ಮಹಾಶಿವರಾತ್ರಿಗೆ ಊರಿಗೆ ಹೋಗುವವರಿಗೆ ಸಿಹಿಸುದ್ದಿ ನೀಡಿದ ಸಾರಿಗೆ, ರೈಲ್ವೆ ಇಲಾಖೆ – Kannada News | Shivaratri Special Buses: KSRTC Adds 2,155 Services from Bengaluru; Book Tickets
ಬೆಂಗಳೂರು, ಫೆ.13: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಿಂದ ಲಕ್ಷಾಂತರ ಜನರು ತಮ್ಮ ಸ್ವಗ್ರಾಮಗಳತ್ತ ಮುಖ ಮಾಡಿದ್ದಾರೆ. ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯು ಬರೋಬ್ಬರಿ 2,155 ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಘೋಷಿಸಿದೆ. ಹಬ್ಬದ ಸರಣಿ ರಜೆಗಳ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ರಾತ್ರಿಯಿಂದಲೇ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಲಿದೆ. ಇದನ್ನು ಮನಗಂಡು ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ (NWKRTC) ಮತ್ತು ಕಲ್ಯಾಣ ಕರ್ನಾಟಕ ರಸ್ತೆ…