ಆರ್ಎಸ್ಎಸ್ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – Kannada News | RSS Members are Hindutvavadis, Not Hindus: Minister Yathindra Siddaramaiah Backs Priyank Kharge on Registration Row
ಮೈಸೂರು, ಜೂನ್ 16: ಆರ್‌ಎಸ್‌ಎಸ್ ಸದಸ್ಯರು ಹಿಂದುಗಳಲ್ಲ, ಬದಲಿಗೆ ಹಿಂದುತ್ವವಾದಿಗಳು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ಏನು ಬೇಕಾದರೂ ಮಾಡುವಂತಿಲ್ಲ. ಆರ್‌ಎಸ್‌ಎಸ್ ಅನ್ನು ಕೇವಲ ಸಾಂಸ್ಕೃತಿಕ ಸಂಘಟನೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ಬದಲಾಗಿ, ಇದು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುವ ರಾಜಕೀಯ ಸಂಸ್ಥೆಯಾಗಿದೆ. ಆರ್‌ಎಸ್‌ಎಸ್ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮತ್ತು ಹಣಕಾಸು ವ್ಯವಹಾರಗಳನ್ನು ಹೊಂದಿದೆ. ಈ ಆರ್ಥಿಕ ವ್ಯವಹಾರಗಳಿಗೆ ಲೆಕ್ಕಪತ್ರವನ್ನು ನೀಡಬೇಕು. ಎಲ್ಲರಿಗೂ ಒಂದೇ ಕಾನೂನು ಇರಬೇಕು….