ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – Kannada News | Sacred thread Row: Plan to Re exam For Students Says Minister Sudhakar
ಬೆಂಗಳೂರು, (ಏಪ್ರಿಲ್ 30): ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ (sacred thread) ತೆಗೆಸಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಈಗಾಗಲೇ ತಪಿಸ್ಥತರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ಇನ್ನು ಜನಿವಾರವನ್ನು ಒತ್ತಾಯ ಪೂರ್ವಕವಾಗಿ ಕತ್ತರಿಸಿದ್ದರಿಂದ ಸರಿಯಾಗಿ ಪರೀಕ್ಷೆ ಬರೆದಿಲ್ಲ ಎಂದು ವಿದ್ಯಾರ್ಥಿಗಳು ನೋವು ತೋಡಿಕೊಂಡಿದ್ದು, ಈ ಸಂಬಂಧ ಮಕ್ಕಳ ಭವಿಷ್ಯದ ಬಗ್ಗೆ ಪೋಷಕರು ಸಹ ಆತಂಕ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಬರೆಯಲು ಅವಕಾಶ ನೀಡಲು ಸರ್ಕಾರ ಚಿಂತನೆ…