ಬತ್ತಿದ ಬೋರ್ವೆಲ್ಗಳು: ರಾಜ್ಯದ 652 ಹಳ್ಳಿಗಳಲ್ಲಿ ನೀರಿಗೆ ಬರ; ಯಾವೆಲ್ಲ ಜಿಲ್ಲೆಗಳು ಭಾದಿತ? – Kannada News | Karnataka villages grapple with dry borewells and severe water shortage
ಬೆಂಗಳೂರು, ಮೇ 02: ರಾಜ್ಯದಲ್ಲಿ ಬಿಸಿಲಿನ ಅಬ್ಬರದ ಹಿನ್ನೆಲೆ ನೀರಿಗೆ ಬರ ಆರಂಭವಾಗಿದೆ. ರಾಜ್ಯದಲ್ಲಿರುವ 1.23 ಲಕ್ಷಕ್ಕೂ ಹೆಚ್ಚು ಬೋರ್ವೆಲ್ಗಳ ಪೈಕಿ, ವಿವಿಧ ಜಿಲ್ಲೆಗಳಲ್ಲಿನ 1,010 ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಭಾರಿ ಕುಸಿದಿದೆ. ರಾಯಚೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಸಮಸ್ಯೆಯಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಾರ, ಉತ್ತರ ಕನ್ನಡ, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿಯೂ ನೀರಿನ ಸಮಸ್ಯೆ ಉಲ್ಬಣವಾಗಿದೆ. ರಾಯಚೂರು ಜಿಲ್ಲೆಯಲ್ಲಿ 198 ಗ್ರಾಮಗಳು, ಶಿವಮೊಗ್ಗದಲ್ಲಿ 196, ಉತ್ತರ ಕನ್ನಡದಲ್ಲಿ 184,…