‘ಸೋಫಾ ಅಳತೆ ಮಾಡಿಕೊಡು ಬಾ’ ಎಂದು ಕರೆದು ಬರ್ಬರವಾಗಿ ಹತ್ಯೆ; ಬಾರ್ ಎದುರೇ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿದ ಆಟೋ ಚಾಲಕ! – Kannada News | Kolar Crime News: Sofa Maker Murdered in Drug Fueled Brawl; Accused Arrested
ಕೋಲಾರ, ಏ.28: ಜಿಲ್ಲೆಯಲ್ಲಿ ಒಂದು ಆರ್ಡರ್ ಇದೆ ಎಂದು ನಂಬಿಸಿ ಕರೆದೊಯ್ದು ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ನಗರದ ಹೊರವಲಯದಲ್ಲಿ ನಡೆದಿದೆ. ಬೀಡಿ ಕಾಲೋನಿಯ ನಿವಾಸಿ ಸಲ್ಮಾನ್ ಪಾಷಾ (26) ಕೊಲೆಯಾದ ದುರ್ದೈವಿ ಎಂದು ಹೇಳಲಾಗಿದ . ಸೋಫಾ ತಯಾರಿಕೆ ಮತ್ತು ರಿಪೇರಿ ಕೆಲಸ ಮಾಡಿಕೊಂಡಿದ್ದ ಸಲ್ಮಾನ್ ಪಾಷಾ ಮನೆಗೆ ನಿನ್ನೆ ರಾತ್ರಿ 11:30ರ ಸುಮಾರಿಗೆ ಪರಿಚಯಸ್ಥ ಹುಡುಗರು ಬಂದಿದ್ದರು. “ಹೊಸ ಸೋಫಾ ಆರ್ಡರ್ ಬಂದಿದೆ, ಅದರ ಅಳತೆ ತೆಗೆದುಕೊಳ್ಳಲು ಬಾ” ಎಂದು ಹೇಳಿ…