ಈ ವಾರ ಒಟಿಟಿಗೆ ಬಂದಿವೆ ಕೆಲ ಆಸಕ್ತಿಗಳ ಸಿನಿಮಾಗಳು: ಇಲ್ಲಿದೆ ಪಟ್ಟಿ – Kannada News | OTT Release this week from December 15 to December 20

ರಶ್ಮಿಕಾ ಮಂದಣ್ಣ ನಟಿಸಿರುವ ಹಿಂದಿ ಸಿನಿಮಾ ‘ಥಮ’ ಈ ವಾರ ಒಟಿಟಿಗೆ ಬಂದಿದೆ. ಆಯುಷ್ಮಾಕ್ ಖುರಾನಾ, ನವಾಜುದ್ದೀನ್ ಸಿದ್ಧಿಖಿ ನಟಿಸಿರುವ ಈ ಹಾರರ್ ಸಿನಿಮಾ ಡಿಸೆಂಬರ್ 16ಕ್ಕೆ ಅಮೆಜಾನ್ ಪ್ರೈಂ ವಿಡಿಯೋನಲ್ಲಿ ಬಿಡುಗಡೆ ಕಂಡಿದೆ. Source link

Read More

ಟೀಮ್ ಇಂಡಿಯಾದಿಂದ ಗಿಲ್​ಗೆ ಗೇಟ್ ಪಾಸ್: ಭಾರತ ತಂಡದಲ್ಲಿ 2 ಬದಲಾವಣೆ – Kannada News | India Squad For T20 World Cup 2026: Shubman Gill Dropped

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್. Source link

Read More

Video: ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ

ಹಾಪುರ್, ಡಿಸೆಂಬರ್ 20: ಉತ್ತರ ಪ್ರದೇಶದ ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯ ಹಾಪುರ್ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಜೀವಕ್ಕೆ ಕುತ್ತು ತರಬಹುದಾದ ಅಪಾಯಕಾರಿ ಸಾಹಸವನ್ನು ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಷ್ಟ್ರೀಯ ಹೆದ್ದಾರಿಯ ಮೇಲಿರುವ ರೈಲ್ವೆ ಸೇತುವೆಯ ಮೇಲೆ ವ್ಯಕ್ತಿಯೊಬ್ಬ ನೇತಾಡುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಜನನಿಬಿಡ ರಸ್ತೆಯಲ್ಲಿ ಭಾರೀ ವಾಹನಗಳು ಮತ್ತು ಕಾರುಗಳು ಕೆಳಗೆ ಹಾದು ಹೋಗುವಾಗ ಸ್ಟಂಟ್ ಮಾಡಿದ್ದಾನೆ. ಈ ಸಾಹಸವನ್ನು ಕೇವಲ ರೆಕಾರ್ಡಿಂಗ್ ಉದ್ದೇಶಗಳಿಗಾಗಿ ಮಾತ್ರ ಮಾಡಲಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಯಾವುದೇ ಸುರಕ್ಷತಾ ಸಾಧನಗಳು…

Read More

India T20 Squad: ಟಿ20 ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಪ್ರಕಟ – Kannada News | India Squad For T20 World Cup 2026

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗಾಗಿ (T20 World Cup 2026) ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಉಪನಾಯಕನಾಗಿ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಟೂರ್ನಿಯಿಂದ ಶುಭ್​​ಮನ್ ಗಿಲ್ ಅವರನ್ನು ಕೈ ಬಿಡಲಾಗಿದೆ. ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಫೆಬ್ರವರಿ 7 ರಿಂದ ಅಭಿಯಾನ ಆರಂಭಿಸಲಿದ್ದು, ಮೊದಲ ಪಂದ್ಯದಲ್ಲಿ ಯುಎಸ್​ಎ ತಂಡವನ್ನು ಎದುರಿಸಲಿದೆ. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಫೆಬ್ರವರಿ 15 ರಂದು ತನ್ನ ಬದ್ಧ ವೈರಿ ಪಾಕಿಸ್ತಾನ್ ವಿರುದ್ಧ…

Read More

UPSC NDA NA I 2026: ಭೂಸೇನೆ, ನೌಕಾಪಡೆ, ವಾಯುಪಡೆಯಲ್ಲಿ 394 ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸಾಗಿದ್ರೆ ಸಾಕು – Kannada News | UPSC NDA NA I 2026 Notification: Apply for Army, Navy, Air Force Officer Posts

ಕೇಂದ್ರ ಲೋಕಸೇವಾ ಆಯೋಗ (UPSC) ರಾಷ್ಟ್ರೀಯ ರಕ್ಷಣಾ ಅಕಾಡೆಮಿ, ನೌಕಾ ಅಕಾಡೆಮಿ ಪರೀಕ್ಷೆ (NDA & NA) I, 2026 ರ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯಲ್ಲಿ ಅಧಿಕಾರಿಯಾಗಿ ದೇಶಕ್ಕೆ ಸೇವೆ ಸಲ್ಲಿಸುವ ಕನಸು ಕಾಣುವ ದೇಶದ ಯುವಕರಿಗೆ ಅರ್ಜಿ ಸಲ್ಲಿಸಲು ಇದೊಂದು ಸುವರ್ಣವಕಾಶ. ಈ ಬಾರಿ ಯುಪಿಎಸ್‌ಸಿ ಒಟ್ಟು 394 ಹುದ್ದೆಗಳನ್ನು ಪ್ರಕಟಿಸಿದ್ದು, ಇದರಲ್ಲಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಇದರಲ್ಲಿ, ಎನ್‌ಡಿಎಯ 157 ನೇ ಕೋರ್ಸ್‌ಗೆ…

Read More

Video: ವಿಶ್ವ ಆರೋಗ್ಯ ಸಂಸ್ಥೆಯ ಶೃಂಗಸಭೆಯಲ್ಲಿ ಅಶ್ವಗಂಧ ಅಂಚೆ ಚೀಟಿ ಬಿಡುಗಡೆ, ಸಾಂಪ್ರದಾಯಿಕ ಔಷಧಗಳ ಬಗ್ಗೆ ಪ್ರಧಾನಿ ಮೋದಿ ಮಾತು – Kannada News | Ashwagandha: PM Modi Highlights Traditional Medicine Benefits at WHO Summit

ನವದೆಹಲಿ, ಡಿಸೆಂಬರ್ 20: ವಿಶ್ವ ಆರೋಗ್ಯ ಸಂಸ್ಥೆಯ ಶೃಂಗಸಭೆಯಲ್ಲಿ ಅಶ್ವಗಂಧ ಕುರಿತ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಯಿತು. ಅಷ್ಟೇ ಅಲ್ಲದೆ ಸಾಂಪ್ರದಾಯಿಕ ಔಷಧ ಅಶ್ವಗಂಧದ ಕುರಿತು ಪ್ರಧಾನಿ ನರೇಂದ್ರ ಮೋದಿ ಹಲವು ಮಾಹಿತಿಗಳನ್ನು ನೀಡಿದ್ದಾರೆ. ಸಾಂಪ್ರದಾಯಿಕ ಔಷಧಕ್ಕೆ ಅರ್ಹವಾದ ಮನ್ನಣೆ ಸಿಗುತ್ತಿಲ್ಲ ಎಂದು ಹೇಳಿದರು. ತನ್ನ ವ್ಯಾಪ್ತಿಯನ್ನು ವಿಸ್ತರಿಸಲು, ಸಾಂಪ್ರದಾಯಿಕ ಔಷಧವು ವಿಜ್ಞಾನದ ಮೂಲಕ ಸಾರ್ವಜನಿಕ ವಿಶ್ವಾಸವನ್ನು ಗಳಿಸಬೇಕು. ಇದನ್ನು ಶತಮಾನಗಳಿಂದ ನಮ್ಮ ಸಾಂಪ್ರದಾಯಿಕ ವೈದ್ಯಕೀಯ ವ್ಯವಸ್ಥೆಗಳಲ್ಲಿ ಬಳಸಲಾಗುತ್ತಿದೆ. COVID-19 ಸಮಯದಲ್ಲಿ, ಅದರ ಜಾಗತಿಕ ಬೇಡಿಕೆ ವೇಗವಾಗಿ…

Read More

ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ದೆಹಲಿ ಭೇಟಿ ಬಗ್ಗೆ ಡಿಕೆಶಿ ಅಚ್ಚರಿಯ ಹೇಳಿಕೆ – Kannada News | High Command Spoke to Me and Siddaramaiah: DK Shivakumar Makes Surprise Statement on Delhi Visit

ಬೆಂಗಳೂರು, ಡಿಸೆಂಬರ್ 20: ಹೈಕಮಾಂಡ್ ನನ್ನ ಪರವಾಗಿದೆ. ಎರಡೂವರೆ ವರ್ಷದ ಅಗ್ರಿಮೆಂಟೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಶುಕ್ರವಾರ ಹೇಳಿದ್ದರು. ಈ ಮಾತು ಸದ್ಯ ಅವರ ಬೆಂಬಲಿಗರಲ್ಲಿ ವಿಶ್ವಾಸ ಹೆಚ್ಚಿಸಿದೆ. ಜೊತೆಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಬಣ ಹಾಗೂ ಹೈಕಮಾಂಡ್​​ಗೂ ಸಂದೇಶ ರವಾನೆ ಆಗಿದೆ. ಈ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿರುವುದು ಕುತೂಹಲ ಮೂಡುವಂತೆ ಮಾಡಿದೆ. ದೆಹಲಿಗೆ ತೆರಳುವ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಹೈಕಮಾಂಡ್ ನಮ್ಮಿಬ್ಬರಿಗೂ ಏನೋ ಹೇಳಿದೆ. ಹೈಕಮಾಂಡ್…

Read More

ಸಚಿವ ಎಚ್ ಕೆ ಪಾಟೀಲ್ ಅವರಿಗೆ ಜೀವ ಬೆದರಿಕೆ! ಸಚಿವರನ್ನು ನಿಲ್ಲಿಸಿ AK-47 ನಿಂದ ಗುಂಡಿನ ಮಳೆಗರೆಯಬೇಕು ಎಂದಿದ್ದ ಭೂಪ ಅಂದರ್ – Kannada News | Karnataka Minister H.K. Patil Receives Facebook Life Threat; Accused Held

ಸಚಿವ ಎಚ್ ಕೆ ಪಾಟೀಲ್ ಅವರಿಗೆ ಜೀವ ಬೆದರಿಕೆ! ಗದಗ, ಡಿಸೆಂಬರ್ 20: ಇತ್ತೀಚಿಗೆ ಸರ್ಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆಯ ಕರೆಗಳು, ಇ-ಮೇಲ್​ಗಳು ಹೆಚ್ಚುತ್ತಿರುವ ಸಂದರ್ಭದಲ್ಲಿಯೇ ಕರ್ನಾಟಕದ ಕಾನೂನು ಸಚಿವ ಸಚಿವ ಎಚ್.ಕೆ. ಪಾಟೀಲ್​ಗೆ (H K Patil) ಫೇಸ್​ಬುಕ್​ನಲ್ಲಿ ಜೀವ ಬೆದರಿಕೆ ಹಾಕಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಸಚಿವರಿಗೆ ಅವಹೇಳನಕಾರಿ ಪದಗಳಿಂದ ನಿಂದನೆ ಕೆಲ ದಿನಗಳ ಹಿಂದೆಯಷ್ಟೇ ಮಂಗಳೂರು, ಗದಗ ಸೇರಿದಂತೆ ಹಲವೆಡೆ ಸರ್ಕಾರಿ ಕಚೇರಿಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್​ಗಳು ಬಂದಿದ್ದವು. ಈ ನಡುವೆ…

Read More

HAL Recruitment 2025: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​​ನಲ್ಲಿ 156 ಆಪರೇಟರ್ ಹುದ್ದೆಗಳಿಗೆ ನೇಮಕಾತಿ – Kannada News | HAL Operator Recruitment 2025: 156 ITI Vacancies, Apply Online by Dec 25

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ವಿವಿಧ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 156 ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಫಿಟ್ಟಿಂಗ್, ಎಲೆಕ್ಟ್ರಾನಿಕ್ಸ್, ಗ್ರೈಂಡಿಂಗ್ ಇನ್ಸ್ಟ್ರುಮೆಂಟ್ ಮೆಕ್ಯಾನಿಕ್/ಇನ್ಸ್ಟ್ರುಮೆಂಟೇಶನ್, ಮೆಷಿನಿಂಗ್, ಟರ್ನಿಂಗ್ ವಿಭಾಗಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 25 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸಂಬಂಧಿತ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು…

Read More

7 ವರ್ಷದ ಮಗಳೆದುರೇ ರಕ್ತ ಬರುವಂತೆ ಪ್ರಯಾಣಿಕನ ಮೇಲೆ ಏರ್ ಇಂಡಿಯಾ ಪೈಲಟ್ ಹಲ್ಲೆ – Kannada News | Air India Pilot Assaults Passenger at Delhi Airport: Pilot Suspended After Viral Incident

ನವದೆಹಲಿ, ಡಿಸೆಂಬರ್ 20: ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರಿಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಏರ್ ಇಂಡಿಯಾ ಪೈಲಟ್(Pilot) ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಪೈಲಟ್ ಕ್ಯಾಪ್ಟನ್ ವೀರೇಂದ್ರ ತನ್ನೊಂದಿಗೆ ಕೆಟ್ಟದಾಗಿ ವರ್ತಿಸಿದ್ದಲ್ಲದೆ, ದೈಹಿಕವಾಗಿ ಹಲ್ಲೆ ನಡೆಸಿದ್ದರಿಂದ ರಕ್ತಸ್ರಾವವಾಗಿದೆ ಎಂದು ಅಂಕಿತ್ ದಿವಾನ್ ಆರೋಪಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊಗಳು ಮತ್ತು ಫೋಟೋಗಳು ಕಾಣಿಸಿಕೊಂಡ ನಂತರ ಈ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಯು ತನ್ನ ಇಡೀ ರಜೆಯನ್ನು ಹಾಳುಮಾಡಿದೆ ಮತ್ತು ತನ್ನ ಕುಟುಂಬ,…

Read More