ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ಹೇಗಿರಲಿದೆ ಎಣಿಕೆ ವಿಧಾನ? – Kannada News | Sringeri Assembly constituency postal ballot Votes recount on may 2 at Chikkamagaluru, here Is full details
ಚಿಕ್ಕಮಗಳೂರು, (ಮೇ 01): ಶೃಂಗೇರಿ ವಿಧಾನಸಭಾ ಕ್ಷೇತ್ರದ (sringeri assembly constituency) 2023ರ ಚುನಾವಣೆಗೆ ಸಂಬಂಧಿಸಿದ ಅಂಚೆ ಮತಗಳ (postal Ballot) ಮರು ಎಣಿಕೆ ಕಾರ್ಯಕ್ಕೆ ಹೈಕೋರ್ಟ್ ನಿರ್ದೇಶನದಂತೆ ಜಿಲ್ಲಾಡಳಿತವು ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದೆ. ಮೇ 2ರಂದು ಬೆಳಗ್ಗೆ 9 ಗಂಟೆಗೆ ಅಭ್ಯರ್ಥಿಗಳು ಹಾಗೂ ಅವರ ಪ್ರತಿನಿಧಿಗಳ ಸಮ್ಮುಖದಲ್ಲಿ ಚಿಕ್ಕಮಗಳೂರಿನ ಐಡಿಎಸ್‌ಜಿ ಸರ್ಕಾರಿ ಕಾಲೇಜಿನ ಮೊದಲ ಮಹಡಿಯಲ್ಲಿ ಅಂಚೆ ಮತಪತ್ರಗಳ ಪರಿಶೀಲನೆ ಮತ್ತು ಮರು ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಇದಕ್ಕೆ ಜಿಲ್ಲಾಡಳಿತ ಸಹ ಸಕಲ ಸಿದ್ಧತೆ ಕೈಗೊಂಡಿದೆ. …