International Dance Day 2026: ಅಂತಾರಾಷ್ಟ್ರೀಯ ನೃತ್ಯ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು? – Kannada News | International Dance Day 2026: How did the celebration of International Dance Day begin?
ಅಂತಾರಾಷ್ಟ್ರೀಯ ನೃತ್ಯ ದಿನImage Credit source: Getty Images ನೃತ್ಯವು (Dance) ಒಬ್ಬ ವ್ಯಕ್ತಿಯು ತನ್ನ ಆಂತರಿಕತೆಯನ್ನು ಅನ್ವೇಷಿಸಲು ಅನುವು ಮಾಡಿಕೊಡುವ, ಭಾವನೆಯನ್ನು ವ್ಯಕ್ತಪಡಿಸುವ ಒಂದು ಕಲಾ ಪ್ರಕಾರವಾಗಿದೆ. ಈ ನೃತ್ಯ ಕಲೆ ಮನೋರಂಜನೆಯನ್ನು ನೀಡುವುದು, ಭಾವನೆಯನ್ನು ವ್ಯಕ್ತಪಡಿಸುವುದು, ಸಂಸ್ಕೃತಿಯನ್ನು ಪ್ರತಿನಿಧಿಸುವುದು ಮಾತ್ರವಲ್ಲದೆ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಉತ್ತೇಜಿಸುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತದೆ. ನೃತ್ಯದ ವೈವಿಧ್ಯತೆಯನ್ನು ಗುರುತಿಸಲು ಮತ್ತು ಈ ಕಲಾ ಪ್ರಕಾರವನ್ನು ಗೌರವಿಸಲು ಪ್ರತಿವರ್ಷ ಏಪ್ರಿಲ್ 29 ರಂದು ಅಂತರರಾಷ್ಟ್ರೀಯ ನೃತ್ಯ ದಿನವನ್ನು ಆಚರಿಸಲಾಗುತ್ತದೆ. …