ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಆಂಧ್ರ ಬಸ್, ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸಾವು – Kannada News | Pavagada Accident: Andhra Bus and Innova Car Collision Kills Driver Near Kadamalakunte
ತುಮಕೂರು, ಡಿಸೆಂಬರ್ 20: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇನ್ನೋವಾ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಮೃತರನ್ನು ಪಾವಗಡ ತಾಲೂಕಿನ ಐವಾರ್ಲಹಳ್ಳಿ ಗ್ರಾಮದ ರಾಜಶೇಖರ್ ರೆಡ್ಡಿ (40) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ಪೆನುಕೊಂಡ ಕಡೆಯಿಂದ ಪಾವಗಡದತ್ತ ಬರುತ್ತಿದ್ದ ಖಾಸಗಿ ಬಸ್ ಹಾಗೂ ಇನ್ನೋವಾ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಚಾಲಕ ರಾಜಶೇಖರ್ ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ…