳಲ್ಲಿ ಆಡಳಿತ ನಡೆಸಿದ್ದ ಪಿಣರಾಯಿ ವಿಜಯನ್ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ ಅಲೆಯನ್ನು ಕಾಂಗ್ರೆಸ್ ಸಮರ್ಥವಾಗಿ ಬಳಸಿಕೊಂಡಿದೆ. ನಿರುದ್ಯೋಗ, ಆರ್ಥಿಕ ಬಿಕ್ಕಟ್ಟು ಮತ್ತು ಇತ್ತೀಚಿನ ವಿವಾದಗಳು ಎಲ್‌ಡಿಎಫ್ ಪತನಕ್ಕೆ ಕಾರಣವಾಗಿದ್ದು, ಕಾಂಗ್ರೆಸ್‌ನ ಭರವಸೆಗಳಿಗೆ ಜನಮನ್ನಣೆ ಸಿಕ್ಕಿದೆ.

2016ರಿಂದ ಸತತ ಸೋಲುಗಳನ್ನು ಕಂಡಿದ್ದ ಕಾಂಗ್ರೆಸ್ ಪಾಲಿಗೆ ಈ ಜಯ ಸಂಜೀವಿನಿಯಂತಿದೆ. ರಾಜ್ಯಾದ್ಯಂತ ನಡೆದ ತೀವ್ರ ಪ್ರಚಾರ ಮತ್ತು ಒಗ್ಗಟ್ಟಿನ ಹೋರಾಟವು ಯುಡಿಎಫ್‌ಗೆ ಭದ್ರವಾದ ನೆಲೆಯನ್ನು ಒದಗಿಸಿದೆ. ದಕ್ಷಿಣದ ಈ ಪ್ರಮುಖ ರಾಜ್ಯದಲ್ಲಿ ಅಧಿಕಾರ ಹಿಡಿಯುವುದು ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಶಕ್ತಿಯನ್ನು ನೀಡಿದೆ.

ಫಲಿತಾಂಶ ಹೊರಬರುತ್ತಿದ್ದಂತೆಯೇ ಕೇರಳದಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಕೇಸರಿ-ಬಿಳಿ-ಹಸಿರು ಬಾವುಟಗಳನ್ನು ಹಿಡಿದು ಬೀದಿಗಿಳಿದು ಸಂಭ್ರಮಿಸುತ್ತಿದ್ದಾರೆ. ಇದು ಕೇವಲ ಒಂದು ಪಕ್ಷದ ಗೆಲುವಲ್ಲ, ಬದಲಾವಣೆಯನ್ನು ಬಯಸಿದ್ದ ಕೇರಳಂನ ಜನರ ಗೆಲುವು” ಎಂದು ಸ್ಥಳೀಯ ನಾಯಕರು ಬಣ್ಣಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ವಿ. ಡಿ. ಸತೀಶನ್, ಕೆ. ಸಿ. ವೇಣುಗೋಪಾಲ್ ಮತ್ತು ರಮೇಶ್ ಚೆನ್ನಿತ್ತಲ ನಡುವೆ ತೀವ್ರ ಪೈಪೋಟಿ ನಡೆದಿದೆ. ಕೇರಳಂ ಸಿಎಂ ರೇಸ್‌ನಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಹೆಸರು ವಿ. ಡಿ. ಸತೀಶನ್ ಅವರದ್ದು.

ಕಳೆದ ಐದು ವರ್ಷಗಳಿಂದ ಕೇರಳಂ ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ಪಿಣರಾಯಿ ಸರ್ಕಾರವನ್ನು ಸಮರ್ಥವಾಗಿ ಎದುರಿಸಿದ ಅನುಭವ ಅವರಿಗಿದೆ. ಈ ಚುನಾವಣೆಯಲ್ಲಿ ಯುಡಿಎಫ್ ಮೈತ್ರಿಕೂಟವನ್ನು ಯಶಸ್ವಿಯಾಗಿ ಮುನ್ನಡೆಸಿದ ಇವರಿಗೆ ಸದ್ಯ ಶಾಸಕರ ಬೆಂಬಲ ಹಾಗೂ ಹೈಕಮಾಂಡ್ ವಿಶ್ವಾಸವಿದೆ ಎನ್ನಲಾಗಿದೆ. ಇಂದು ತಿರುವನಂತಪುರಂನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಡೆಯುವ ಸಾಧ್ಯತೆ ಇದೆ. ಸಿಎಲ್‌ಪಿ ನಾಯಕನ ಆಯ್ಕೆಗೂ ಮುನ್ನ ಎಐಸಿಸಿ ವೀಕ್ಷಕರು ವಿ. ಡಿ. ಸತೀಶನ್, ರಮೇಶ್ ಚೆನ್ನಿತ್ತಲ ಮತ್ತು ಕೆ. ಸಿ. ವೇಣುಗೋಪಾಲ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source link