ಚಪ್ಪರಿಸಿ ತಿನ್ನುತ್ತಿದ್ದ ಪನೀರ್ ಟಿಕ್ಕಾ ರೋಲ್ನಲ್ಲಿ ಹಲ್ಲಿ ಕಂಡು ಬೆಚ್ಚಿಬಿದ್ದ ಬೆಂಗಳೂರಿನ ಕ್ಯಾಬ್ ಚಾಲಕ – Kannada News | Bengaluru Bakery Shock: Lizard Found in Paneer Tikka Roll, Customer Hospitalized
ಬೆಂಗಳೂರು, ಏಪ್ರಿಲ್ 29: ಬೇಕರಿ ತಿಂಡಿಗಳಂದರೆ ಬಹುತೇಕ ಯುವ ಜನತೆಗೆ ಅಚ್ಚುಮೆಚ್ಚು. ಕೆಲವರಿಗಂತೂ ದಿನಕ್ಕೆ ಒಮ್ಮೆಯಾದರೂ ಬೇಕರಿಗೆ ಭೇಟಿ ನೀಡದಿದ್ದರೆ ಸಮಾಧಾನವೇ ಇರೋದಿಲ್ಲ. ಆದರೆ ಬೆಂಗಳೂರಲ್ಲಿ ಜನ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದ್ದು, ಬೇಕರಿಯಲ್ಲಿ ಖರೀದಿಸಿದ ಪನೀರ್ ಟಿಕ್ಕಾ ರೋಲ್ನಲ್ಲಿ ಹಲ್ಲಿ ಕಂಡುಬಂದಿರುವ ಘಟನೆ ಮಾಗಡಿ ಮುಖ್ಯ ರಸ್ತೆಯ ಹೌಸಿಂಗ್ ಬೋರ್ಡ್ ಸಮೀಪ ನಡೆದಿದೆ. ಇದನ್ನು ಸೇವಿಸಿದ್ದ 32 ವರ್ಷದ ವ್ಯಕ್ತಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾನೆ. ಘಟನೆ ಏನು? ಅಗ್ರಹಾರ ದಾಸರಹಳ್ಳಿಯ ನಿವಾಸಿಯಾಗಿರುವ ಕ್ಯಾಬ್ ಚಾಲಕನಿಗೆ ಏಪ್ರಿಲ್ 25ರಂದು…