ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ‘ಬಲರಾಮನ ದಿನಗಳು’ ಚಿತ್ರದ ಆಡಿಯೋ ಹಕ್ಕು – Kannada News | Balaramana Dinagalu movie audio rights sold to T Series for this amount
ನಟ ವಿನೋದ್ ಪ್ರಭಾಕರ್ (Vinod Prabhakar) ಅವರು ‘ಬಲರಾಮನ ದಿನಗಳು’ ಸಿನಿಮಾದಲ್ಲಿ ನಟಿಸಿದ್ದಾರೆ. ಅವರಿಗೆ ಜೋಡಿಯಾಗಿ ಪ್ರಿಯಾ ಆನಂದ್ ಅಭಿನಯಿಸಿದ್ದಾರೆ. ಬಿಡುಗಡೆಗೆ ಸಜ್ಜಾಗುತ್ತಿರುವ ಈ ಸಿನಿಮಾಗೆ ಪ್ರಚಾರ ಕಾರ್ಯ ಆರಂಭಿಸಲಾಗಿದೆ. ‘ಶುರು ಶುರು..’ ಎಂಬ ಹಾಡಿನ ಮೂಲಕ ಪ್ರಚಾರ ಶುರುವಾಗಿದೆ. ಈ ಸಿನಿಮಾಗೆ ಕೆ.ಎಂ. ಚೈತನ್ಯ ಅವರು ನಿರ್ದೇಶನ ಮಾಡಿದ್ದಾರೆ. 18 ವರ್ಷಗಳ ಹಿಂದೆ ಕೆ.ಎಂ. ಚೈತನ್ಯ ಅವರ ನಿರ್ದೇಶನದಲ್ಲಿ ‘ಆ ದಿನಗಳು’ ಸಿನಿಮಾ ಮೂಡಿಬಂದಿತ್ತು. ಈಗ ಅವರು ‘ಬಲರಾಮನ ದಿನಗಳು’ (Balaramana Dinagalu) ಸಿನಿಮಾ ಮಾಡಿದ್ದಾರೆ….