SSLC ಪರೀಕ್ಷೆ ವೇಳೆ ಕನ್ನಡದಲ್ಲಿಯೇ ವಿದ್ಯಾರ್ಥಿಗಳು ಫೇಲ್ ಆಗ್ತಿರೋದೇಕೆ?: ಅಚ್ಚರಿಯ ಮಾಹಿತಿ ಬಹಿರಂಗ – Kannada News | SSLC Kannada Failure: KDA Unveils Reasons, Recommends Reforms
ಬೆಂಗಳೂರು, ಮೇ 01: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ತೆಗೆದುಕೊಂಡಿದ್ದ ಸುಮಾರು 19,000 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಹೀಗಾಗಿ ಇದಕ್ಕೆ ಕಾರಣಗಳನ್ನು ಅಧ್ಯಯನ ಮಾಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚಿಸಿದ್ದ ಸಮಿತಿ ಹಲವು ಮಹತ್ವದ ಶಿಫಾರಸುಗಳನ್ನು ಮಾಡಿದೆ. ಕನಿಷ್ಠ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸರ್ಕಾರದ ಉದ್ಯೋಗಗಳಲ್ಲಿ ಶೇ. 25ರಷ್ಟು ಮೀಸಲಾತಿ ನೀಡಬೇಕು ಎಂದು ಸಮಿತಿ ಹೇಳಿದ್ದು, ಇದರಿಂದ ಕನ್ನಡ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳಿಗೆ ಉತ್ತೇಜನ ಸಿಗಲಿದೆ ಎಂದು ತಿಳಿಸಿದೆ. ವಿದ್ಯಾರ್ಥಿಗಳ…