ಹೆರಿಗೆಗೂ ಮೊದಲೇ ಮೃತಪಟ್ಟ ಹಸುಗೂಸು: ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಪುಟ್ಟ ಜೀವ? – Kannada News | Newborn Dies: Medical Negligence Allegations Rock Karnataka Hospital and Spark Protests
ರಾಯಚೂರು/ಹಾವೇರಿ, ಏಪ್ರಿಲ್ 28: ಹೆರಿಗೆಗೂ ಮೊದಲೇ ಹಸುಗೂಸು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಆಸ್ಪತ್ರೆ ಮತ್ತು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ನಮಗೆ ನ್ಯಾಯ ಬೇಕು ಎಂದು ಆಗ್ರಹಿಸಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಜಂಗಮರ ಹಳ್ಳಿ ಗ್ರಾಮದ ಗುಂಡಪ್ಟ ಅವರ ಪತ್ನಿ ಪರಮ್ಮಳಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ…