ಲೋಕಾಯುಕ್ತ ದಾಳಿ ವೇಳೆ ಎಸಿಎಫ್ ಮನೆಯಲ್ಲಿ ಕಂತೆ ಕಂತೆ ಹಣ, ಚಿನ್ನಾಭರಣ ಪತ್ತೆ
ಚಿಕ್ಕಮಗಳೂರು, ಜೂನ್ 16: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮೋಹನ್ ಅವರ ನಿವಾಸ, ಕಚೇರಿ ಹಾಗೂ ನಿರ್ಮಾಣ ಹಂತದ ಮನೆ ಸೇರಿದಂತೆ ಐದು ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪ ಹಾಗೂ ಆಸ್ತಿ ದುರ್ಬಳಕೆ ಕುರಿತು ದೂರುಗಳು ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ನಗರದ ಕಲ್ಯಾಣನಗರದಲ್ಲಿರುವ ಎಸಿಎಫ್ ಮೋಹನ್ ಅವರ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಲಕ್ಷಾಂತರ ರೂಪಾಯಿ ನಗದು…