ಸಿಎಂ ಸಿದ್ದರಾಮಯ್ಯ ಮನೇಲಿದ್ದಾಗ್ಲೇ ಕಂಪೌಂಡ್ ಮೇಲೆ ಬಿದ್ದ ಮರದ ಕೊಂಬೆಗಳು, ಕಬ್ಬಿಣದ ವಾಲ್‌ಗಳು! ತಪ್ಪಿದ ಅನಾಹುತ – Kannada News | Bengaluru Rain Fury: CM Siddaramaiah’s Residence Krishna compound Damaged; City Records Highest April Rain Since 2001
ಬೆಂಗಳೂರು, ಏಪ್ರಿಲ್ 30: ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಭಾರಿ ಮಳೆಯ ಅಬ್ಬರಕ್ಕೆ ಸಾಮಾನ್ಯ ಜನರು ಮಾತ್ರವಲ್ಲದೆ, ಮುಖ್ಯಮಂತ್ರಿಗಳ ಅಧಿಕೃತ ನಿವಾಸವೂ ತತ್ತರಿಸಿದೆ! ಸಿಎಂ ಸಿದ್ದರಾಮಯ್ಯ ಅವರ ಗೃಹ ಕಚೇರಿ ‘ಕೃಷ್ಣ’ ಕಾಂಪೌಂಡ್ ಮೇಲೆ ಮರದ ಕೊಂಬೆಗಳು ಮತ್ತು ಕಬ್ಬಿಣದ ವಾಲ್‌ಗಳು ಕುಸಿದು ಬಿದ್ದಿವೆ. ಮುಖ್ಯಮಂತ್ರಿಗಳು ಮನೆಯಲ್ಲಿದ್ದಾಗಲೇ ನಿವಾಸದ ಪಕ್ಕದ ಗೋಡೆ ಮೇಲೆ ಅಳವಡಿಸಲಾಗಿದ್ದ ಕಬ್ಬಿಣದ ವಾಲ್‌ಗಳು ಏಕಾಏಕಿ ಕುಸಿದು ಬಿದ್ದಿವೆ. ಭಾರಿ ಗಾಳಿ ಮಳೆಗೆ ಮರದ ಬೃಹತ್ ಕೊಂಬೆಗಳು ಕಾಂಪೌಂಡ್ ಮೇಲೆ ಉರುಳಿದ್ದು, ಅದೃಷ್ಟವಶಾತ್ ಯಾವುದೇ…