ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಭಜನೆಗೆ ಬಿಜೆಪಿಯಿಂದ ಹೊಸ ತಗಾದೆ: ಇಲ್ಲಿದೆ ಅಸಲಿ ಕಾರಣ – Kannada News | Hubballi Dharwad Corporation Split Controversy: whats BJP’s demand; Here is the real reason
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ Image Credit source: tv9 kannada ಧಾರವಾಡ, ಮೇ 03: ಬೆಂಗಳೂರು ಬಿಟ್ಟರೆ ರಾಜ್ಯದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರವೇ (Hubballi-Dharwad Corporation) ದೊಡ್ಡದು. ಇದೇ ವೇಳೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಧಾರವಾಡಕ್ಕೆ ಹೆಚ್ಚಿನ ಅನುದಾನ ಸಿಗುತ್ತಿಲ್ಲ ಅನ್ನೋ ಕಾರಣಕ್ಕೆ ಪ್ರತ್ಯೇಕ ಪಾಲಿಕೆಗಾಗಿ ಹೋರಾಟ ನಡೆಯಿತು. ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಧಾರವಾಡ (Dharwad) ಪ್ರತ್ಯೇಕ ಪಾಲಿಕೆಗೆ ನಿರ್ಣಯ ಮಂಡಿಸಿ, ಸರಕಾರಕ್ಕೆ ಕಳಿಸಲಾಗಿತ್ತು. ಒತ್ತಡ ಹೆಚ್ಚಾಗಿದ್ದರಿಂದಾಗಿ ಸಿಎಂ ಸಿದ್ದರಾಮಯ್ಯ ಕಳೆದ ವರ್ಷವಷ್ಟೇ ಧಾರವಾಡ ಪ್ರತ್ಯೇಕ ಪಾಲಿಕೆ ಘೋಷಣೆ…