ಬೆಂಗಳೂರಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ 4 ದಿನ ಬಂದ್: ಬದಲಿ ಮಾರ್ಗದ ಮಾಹಿತಿ ಇಲ್ಲಿದೆ – Kannada News | Bengaluru’s Peenya Elevated Flyover to Remain Closed for 4 Days from May 5 to 8
ಬೆಂಗಳೂರು, ಮೇ 02: ಫ್ಲೈಓವರ್ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆ ಬೆಂಗಳೂರಿನ (Bengaluru) ಪೀಣ್ಯ ಎಲಿವೇಟೆಡ್ ಫ್ಲೈಓವರ್ 4 ದಿನ ಬಂದ್ ಆಗಲಿದೆ. ಮೇ 5ರ ಬೆಳಗ್ಗೆ 5ರಿಂದ ಮೇ 8ರ ಬೆಳಗ್ಗೆ 11ರವರೆಗೆ ಪ್ಲೈಓವರ್ ಕ್ಲೋಸ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಹೀಗಾಗಿ ಫ್ಲೈಓವರ್ನ 2 ಬದಿಯಲ್ಲಿ ವಾಹನ ಸಂಚಾರಗಳಿಗೆ ನಿರ್ಬಂಧ ವಿಧಿಸಲಾಗಿದ್ದು ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಕೆ ಮಾಡುವಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ. ಸುರಕ್ಷತೆ…