ಡಿಕೆ ಶಿವಕುಮಾರ್ ವಾಪಸಾಗ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಬಣ ದೆಹಲಿಗೆ! ಕಾಂಗ್ರೆಸ್ನಲ್ಲಿ ಜೋರಾಯ್ತು ಡೆಲ್ಲಿ ಟೂರ್ ಪಾಲಿಟಿಕ್ಸ್ – Kannada News | Karnataka Congress Leadership Row: Siddaramaiah Camp Rushes to Delhi After DK Shivakumar’s Visit
ಬೆಂಗಳೂರು, ಏಪ್ರಿಲ್ 28: ಕರ್ನಾಟಕ ಕಾಂಗ್ರೆಸ್ನಲ್ಲಿ (Congress) ಕಳೆದ ಕೆಲವು ತಿಂಗಳುಗಳಿಂದ ಸದ್ದಿಲ್ಲದೆ ನಡೆಯುತ್ತಿದ್ದ ‘ಕುರ್ಚಿ ಕಿತ್ತಾಟ’ ಈಗ ಮತ್ತೆ ಬಹಿರಂಗಗೊಳ್ಳುವ ಹಾಗೂ ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿ ಪ್ರವಾಸ ಮುಗಿಸಿ ವಾಪಸ್ ಆಗುತ್ತಿದ್ದಂತೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಆಪ್ತ ಬಣ ದೆಹಲಿಗೆ ದೌಡಾಯಿಸಿರುವುದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದೆ. ದೆಹಲಿಯಲ್ಲಿ ಸಿದ್ದು ಬಣದ ಸಂಚಲನ ಡಿಕೆಶಿ ಅವರ ಮೂರು ದಿನಗಳ ದೆಹಲಿ ವಾಸ್ತವ್ಯದ ಬೆನ್ನಲ್ಲೇ ಸಚಿವರಾದ…