Category Archives: Blog

Your blog category

ಸರ್ಕಾರದ ವಿರುದ್ಧ ತೊಡೆ ತಟ್ಟಿದ ಸರ್ಕಾರಿ ವೈದ್ಯರು: ಬೇಡಿಕೆ ಈಡೇರಿಕೆಗೆ ಒತ್ತಾಯ; 21 ದಿನ ಡೆಡ್​ಲೈನ್ – Kannada News | Government doctors protest against the government: Demands fulfillment; 21 day deadline

ಬೆಂಗಳೂರು, ಫೆಬ್ರವರಿ 13: ಸರ್ಕಾರಿ ವೈದ್ಯರಿಗೆ ಖಾಸಗಿ ಐಪಿಡಿ (IPD) ಸೇವೆಗೆ ನಿರ್ಬಂಧ ಹೇರಿರುವ ವಿಚಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಆರೋಗ್ಯ ಇಲಾಖೆ ನೌಕರರು ಪ್ರತಿಭಟನೆಗೆ (Protest) ಮುಂದಾಗಿದ್ದಾರೆ. ಆ ಮೂಲಕ ಸರ್ಕಾರಿ ವೈದ್ಯರು ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದಾರೆ. 21 ದಿನಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ರಾಜ್ಯ ವ್ಯಾಪಿ ಒಪಿಡಿ ಸೇವೆ ಬಂದ್​ ಮಾಡಿ ಮುಷ್ಕರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರಕ್ಕೆ 21 ದಿನಗಳ ಗಡುವು

ಖಾಸಗಿ ಆಸ್ಪತ್ರೆಗಳಲ್ಲಿ ಐಪಿಡಿ ಸೇವೆ ಸಲ್ಲಿಸುವ ಸರ್ಕಾರಿ ವೈದ್ಯರಿಗೆ ನಿರ್ಬಂಧಕ್ಕೆ ವಿರೋಧ ಸೇರಿದಂತೆ ಪ್ರಮುಖ 15 ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆಗೆ ಮುಂದಾಗಿರುವ ವೈದ್ಯರು ಹಾಗೂ ಆರೋಗ್ಯ ಇಲಾಖೆ ನೌಕರರು ಇಂದು ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಹಾಗೂ ಕೇಂದ್ರ ಆರೋಗ್ಯ ಇಲಾಖೆಯ ನೌಕರರ ಸಂಘದಿಂದ ಸಭೆ ಮಾಡಲಾಗಿದೆ. ಸಭೆಯಲ್ಲಿ ಸರ್ಕಾರಕ್ಕೆ 21 ದಿನಗಳ ಗಡುವು ನೀಡಲಾಗಿದ್ದು, ಅಷ್ಟರಲ್ಲಿ ಬೇಡಿಕೆ ಈಡೇರಿಸದಿದ್ದರೆ ಪ್ರತಿಭಟಿಸುವ ನಿರ್ಧಾರ ತಗೆದುಕೊಂಡಿದ್ದಾರೆ.

ವೈದ್ಯರು ಹಾಗೂ ಆರೋಗ್ಯ ಇಲಾಖೆ ನೌಕರರ ಪ್ರಮುಖ ಬೇಡಿಕೆಗಳು ಏನು?

  • ಸುಮಾರು 4 ವರ್ಷಗಳಿಂದ ವೃಂದ ಮತ್ತು ನೇಮಕಾತಿ ನಿಯಮಕ್ಕೆ ತಿದ್ದುಪಡಿಯಾಗಿಲ್ಲ.
  • 13 ವರ್ಷಗಳಿಂದ ವೈದ್ಯರ ಜೇಷ್ಠತಾ ಪಟ್ಟಿ ಪರಿಷ್ಕರಣೆ ಆಗಿಲ್ಲ.
  • ವೈದ್ಯಕೀಯ ಮಹಾವಿದ್ಯಾಲಯಕ್ಕೆ ನೇಮಕಗೊಂಡ ವೈದ್ಯರಿಗೆ ವೇತನ ಶುಲ್ಕ, ಭತ್ಯ ಇಲ್ಲ.
  • ವರ್ಷ ಪೂರ್ತಿ ವರ್ಗಾವಣೆ ಮಾಡುತ್ತಿರುವುದು ಜೊತೆಗೆ ವರ್ಗಾವಣೆ ಕಾಯ್ದೆಗೆ ಮಾರ್ಪಾಡು ಮಾಡುವಂತೆ ಮನವಿ ಮಾಡಿದರೂ ನಿರ್ಲಕ್ಷ್ಯ ವಹಿಸಿರುವುದು.

ಇದನ್ನೂ ಓದಿ: ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ! ಸಿಎಂ ಹೆಸರಲ್ಲಿ ಬರೆದ ಪತ್ರ ವೈರಲ್​​

  • ವೈದ್ಯರ ವಿಶೇಷ ಭತ್ಯ ಪರಿಷ್ಕರಣೆ ಮಾಡುತ್ತಿಲ್ಲ.
  • ಸರ್ಕಾರಿ ವೈದ್ಯರಿಗೆ ಖಾಸಗಿ IPD ಸೇವೆಗೆ ನಿರ್ಬಂಧ ಹೇರಿರುವುದು.
  • ಆಸ್ಪತ್ರೆಗಳಲ್ಲಿ ಕಾಲಕಾಲಕ್ಕೆ ಔಷಧಗಳ ಸರಬರಾಜು ಇಲ್ಲದೇ ಇರುವುದು ರೋಗಿಗಳ ಚಿಕಿತ್ಸೆಗೆ ಸಮಸ್ಯೆಯಾಗಿದೆ.
  • IV antibiotics ಸರಬರಾಜು ಸಮಸ್ಯೆಯಾಗಿದೆ.
  • ಖಾಲಿ ಹುದ್ದೆಗಳ ನೇಮಕಾತಿ ಮಾಡದೆ ಇರುವುದು ವೈದ್ಯರ ಒತ್ತಡಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

IND vs PAK: ಟಿ20 ವಿಶ್ವಕಪ್​ನಲ್ಲಿ ಭಾರತ- ಪಾಕ್ ಮುಖಾಮುಖಿ ದಾಖಲೆ ಹೇಗಿದೆ? – Kannada News | India vs Pakistan T20 World Cup 2026: Head to Head Record and India’s Dominance

ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು 8 ಬಾರಿ ಮುಖಾಮುಖಿಯಾಗಿವೆ. ಈ 8 ಪಂದ್ಯಗಳಲ್ಲಿ ಭಾರತ 7 ಪಂದ್ಯಗಳನ್ನು ಗೆದ್ದಿದೆ. ಮತ್ತೊಂದೆಡೆ, ಪಾಕಿಸ್ತಾನ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿದೆ. 2021 ರಲ್ಲಿ ದುಬೈನಲ್ಲಿ ನಡೆದ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ, ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿತ್ತು.

Source link

HESCOM Recruitment 2026: ಹೆಸ್ಕಾಂನಲ್ಲಿ ಉದ್ಯೋಗವಕಾಶ; 388 ಅಪ್ರೆಂಟಿಸ್‌ ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನ – Kannada News | HESCOM Recruitment 2026: 388 ITI Electrician Trainee Jobs in Hubballi. Apply Now!

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ಅಧಿಕೃತ ಅಧಿಸೂಚನೆಯ ಮೂಲಕ ಟ್ರೈನಿ (ಐಟಿಐ ಎಲೆಕ್ಟ್ರಿಷಿಯನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಹುಬ್ಬಳ್ಳಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳುಮಾರ್ಚ್ 09ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಸ್ಕಾಂ ಹುದ್ದೆಯ ಅಧಿಸೂಚನೆ:

  • ಸಂಸ್ಥೆಯ ಹೆಸರು : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ( ಹೆಸ್ಕಾಂ )
  • ಹುದ್ದೆಗಳ ಸಂಖ್ಯೆ: 388
  • ಉದ್ಯೋಗ ಸ್ಥಳ: ಹುಬ್ಬಳ್ಳಿ
  • ಹುದ್ದೆಯ ಹೆಸರು: ಟ್ರೈನಿ (ಐಟಿಐ ಎಲೆಕ್ಟ್ರಿಷಿಯನ್)
  • ಸ್ಟೈಫಂಡ್: ತಿಂಗಳಿಗೆ ರೂ. 9600/-

ಈ ನೇಮಕಾತಿಯಡಿ ಆಯ್ಕೆಯಾದ ಅಭ್ಯರ್ಥಿಗಳು ಹುಬ್ಬಳ್ಳಿಯಲ್ಲಿ ಸೇವೆ ಸಲ್ಲಿಸಲಿದ್ದು, ಅವರಿಗೆ ತಿಂಗಳಿಗೆ 9,600 ರೂ. ಸ್ಟೈಫಂಡ್ ನೀಡಲಾಗುತ್ತದೆ. ವಿದ್ಯುತ್ ಕ್ಷೇತ್ರದಲ್ಲಿ ಪ್ರಾಯೋಗಿಕ ಅನುಭವ ಪಡೆಯಲು ಮತ್ತು ಸರ್ಕಾರಿ ವಲಯದಲ್ಲಿ ಭವಿಷ್ಯ ನಿರ್ಮಿಸಿಕೊಳ್ಳಲು ಈ ತರಬೇತಿ ಅವಧಿ ಉತ್ತಮ ವೇದಿಕೆಯಾಗಲಿದೆ.

ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಐಟಿಐ (ಎಲೆಕ್ಟ್ರಿಷಿಯನ್) ಕೋರ್ಸ್ ಪೂರ್ಣಗೊಳಿಸಿರಬೇಕು. ಅರ್ಜಿ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 100 ರೂ. ಮತ್ತು SC/ST ಅಭ್ಯರ್ಥಿಗಳಿಗೆ 50 ರೂ. ನಿಗದಿಪಡಿಸಲಾಗಿದೆ. ಶುಲ್ಕವನ್ನು ಬೇಡಿಕೆ ಕರಡು (Demand Draft) ಮೂಲಕ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ ಸರಳವಾಗಿದ್ದು, ಅಭ್ಯರ್ಥಿಗಳನ್ನು ಮೊದಲು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ನಂತರ ಮೆರಿಟ್ ಲಿಸ್ಟ್ ಆಧಾರದಲ್ಲಿ ದಾಖಲೆ ಪರಿಶೀಲನೆ ನಡೆಸಿ ಅಂತಿಮ ಆಯ್ಕೆ ಮಾಡಲಾಗುತ್ತದೆ. ಯಾವುದೇ ಲಿಖಿತ ಪರೀಕ್ಷೆ ಇಲ್ಲದಿರುವುದರಿಂದ ಅರ್ಹ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಾಗಿದೆ.

ಇದನ್ನೂ ಓದಿ: ಕರ್ನಾಟಕದ ಹಾಲು ಒಕ್ಕೂಟದಲ್ಲಿ 194 ಹುದ್ದೆಗಳಿಗೆ ನೇಮಕಾತಿ; 10ರಿಂದ ಪದವೀಧರರವರೆಗೆ ಅರ್ಜಿ ಸಲ್ಲಿಸಲು ಅವಕಾಶ

ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ಅರ್ಹತೆಯನ್ನು ಖಚಿತಪಡಿಸಿಕೊಳ್ಳಬೇಕು. ಅಗತ್ಯ ದಾಖಲೆಗಳು, ಪ್ರಮಾಣಪತ್ರಗಳು, ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಸಿದ್ಧವಾಗಿರಬೇಕು. ಆನ್‌ಲೈನ್ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ, ದಾಖಲೆಗಳ ಸ್ಕ್ಯಾನ್ ಪ್ರತಿಗಳನ್ನು ಅಪ್‌ಲೋಡ್ ಮಾಡಿ, ಶುಲ್ಕ ಪಾವತಿಸಿ ಕೊನೆಗೆ ಅರ್ಜಿಯನ್ನು ಸಲ್ಲಿಸಬೇಕು.

ಒಟ್ಟಿನಲ್ಲಿ, ಸರ್ಕಾರಿ ವಲಯದಲ್ಲಿ ವಿದ್ಯುತ್ ತಂತ್ರಜ್ಞನಾಗಿ ವೃತ್ತಿ ಆರಂಭಿಸಲು ಬಯಸುವವರಿಗೆ ಹೆಸ್ಕಾಂ ಈ ನೇಮಕಾತಿ ಒಳ್ಳೆಯ ಅವಕಾಶವಾಗಿದೆ. ಸಮಯ ವ್ಯರ್ಥ ಮಾಡದೇ ಅರ್ಜಿ ಸಲ್ಲಿಸಿ ನಿಮ್ಮ ಭವಿಷ್ಯವನ್ನು ಭದ್ರಪಡಿಸಿಕೊಳ್ಳಿ.

ಮತ್ತಷ್ಟು ಉದ್ಯೋಗಕ್ಕೆ ಸಂಬಂಧಿಸಿದ  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ವಾರ್ಷಿಕ ಪರೀಕ್ಷೆ ಸಮಯದಲ್ಲಿ KSRTC ಬಸ್​​​ನಲ್ಲಿ ಉಚಿತ ಪ್ರಯಾಣ – Kannada News | Karnataka KSRTC Free Bus Rides for 2nd PUC Exams

ಬೆಂಗಳೂರು, ಫೆ.13: ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸಿಹಿಸುದ್ದಿ ನೀಡಿದೆ. ಫೆಬ್ರವರಿ 28ರಿಂದ ಪ್ರಾರಂಭವಾಗಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸುಲಭವಾಗಿ ಮತ್ತು ಸಕಾಲಕ್ಕೆ ತಲುಪಲು ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯಲಿವೆ. ಈ ಅವಧಿಯಲ್ಲಿ ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರದವರೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಯಾವುದೇ ಟಿಕೆಟ್​​ ಇಲ್ಲದೆ ಪ್ರಯಾಣಿಸಬಹುದಾಗಿದೆ ಎಂದು ನಿಗಮವು ಅಧಿಕೃತ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳು ಈ ಉಚಿತ ಸಾರಿಗೆ ಸೌಲಭ್ಯವನ್ನು ಪಡೆಯಲು ಬಸ್ ನಿರ್ವಾಹಕರಿಗೆ ತಮ್ಮ ಪರೀಕ್ಷಾ ಪ್ರವೇಶ ಪತ್ರ ತೋರಿಸುವುದು ಕಡ್ಡಾಯವಾಗಿದೆ ಎಂದು ನಿಗಮ ಹೇಳಿದೆ.

ಪರೀಕ್ಷಾ ಪ್ರವೇಶ ಪತ್ರವನ್ನೇ ಬಸ್ ಪಾಸ್ ಎಂದು ಪರಿಗಣಿಸುವಂತೆ ಕೆಎಸ್‌ಆರ್‌ಟಿಸಿ ತನ್ನ ಎಲ್ಲಾ ಘಟಕಗಳ ಚಾಲಕರು ಮತ್ತು ನಿರ್ವಾಹಕರಿಗೆ ಸೂಚನೆ ನೀಡಿದೆ. ಪರೀಕ್ಷೆ ಬರೆಯಲು ಹೋಗುವಾಗ ಹಾಗೂ ಪರೀಕ್ಷೆ ಮುಗಿಸಿ ಮನೆಗೆ ಹಿಂದಿರುಗುವಾಗಲೂ ಈ ಸೌಲಭ್ಯ ಅನ್ವಯವಾಗಲಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳು ಸಾರಿಗೆ ಸಮಸ್ಯೆಯಿಂದಾಗಿ ಪರೀಕ್ಷೆಗೆ ಗೈರಾಗಬಾರದು ಅಥವಾ ವಿಳಂಬವಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಿರುವ ಮಾರ್ಗಗಳಲ್ಲಿ ಹೆಚ್ಚಿನ ಬಸ್‌ಗಳನ್ನು ಹಾಕಲಾಗುವುದು. ಇದರ ಜತೆಗೆ ವಿದ್ಯಾರ್ಥಿಗಳು ಕೈ ತೋರಿಸಿದ ಕಡೆ ಬಸ್ ನಿಲ್ಲಿಸಲು ಚಾಲಕರಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಮಹಾಶಿವರಾತ್ರಿ ಹಬ್ಬದ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು

ಈ ಕುರಿತು ಕೆಎಸ್‌ಆರ್‌ಟಿಸಿ ಅಧಿಕೃತ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಯಾವುದೇ ಆತಂಕವಿಲ್ಲದೆ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಿದೆ. ಈ ನಿರ್ಧಾರವು ಲಕ್ಷಾಂತರ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಆರ್ಥಿಕ ಹೊರೆ ತಗ್ಗಿಸಲು ಸಹಕಾರಿಯಾಗಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

IND vs NAM: ಸ್ಟಂಪ್ ಔಟ್ ಆದ ಸೂರ್ಯ; ಭಾರತ ಫೈನಲ್​ಗೇರಲಿದೆ ಎಂದ ಇತಿಹಾಸ – Kannada News | India Beats Namibia: Suryakumar Stumped Out, Is T20 WC 2026 Final Guaranteed?

ನಮೀಬಿಯಾ ವಿರುದ್ಧದ ಪಂದ್ಯವನ್ನು 93 ರನ್​​ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್​ನಲ್ಲಿ (T20 World Cup 2026) ಸತತ ಎರಡನೇ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಸೂಪರ್ 8 ಸುತ್ತಿನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಇದು ಮಾತ್ರವಲ್ಲದೆ ನಮೀಬಿಯಾ ವಿರುದ್ಧದ ಈ ಪಂದ್ಯದಲ್ಲಿ ನಡೆದ ಅದೊಂದು ಘಟನೆ ಈ ಬಾರಿಯೂ ಟೀಂ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಲಿದೆ ಎನ್ನುತ್ತಿದೆ. ವಾಸ್ತವವಾಗಿ ನಮೀಬಿಯಾ ವಿರುದ್ಧ ಭಾರತದ ನಾಯಕ ಸೂರ್ಯಕುಮಾರ್ ಯಾದವ್ (Suryakumar Yadav) ಕೇವಲ 12 ರನ್‌ಗಳಿಸಿ ಸ್ಟಂಪ್ ಔಟಾದರು. ಸೂರ್ಯ ಸ್ಟಂಪ್ ಔಟ್ ಆದ ಕೂಡಲೇ ಈ ಬಾರಿ ಭಾರತ ತಂಡ ಫೈನಲ್​ಗೇರಲಿದೆ ಎಂದು ಈ ಹಿಂದಿನ ಇತಿಹಾಸ ಭವಿಷ್ಯ ನುಡಿಯುತ್ತಿದೆ. ಇದಕ್ಕೆ ಪೂರಕವಾಗಿ ಐಸಿಸಿ ಟೂರ್ನಮೆಂಟ್‌ನಲ್ಲಿ ಭಾರತದ ನಾಯಕ ಸ್ಟಂಪ್ ಔಟ್ ಆದಾಗಲೆಲ್ಲಾ, ಟೀಂ ಇಂಡಿಯಾ ಯಾವಾಗಲೂ ಫೈನಲ್ ತಲುಪಿದೆ.

ನಾಯಕರ ಸ್ಟಂಪ್ ಔಟ್

2000 ರ ವಿಶ್ವಕಪ್​ನಲ್ಲಿ ಸೌರವ್ ಗಂಗೂಲಿ ಭಾರತ ತಂಡದ ನಾಯಕರಾಗಿದ್ದರು. ಈ ಟೂರ್ನಿಯಲ್ಲಿ ಕೀನ್ಯಾ ವಿರುದ್ಧದ ಪಂದ್ಯದಲ್ಲಿ ಗಂಗೂಲಿ ಸ್ಟಂಪ್ ಔಟ್ ಆಗಿದ್ದರು. ಆ ಆವೃತ್ತಿಯಲ್ಲಿ ಭಾರತ ಫೈನಲ್ ಆಡಿತ್ತು. ನಂತರ, 2011 ರ ವಿಶ್ವಕಪ್​ನಲ್ಲಿ ಎಂಎಸ್ ಧೋನಿ ಕೂಡ ವೆಸ್ಟ್ ಇಂಡೀಸ್ ವಿರುದ್ಧ ಸ್ಟಂಪ್ ಔಟ್ ಆಗಿದ್ದರು. ಆಗಲೂ ಭಾರತ ತಂಡ ಫೈನಲ್ ತಲುಪಿತ್ತು. 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ನ್ಯೂಜಿಲೆಂಡ್ ವಿರುದ್ಧ ಸ್ಟಂಪ್ ಔಟ್ ಆಗಿದ್ದರೆ, ಇತ್ತ ಟೀಂ ಇಂಡಿಯಾ ಮತ್ತೊಮ್ಮೆ ಫೈನಲ್ ತಲುಪಿತ್ತು. ಈಗ, ಸೂರ್ಯಕುಮಾರ್ ಯಾದವ್ ಕೂಡ ನಮೀಬಿಯಾ ವಿರುದ್ಧ ಸ್ಟಂಪ್ ಔಟ್ ಆಗಿದ್ದಾರೆ. ಹಾಗಾದರೆ ಈ ಬಾರಿಯೂ ಟೀಂ ಇಂಡಿಯಾ ಫೈನಲ್ ಆಡಲಿದೆಯೇ? ಎಂಬುದು ಅಭಿಮಾನಿಗಳ ಪ್ರಶ್ನೆಯಾಗಿದೆ.

ಅದ್ಭುತ ಫಾರ್ಮ್‌ನಲ್ಲಿ ಸೂರ್ಯ

ಸೂರ್ಯಕುಮಾರ್ ಯಾದವ್ ನಮೀಬಿಯಾ ವಿರುದ್ಧ 12 ರನ್‌ಗಳಿಗೆ ಔಟಾದರಾದರೂ ಹಿಂದಿನ ಪಂದ್ಯದಲ್ಲಿ ಅಜೇಯ 84 ರನ್ ಗಳಿಸಿ ಟೀಂ ಇಂಡಿಯಾವನ್ನು ಗೆಲುವಿನತ್ತ ಕೊಂಡೊಯ್ದರು. ಯುಎಸ್ಎ ವಿರುದ್ಧ ಟೀಂ ಇಂಡಿಯಾ ಸಂಕಷ್ಟದಲ್ಲಿದ್ದಾಗ, ಸೂರ್ಯ ದೊಡ್ಡ ಇನ್ನಿಂಗ್ಸ್ ಆಡಿ ತಂಡವನ್ನು ಉತ್ತಮ ಸ್ಕೋರ್‌ಗೆ ಕೊಂಡೊಯ್ಯಲು ಸಹಾಯ ಮಾಡಿದ್ದರು.

T20 World Cup: ಪಾಕ್ ವಿರುದ್ಧವೂ ಅಭಿಷೇಕ್ ಆಡಲ್ಲ: ಶಾಕಿಂಗ್ ಹೇಳಿಕೆ ನೀಡಿದ ಸೂರ್ಯ

ಪಂದ್ಯ ಹೀಗಿತ್ತು

ಈ ಪಂದ್ಯದಲ್ಲಿ ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್ ಮಾಡಿ 209 ರನ್ ಕಲೆಹಾಕಿತು. ಆರಂಭಿಕ ಸಂಜು ಸ್ಯಾಮ್ಸನ್ 22 ರನ್ ಗಳಿಸಿ ಔಟಾದರೆ, ಇಶಾನ್ ಕಿಶನ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, 24 ಎಸೆತಗಳಲ್ಲಿ 61 ರನ್ ಗಳಿಸಿದರು. ಉಳಿದಂತೆ ತಿಲಕ್ ವರ್ಮಾ 25 ರನ್ ಬಾರಿಸಿದರೆ, ಹಾರ್ದಿಕ್ ಪಾಂಡ್ಯ 27 ಎಸೆತಗಳಲ್ಲಿ 52 ರನ್​ಗಳ ಕೊಡುಗೆ ನೀಡಿದರು.

ಈ ಗುರಿ ಬೆನ್ನಟ್ಟಿದ ನಮೀಬಿಯಾ ಪವರ್‌ಪ್ಲೇನಲ್ಲಿ 57 ರನ್‌ಗಳನ್ನು ಗಳಿಸುವ ಮೂಲಕ ಸ್ಫೋಟಕ ಆರಂಭವನ್ನು ಪಡೆದುಕೊಂಡಿತು. ಆರಂಭಿಕರಾದ ಜಾನ್ ಫ್ರೈಲಿಂಕ್ ಮತ್ತು ಲಾರೆನ್ ಸ್ಟೀನ್‌ಕ್ಯಾಂಪ್ ಉತ್ತಮ ಜೊತೆಯಾಟ ಕಟ್ಟಿದರು. ಆದಾಗ್ಯೂ, ಪವರ್‌ಪ್ಲೇ ಮುಗಿದ ನಂತರ, ನಮೀಬಿಯಾದ ಇನ್ನಿಂಗ್ಸ್ ಕುಸಿಯಿತು. ವರುಣ್ ಚಕ್ರವರ್ತಿ ಸತತ ಎರಡು ಓವರ್‌ಗಳಲ್ಲಿ ಮೂರು ವಿಕೆಟ್‌ಗಳನ್ನು ಪಡೆದರು. ನಂತರ ಅಕ್ಷರ್ ಪಟೇಲ್ ಎರಡು ವಿಕೆಟ್‌ಗಳನ್ನು ಪಡೆದರು. ಹಾಗೆಯೇ ಹಾರ್ದಿಕ್ ಪಾಂಡ್ಯ 18 ನೇ ಓವರ್‌ನಲ್ಲಿ ಎರಡು ವಿಕೆಟ್‌ಗಳನ್ನು ಪಡೆದು ನಮೀಬಿಯಾದ ಸೋಲನ್ನು ಖಚಿತಪಡಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 2:30 pm, Fri, 13 February 26

Source link

ಶಾಸಕ ಭೈರತಿ ಬಸವರಾಜ್​​ಗೆ ಆರೋಗ್ಯ ಸಮಸ್ಯೆ, ತಪಾಸಣೆಗೆ ಕೋರ್ಟ್​ ಸೂಚನೆ: ನಾಳೆ ಜೈಲೋ, ಸಿಐಡಿ ಕಸ್ಟಡಿಯೋ ತೀರ್ಮಾನ – Kannada News | Biklu Shiva Case: MLA Byrathi Basavaraj to Get Jayadeva Heart Treatment as Court Directs CID

ಬೆಂಗಳೂರು, ಫೆ.13: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಶದಲ್ಲಿರುವ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ (Byrathi Basavaraj)​​​​​ ಅವರಿಗೆ ಚಿಕಿತ್ಸೆ ಕೊಡಿಸಲು ಕೋರ್ಟ್ ಸೂಚನೆ ನೀಡಿದೆ. ಹೃದಯ ಸಂಬಂಧಿ ಸಮಸ್ಯೆ ಬಗ್ಗೆ ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸುವಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಿಐಡಿಗೆ ಸೂಚಿಸಿದೆ.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಭೈರತಿ ಬಸವರಾಜ್ ಅವರನ್ನು ಇಂದು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ತಪಾಸಣೆ ಮತ್ತು ಚಿಕಿತ್ಸೆಯ ಅಗತ್ಯವಿದ್ದುದರಿಂದ, ತನಿಖಾಧಿಕಾರಿ ಡಿವೈಎಸ್‌ಪಿ ಗೌತಮ್ ಅವರಿಗೆ ನ್ಯಾಯಾಲಯವು ಈ ನಿರ್ದೇಶನ ನೀಡಿದೆ.

ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್​ನಲ್ಲಿ ಶಾಸಕ ಭೈರತಿ ಬಸವರಾಜ್​​ ಪೊಲೀಸರ ವಶಕ್ಕೆ

ಅವರನ್ನು ಹಿರಿಯ ವೈದ್ಯರ ಸಮ್ಮುಖದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಸಂಪೂರ್ಣ ವೈದ್ಯಕೀಯ ತಪಾಸಣೆ ನಡೆಸಬೇಕು. ಸದ್ಯ ಭೈರತಿ ಬಸವರಾಜ್ ಸಿಐಡಿ ವಶದಲ್ಲಿರುವುದರಿಂದ, ಅವರ ಸುಪರ್ದಿಯಲ್ಲೇ ಮೆಡಿಕಲ್ ಟೆಸ್ಟ್ ನಡೆಯಲಿದೆ. ವೈದ್ಯಕೀಯ ವರದಿಯೊಂದಿಗೆ ನಾಳೆ (ಶನಿವಾರ) ನ್ಯಾಯಾಧೀಶರ ನಿವಾಸದಲ್ಲಿ ಆರೋಪಿಯನ್ನು ಹಾಜರುಪಡಿಸಬೇಕು ಎಂದು ಕೂಡ ಸೂಚನೆ ನೀಡಿದೆ. ಬೌರಿಂಗ್ ಮತ್ತು ಜಯದೇವ ಆಸ್ಪತ್ರೆಯ ವೈದ್ಯಕೀಯ ವರದಿಗಳನ್ನು ಆಧರಿಸಿ ಭೈರತಿ ಬಸವರಾಜ್ ಅವರಿಗೆ ಜೈಲು ಶಿಕ್ಷೆ ಆಗಲಿದೆಯೇ ಅಥವಾ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಕಸ್ಟಡಿಗೆ ನೀಡಲಾಗುವುದೇ ಎಂಬುದು ನಾಳೆ ತೀರ್ಮಾನವಾಗಲಿದೆ.

ವರದಿ: ವಿಕಾಸ್​​​ ಕ್ರೈಂ

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಹಾಶಿವರಾತ್ರಿ ಹಬ್ಬದ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು – Kannada News | Bengalurus KR Market Sees Significant Price Hikes for Flowers and Fruits Ahead of Mahashivaratri

ಬೆಂಗಳೂರು, ಫೆಬ್ರವರಿ 13: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು ಮತ್ತು ಹಣ್ಣುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಈ ವರ್ಷ ಹೂವುಗಳ ಬೆಲೆ ಶೇಕಡಾ 40ರಿಂದ 60ರಷ್ಟು ಹೆಚ್ಚಾಗಿದ್ದು, ಕೆಲವು ಹೂವುಗಳಿಗೆ ಕಳೆದ ವಾರಕ್ಕಿಂತ ಪ್ರತಿ ಕೆ.ಜಿ.ಗೆ 100ರಿಂದ 200 ರೂಪಾಯಿ ಹೆಚ್ಚಳವಾಗಿದೆ. ಹಣ್ಣುಗಳ ಬೆಲೆಯಲ್ಲಿಯೂ ಸುಮಾರು ಶೇಕಡಾ 30ರಷ್ಟು ಏರಿಕೆ ಕಂಡುಬಂದಿದೆ.  ಬೆಲೆ ಏರಿಕೆಗೆ ಹಬ್ಬದ ಬೇಡಿಕೆ ಮತ್ತು ಚಳಿಗಾಲದಲ್ಲಿ ಹೂವಿನ ಉತ್ಪಾದನೆ ಕಡಿಮೆಯಾಗಿರುವುದು ಮುಖ್ಯ ಕಾರಣ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಮಲ್ಲಿಗೆ, ಸೇವಂತಿಗೆ, ಗುಲಾಬಿ, ಕನಕಾಂಬರ ಮತ್ತು ಸುಗಂಧರಾಜ ಸೇರಿದಂತೆ ಎಲ್ಲ ವಿಧದ ಹೂವುಗಳ ಬೆಲೆ ದುಬಾರಿಯಾಗಿದೆ. ಗ್ರಾಹಕರು ಈ ಬೆಲೆ ಏರಿಕೆಯಿಂದ ತೊಂದರೆ ಅನುಭವಿಸುತ್ತಿದ್ದು, ಹಬ್ಬದ ಬಜೆಟ್ ಅನ್ನು ನಿರ್ವಹಿಸುವುದು ಕಷ್ಟವಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೂ, ಹಬ್ಬ ಆಚರಣೆಗಾಗಿ ಅನಿವಾರ್ಯವಾಗಿ ಹೆಚ್ಚಿನ ಬೆಲೆ ತೆತ್ತು ಖರೀದಿಸುತ್ತಿರುವುದು ಮಾರುಕಟ್ಟೆಯಲ್ಲಿ ಕಂಡುಬಂದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ಐಷಾರಾಮಿ ಕಾರಿನೊಳಗೆ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – Kannada News | Bhopal crime news Minor girl raped in luxury car thrashed and blackmailed SIT to probe

ಭೋಪಾಲ್, ಫೆಬ್ರವರಿ 13: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ (Bhopal) ಪಿಯುಸಿ ವಿದ್ಯಾರ್ಥಿನಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಥಾರ್ ಎಸ್‌ಯುವಿಯಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣವು ಬ್ಲ್ಯಾಕ್‌ಮೇಲ್ ಮತ್ತು ಸುಲಿಗೆಯನ್ನೂ ಒಳಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಮುಖ ಆರೋಪಿಯನ್ನು ಫೆಬ್ರವರಿ 3ರಂದು ವಶಕ್ಕೆ ಪಡೆಯಲಾಯಿತು. ಆತನನ್ನು ಜೈಲಿನಲ್ಲಿ ಇರಿಸಲಾಗಿದೆ. ನಗರದಲ್ಲಿ ಜಿಮ್ ನಡೆಸುತ್ತಿರುವ ಅವನ ಗೆಳೆಯ ಮೇಜ್ ಖಾನ್​ನನ್ನು ಫೆಬ್ರವರಿ 8ರಂದು ಬಂಧಿಸಲಾಯಿತು. ಆರೋಪಗಳ ಗಂಭೀರತೆಯನ್ನು ಪರಿಗಣಿಸಿ, ಪೊಲೀಸ್ ಆಯುಕ್ತರು ವಿವರವಾದ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದಾರೆ. ಎಸಿಪಿ ಅಂಕಿತಾ ಖತ್ರಕರ್ ನೇತೃತ್ವದಲ್ಲಿ ತಂಡವನ್ನು ರಚಿಸಲಾಗಿದೆ.

ಇದನ್ನೂ ಓದಿ: Bengaluru: ಸೊಸೆ ಮೇಲೆ ಮಾವನಿಂದಲೇ ಲೈಂಗಿಕ ದೌರ್ಜನ್ಯ; ಆಸೆ ಈಡೇರಿಸು ಎಂದು ಪೀಡನೆ

4 ಪ್ರತ್ಯೇಕ ಕಾರುಗಳಲ್ಲಿ ವಿವಿಧ ಸ್ಥಳಗಳಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ ಪ್ರಮುಖ ಆರೋಪಿಗಳು ಆ ಬಾಲಕಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ತನ್ನ ಐಫೋನ್‌ನಲ್ಲಿ ಆತ ಇಡೀ ಘಟನೆಯನ್ನು ರೆಕಾರ್ಡ್ ಮಾಡಿದ್ದಾನೆ. ಅಪ್ರಾಪ್ತ ಬಾಲಕಿಗೆ ಬೆದರಿಕೆ ಹಾಕಲು ಈ ವೀಡಿಯೊವನ್ನು ಬಳಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಆ ವಿಡಿಯೋವನ್ನು ಆನ್​​ಲೈನ್​ನಲ್ಲಿ ಹಾಕಬಾರದು ಎಂದಾದರೆ 40,000 ರೂ.ಗಳನ್ನು ನೀಡಲು ಡಿಮ್ಯಾಂಡ್ ಮಾಡಿದ್ದಾರೆ.

ಅತ್ಯಾಚಾರಕ್ಕೆ ಬಳಸಲಾದ ಥಾರ್ ಎಸ್‌ಯುವಿಯನ್ನು ಸೆಹೋರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಮುಚ್ಚಿಡಲಾಗಿತ್ತು. ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದಾರೆ. ಆದರೆ, ವಿಡಿಯೋ ಇರುವ ಮೊಬೈಲ್ ಫೋನ್ ಇನ್ನೂ ಪತ್ತೆಯಾಗಿಲ್ಲ.

ಇದನ್ನೂ ಓದಿ: ಅಪ್ರಾಪ್ತ ಹುಡುಗರಿಂದ ದೆಹಲಿಯಲ್ಲಿ 17 ವರ್ಷದ ಬಾಲಕನ ಕಗ್ಗೊಲೆ

ತನಿಖೆಯ ಸಮಯದಲ್ಲಿ ಮೇಜ್ ಖಾನ್ ಮತ್ತು ಕೊಹೆಫಿಜಾ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಹೆಡ್ ಕಾನ್‌ಸ್ಟೆಬಲ್ ನಡುವಿನ ಸಂಬಂಧವನ್ನು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪ ಅಧಿಕಾರಿಯ ಮೇಲಿದೆ. ಹೀಗಾಗಿ ಹೆಡ್ ಕಾನ್‌ಸ್ಟೆಬಲ್ ಅನ್ನು ಅಮಾನತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Breaking: ಫಿಲಂ ಚೇಂಬರ್​​ನಲ್ಲೇ ಹೃದಯಾಘಾತ: ಹಿರಿಯ ನಿರ್ದೇಶಕ ಜೋ ಸೈಮನ್ ನಿಧನ – Kannada News | Senior movie director from Kannada Movie industry Joe Simon passed away

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಜೋ ಸೈಮನ್ ಅವರು ಹಠಾತ್ತನೆ ನಿಧನ ಹೊಂದಿದ್ದಾರೆ. ಫಿಲಂ ಚೇಂಬರ್​​ನಲ್ಲಿ ಆಯೋಜಿಸಲಾಗಿದ್ದ ಸಭೆಯೊಂದರಲ್ಲಿ ಭಾಗಿ ಆಗಿದ್ದಾಗಲೇ ಜೋ ಸೈಮನ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜೋ ಸೈಮನ್ ಅವರು ಕೊನೆ ಉಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಜೋ ಸೈಮನ್ ಅವರು ಕನ್ನಡದ ಸುಮಾರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ನಿರ್ದೇಶಕ, ನಟ, ಗೀತರಚನೆಕಾರನಾಗಿ ಅವರು ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.

Published On – 5:29 pm, Fri, 13 February 26

Source link

Valentine’s 2026 Date: ಫೆಬ್ರವರಿ 14 ರಂದೇ ಪ್ರೇಮಿಗಳ ದಿನ ಆಚರಿಸುವುದು ಏಕೆ? ಇಲ್ಲಿದೆ ಕಾರಣ – Kannada News | Valentine’s Week 2026 Valentine’s Day Date, History, Significance, Importance, Celebration details in Kannada

ನಾಳೆ ಪ್ರೇಮಿಗಳ ದಿನ (Valentine’s Day). ಪ್ರೀತಿಸುವ ವ್ಯಕ್ತಿಗಳ ಪಾಲಿಗೆ ಫೆಬ್ರವರಿ 14 ಸಂಭ್ರಮದ ದಿನ. ತಮ್ಮನ್ನು ಇಷ್ಟ ಪಡುವ ಮನಸ್ಸುಗಳನ್ನು ಖುಷಿ ಪಡಿಸಲು ಯುವಕ ಯುವತಿಯರು ಕಾಯುವ ದಿನವಿದು. ತಮ್ಮ ಪ್ರೀತಿಯನ್ನು ಪ್ರೇಮಿಗಳು ಕಾರ್ಡ್‌ಗಳು, ಹೂವುಗಳು ಅಥವಾ ಚಾಕೊಲೇಟ್‌ಗಳನ್ನು ನೀಡಿ ವ್ಯಕ್ತಪಡಿಸುತ್ತಾರೆ. ಹೆಚ್ಚಿನವರು ದುಬಾರಿ ಬೆಲೆಯ ಗಿಫ್ಟ್, ಡಿನ್ನರ್, ಟ್ರಿಪ್ ಎಂದೆಲ್ಲಾ ಪ್ಲಾನ್ ಮಾಡಿಕೊಂಡು ಪ್ರೇಮಿಗಳ ದಿನವನ್ನು ವಿಭಿನ್ನವಾಗಿ ಸೆಲೆಬ್ರೇಟ್ ಮಾಡುತ್ತಾರೆ. ಪ್ರೇಮಿಗಳ ದಿನ ಆಚರಿಸುವ ಮುನ್ನ ಈ ದಿನದ ಇತಿಹಾಸ, ಮಹತ್ವ ತಿಳಿದುಕೊಳ್ಳಿ.

ಪ್ರೇಮಿಗಳ ದಿನದ ಇತಿಹಾಸವೇನು?

ಪ್ರೇಮಿಗಳ ದಿನದ ಇತಿಹಾಸ ಬಗ್ಗೆ ಹೇಳುವುದಾದರೆ, ಈ ದಿನದ ಒಂದೊಂದು ಕಥೆಗಳು ಅಡಗಿವೆ. ವ್ಯಾಲೆಂಟೈನ್ಸ್ ಡೇ ಲುಪರ್ಕಾಲಿಯಾ ಹಬ್ಬದೊಂದಿಗೆ ಪ್ರಾರಂಭವಾಯಿತು ಎನ್ನಲಾಗುತ್ತದೆ. ಈ ದಿನವು ವಸಂತಕಾಲದ ಬರುವಿಕೆಯನ್ನು ಆಚರಿಸುತ್ತದೆ. ಐದನೇ ಶತಮಾನದಲ್ಲಿ ಪೋಪ್ ಗೆಲಾಸಿಯಸ್ ಈ ಪ್ರೇಮಿಗಳ ದಿನದ ಆಚರಣೆಯನ್ನು ನಿಷೇಧಿಸಲಾಯಿತು. ಆ ಬಳಿಕ ಅದನ್ನು ಸೇಂಟ್ ವ್ಯಾಲೆಂಟೈನ್ಸ್ ಡೇಗೆ ಬದಲಾಯಿಸಲಾಯಿತು. ಫೆಬ್ರವರಿ 14 ನ್ನು ಪ್ರಣಯದ ದಿನವಾಗಿ ಆಚರಿಸುವ ಸಂಪ್ರದಾಯ ಸುಮಾರು 14ನೇ ಶತಮಾನದವರೆಗೆ ಪ್ರಾರಂಭವಾಗಲಿಲ್ಲ. ಫೆಬ್ರವರಿ 14 270 AD ರಂದು ಚಕ್ರವರ್ತಿ ಕ್ಲಾಡಿಯಸ್ II ಗೋಥಿಕಸ್​ನಿಂದ ಮರಣದಂಡನೆಗೆ ಗುರಿಯಾದ ನಂತರದಲ್ಲಿ ಮರಣದಂಡನೆಗೊಳಗಾದ. ಈ ಪ್ರಸಿದ್ಧ ಸಂತ ವ್ಯಾಲೆಂಟೈನ್​ನ ಗೌರವಾರ್ಥವಾಗಿ ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತಿದೆ.

ಹೌದು, ಸೇಂಟ್ ವ್ಯಾಲೆಂಟೈನ್ ತನ್ನ ಸೈನ್ಯದಲ್ಲಿ ಪುರುಷರನ್ನು ನೇಮಿಸಿಕೊಳ್ಳಲು ಮದುವೆಗಳನ್ನು ನಿಷೇಧಿಸಿದ ರೋಮನ್ ರಾಜನ ನಿಯಮವನ್ನು ಉಲ್ಲಂಘಿಸಿದ ಕಾರಣ ಅವನಿಗೆ ಮರಣದಂಡನೆ ವಿಧಿಸಲಾಯಿತು. ಸೇಂಟ್ ವ್ಯಾಲೆಂಟೈನ್ ಈ ಕ್ರಮವು ಅನ್ಯಾಯವೆಂದು ಭಾವಿಸಿದ್ದರು. ಆದ್ದರಿಂದ ಅವರು ನಿಯಮಗಳನ್ನು ಮುರಿದು ರಹಸ್ಯವಾಗಿ ಮದುವೆಗಳನ್ನು ಏರ್ಪಡಿಸಿದರು. ಸೇಂಟ್ ವ್ಯಾಲೆಂಟೈನ್ ಜೈಲರ್‌ನ ಮಗಳನ್ನು ಪ್ರೀತಿಸುತ್ತಿದ್ದರು. ಫೆಬ್ರವರಿ 14ರಂದು ಅವರನ್ನು ಕೊಲ್ಲಲು ಕರೆದೊಯ್ಯುವಾಗ, “ನಿಮ್ಮ ವ್ಯಾಲೆಂಟೈನ್‌” ಎಂದು ಸಹಿ ಮಾಡಿದ ಪ್ರೇಮ ಪತ್ರವನ್ನು ತನ್ನ ಪ್ರೇಯಸಿಗೆ ಕಳುಹಿಸಿದರು. ಈ ವೇಳೆಯ್ಲಲಿ ಚಕ್ರವರ್ತಿಯ ಆದೇಶವನ್ನು ಧಿಕ್ಕರಿಸಿದ್ದರಿಂದ ಮರಣದಂಡನೆ ನೀಡಲಾಯಿತು. ಅಂದಿನಿಂದ ಈ ದಿನದ ಆಚರಣೆ ಶುರುವಾಯಿತು.

ಇದನ್ನೂ ಓದಿ: Valentine Day 2026: ಪ್ರೇಮಿಗಳ ದಿನದಂದು ಯಾವ ಬಣ್ಣದ ಬಟ್ಟೆಯನ್ನು ಧರಿಸಿದರೆ ಸೂಕ್ತ?

ಪ್ರೇಮಿಗಳ ದಿನದ ಮಹತ್ವ ಹಾಗೂ ಆಚರಣೆ ಹೇಗೆ?

ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಲು ಇರುವ ದಿನವೇ ಈ ಪ್ರೇಮಿಗಳ ದಿನ. ಹೀಗಾಗಿ ಪ್ರೀತಿಯಲ್ಲಿ ಬಿದ್ದವರು ವಿಭಿನ್ನವಾಗಿ ತಮ್ಮ ಪ್ರೀತಿಯನ್ನು ವ್ಯಕ್ತ ಪಡಿಸುತ್ತಾರೆ. ಗ್ರೀಟಿಂಗ್ ಕಾರ್ಡ್‌ಗಳು, ಚಾಕೊಲೇಟ್‌ಗಳ ಬಾಕ್ಸ್, ಗುಲಾಬಿ ಹೂವುಗಳು, ನೈಟ್ ಡಿನ್ನರ್ ಹೀಗೆ ವಿಭಿನ್ನ ರೀತಿ ಸೆಲೆಬ್ರೇಟ್ ಮಾಡುತ್ತಾರೆ.

ಇನ್ನಷ್ಟು ಜೀವನ ಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link