Category Archives: Blog

Your blog category

ಬೆಂಗಳೂರು ಮೆಟ್ರೋ ಪಿಂಕ್ ಲೈನ್ ಆರಂಭಕ್ಕೂ ಮುನ್ನವೇ ಸಂಘರ್ಷ: ಬೀಳಕಹಳ್ಳಿ ಹೆಸರಿಗಾಗಿ ಸ್ಥಳೀಯರ ಪಟ್ಟು – Kannada News | Bengaluru Pink Line Metro Controversy: Residents Protest Against Naming Bilekahalli Station as IIMB

ನಮ್ಮ ಮೆಟ್ರೋ ಪಿಂಕ್ ಲೈನ್ ಐಐಎಂಬಿ ಸ್ಟೇಷನ್Image Credit source: tv9

ಬೆಂಗಳೂರು, ಏಪ್ರಿಲ್ 30: ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಪಿಂಕ್ ಲೈನ್ (Pink Line Metro) ಮಾರ್ಗವು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲು ಸಿದ್ಧವಾಗುತ್ತಿದೆ. ಆದರೆ, ಈ ಮಾರ್ಗದ ನಿಲ್ದಾಣವೊಂದಕ್ಕೆ ನಾಮಕರಣ ಮಾಡುವ ವಿಚಾರ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬೀಳಕಹಳ್ಳಿ ಏರಿಯಾದಲ್ಲಿರುವ ಮೆಟ್ರೋ ನಿಲ್ದಾಣಕ್ಕೆ ಬಿಎಂಆರ್‌ಸಿಎಲ್ (BMRCL) ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIMB) ಎಂದು ಹೆಸರಿಟ್ಟಿರುವುದು ಸ್ಥಳೀಯ ನಿವಾಸಿಗಳ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

ಸ್ಥಳೀಯತೆಯ ಅಸ್ಮಿತೆಗಾಗಿ ಹೋರಾಟ

ಬೀಳಕಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಮೆಟ್ರೋ ನಿಲ್ದಾಣವಿದ್ದರೂ, ಐಐಎಂಬಿ (IIMB) ಸಂಸ್ಥೆಯ ಹೆಸರನ್ನು ನಿಲ್ದಾಣಕ್ಕೆ ಇಟ್ಟಿರುವುದು ಸ್ಥಳೀಯರ ವಿರೋಧಕ್ಕೆ ಕಾರಣ. ನಮ್ಮ ಏರಿಯಾದ ಮೂಲ ಹೆಸರು ಬಿಳೇಕಹಳ್ಳಿ ಎಂದಿರುವಾಗ, ಐಐಎಂಬಿ ಹೆಸರೇಕೆ? ಎಂದು ನಿವಾಸಿಗಳು ಪ್ರಶ್ನಿಸುತ್ತಿದ್ದಾರೆ. ಸ್ಥಳೀಯತೆಗೆ ಮೊದಲ ಆದ್ಯತೆ ನೀಡಬೇಕು ಮತ್ತು ನಿಲ್ದಾಣದ ಹೆಸರನ್ನು ತಕ್ಷಣವೇ ‘ಬೀಳಕಹಳ್ಳಿ ಮೆಟ್ರೋ ನಿಲ್ದಾಣ’ ಎಂದು ಬದಲಾಯಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಹೆಸರು ಬದಲಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ನಿವಾಸಿಗಳಾದ ನಾಗರಾಜ್ ಮತ್ತು ನಾಗಭೂಷಣ್ ಎಚ್ಚರಿಕೆ ನೀಡಿದ್ದಾರೆ.

ಮೇ ತಿಂಗಳಲ್ಲಿ ಆರು ನಿಲ್ದಾಣಗಳು ಓಪನ್?

ಕಾಳೇನ ಅಗ್ರಹಾರದಿಂದ ನಾಗವಾರದವರೆಗೆ ಸಂಪರ್ಕ ಕಲ್ಪಿಸುವ 21.25 ಕಿ.ಮೀ ವ್ಯಾಪ್ತಿಯ ಈ ಪಿಂಕ್ ಲೈನ್ ಮಾರ್ಗದಲ್ಲಿ ಒಟ್ಟು 18 ನಿಲ್ದಾಣಗಳಿವೆ. ಇದರಲ್ಲಿ 6 ಎಲಿವೇಟೆಡ್ ಮತ್ತು 12 ಅಂಡರ್​​ಗ್ರೌಂಡ್ ನಿಲ್ದಾಣಗಳಿವೆ. ಬರುವ ಮೇ ತಿಂಗಳಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 6 ಎಲಿವೇಟೆಡ್ ಮೆಟ್ರೋ ನಿಲ್ದಾಣಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ಬಿಎಂಆರ್‌ಸಿಎಲ್ ಸಿದ್ಧತೆ ಮಾಡಿಕೊಂಡಿದೆ. ಉಳಿದ 13.76 ಕಿ.ಮೀ ಭೂಗತ ಮಾರ್ಗದ ಕಾಮಗಾರಿ ಪ್ರಗತಿಯಲ್ಲಿದ್ದು, ಈ ವರ್ಷದ ಅಂತ್ಯಕ್ಕೆ ಪೂರ್ಣ ಮಾರ್ಗ ಉದ್ಘಾಟನೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್: ಪಿಂಕ್ ಲೈನ್ ಹಳಿ ಮೇಲೆ ಆರ್‌ಡಿಎಸ್‌ಒ ಪರೀಕ್ಷೆ ಆರಂಭ!

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಶನಿ ಕಾಟ ನಿವಾರಣೆಗೆ ಅತ್ಯಂತ ಸರಳ ಮಾರ್ಗ ಯಾವುದು? ಇಲ್ಲಿದೆ ಮಾಹಿತಿ – Kannada News | Simple Daily Practice to Overcome Shani Dosha

ಜ್ಯೋತಿಷ್ಯದಲ್ಲಿ ಶನಿ ಗ್ರಹಕ್ಕೆ ಮಹತ್ವದ ಸ್ಥಾನವಿದೆ. ಇದನ್ನು ಕರ್ಮ ಫಲದಾತ ಎಂದು ಪರಿಗಣಿಸಲಾಗುತ್ತದೆ. ಸಾಡೆ ಸಾತಿ, ಅರ್ಧಾಷ್ಟಮ ಶನಿ, ಪಂಚಮ ಶನಿ, ಅಷ್ಟಮ ಶನಿ ಮುಂತಾದ ಅವಧಿಗಳಲ್ಲಿ ಶನಿ ಪ್ರಭಾವ ಹೆಚ್ಚಾಗಿ, ಕಷ್ಟಗಳು ಎದುರಾಗಬಹುದು. ಈ ಸಮಸ್ಯೆಗಳಿಂದ ಹೊರಬರಲು ಸಾಮಾನ್ಯವಾಗಿ ಎಳ್ಳು ದಾನ, ಎಳ್ಳೆಣ್ಣೆ ದೀಪ, ಕಪ್ಪು ವಸ್ತ್ರಗಳಂತಹ ಪರಿಹಾರಗಳನ್ನು ಅನುಸರಿಸಲಾಗುತ್ತದೆ. ಆದರೆ ಡಾ. ಬಸವರಾಜ ಗುರೂಜಿ ಯಾವುದೇ ಖರ್ಚಿಲ್ಲದೆ, ಅತ್ಯಂತ ಸರಳವಾದ ಮತ್ತು ಪರಿಣಾಮಕಾರಿ ವಿಧಾನವನ್ನು ವಿವರಿಸಿದ್ದಾರೆ. ಪ್ರತಿದಿನ ಬೆಳಿಗ್ಗೆ ಅಥವಾ ಸೂರ್ಯಾಸ್ತದ ಸಮಯದಲ್ಲಿ, ಚಪ್ಪಲಿ ಹಾಕದೆ, ಪೂರ್ವ ಅಥವಾ ಉತ್ತರ ದಿಕ್ಕಿಗೆ ಮುಖ ಮಾಡಿ ಸುಮಾರು ಅರ್ಧ ಘಂಟೆ ಕಾಲ ನಡೆಯುವ ಅಭ್ಯಾಸವು ಶನಿಯ ಅಶುಭ ಪ್ರಭಾವವನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗಿದೆ. ಇದರಿಂದ ವ್ಯಾಪಾರ ವೃದ್ಧಿ, ಉತ್ತಮ ಆರೋಗ್ಯ, ಅಪವಾದಗಳಿಂದ ಮುಕ್ತಿ, ಕಾನೂನು ವಿಷಯಗಳಲ್ಲಿ ಜಯ, ರಾಜಕೀಯ ಪ್ರಗತಿ ಹಾಗೂ ಕುಟುಂಬದಲ್ಲಿ ಸಾಮರಸ್ಯ ಹೆಚ್ಚಲಿದೆ ಎಂದು ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Horoscope Today:ಇಂದು ಈ ರಾಶಿಯವರಿಗೆ ವೃತ್ತಿಯಲ್ಲಿ ಜಾಗೃತಿ ಅಗತ್ಯ

ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ಶುಕ್ಲ ಪಕ್ಷ, ವಸಂತ ಋತು, ಚತುರ್ದಶಿ, ಚಿತ್ತಾ ನಕ್ಷತ್ರ, ವಜ್ರ ಯೋಗ, ಗರ್ಜಕರಣದಿಂದ ಕೂಡಿದ ಏಪ್ರಿಲ್​​ 30, 2026ರ ಈ ದಿನದ ಗ್ರಹಗಳ ಸಂಚಾರವು ರಾಶಿಗಳ ಮೇಲೆ ಮಹತ್ವದ ಪರಿಣಾಮ ಬೀರಲಿದೆ. ಇಂದು ರವಿ ಮೇಷ ರಾಶಿಯಲ್ಲೂ, ಚಂದ್ರ ಕನ್ಯಾ ರಾಶಿಯ ಚಿತ್ತಾ ನಕ್ಷತ್ರದಲ್ಲೂ ಸಂಚರಿಸಲಿದ್ದಾರೆ. ಬುಧ ಗ್ರಹವು ಮೀನ ರಾಶಿಯಿಂದ ಬೆಳಗಿನ ಜಾವ 6:55ಕ್ಕೆ ಮೇಷ ರಾಶಿಗೆ ಪ್ರವೇಶಿಸಿ ಬುಧಾದಿತ್ಯ ಯೋಗವನ್ನು ಸೃಷ್ಟಿಸಲಿದೆ. ಈ ವಿಶೇಷ ಗ್ರಹಗತಿಗಳು ಪ್ರತಿ ರಾಶಿಯವರ ವೃತ್ತಿ, ಹಣಕಾಸು, ಸಂಬಂಧಗಳು ಮತ್ತು ಆರೋಗ್ಯದ ಮೇಲೆ ತಮ್ಮ ಪ್ರಭಾವವನ್ನು ಬೀರಲಿವೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ನಿರ್ದಿಷ್ಟ ಸಲಹೆಗಳು, ಅದೃಷ್ಟದ ಬಣ್ಣ, ದಿಕ್ಕು ಮತ್ತು ಮಂತ್ರಗಳನ್ನು ಸಹ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಅಪರೂಪದ ಉಡುಗೊರೆ ಸಿಗಲಿದೆ – Kannada News | Horoscope April 30 Thursday 2026; Dina Rashi Bhavishya Today, Checkout the details here

ಮೇಷ ರಾಶಿ:

ನೀವು ಯಾವುದನ್ನು ಆರಿಸಿಕೊಳ್ಳುವಿರಿ ಎನ್ನುವುದು ಮುಖ್ಯವಾಗಲಿದೆ. ಅಜಾಗರೂಕತೆಯಿಂದ ಹಣವು ಹೋಗುವುದು. ಸಂಗಾತಿಯ ಜೊತೆ ಕಾಲವನ್ನು ಕಳೆದರೂ ಸಂತೋಷವಾಗಿ ಇಡಲಾಗದು. ತಂದೆಯ ಕಡೆಯಿಂದ ನಿಮಗೆ ಯಾವ ಸಹಾಯವೂ ಸಿಗದೇಹೋಗಬಹುದು. ಹಣಕಾಸಿನ ವಿಚಾರಕ್ಕೆ ಸಹೋದರರ ನಡುವೆ ಕಲಹ. ಸಾಮರಸ್ಯದ ಅಭಾವವು ದ್ವೇಷಕ್ಕೆ ಕಾರಣವಾಗಬಹುದು. ಆಪ್ತವಾದ ವಿಚಾರಗಳ ಜೊತೆ ಹೆಚ್ಚು ಚರ್ಚೆ ಮಾಡುವಿರಿ.

ವೃಷಭ ರಾಶಿ:

ನಿಮಗೆ ಸತ್ಯವನ್ನೇ ನಂಬಿ ಬದುಕುವವರು ಎಂದು ಇದುವರೆಗೆ ತಿಳಿದದ್ದು ಸುಳ್ಳಾಗುವುದು. ಮಾತಿಗೆ ಬೆಲೆಯು ಕಡಿಮೆಯಾದೀತು. ಯಾವುದೋ ಸಣ್ಣ ಜವಾಬ್ದಾರಿಯನ್ನು ಕೊಟ್ಟು ನಿಮ್ಮನ್ನು ಸುಮ್ಮನಿರಿಸುವರು. ನಿಮ್ಮನ್ನು ನೀವು ಆದ್ಯಂತವಾಗಿ ನೋಡಿಕೊಳ್ಳಿ. ಇಂದು ಮನಸ್ಸನ್ನು ಏಕಾಗ್ರ ಮಾಡುವುದು ಕಷ್ಟವಾದೀತು. ತಾಯಿಗೆ ಪ್ರಿಯವಾದುದನ್ನು ಮಾಡುವಿರಿ. ನಿಮ್ಮ ಹೊಣೆಗಾರಿಕೆ ಕಡಿಮೆ ಆದಂತೆ ಅನ್ನಿಸುವುದು. ಆಪ್ತರನ್ನು ನೀವು ಕಳೆದುಕೊಳ್ಳುವ ಸಾಧ್ಯತೆ ಇದೆ.

ಮಿಥುನ ರಾಶಿ:

ಅನಿರೀಕ್ಷಿತವಾಗಿ ಹೆಸರಾಂತ ವ್ಯಕ್ತಿಗಳ ಸಹವಾಸವು ನಿಮಗೆ ಸಿಗಲಿದೆ. ಮನೆಯ ಕೆಲಸವು ಬಹಳ ಆಯಾಸವನ್ನು ಕೊಡಬಹುದು. ಒತ್ತಡವನ್ನು ನಿಭಾಯಿಸುವ ಕಲೆ ನಿಮಗೆ ಸಿದ್ಧಿಸಿದ್ದು ಅದನ್ನು ಚೆನ್ನಾಗಿ ನಿರ್ವಹಿಸಬಲ್ಲಿರಿ. ದೊಡ್ಡ ಅಪಾಯದಿಂದ ನೀವು ಹೊರಬರಲಿದ್ದೀರಿ. ಎಂದೋ‌ ಮಾಡಿದ ಇಂದು ನಿಮ್ಮ ಆಪತ್ತಿಗೆ ಬರಲಿದೆ. ವ್ಯಾಪಾರದಲ್ಲಿ ನಿಮ್ಮ ಜಾಣ್ಮೆಯನ್ನು ತೋರಿಸುವಿರಿ. ಅಹಂಕಾರದ ಮಾತುಗಳು ಇತರರಿಗೆ ಹಿಂಸೆಯಾದೀತು. ಏಕಾಗ್ರತೆಯನ್ನು ಬೆಳೆಸಿಕೊಳ್ಳಲು ಅಭ್ಯಾಸ ಮಾಡುವಿರಿ.

ಕರ್ಕಾಟಕ ರಾಶಿ:

ನೀವಿಂದು ನಿಮ್ಮ ಮನಸ್ಸಿಗೆ ಹಿಡಿಸಿದವರನ್ನು ಪ್ರೀತಿಸಲು ಆರಂಭಿಸುವಿರಿ. ಅವಸರದಲ್ಲಿ ಅನಾಹುತವಾದೀತು. ಸಮಾರಂಭದಲ್ಲಿ ದೂರದ ಬಂಧುಗಳ ಸಮಾಗಮ. ನಿಮ್ಮ ಜವಾಬ್ದಾರಿಗಳು ಹೆಚ್ಚಾಗಿ ಅದನ್ನು ಕಳೆದುಕೊಳ್ಳುವ ಆಲೋಚ‌ನೆ‌ಮಾಡುವಿರಿ. ನಿಮ್ಮ ಸಹಾಯ ಪಡೆದವರಿಂದ ಪ್ರತ್ಯುಪಕಾರವಾಗಲಿದೆ. ಉಯಾರದೋ ವೈಯಕ್ತಿಕ ವಿಚಾರಗಳು ನಿಮ್ಮ ದಾಂಪತ್ಯದಲ್ಲಿ ಒಡಕು ತರಬಹುದು. ಅತಿಥಿಗಳ ಆಗಮನದಿಂದ ನಿಮಗೆ ಸಂತೋಷವಾಗಲಿದೆ.

ಸಿಂಹ ರಾಶಿ:

ನಿಮ್ಮ ಮಾತಿನಿಂದ ಮನೆಯವರಲ್ಲಿ ಆತಂಕದ ವಾತಾವರಣವೂ ಸೃಷ್ಟಿಯಾಗಲಿದೆ‌. ಧಾರ್ಮಿಕ ಮುಖಂಡರ ಜೊತೆ ಕಲಹ ಮಾಡಿಕೊಳ್ಳುವಿರಿ. ಮನೆಯಿಂದ ದೂರವಿರುವ ಆಲೋಚನೆಯನ್ನು ಮಾಡುವಿರಿ. ಭೂಮಿಯ ವ್ಯವಹಾರದಲ್ಲಿ ಅಲ್ಪಲಾಭವು ಆಗಲಿದೆ. ಮನೆಯನ್ನು ಇಂದು ಬದಲಾಯಿಸುವಿರಿ. ಪ್ರಾಮಾಣಿಕತೆಗೆ ಸಿಗುವ ಗೌರವ ಇಲ್ಲವೆನಿಸುವುದು. ಹೂಡಿಕೆಗೆ ನಿಮ್ಮದಾದ ತಂತ್ರವನ್ನು ಬಳಸುವಿರಿ. ಉದ್ಯೋಗದ ಹುಡುಕಾಟಕ್ಕೆ ಓಡಾಡುವುದು ನಿಮಗೆ ಕಷ್ಟವಾದೀತು.

ಕನ್ಯಾ ರಾಶಿ:

ಪಾಲುದಾರಿಕೆಯಲ್ಲಿ ಕೆಲವನ್ನು ಮುಚ್ಚಿಡುವಿರಿ. ನಿಮ್ಮ ಗೌರವಕ್ಕೆ ಸಂಗಾತಿಯಿಂದ ತೊಂದರೆಯಾಗುವುದು. ಆಂತರಿಕ ಕಲಹವು ಬಹಿರಂಗವಾಗಲಿದೆ. ವ್ಯಕ್ತಿಗಳನ್ನು ದೂರುವ ಸ್ವಭಾವವನ್ನು ಬಿಟ್ಟುಬಿಡಿ. ಆಂತರಿಕ ಕಲಹವು ಇಂದು ಜಗಜ್ಜಾಹಿರವು ಆಗಬಹುದು. ಯಾರನ್ನೋ ನಂಬಿ ನೀವು ಇರುವ ಸಣ್ಣ ಕೆಲಸವನ್ನೂ ಬಿಡುವಿರಿ. ಯಾರನ್ನೂ ದೂರದಿಂದಲೇ ನಿರ್ಣಯಿಸುವುದು ಬೇಡ. ಹಿತಶತ್ರುಗಳ ಪಿತೂರಿಯು ನಿಮ್ಮ ಶ್ರೇಯಸ್ಸಿಗೆ ತೊಂದರೆಯನ್ನು ಮಾಡೀತು.

ತುಲಾ ರಾಶಿ:

ನಿಮ್ಮೊಳಗೆ ಭವಿಷ್ಯದ ಹತ್ತಾರು ದ್ವಂದ್ವಗಳು ಇರಲಿವೆ. ಆಯ್ಕೆ ಮಾಡಿಕೊಳ್ಳುವುದು ಕಷ್ಟವಾದೀತು. ಸಾಲ ಕೊಡುವಾಗ ಸ್ವಪ್ರತಿಷ್ಠೆಯನ್ನು ತೋರಿಸುವಿರಿ.‌ ಹಿರಿಯರ, ಅನುಭವಿಗಳ ಮಾರ್ಗದರ್ಶನವನ್ನು ಹೆಚ್ಚು ಪಡೆದಷ್ಟು ಉತ್ತಮವೇ. ಶ್ರಮದ ಕೆಲಸವು ಆಯಾಸವನ್ನು ತರಲಿದೆ‌. ಆಸೆಯಿಂದ ದುಃಖಿಸ ಏಕಾಗುವುದು. ಇಂದು ಕ್ಲಿಷ್ಟಕರವಾದ ಸನ್ನಿವೇಶದಲ್ಲಿ ಇರುವಿರಿ. ತಪ್ಪಿಸಿಕೊಳ್ಳಲು ಪ್ರಯತ್ನಿಸಿದರೂ ಕಷ್ಟವಾದೀತು. ದ್ವಿಚಕ್ರದ ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ.

ವೃಶ್ಚಿಕ ರಾಶಿ:

ನ್ಯಾಯಾಲಯದ ತೀರ್ಪಿನಿಂದ ಅದರ ಬಗ್ಗೆ ಗೌರವ ಕಡಿಮೆಯಾಗಬಹುದು. ತನ್ನವರನ್ನು ಕಳೆದುಕೊಳ್ಳುವ ಹೆದರಿಕೆ ಉಂಟಾಗಲಿದೆ. ಎಲ್ಲ ವಿಚಾರದಲ್ಲಿಯೂ ಒಂದಿಲ್ಲೊಂದು ಕಿರಿಕಿರಿ ಕಾಣಿಸೀತು. ಸಮಾಧಾನದಿಂದ ಆಲೋಚಿಸಲು ನಿಮಗೆ ಬಾರದು. ಯಾರನ್ನಾದರೂ ಹೇಳಬಾರದ್ದನ್ನು ಬಾಯ್ತಪ್ಪಿನಿಂದ ಹೇಳಿ ಬೇಸರ ಮಾಡಿಸುವಿರಿ. ಸ್ನೇಹಿತರಿಗಾಗಿ ಮಾಡಿದ ಸಾಲವು ಕೊನೆಗೆ ನಿಮಗೇ ಸುತ್ತಿಕೊಳ್ಳುವುದು. ವಹಿಸಿಕೊಂಡ ಕಾರ್ಯವನ್ನು ಪೂರ್ಣ ಮಾಡಲು ಸಹೋದ್ಯೋಗಿಗಳ ಸಹಾಯವನ್ನು ಪಡೆಯುವಿರಿ.

ಧನು ರಾಶಿ:

ಜನರನ್ನು ನಿರ್ವಹಿಸುವ ಕಾರ್ಯಕ್ಕೆ ನಿಮಗೆ ಪ್ರಶಂಸೆ ಸಿಗಲಿದೆ. ಆಸ್ತಿಯ ಖರೀದಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಸರಿಯಾಗಿ ಪಡೆಯಿರಿ. ಮುಖಂಡರು ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಬೇಕು. ಉದ್ಯಮಿಗಳ ಜೊತೆ ಇಂದು ಕಾಲ ಕಳೆಯುವಿರಿ. ಯಾವುದಾದರೂ ಸುಂದರ ಪ್ರದೇಶಕ್ಕೆ ಹೋಗಬೇಕಾಗಿಬರಬಹುದು. ನಿರಂತರ ಶ್ರಮದ ಫಲವನ್ನು ನೀವಿಂದು ಪಡೆಯುವಿರಿ. ಸಿಟ್ಟಿನ ಸ್ವಭಾವದಿಂದ ಮನೆಯಲ್ಲಿ ಅಸಮಾಧಾನ ಇರುವುದು. ಯಾರ ಮಾತನ್ನೂ ಗಂಭೀರವಾಗಿ ಪರಿಗಣಿಸಲಾರಿರಿ.

ಮಕರ ರಾಶಿ:

ಭೂಮಿಯ ವಿಕ್ರಯದಲ್ಲಿ ನಷ್ಟವನ್ನು ಅನುಭವಿಸಬೇಕಾಗಬಹುದು. ಸರ್ಕಾರಿ ಉದ್ಯೋಗದಲ್ಲಿ ವಿಶೇಷ ಭತ್ಯೆಯು ಸಿಗಬಹುದಾಗಿದೆ. ಮನೆಯ ಸದಸ್ಯರ ಜೊತೆ ಹೆಚ್ಚು ಸಮಯ ಕಾಲಹರಣ ಮಾಡುವಿರಿ. ನಿಮ್ಮ ಕಾರ್ಯದಲ್ಲಿ ಬರುವ ತೊಂದರೆಯನ್ನು ದೂರಮಾಡಲು ಶಕ್ತರಾಗಿದ್ದೀರಿ. ಹಿತಶತ್ರುಗಳ ಬಾಧೆಯು ಕಾಣಿಸಿಕೊಳ್ಳುವುದು. ಯಾರಾದರೂ ಚುಚ್ಚಿ ಮಾತನಾಡಬಹುದು. ಸಂಸ್ಥೆಯ ಜವಾಬ್ದಾರಿಯನ್ನು ಹೊತ್ತು ಅದನ್ನು ನಿಮ್ಮ ಹಿಡಿತದಲ್ಲಿ ಇರುವಂತೆ ನೋಡಿಕೊಳ್ಳಿ.

ಕುಂಭ ರಾಶಿ:

ನಿಮ್ಮದೇ ಯೋಜನೆಗಳು ನಿಮಗಿದ್ದು ಅದರ ಕುರಿತು ಆಲೋಚನೆಯನ್ನು ಮಾಡುವಿರಿ. ವಾಹನ ಸಂಚಾರದಿಂದ ತೊಂದರೆ. ಆತುರದಿಂದ ಎಲ್ಲಿರಿಗೂ ಹೋಗುವುದು ಬೇಡ. ಕಲಾವಿದರು ಉತ್ತಮವಾದ ಅವಕಾಶವನ್ನು ಪಡೆಯಲಿದ್ದಾರೆ. ಮಾತು ವಿವಾದವಾಗಿ ದ್ವೇಷದಲ್ಲಿ ಕೊನೆಗೊಳ್ಳಬಹುದು. ಕಾರ್ಯದಲ್ಲಿ ಸಾವಧಾನತೆ ಇರಲಿದೆ. ಸ್ನೇಹವು ದೂರ ಮಾಡಿಕೊಳ್ಳುವಿರಿ. ಹೊಸ ಕೆಲಸಗಳ ಕಡೆ ಗಮನ ಇರುವುದು. ಅಹಂಕಾರವು ಕಡಿಮೆ ಮಾಡಿಕೊಳ್ಳುವುದು ಉತ್ತಮ.

ಮೀನ ರಾಶಿ:

ತಪ್ಪುಗಳ ನಡೆಯದಿದ್ದಾಗ ಅದಕ್ಕೆ ಹೆದರಬೇಕಾದ ಅವಶ್ಯಕತೆಯಿರದು. ನಿಮ್ಮ ಕಾರ್ಯಗಳು ಎಂದಿನಂತೆ ಅಬಾಧಿತವಾಗಿ ನಡೆಯಲಿದೆ. ವಿದ್ಯಾರ್ಥಿಗಳ ಅಭ್ಯಾಸಕ್ಕೆ ಅನುಕೂಲತೆ ಇರಲಿದೆ. ಆಪ್ತರ ಭೇಟಿಯಾಗಬಹುದು. ಹಲವು ದಿನಗಳಿಂದ ಹೇಳದೇ ಉಳಿದುಕೊಂಡ ವಿಷಯಗಳನ್ನು ಚರ್ಚಿಸುವಿರಿ. ನೌಕರರಿಗೆ ನೀವು ಕೊಡುವ ವ್ಯವಸ್ಥೆಯಿಂದ ಸಂತೋಷವಾಗಲಿದೆ. ಸೋತರೂ ಗೆದ್ದವರ ಜೊತೆ ನಿಮ್ಮ ಪ್ರತಿಷ್ಠೆಯನ್ನು ತೋರಿಸುವಿರಿ.

ಇಂದಿನ ಪಂಚಾಂಗ:

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ವೈಶಾಖ, ಸೌರ ಮಾಸ : ಮೇಷ, ಮಹಾನಕ್ಷತ್ರ : ಭರಣೀ, ವಾರ : ಗುರು, ಪಕ್ಷ : ಶುಕ್ಲ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಚಿತ್ರಾ, ಯೋಗ : ವಜ್ರ, ಕರಣ : ವಣಿಜ, ಸೂರ್ಯೋದಯ – 06 – 03 am, ಸೂರ್ಯಾಸ್ತ – 06 – 39 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 13:56 – 15:31, ಯಮಗಂಡ ಕಾಲ 06:03 – 07:38, ಗುಳಿಕ ಕಾಲ 09:13 – 10:47

-ಲೋಹಿತ ಹೆಬ್ಬಾರ್ – 8762924271 (what’s app only)

Source link

MI vs SRH: ಅತ್ಯಧಿಕ ಮೊತ್ತ ಕಲೆಹಾಕಿಯೂ ಸೋತ ಮುಂಬೈ ಇಂಡಿಯನ್ಸ್ – Kannada News | IPL 2026: SRH Chases Record 244 vs MI in Thriller; Mumbai Suffers 6th Loss

ಐಪಿಎಲ್ 2026 ರ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ಈ ಅವೃತ್ತಿಯ ಅತ್ಯಧಿಕ ಮೊತ್ತ ದಾಖಲಿಸಿಯೂ ಹೀನಾಯವಾಗಿ ಸೋಲುಂಡಿತು. ಇದು ಈ ಆವೃತ್ತಿಯಲ್ಲಿ ಮುಂಬೈ ತಂಡದ 6ನೇ ಸೋಲಾದರೆ, ಇತ್ತ ಸನ್‌ರೈಸರ್ಸ್ 6ನೇ ಗೆಲುವು ದಾಖಲಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್ 244 ರನ್​ಗಳ ಬೃಹತ್ ಮೊತ್ತ ದಾಖಲಿಸಿತು. ಈ ಗುರಿ ಬೆನ್ನಟ್ಟಿದ ಸನ್‌ರೈಸರ್ಸ್ ಇನ್ನು 8 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು ಜಯ ದಾಖಲಿಸಿತು. 244 ರನ್ ಗುರಿ ಬೆನ್ನಟ್ಟುವ ಮೂಲಕ ಸನ್‌ರೈಸರ್ಸ್, ಮುಂಬೈ ವಿರುದ್ಧ ಅತಿದೊಡ್ಡ ಗುರಿ ಬೆನ್ನಟ್ಟಿದ ತಂಡವೆಂಬ ದಾಖಲೆಯನ್ನು ಬರೆಯಿತು.

Source link

ಬೆಂಗಳೂರು ಮಳೆಗೆ ಮತ್ತೊಂದು ಸಾವು: ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು, ಒಟ್ಟು 9 ಬಲಿ! – Kannada News | Bengaluru and Kolar Rain Deaths: BESCOM Negligence Blamed After Electrocution Tragedies

ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು

ಬೆಂಗಳೂರು, ಏ.29: ರಾಜಧಾನಿಯಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಿದ್ದು, ಇಂದು ಸಂಜೆ ಸಂಭವಿಸಿದ ಮಳೆಯ ಅವಾಂತರಗಳಿಗೆ ನಗರದಲ್ಲಿ ಮತ್ತೊಂದು ಬಲಿಯಾಗಿದೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ 7 ಜನರು ಸಾವನ್ನಪ್ಪಿದ್ದಾರೆ. ಇದರ ನಂತರ ಯಾರಬ್ ನಗರದಲ್ಲಿ ಮಳೆಯಲ್ಲಿ ಬೈಕ್ ಪಾರ್ಕ್ ಮಾಡುತ್ತಿದ್ದ ಸೈಯದ್ ಸೂಫಿಯಾನ್ ಎಂಬ ವಿದ್ಯಾರ್ಥಿ ವಿದ್ಯುತ್ ಶಾಕ್‍ಗೆ ಬಲಿಯಾಗಿದ್ದಾನೆ. ಇದೀಗ ಒಟ್ಟು ಒಂಬತ್ತು ಸಾವು ಸಂಭವಿಸಿದೆ.

ಜೆ.ಪಿ. ನಗರದ ಮಿನಿ ಫಾರೆಸ್ಟ್, 15ನೇ ಕ್ರಾಸ್ ಬಳಿ ಈ ದುರ್ಘಟನೆ ನಡೆದಿದೆ. ಸುಮಾರು 30-35 ವರ್ಷ ವಯಸ್ಸಿನ ರಘು ಎಂಬುವವರು ಮಳೆಯ ನಡುವೆ ಸಂಚರಿಸುತ್ತಿದ್ದಾಗ, ರಸ್ತೆಯಲ್ಲಿದ್ದ ವಿದ್ಯುತ್ ಕಂಬದ ಬಳಿ ಹರಿದುಬಿದ್ದಿದ್ದ ವಿದ್ಯುತ್ ತಂತಿ (ವೈರ್) ಟಚ್ ಆಗಿದ್ದರಿಂದ ತೀವ್ರವಾಗಿ ಶಾಕ್ ತಗುಲಿದೆ. ವಿದ್ಯುತ್ ಪ್ರವಾಹದ ತೀವ್ರತೆಗೆ ರಘು ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಜೆ.ಪಿ. ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸುವ ಪ್ರಕ್ರಿಯೆ ನಡೆಯುತ್ತಿದೆ.

ಇದನ್ನೂ ಓದಿ: ಬೆಂಗಳೂರು ಮಳೆಗೆ ಮತ್ತೊಂದು ಬಲಿ: ಬೈಕ್ ಪಾರ್ಕ್ ಮಾಡುವಾಗ ವಿದ್ಯುತ್ ತಗುಲಿ ಪಿಯುಸಿ ವಿದ್ಯಾರ್ಥಿ ಸಾವು!

ಕೋಲಾರ: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಅಮಾಯಕ ಬಲಿ:

ಇದೊಂದು ಪ್ರತ್ಯೇಕ ಘಟನೆಯಾಗಿದ್ದು, ಜಿಲ್ಲೆಯಲ್ಲಿ ಬೆಸ್ಕಾಂ (BESCOM) ಅಧಿಕಾರಿಗಳ ಮಿತಿಮೀರಿದ ನಿರ್ಲಕ್ಷ್ಯದಿಂದಾಗಿ 55 ವರ್ಷದ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೋಲಾರ ತಾಲ್ಲೂಕಿನ ಕೋಡಿಕಣ್ಣೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮಸ್ಥರು ವಿದ್ಯುತ್ ಇಲಾಖೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಡಿಕಣ್ಣೂರು ಗ್ರಾಮದ ನಿವಾಸಿ ಪ್ರಭು (55) ಅವರು ಗ್ರಾಮದ ಅಶ್ವಥಕಟ್ಟೆಯ ಮೇಲೆ ಕುಳಿತು ವಿಶ್ರಮಿಸುತ್ತಿದ್ದರು. ಈ ವೇಳೆ ಏಕಾಏಕಿ ಮೇಲಿದ್ದ ವಿದ್ಯುತ್ ತಂತಿಯು ತುಂಡಾಗಿ ಅವರ ಮೇಲೆ ಬಿದ್ದಿದೆ. ವಿದ್ಯುತ್ ಪ್ರವಾಹದ ತೀವ್ರತೆಗೆ ಪ್ರಭು ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಹಳೆಯದಾದ ವಿದ್ಯುತ್ ತಂತಿಗಳನ್ನು ಬದಲಾಯಿಸದ ಬೆಸ್ಕಾಂ ಅಧಿಕಾರಿಗಳ ಅಜಾಗರೂಕತೆಯೇ ಈ ಸಾವಿಗೆ ನೇರ ಕಾರಣ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ. ಮೃತ ಪ್ರಭು ಅವರ ಕುಟುಂಬಕ್ಕೆ ಸರ್ಕಾರ ಮತ್ತು ಬೆಸ್ಕಾಂ ತಕ್ಷಣವೇ ದೊಡ್ಡ ಮೊತ್ತದ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿವೇಕಾನಂದ ಮೆಟ್ರೋ ನಿಲ್ದಾಣದ ಬಳಿ ಗೋಡೆ ಕುಸಿತ; 18 ವರ್ಷದ ವಿದ್ಯಾರ್ಥಿಗೆ ಗಂಭೀರ ಗಾಯ!

ನಗರದ ಮೆಟ್ರೋ ನಿಲ್ದಾಣದ ಬಳಿಯೇ ಮತ್ತೊಂದು ಅಪಾಯಕಾರಿ ಘಟನೆ ಸಂಭವಿಸಿದೆ. ವಿವೇಕಾನಂದ ಮೆಟ್ರೋ ನಿಲ್ದಾಣದ ಸಮೀಪ ರಕ್ಷಣಾ ಇಲಾಖೆಗೆ (Defence Department) ಸೇರಿದ ಜಾಗದ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದ್ದು, ಹದಿಹರೆಯದ ವಿದ್ಯಾರ್ಥಿಯೊಬ್ಬ ದುರಂತಕ್ಕೆ ಸಿಲುಕಿದ್ದಾನೆ. ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯ ಹಿನ್ನೆಲೆಯಲ್ಲಿ ವಿವೇಕಾನಂದ ಮೆಟ್ರೋ ನಿಲ್ದಾಣದ ಬಳಿ ಇದ್ದ ಗೋಡೆಯು ಏಕಾಏಕಿ ಕುಸಿದಿದೆ. ಈ ಸಂದರ್ಭದಲ್ಲಿ ಅಲ್ಲಿ ಸಂಚರಿಸುತ್ತಿದ್ದ 18 ವರ್ಷದ ವಿದ್ಯಾರ್ಥಿ ಜೋಸುವಾ ಎಂಬಾತನ ಮೇಲೆ ಗೋಡೆಯ ಭಾಗಗಳು ಬಿದ್ದಿವೆ. ಘಟನೆಯಲ್ಲಿ ಜೋಸುವಾಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ತಕ್ಷಣವೇ ಸ್ಥಳೀಯರು ಆತನನ್ನು ರಕ್ಷಿಸಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಜೋಸುವಾಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮಳೆಯಿಂದಾಗಿ ನಗರದ ಹಲವು ಹಳೆಯ ಗೋಡೆಗಳು ಶಿಥಿಲಗೊಂಡಿದ್ದು, ಪಾದಚಾರಿಗಳು ಮತ್ತು ವಾಹನ ಸವಾರರು ಆತಂಕದಲ್ಲಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 11:04 pm, Wed, 29 April 26

Source link

ರೀಲ್ಸ್​​ಗಾಗಿ ರಸ್ತೆಯಲ್ಲಿ ಸ್ಪೋಟ: ಬಿಗ್​​ಬಾಸ್ ರಜತ್ ವಿರುದ್ಧ ಪ್ರಕರಣ ದಾಖಲು – Kannada News | Instagram Reels: Case registered against Bigg Boss Rajat

ಬಿಗ್​​ಬಾಸ್ ಮಾಜಿ ಸ್ಪರ್ಧಿ, ನಟ ರಜತ್ (Rajath) ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಹಿಂದೆ ಒಮ್ಮೆ ಮಚ್ಚು ಹಿಡಿದು ರೀಲ್ಸ್ ಮಾಡಿ ಸಂಕಷ್ಟಕ್ಕೆ ಸಿಲುಕಿದ್ದ ರಜತ್ ವಿರುದ್ಧ ಈಗ ಮತ್ತೊಮ್ಮೆ ಅದೇ ರೀತಿಯ ಕೇಸು ದಾಖಲಾಗಿದೆ. ಈ ಬಾರಿಯೂ ಸಹ ರಜತ್ ಅವರು ರೀಲ್ಸ್ ಕಾರಣದಿಂದಾಗಿಯೇ ಇಕ್ಕಟ್ಟಿಗೆ ಸಿಲುಕಿದ್ದಾರೆ. ಕೆಲ ದಿನಗಳ ಹಿಂದಷ್ಟೆ ರಜತ್ ಅವರು ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಒಂದನ್ನು ಅಪ್​ಲೋಡ್ ಮಾಡಿದ್ದರು. ಬೈಕ್​​ನಲ್ಲಿ ಸ್ಟೈಲ್ ಆಗಿ ಬರುವ ರಜತ್ ಹಿಂದೆ ಪೆಟ್ರೋಲ್ ಬಾಂಬ್ ಬ್ಲಾಸ್ಟ್ ಆಗುವ ದೃಶ್ಯ ಆ ರೀಲ್ಸ್​​ನಲ್ಲಿತ್ತು. ಆ ರೀಲ್​​ಗೆ ಹಲವು ಆಕ್ಷೇಪ ವ್ಯಕ್ತಪಡಿಸಿದ್ದರು. ತಮ್ಮ ತಪ್ಪು ಅರಿತು ರಜತ್ ಸಹ ಕ್ಷಮೆ ಕೇಳಿದ್ದರಾದರೂ, ಇದೀಗ ರಜತ್ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರು ದಕ್ಷಿಣ ತಾಲ್ಲೂಕು, ಕನಕಪುರ ರಸ್ತೆಯ ವಡೇರಹಳ್ಳಿಯ ಸಾರ್​ವಜನಿಕ ರಸ್ತೆಯಲ್ಲಿ ರಜತ್ ಹಾಗೂ ತಂಡ ರೀಲ್ಸ್ ಶೂಟ್ ಮಾಡಿದ್ದರು. ರೀಲ್ಸ್​​ ಆಕರ್ಷಕವಾಗಿ ಮೂಡಿ ಬರಲೆಂದು ಪೆಟ್ರೋಲ್ ಬಾಂಬ್ ಬಳಸಿ ಬ್ಲಾಸ್ಟ್ ಸಹ ಮಾಡಲಾಗಿತ್ತು. ಬುಧವಾರದಂದು ಕಗ್ಗಲಿಪುರ ಪೊಲೀಸರು ಈ ಘಟನೆಗೆ ಸಂಬಂಧಿಸದಂತೆ ರಜತ್ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಇದೇ ದಿನ ರಜತ್, ರೀಲ್ಸ್ ಶೂಟಿಂಗ್ ಮಾಡಿದ ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ತನಿಖೆಯನ್ನು ಸಹ ನಡೆಸಿದ್ದಾರೆ. ರಜತ್​​ಗೆ ನೊಟೀಸ್ ಜಾರಿ ಮಾಡಿ, ವಿಚಾರಣೆಗೆ ಸಹ ಕರೆಯಲಿದ್ದಾರೆ.

ಇದನ್ನೂ ಓದಿ:ಬೇಸಗೆಯನ್ನು ಬಳಸಿಕೊಳ್ಳಿ, ದೇಹತೂಕ ಇಳಿಸಿ ಎಂದ ಬಿಗ್​​ಬಾಸ್ ರಘು

ಘಟನೆ ಕುರಿತು ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ಸ್ಥಳೀಯ ಡಿವೈಎಸ್​​ಪಿ ಶ್ರೀನಿವಾಸ್, ‘ರಜತ್ ಅವರು ಸಾರ್ವಜನಿಕ ಶಾಂತಿಗೆ ಭಂಗ, ಅನುಚಿತ ವರ್ತನೆ, ರಸ್ತೆ ನಿಯಮ ಉಲ್ಲಂಘನೆ, ಸಾರ್ವಜನಿಕ ಆಸ್ತಿಗೆ ನಷ್ಟ ಮಾಡಿದ್ದಾರೆ. ಬಿಎನ್​​ಎಸ್​​ನ ವಿವಿಧ ಕಲಂಗಳ ಅಡಿಯಲ್ಲಿ ರಜತ್ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಿದ್ದೇವೆ. ರಜತ್ ಅವರಿಗೆ ನೊಟೀಸ್ ನೀಡಿ, ವಿಚಾರಣೆ ಮಾಡಲಾಗುವುದು’ ಎಂದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ತಮ್ಮ ರೀಲ್ಸ್​​ಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ರೀಲ್ಸ್ ಡಿಲೀಟ್ ಮಾಡಿದ್ದ ರಜತ್, ನಿನ್ನೆಯೇ ಈ ಬಗ್ಗೆ ಕ್ಷಮೆ ಕೇಳಿ ವಿಡಿಯೋ ಒಂದನ್ನು ಸಹ ಅಪ್​ಲೋಡ್ ಮಾಡಿದ್ದರು. ತಾವು ಸುರಕ್ಷತಾ ಕ್ರಮಗಳನ್ನು ಬಳಸಿಯೇ ಆ ಬ್ಲಾಸ್ಟ್ ಮಾಡಿದ್ದಾಗಿ, ಹಾಗೂ ಸ್ಥಳೀಯರ ಅನುಮತಿ ಪಡೆದೇ ಬ್ಲಾಸ್ಟ್ ಮಾಡಿದ್ದಾಗಿ ಹೇಳಿದ್ದರು. ಅಲ್ಲದೆ, ತಮ್ಮ ಈ ಕೃತ್ಯದಿಂದ ಯಾರಿಗಾದರೂ ತೊಂದರೆ ಆಗಿದ್ದರೆ ಕ್ಷಮೆ ಕೇಳುವುದಾಗಿಯೂ ಸಹ ರಜತ್ ಹೇಳಿದ್ದರು. ಆದರೆ ಇದೀಗ ರಜತ್ ವಿರುದ್ಧ ಅಧಿಕೃತವಾಗಿ ದೂರು ದಾಖಲಾಗಿದ್ದು, ವಿಚಾರಣೆ ಎದುರಿಸಬೇಕಿದೆ.

ಈ ಹಿಂದೆ ರಜತ್ ಮತ್ತು ವಿನಯ್ ಅವರು ಮಚ್ಚು ಹಿಡಿದುಕೊಂಡು ರೀಲ್ಸ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆ ಪ್ರಕರಣದಲ್ಲಿ ರಜತ್ ಮತ್ತು ವಿನಯ್ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಮತ್ತೆ ರೀಲ್ಸ್ ಸಾಹಸದಿಂದ ರಜತ್ ಸಂಕಷ್ಟ ತಂದುಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

ಬೆಂಗಳೂರು ಮಳೆಗೆ ಬಲಿ: ‘ಇದು ಸರ್ಕಾರದ ವೈಫಲ್ಯ’ ಎಂದು ಗುಡುಗಿದ ಆರ್. ಅಶೋಕ್ – Kannada News | Government Under Scrutiny After Bengaluru Wall Collapse Kills Seven

ಬೆಂಗಳೂರು, ಏ,29: ಇಂದು ರಾಜಧಾನಿಯಲ್ಲಿ ಸುರಿದ ಮಳೆಯ ಪರಿಣಾಮವಾಗಿ ಬೌರಿಂಗ್ ಆಸ್ಪತ್ರೆ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಗೋಡೆ ಕುಸಿದು ಏಳು ಜನರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರ ಪೈಕಿ ಮೂವರು ಮಕ್ಕಳು ಸಹ ಸೇರಿದ್ದಾರೆ. ಈ ದುರಂತಕ್ಕೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಮಾಜಿ ಸಚಿವರಾದ ಆರ್. ಅಶೋಕ್ ಅವರು ತೀವ್ರವಾಗಿ ಆರೋಪಿಸಿದ್ದಾರೆ. ಮಳೆಗಾಲ ಆರಂಭಕ್ಕೂ ಮುನ್ನವೇ ಸರ್ಕಾರ ಬಿರುಕು ಬಿಟ್ಟಿರುವ ಗೋಡೆಗಳು, ಹಳೆಯ ಮನೆಗಳು ಮತ್ತು ಮರಗಳ ಬಗ್ಗೆ ಸಮೀಕ್ಷೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಮೊದಲ ಮಳೆಯ ಸಣ್ಣ ಆಘಾತಕ್ಕೆ ಇಂತಹ ದೊಡ್ಡ ಅನಾಹುತ ಸಂಭವಿಸಿದೆ. ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ದೆಹಲಿ ಪ್ರವಾಸದಲ್ಲಿರುವಾಗ ಈ ದುರ್ಘಟನೆ ನಡೆದಿರುವುದು ಸರಿಯಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು. ಮೃತ ಕುಟುಂಬಗಳಿಗೆ 10 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಆರ್. ಅಶೋಕ್ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಅವರು ಆಗ್ರಹಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

ಮಳೆಗೆ ಕಾಂಪೌಂಡ್ ಕುಸಿದು 7 ಜನ ಸಾವು: ಮೃತರ ಬಗ್ಗೆ ಮಾಹಿತಿ ನೀಡಿದ ಡಿಕೆ ಶಿವಕುಮಾರ್​​ – Kannada News | Bengaluru: 7 death in Wall Collapse Amid Heavy Rain: DK Shivakumar Shares Details of Victims

ಬೆಂಗಳೂರು, ಏಪ್ರಿಲ್​ 29: ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿ ಕಾಂಪೌಂಡ್ ಕುಸಿತಗೊಂಡು ಬೀದಿಬದಿ ವ್ಯಾಪಾರ ಮಾಡಿತ್ತಿದ್ದ ಐವರು ಹಾಗೂ ಇಬ್ಬರು ಪಾದಚಾರಿಗಳು ಸೇರಿದಂತೆ 7 ಮಂದಿ ಉಸಿರು ನಿಲ್ಲಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರು ಆಗಿರುವ ಡಿಸಿಎಂ ಡಿಕೆ ಶಿವಕುಮಾರ್‌, ಸ್ಥಳಕ್ಕೆ ಆಗಮಿಸಿ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು, ಮೃತರ ಪೈಕಿ ನಾಲ್ವರು ಸ್ಥಳೀಯ ವ್ಯಾಪಾರಿಗಳು, ಇಬ್ಬರು ಕೇರಳದವರು ಮತ್ತು ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ಆರು ವರ್ಷದ ಮಗು ಕೂಡ ಸಾವನ್ನಪ್ಪಿದೆ. ಮೃತಪಟ್ಟವರು ಒಬ್ಬರು ಪಾದರಕ್ಷೆ ವ್ಯಾಪಾರಿ ಮತ್ತು ಇನ್ನೊಬ್ಬರು ಬಟ್ಟೆ ವ್ಯಾಪಾರಿಯಾಗಿದ್ದರು. ಮಳೆಯಿಂದ ರಕ್ಷಿಸಿಕೊಳ್ಳಲು ಗೋಡೆಯ ಬಳಿ ನಿಂತಿದ್ದಾಗ ಸುಮಾರು ಎಂಟು ಅಡಿ ಎತ್ತರದ ಗೋಡೆ ಕುಸಿದು ಈ ದುರಂತ ಸಂಭವಿಸಿದೆ ಎಂದು ಡಿಕೆ ಶಿವಕುಮಾರ್‌ ಮಾಹಿತಿ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

ಮಧುರೈ ಮೀನಾಕ್ಷಿ ದೇವಸ್ಥಾನದ ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿ – Kannada News | Large number of devotees witness the grand temple car procession in Madurai meenakshi temple

ಮಧುರೈ, ಏಪ್ರಿಲ್ 29: ವಿಶ್ವಪ್ರಸಿದ್ಧ ಮಧುರೈ ಮೀನಾಕ್ಷಿ (Madhurai Meenakshi Temple) ಅಮ್ಮನ ದೇವಸ್ಥಾನದ ಚಿತ್ತಿರೈ ಹಬ್ಬದ ರಥೋತ್ಸವವು ಇಂದು ಬೆಳಿಗ್ಗೆ ನಡೆಯಿತು. ದೇವಿಯನ್ನು ದೊಡ್ಡ ಅಲಂಕೃತ ರಥಗಳಲ್ಲಿ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮಧುರೈ ಮೀನಾಕ್ಷಿ ದೇವಸ್ಥಾನದ ಚಿತ್ತಿರೈ ಉತ್ಸವದ ಪ್ರಮುಖ ಕಾರ್ಯಕ್ರಮವಾದ ರಥೋತ್ಸವದಲ್ಲಿ ಇಂದು ಸಾವಿರಾರು ಭಕ್ತರು ಭಾಗಿಯಾದರು. ಹಬ್ಬದ ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ತಿರುಥೆರೋಟ್ಟಂ ಇಂದು ಬೆಳಿಗ್ಗೆ ಬಹಳ ವೈಭವ ಮತ್ತು ಪ್ರದರ್ಶನದೊಂದಿಗೆ ಪ್ರಾರಂಭವಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link