ಬೆಂಗಳೂರಲ್ಲಿ ಡ್ರಗ್ಸ್ ಬೇಟೆ: 5.67 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ, ಕೊಕೇನ್ ಜಪ್ತಿ, ಉಗಾಂಡಾ ಮಹಿಳೆ ಸೇರಿ ಮೂವರ ಬಂಧನ – Kannada News | Bengaluru Drug Bust: Rs 5.67 Crore Hydro Ganja and Cocaine Seized in Three Separate Raids; Ugandan Woman Arrested
ಕೆಂಪೇಗೌಡ ಏರ್ಪೋರ್ಟ್ನಲ್ಲಿ 2.77 ಕೋಟಿ ರೂ. ಮೌಲ್ಯದ ಗಾಂಜಾ ಸೀಜ್Image Credit source: tv9 ಬೆಂಗಳೂರು, ಜೂನ್ 16: ಬೆಂಗಳೂರಿನಲ್ಲಿ (Bengaluru) ಮಾದಕ ದ್ರವ್ಯ ಜಾಲದ ವಿರುದ್ಧ ಪೊಲೀಸರು ಹಾಗೂ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 5.67 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹೈಡ್ರೋ ಗಾಂಜಾ ಮತ್ತು ಕೊಕೇನ್ ಜಪ್ತಿ ಮಾಡಿದ್ದಾರೆ. ಅಂತರರಾಷ್ಟ್ರೀಯ ಮತ್ತು ಅಂತರರಾಜ್ಯ ಡ್ರಗ್ಸ್ ಡೀಲಿಂಗ್ನಲ್ಲಿ ತೊಡಗಿದ್ದ ಉಗಾಂಡಾ ಮೂಲದ ಮಹಿಳಾ ಪೆಡ್ಲರ್ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ….